Breaking News

Uncategorized

331 ಮಂದಿ ಗುಣಮುಖ, ಬಿಡುಗಡೆ.

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 154 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘331 ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಮೂವರು ಹಾಗೂ ಬೈಲಹೊಂಲಗದ ಇಬ್ಬರು ಸೇರಿ ಐವರು ಮೃತಪಟ್ಟಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

Read More »

ಅಕ್ರಮ ಸಾಗಣೆ: 996 ಲೀಟರ್ ಗೋವಾ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 996 ಲೀಟರ್‌ ಮದ್ಯವನ್ನು ವಾಹನ ಸಮೇತ ಸೋಮವಾರ ವಶಪಡಿಸಿಕೊಂಡಿರುವ ಅಬಕಾರಿ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಗುಜರಾತ್‌ನ ಜೋಠಾಣಾ ತಾಲ್ಲೂಕಿನ ಕಡವಾಜಿ ಗುಲಬಾಜಿ ಠಾಕೂರ (48) ಹಾಗೂ ರಾಜೂಜಿ ಮನಾಜಿ ಠಾಕೂರ (37) ಬಂಧಿತರು. ವಾಹನದ ಮಾಲೀಕರನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದೆ. 4ನೇ ಆರೋಪಿ, ಗುಜರಾತ್‌ನಲ್ಲಿ ಅಕ್ರಮ ಮದ್ಯ ಪಡೆದು ಮಾರುತ್ತಿರುವ ವೀರಸಿಂಗ್ ಮಾನಾಜಿ ಠಾಕೂರ ಅವರನ್ನೂ ಬಂಧಿಸಬೇಕಾಗಿದೆ. ವಶಪಡಿಸಿಕೊಂಡ ವಾಹನ ಹಾಗೂ …

Read More »

ಬೆಳಗಾವಿಯಲ್ಲಿ ಅಬ್ಬರವಿಲ್ಲದೆ ಗಣೇಶ ಮೂರ್ತಿಗಳಿಗೆ ವಿದಾಯ

ಬೆಳಗಾವಿ: ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವು ಸರಳ, ಸಾಂಪ್ರದಾಯಿಕ ಹಾಗೂ ಶ್ರ‌ದ್ಧಾ- ಭಕ್ತಿಯಿಂದ ಮಂಗಳವಾರ ನೆರವೇರಿತು. ಕೊರೊನಾ ಕಾರಣದಿಂದ ಅದ್ಧೂರಿ ಮೆರವಣಿಗೆ ಮತ್ತು ಸೌಂಡ್ ಸಿಸ್ಟಂಗಳ ಅಬ್ಬರವಿರಲಿಲ್ಲ. 300ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೊದಲ ದಿನವೇ ಕೆಲವು ಮಂಡಳದವರು ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರು. ಬಹುತೇಕ ಮೂರ್ತಿಗಳಿಗೆ ಮಂಗಳವಾರ ವಿದಾಯ ಹೇಳಲಾಯಿತು. ಗಣೇಶೋತ್ಸವ ಮಂಡಳದವರು, ಸ್ಥಳೀಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೆಲವರು ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು …

Read More »

ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ಸೆ.30ರವರೆಗೆ ನಿಷೇಧ

ಉಗರಗೋಳ: ‘ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ಸೆ.30ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರು ಸಹಕಾರ ನೀಡಬೇಕು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ಕೊರೊನಾ ನಿಯಂತ್ರಣಕ್ಕೆ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ‘ದೇಶದ ನಾನಾ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಕಾರಣದಿಂದ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಜನರ ಹಿತದೃಷ್ಟಿಯಿಂದ ಅವಕಾಶ ಕೊಡುತ್ತಿಲ್ಲ’ ಎಂದು …

Read More »

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …

Read More »

ಬುಡಕಟ್ಟು ವೇಷ ಧರಿಸಿ ಪ್ರತಿಭಟನೆ.

ವಿಜಯಪುರ: ತಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮಾನ್ಯತೆಯ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಳವಾರ-ಪರಿವಾರ ಸಮುದಾಯದ ಜನರು ಬೇವು, ಲೆಕ್ಕಿಗಿಡದ ತಪ್ಪಲು ಸುತ್ತಿಕೊಂಡು ಬುಡಕಟ್ಟು ವೇಷಧರಿಸಿ ಅರೆಬೆತ್ತಲೆಯಾಗಿ ವಿನೂತನ ಪ್ರತಿಭಟನೆ ನಡೆಸಿದರು. ಸೋಮವಾರ ನಗರದ ಹೊರ ವಲದಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ನಗರದ ದರಬಾರ್‌ ಮೈದಾನಕ್ಕೆ ಬಂದು ಸಮಾವೇಶಗೊಂಡರು. ಮುಖಕ್ಕೆ, ಮೈಗೆಲ್ಲ ಕಪ್ಪು ಬಣ್ಣದಿಂದ ಪಟ್ಟಿಗಳನ್ನು ಬರೆದುಕೊಂಡು, ಮೈಗೆ ಬೇವು ಹಾಗೂ ಲೆಕ್ಕಿ ಗಿಡದ ತಪ್ಪಲು ಸುತ್ತಿಕೊಂಡು, …

Read More »

ಕನ್ನಡ ಭಾಷೆಯ ಮೇಲಿನ ಉದ್ಧಟತನ ಸರಿಯಲ್ಲ – ಕನ್ನಡ ಅಭಿವೃದ್ಧಿ ಪ್ರಾಧಿಕಾರಿದ ಅಧ್ಯಕ್ಷಕ ಟಿ.ಎಸ್.ನಾಗಾಭರಣ ಎಚ್ಚರಿಕೆ

ಬೆಂಗಳೂರು : ಹೊರನಾಡು/ಗಡಿನಾಡು ಕನ್ನಡಗರಿಗೆ ರಾಜ್ಯ ಸರ್ಕಾರದ ಆದೇಶದನ್ವಯ ಶೇ.5ರಷ್ಟು ಸೀಟುಗಳನ್ನು ಕಾಯ್ದಿರಿಸಬೇಕೆಂಬ ಆದೇಶವಿದ್ದರೂ ಸಹ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಉಲ್ಲಂಘಿಸಿರುವುದು ರಾಜ್ಯಭಾಷಾನೀತಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಕನ್ನಡದ ನೆಲದಲ್ಲಿ ಹೀಗೆ ಉದ್ಧಟತನ ತೋರಿದ ಅಧಿಕಾರಿ/ನೌಕರರ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಹೇಳಿದರು. ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ …

Read More »

RTE’ ಪ್ರವೇಶ : ವಿದ್ಯಾರ್ಥಿಗಳು, ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಶಿಕ್ಷಣ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಆರ್ ಟಿಇ ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ನಡೆಯಲಿದೆ.   ಆರ್ ಟಿಇ ಎರಡನೇ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಮಾಹಿತಿಯನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ. ಅಲ್ಲದೆ, ಪಾಲಕರು ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲೂ http://www.schooleducation.kar.nic.in/ ನಲ್ಲಿ ಸೀಟು …

Read More »

ಇಂದಿನಿಂದ ‘ಆಫ್‌ಲೈನ್‌’ನಲ್ಲಿ ಪುನರ್‌ಮನನ ತರಗತಿ: ಬೆಂ.ವಿ.ವಿ ಕ್ರಮ

ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪಠ್ಯದ ಪುನರ್‌ಮನನಕ್ಕಾಗಿ ‘ರೆಗ್ಯುಲರ್‌ ಆಫ್‌ಲೈನ್‌’ ತರಗತಿಗಳನ್ನು ಸೆಪ್ಟೆಂಬರ್‌ 1ರಿಂದಲೇ ತೆಗೆದುಕೊಳ್ಳುವಂತೆ ಬೆಂಗಳೂರು ವಿಶ್ವವಿದ್ಯಾಲಯ ತನ್ನ ವ್ಯಾಪ್ತಿಯ ಕಾಲೇಜುಗಳಿಗೆ ನಿರ್ದೇಶಿಸಿದೆ. ಸೆ. 12ರಿಂದ ಪದವಿಯ 6ನೇ ಸೆಮಿಸ್ಟರ್‌ ಹಾಗೂ 23ರಿಂದ ಸ್ನಾತಕೋತ್ತರ ಪದವಿಯ 4ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಲು ವಿ.ವಿ. ದಿನಾಂಕ ನಿಗದಿಪಡಿಸಿದೆ. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಲ್ಲಿ ಪಾಠಕ್ಕೆ ಸಂಬಂಧಿಸಿದಂತೆ ಪ್ರಶ್ನೆ, ಗೊಂದಲ, ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಹಾಗೂ ಪಾಠಗಳ ಪುನರಾವರ್ತನೆಗೆ ಅವಕಾಶ …

Read More »

ಶ್ರೀ ಸಂತೋಷ. ರ. ಜಾರಕಿಹೊಳಿಯವರಿಂದ ಪ್ರತಿಕಾ ಮಿತ್ರರಿಗೆ ಖಡಕ್ ವಾರ್ನಿಂಗ್

ಗೋಕಾಕ ನಗರದ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರ ರನ್ನ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಒಂದು ಔತಣ ಕೂಟಕ್ಕೆ ಕರೆದಿದ್ದರು ಇಲ್ಲಿ ಸುಮಾರು ಜನ ಕೂಡ ಭಾಗ ವಹಿಸಿದ್ದರು, ಗೋಕಾಕ ನಗರದ ಎಲ್ಲಾ ವಾರ ಪತ್ರಿಕೆ,ದಿನ ಪತ್ರಿಕೆ ,ಹಾಗೂ ಯೂಟ್ಯೂಬ್ ಚಾನಲ್ ಗಳ ವರದಿಗಾರರು ಈ ಸಭೆಯಲ್ಲಿ ಭಾಗ ವಹಿಸಿದ್ದರು, ಸಭೆಯ ಮುಖ್ಯ ಉದ್ದೇಶ ಏನಂದ್ರೆ ಎಲ್ಲರೂ ಒಂದಾಗಿ ಇರಿ ನಿಮ್ಮ , …

Read More »