Breaking News

Uncategorized

ನೇಮಕಾತಿಯಲ್ಲಿ ಅಕ್ರಮ ಆರೋಪ: ಸಿಎಂ ಕಚೇರಿ ಎದುರು ಸ್ಟಾಫ್‌ ನರ್ಸ್‌ಗಳ ಕಣ್ಣೀರು

ಬೆಂಗಳೂರು: ಸ್ಟಾಫ್‌ ನರ್ಸ್‌ ನೇಮಕಾತಿಯಲ್ಲಿ ಅಕ್ರಮವಾಗಿ ನಡೆದಿದೆ ಎಂದು ಆರೋಪಿಸಿ ಗುತ್ತಿಗೆ ಆಧಾರಿತ ಸ್ಟಾಫ್‌ ನರ್ಸ್‌ಗಳು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಎದುರು ಕಣ್ಣೀರಿಟ್ಟ ಘಟನೆ ಗುರುವಾರ ಜರುಗಿದೆ. ಸುಮಾರು 20 ಮಂದಿ ಸ್ಟಾಫ್ಟ್‌ ನರ್ಸ್‌ಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಭೇಟಿಗಾಗಿ ಗೃಹ ಕಚೇರಿ ಬಳಿ ಬಂದಿದ್ದರು. ಈ ವೇಳೆ ಅವರನ್ನು ಗೇಟ್‌ ಬಳಿಯ ತಡೆದ ಪೊಲೀಸರು ಮುಖ್ಯಮಂತ್ರಿ ಭೇಟಿಗೆ ಅವಕಾಶ ನಿರಾಕರಿಸಿದರು. ಇದರಿಂದ ಭಾವುಕಾರದ ಸ್ಟಾಫ್‌ ನರ್ಸ್‌ಗಳು, ಕೋವಿಡ್‌ …

Read More »

ವೃದ್ಧೆಯ ಉಸಿರುಗಟ್ಟಿಸಿ ಕೊಲೆಗೈದು ಚಿನ್ನಾಭರಣ ಲೂಟಿ

ಬೆಂಗಳೂರು : ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಬಾಣಸವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ಬುಧವಾರ ನಡೆದಿದೆ. ರಾಮಸ್ವಾಮಿಪಾಳ್ಯ ನಿವಾಸಿ ಕಾಂತಮ್ಮ (70) ಕೊಲೆಯಾದವರು. ಕಾಂತಮ್ಮ ಅವರ ಮೈ ಮೇಲಿದ್ದ ಚಿನ್ನಾಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಂತಮ್ಮ ಅವರಿಗೆ ಐವರು ಮಕ್ಕಳಿದ್ದು, ಮಾನಸಿಕ ಅಸ್ವಸ್ಥ ಪುತ್ರಿ ಜತೆ ರಾಮಸ್ವಾಮಿ ಪಾಳ್ಯದಲ್ಲಿ ವಾಸವಿದ್ದರು. ಉಳಿದ ಮಕ್ಕಳು …

Read More »

ನಟಿ ರಾಗಿಣಿಗೆ ಮತ್ತೆ ಸಿಸಿಬಿ ನೋಟಿಸ್; ಇಂದು ಹಾಜರಾಗದಿದ್ದರೆ ಬಂಧನ..?

ಬೆಂಗಳೂರು : ಕನ್ನಡ ಚಲನಚಿತ್ರ ರಂಗಕ್ಕೆ ಮಾದಕ ವಸ್ತು ಮಾರಾಟ ಜಾಲದ ನಂಟಿನ ಪ್ರಕರಣದಲ್ಲಿ ತಮ್ಮ ಆಪ್ತ ಗೆಳೆಯನ ಬಂಧನ ಬೆನ್ನೆಲ್ಲೇ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೂ ಬಂಧನ ಭೀತಿ ಶುರುವಾಗಿದೆ. ಈ ಪ್ರಕರಣ ಸಂಬಂಧ ನೋಟಿಸ್‌ ನೀಡಿದ್ದರೂ ಗುರುವಾರ ರಾಗಿಣಿ ಸಿಸಿಬಿ ವಿಚಾರಣೆಗೆ ಗೈರಾಗಿದ್ದಾರೆ. ವೈಯಕ್ತಿಕ ಕಾರಣ ನೀಡಿದ ಗೈರಾಗಿರುವ ನಟಿ, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಟ್ವೀಟ್‌ ಮಾಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಸಿಸಿಬಿ, 2ನೇ …

Read More »

4 ಐಪಿಎಸ್‌, 2 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು  : ನಾಲ್ವರು ಐಪಿಎಸ್‌ ಹಾಗೂ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಆಯಂಬಿಡೆಂಟ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಎಸ್‌.ಗಿರೀಶ್‌ ಅವರನ್ನು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಉಳಿದಂತೆ ಸಿ.ಕೆ.ಬಾಬಾ ಬೆಂಗಳೂರು ಈಶಾನ್ಯ ಡಿಸಿಪಿ, ಡಾ.ಭೀಮಾಶಂಕರ್‌ ಎಸ್‌.ಗುಳೇದ್‌ ಬೆಂಗಳೂರು ಸಿಐಡಿ ಬೆಂಗಳೂರು ಎಸ್‌ಪಿ ಹಾಗೂ ಡಾ.ಅನೂಪ್‌ ಶೆಟ್ಟಿಅವರನ್ನು ಕೆಎಸ್‌ಆರ್‌ಪಿ ಕಮಾಂಡೆಂಟ್‌ ಆಗಿ ವರ್ಗಾವಣೆ ಮಾಡಲಾಗಿದೆ. …

Read More »

ಸಾಲ ಮರುಹೊಂದಾಣಿಕೆ: ಸೆ. 15ರೊಳಗೆ ಜಾರಿಗೆ ಸೂಚನೆ

ನವದೆಹಲಿ: ಕೋವಿಡ್‌-19 ಸಾಂಕ್ರಾಮಿಕದ ಪರಿಣಾಮವಾಗಿ, ಸಾಲ ಮರುಪಾವತಿಯಲ್ಲಿ ತೊಂದರೆ ಎದುರಿಸುತ್ತಿರುವವರಿಗೆ ಸಾಲ ಮರುಹೊಂದಾಣಿಕೆಯ ಸೌಲಭ್ಯವನ್ನು ಸೆಪ್ಟೆಂಬರ್‌ 15ಕ್ಕೆ ಮೊದಲು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್‌ಬಿಎಫ್‌ಸಿ) ಸೂಚಿಸಿದ್ದಾರೆ. ನಿರ್ಮಲಾ ಅವರು ಬ್ಯಾಂಕುಗಳು ಹಾಗೂ ಎನ್‌ಬಿಎಫ್‌ಸಿ ಪ್ರತಿನಿಧಿಗಳ ಜೊತೆ ಗುರುವಾರ ಸಭೆ ನಡೆಸಿದರು. ಆಡಳಿತ ಮಂಡಳಿಯಿಂದ ಅನುಮೋದನೆ ಪಡೆದಿರುವ ಸಾಲ ಮರುಹೊಂದಾಣಿಕೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು ಎಂದು ಸೂಚಿಸಿದರು. ಸಾಲದ …

Read More »

ಭಾರತ-ರಷ್ಯಾ ನಡುವೆ ಎಕೆ-47 203 ರೈಫಲ್‌ ಒಪ್ಪಂದ ಅಂತಿಮ

ಮಾಸ್ಕೊ: ಭಾರತದಲ್ಲೇ ಎ.ಕೆ.-47 ರೈಫಲ್‌ನ ಅತ್ಯಾಧುನಿಕ ಮಾದರಿ ಆಗಿರುವ ಎ.ಕೆ.-47 203 ಉತ್ಪಾದನೆಯ ಪ್ರಮುಖ ಒಪ್ಪಂದವನ್ನು ರಕ್ಷಣಾ ಸಚಿವ ರಾಜ‌ನಾಥ್‌ ಸಿಂಗ್‌ ಭೇಟಿ ವೇಳೆ ಭಾರತ ಹಾಗೂ ರಷ್ಯಾ ಗುರುವಾರ ಅಂತಿಮಗೊಳಿಸಿದೆ. 1996 ರಿಂದ ಭಾರತೀಯ ಸೇನೆಯ ಬಳಿ ಇರುವಂಥ ಇನ್ಸಾಸ್ ರೈಫಲ್‌ಗಳ ಬದಲಾಗಿ ಎ.ಕೆ.-47 203 ರೈಫಲ್‌ಗಳನ್ನು ಬಳಸಲು ಭಾರತ ನಿರ್ಧರಿಸಿದೆ. ಭಾರತಕ್ಕೆ 7,70,000 ಎಕೆ-47 203 ರೈಫಲ್‌ಗಳ ಅಗತ್ಯ ಇದ್ದು, ಈ ಪೈಕಿ 1 ಲಕ್ಷ ರೈಫಲ್‌ಗಳನ್ನು ಆಮದು …

Read More »

ಚಂದನವನದ ನಿರ್ಮಾಪಕ ಹಾಗೂ ನಿರ್ದೇಶಕ ಸ್ಟಿಲ್ ಸೀನು ಚಿಕಿತ್ಸೆ ಫಲಿಸದೆ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು, ಸೆ.3- ಅಪಘಾತದಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದ ಚಂದನವನದ ನಿರ್ಮಾಪಕ ಹಾಗೂ ನಿರ್ದೇಶಕ ಸ್ಟಿಲ್ ಸೀನು ಚಿಕಿತ್ಸೆ ಫಲಿಸದೆ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಗಹನ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದ ಸ್ಟಿಲ್ ಸೀನು ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಕೋಮಾ ಸ್ಥಿತಿಗೆ ಹೋಗಿದ್ದರು. ಅಂದಿನಿಂದಲೂ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ. ಪಾರ್ವತಮ್ಮ ರಾಜ್‍ಕುಮಾರ್ ಅವರು ತಮ್ಮ ವಜ್ರೇಶ್ವರಿ ಕಂಬೈನ್ಸ್‍ನಡಿ ನಿರ್ಮಾಣ …

Read More »

ಧಗ ಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಖಾಸಗಿ ಬಸ್

ಬೀದರ್: ಚಲಿಸುತ್ತಿದ್ದ ಖಾಸಗಿ ಬಸ್ ಎಂಜಿನ್‍ನಲ್ಲಿ ಉಂಟಾದ ಅಗ್ನಿ ಅವಘಡದಿಂದಾಗಿ ನೋಡು ನೋಡುತ್ತಲೇ ಬಸ್ ತುಂಬೆಲ್ಲ ಬೆಂಕಿ ಆವರಿಸಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಜಿಲ್ಲೆಯ ಹುಮನಾಬಾದ್ ಸಮಿಪದ ಬೀದರ್- ಕಲಬುರಗಿ ಹೆದ್ದಾರಿಯ ಧುಮ್ಮನಸೂರು ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಡ್ರೈವರ್ ಸಮಯ ಪ್ರಜ್ಞೆಯಿಂದಾಗಿ ಬಸ್‍ನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೀದರ್ ನಿಂದ ಬೆಂಗಳೂರಿಗೆ ಹೊರಟಿದ್ದಾಗ ರೋಡ್ ಬ್ರೇಕರ್ ಬಳಿ ಒಮ್ಮಲೆ ಜಂಪ್ ಆಗಿದ್ದು, …

Read More »

ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ ಆಗಿದ್ದಾರೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್‍ವುಡ್ ಕೆಲ ಯುವ ನಟಿ-ನಟಿಯರು ಡ್ರಗ್ ವ್ಯಸನಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಇಂದ್ರಜಿತ್‍ಗೆ ನೋಟಿಸ್ ನೀಡಿದ್ದರು. ಆದರೆ ಇಂದ್ರಜಿತ್ ಅವರು ಮಾಹಿತಿ ಮಾತ್ರ ನೀಡಿ ಸೂಕ್ತ ದಾಖಲೆಗಳನ್ನು ನೀಡರಲಿಲ್ಲ. ಈಗ ವಿಚಾರಣೆಗೆ ಮತ್ತೆ ಹಾಜರಾಗಿರುವ ಇಂದ್ರಜಿತ್ ಇಂದು ಕೂಡ ಕೇವಲ ಮಾಹಿತಿ ನೀಡಿ ದಾಖಲೆ ನೀಡಿಲ್ಲ. …

Read More »

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ. …

Read More »