Breaking News

Uncategorized

ಕರಾವಳಿ ಭಾಗದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಹಳದಿ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು …

Read More »

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 38 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 95 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ …

Read More »

ಮೀನುಗಾರರ ಬಲೆಗೆ ಸಿಕ್ಕಿ ಬಿದ್ದ ಮೊಸಳೆ ಮರಿ; ಅರಣ್ಯಾಧಿಕಾರಿಗಳಿಗೆ ಹಸ್ತಾಂತರ

ಚಿಕ್ಕೋಡಿ: ಮೀನುಗಾರರರು ಹಾಕಿದ್ದ ಬಲೆಗೆ ಸಿಕ್ಕಿದ್ದ ಮೋಸಳೆಮರಿಯನ್ನು ರಕ್ಷಿಸಿದ ಮೀನುಗಾರರು ಅದನ್ನು ಇಲಾಖಾ ಅಧಿಕಾರಿಗಳಿಗೆ ಹಸ್ತಾಂತರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದಿದೆ. ಮೀನು ಹಿಡಿಯುವ ಸಲುವಾಗಿ ಮೀನುಗಾರರು ನಿನ್ನೆ ಸಂಜೆ ದೂಧಗಂಗಾ ನದಿಗೆ ಬಲೆ ಹಾಕಿಬಂದಿದ್ದರು. ಇಂದು ಬೆಳಗ್ಗೆ ಹೋಗಿ ನೋಡಿದರೆ ಬಲೆಯಲ್ಲಿ ಮೊಸಳೆ ಸಿಕ್ಕಿಹಾಕಿಕೊಂಡಿದೆ. ಇದನ್ನು ಕಂಡ ಮೀನುಗಾರರಿಗೆ ಅಚ್ಚರಿ, ಭಯ ಎರಡೂ ಆಗಿದೆ, ಅದ್ಯ ಆ ಮೊಸಳೆ ಮರಿಯನ್ನು ಅರಣ್ಯ …

Read More »

ವಿವಿಗಳ ಘಟಕ ಕಾಲೇಜುಗಳಾಗಿ 3 ಕಾಲೇಜು ಅಭಿವೃದ್ಧಿ:ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ವಿದ್ಯಾರ್ಥಿಗಳ ಹಾಜರಾತಿಯ ಕೊರತೆ ಎದುರಿಸುತ್ತಿರುವ ಮೂರು ಪ್ರಥಮ ದರ್ಜೆ ಕಾಲೇಜುಗಳ ಕಟ್ಟಡಗಳನ್ನು ಹತ್ತಿರದ ವಿಶ್ವವಿದ್ಯಾಲಯಗಳಿಗೆ ಹಸ್ತಾಂತರಿಸಿದ್ದು, ಅಲ್ಲಿ ವಿಶ್ವವಿದ್ಯಾಲಯಗಳೇ ಕಾಲೇಜುಗಳನ್ನು ತೆರೆಯಲಿವೆ ಎಂದು ಡಿಸಿಎಂ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ಹಾಗೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ದಾವಣಗೆರೆ …

Read More »

ವಚನ ಪುಸ್ತಕ ಮಳಿಗೆ ಉದ್ಘಾಟನೆ

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನ ಗೇಟ್‌ ನಂ.3ರ ಬಳಿಯ ವಚನ ಅಧ್ಯಯನ ಕೇಂದ್ರದಲ್ಲಿ ಆರಂಭಿಸಿರುವ ಪುಸ್ತಕ ಮಾರಾಟ ಮಳಿಗೆಯನ್ನು ಭಾನುವಾರ ಉದ್ಘಾಟಿಸಲಾಯಿತು. ಡಂಬಳ-ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಟೇಪ್‌ ಕತ್ತರಿಸಿದರು. ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್‌ಜಿಬಿಐಟಿ ಪ್ರಾಂಶುಪಾಲ ಪ್ರೊ.ಸಿದ್ರಾಮಪ್ಪ ವಿ.ಇಟ್ಟಿ ಇದ್ದರು. ‘ಮಳಿಗೆಯಲ್ಲಿ ವಚನ ಸಾಹಿತ್ಯ, ಧರ್ಮ, ತತ್ತ್ವಶಾಸ್ತ್ರ, ಅಧ್ಯಾತ್ಮ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಮೌಲಿಕ ಗ್ರಂಥಗಳು, ಪೂಜಾ …

Read More »

ಈ ಗ್ರಾಮಸ್ಥರಿಗೆ ಪ್ರತಿದಿನ ಶಿಕ್ಷಕರ ದಿನ:ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮದಲ್ಲಿ ಬಹುತೇಕರು ಶಿಕ್ಷಕರು!

ಬೆಳಗಾವಿ:ಈ ಗ್ರಾಮ ಪ್ರತಿದಿನ ಶಿಕ್ಷಕರ ದಿನವನ್ನು ಆಚರಿಸುತ್ತದೆ. ಇದು ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮ, ಶಿಕ್ಷಕರ ಗ್ರಾಮವೆಂದೇ ಕರೆಯಬಹುದು. ಈ ಗ್ರಾಮದ ಪ್ರತಿಯೊಂದು ಮನೆಯಲ್ಲಿಯೂ ಕನಿಷ್ಠ ಒಬ್ಬರು ಶಿಕ್ಷಕರಿದ್ದಾರೆ. ಬೆಳಗಾವಿ ಜಿಲ್ಲೆಯ ಸೌಂದತ್ತಿ ತಾಲ್ಲೂಕಿನ ಇಂಚಲ್ ಗ್ರಾಮದಲ್ಲಿ ಸುಮಾರು 10 ಸಾವಿರ ಮಂದಿ ಇದ್ದಾರೆ, ಅವರಲ್ಲಿ ಸುಮಾರು 900 ಮಂದಿ ಶಿಕ್ಷಕರೇ. ಸರ್ಕಾರ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ನೂರಾರು …

Read More »

ಕಿಶೋರಿಯರನ್ನು ಅಪೌಷ್ಟಿಕತೆಯಿಂದ ಹೊರತರಬೇಕು: ವೈದ್ಯಾಧಿಕಾರಿ ಡಾ.ಕೀರ್ತಿ

ಬೆಳಗಾವಿ: ‘ಕಿಶೋರಿಯರಲ್ಲಿ ಹೆಚ್ಚಿನವರು ಕುಪೋಷಣೆಗೆ ಒಳಗಾಗಿದ್ದಾರೆ. ಆಟ-ಪಾಠದೊಂದಿಗೆ ಬೆಳೆಯಬೇಕಾದ ಮಕ್ಕಳು ಹಾಸಿಗೆ ಹಿಡಿಯುತ್ತಿದ್ದಾರೆ ಎಂದರೆ ಅದಕ್ಕೆ ಅವರಲ್ಲಿರುವ ಅಪೌಷ್ಟಿಕತೆಯೇ ಕಾರಣ’ ಎಂದು ವೈದ್ಯಾಧಿಕಾರಿ ಡಾ.ಕೀರ್ತಿ ಹೇಳಿದರು. ಇಲ್ಲಿನ ಮಹಿಳಾ ಕಲ್ಯಾಣ ಸಂಸ್ಥೆಯು ಹುಕ್ಕೇರಿ ತಾಲ್ಲೂಕಿನ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಯರನಾಳ, ಹೊಸೂರ, ನಿರ್ವಾಣಹಟ್ಟಿ, ಬಡಕುಂದ್ರಿ ಗ್ರಾಮದ ಕಿಶೋರಿಯರಿಗಾಗಿ ಆಯೋಜಿಸಿದ್ದ ‘ಪೌಷ್ಟಿಕಾಂಶ ಅಭಿಯಾನ’ದ ಅಂಗವಾಗಿ ನಡೆದ ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕ ಆಹಾರ ತಯಾರಿಕೆ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಯಾಗಿ ಅವರು …

Read More »

ಗಂಡನನ್ನೇ ಕೊಂದು ಹೂತು ಹಾಕಿದ ಪತ್ನಿ

ಚಿಕ್ಕೋಡಿ: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಗಂಡನನ್ನೇ ಹೆಂಡತಿ ಕೊಲೆ ಮಾಡಿ ಹೂತು ಹಾಕಿದ ಘಟನೆ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ತಡವಾಗಿ ಪತ್ತೆಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‌ ತಾಲೂಕಿನ ನೇರ್ಲೆ ಗ್ರಾಮದ ಸಚಿನ ಸದಾಶಿವ ಭೋಪಳೆ(35) ಕೊಲೆಯಾದ ವ್ಯಕ್ತಿ. ಕೊಲೆ ಮಾಡಿದ ಪತ್ನಿ ಅನಿತಾ ಭೋಪಳೆ(33) ಸಹಚರ ಸಹೋದರ ಹಂಚಿನಾಳ ಗ್ರಾಮದ ಕೃಷ್ಣಾತ್‌ ರಾಜಾರಾಮ ಘಾಟಗೆ(26) ಹಾಗೂ ಪತ್ನಿಯ ಸಹೋದರಿ ಕಾಗಲ್‌ ತಾಲೂಕಿನ ಸಿದ್ಧನೇರ್ಲಿ ಗ್ರಾಮದ ವನಿತಾ …

Read More »

473 ಮಂದಿಗೆ ಕೋವಿಡ್ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, ಶನಿವಾರ 473 ಮಂದಿಗೆ ಸೋಂಕು ತಗುಲಿದ್ದು, 331 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.473 ಹೊಸ ಪ್ರಕರಣಗಳಿಂದ 14235 ಸೋಂಕಿತರು ಆಗಿದ್ದು, ಒಂದೇ ದಿನ 331 ಮಂದಿ ಗುಣಮುಖರಾಗಿ ಇಲ್ಲಿಯವರೆಗೆ 10145 ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌-19 ವಾರ್ಡ್‌ನಲ್ಲಿ ಸದ್ಯ 3887 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 1,08,624 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 26,960 …

Read More »

ಪತಿ ಕೊಂದು ಎಮ್ಮೆ ಸತ್ತಿದೆ ಅಂತ ಹೂತು ಹಾಕಿದ್ದ ಕೇಸ್; ನಾಲ್ವರು ಆರೋಪಿಗಳ ಬಂಧನ

ಚಿಕ್ಕೋಡಿ: ಪತಿಯನ್ನು ಕೊಂದು ಎಮ್ಮೆ ಸತ್ತಿದೆ ಅಂತಾ ಹೊಲದಲ್ಲಿ ಹೂತು ಹಾಕಿದ್ದ ಆರೋಪದ ಮೇಲೆ ಪತ್ನಿ ಸೇರಿದಂತೆ ಆಕೆಯ ಸಂಬಂಧಿಕರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದಾರೆ. ಮೃತ ಸಚಿನ್ ಪತ್ನಿ ಅನಿತಾ, ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ್​(29), ಗಣೇಶ ರೇಡೇಕರ(21),ಬಂಧಿತ ಆರೋಪಿಗಳು. ಅನಿತಾ ತಮ್ಮ ಪತಿಯನ್ನು ಹತ್ಯೆ ಮಾಡಿ ಸಹೋದರ, ಸಹೋದರಿಯ ಸಹಾಯದಿಂದ ಹೊಲದಲ್ಲಿ ಜೆಸಿಬಿಯಲ್ಲಿ ಗುಂಡಿತೋಡಿಸಿದ್ದ ಜಾಗದಲ್ಲಿ ಹೂತು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. …

Read More »