ಮಡಿಕೇರಿ: ‘ತಲಕಾವೇರಿಯಲ್ಲಿ, ಗುಡ್ಡ ಕುಸಿತದಿಂದ ಮೃತಪಟ್ಟ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಪುತ್ರಿಯರು ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದಾರೆ. ಆದರೆ, ಅವರ ವೈಯಕ್ತಿಕ ವಿಚಾರದಲ್ಲಿ ಬೇರೆಯವರು ತಲೆಹಾಕುವುದು ಸರಿಯಲ್ಲ’ ಎಂದು ಕುಟುಂಬದ ಹಿರಿಯ ಸದಸ್ಯ ಜಯಪ್ರಕಾಶ್ ರಾವ್ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು. ‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ- ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. …
Read More »ಅಕ್ಟೋಬರ್ನಲ್ಲಿ ಗ್ರಾಪಂ ಚುನಾವಣೆ? ಮೀಸಲಾತಿ ಪಟ್ಟಿ ಸಿದ್ಧ; ಕರೊನಾ ಕಾಲದ ನಿಯಮ ಪಾಲನೆಗೂ ಬದ್ಧ
ಬೆಂಗಳೂರು: ಕರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ ಮೊದಲ ಇಲ್ಲವೇ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದ 6025 ಗ್ರಾಪಂಗಳ ಪೈಕಿ ಶೇ.90ರ ಅವಧಿ ಜೂನ್-ಜುಲೈನಲ್ಲಿ ಅಂತ್ಯಗೊಂಡಿತ್ತು. ಕರೊನಾ ಉಲ್ಬಣ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಂವಿಧಾನದತ್ತ ಅಧಿಕಾರ ಬಳಸಿ ‘ಅಸಾಧಾರಣ ಸಂದರ್ಭ’ವೆಂದು ಪರಿಗಣಿಸಿ ಚುನಾವಣೆ ಮುಂದೂಡಿತ್ತು. ರಾಜ್ಯ ಸರ್ಕಾರ ಕೂಡ ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿತ್ತು. …
Read More »ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ
ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್ ಬಿಲ್ ಕಲೆಕ್ಟರ್, ಕ್ಲರ್ಕ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್, ವಾಟರ್ಮೆನ್, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …
Read More »KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾದಿಂದ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೊರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಆಗಸ್ಟ್ 25ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇಂತಹ ಕೆಪಿಸಿಸಿ ಅಧ್ಯಕ್ಷ ಡಿಕೆ …
Read More »ಸ್ಥಳೀಯ ಉದ್ಯಮಿಗಳೇ ಹೂಡಿಕೆಗೆ ಮುಂದಾಗಿ: ಸಚಿವ ಶೆಟ್ಟರ
ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …
Read More »ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢ
ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೇನ್ ಆಗಬೇಕಾಗಿ ವಿನಂತಿ. ಸದ್ಯಕ್ಕೆ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತೋಷ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ …
Read More »ಶವವಾಗಿರುವ ಎಂಇಎಸ್: ನಾರಾಯಣಗೌಡ ಟೀಕೆ
ಬೆಳಗಾವಿ: ‘ಇಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಶವವಾಗಿದೆ. ಮರುಜೀವ ಕೊಡುವುದಕ್ಕೋಸ್ಕರ ಕೆಲವರು ಆಗಾಗ ವಿವಾದಗಳನ್ನು ಸೃಷ್ಟಿಸುತ್ತಿರುತ್ತಾರೆ. ಇದಕ್ಕೆ ಕನ್ನಡಿಗರು ಅಂಜುವುದಿಲ್ಲ. ತಕ್ಕ ಉತ್ತರ ಕೊಡುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ರಾಯಣ್ಣನ ಪುಣ್ಯಭೂಮಿ. ಇಲ್ಲಿ ಆ ನಾಯಕನ ಪ್ರತಿಮೆ ಪ್ರತಿಷ್ಠಾಪನೆಗೆ ಯಾವುದೇ ದೊಡ್ಡ ನಾಯಕರ ಅನುಮತಿ ಬೇಕಿಲ್ಲ. ಯಾರೋ ವಿವಾದ ಸೃಷ್ಟಿಸಿ …
Read More »ಆರ್ಸಿಯು: ಪೂರಕ ತರಗತಿ ಸೆ.1ರಿಂದ
ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ಕೋರ್ಸ್ಗಳ 6ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಕೋರ್ಸ್ಗಳ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆ.1ರಿಂದ ಪೂರಕ ತರಗತಿ ನಡೆಸಲಾಗುತ್ತದೆ. ಆದರೆ, ಈ ತರಗತಿಗಳು ಕಡ್ಡಾಯವಾಗಿರುವುದಿಲ್ಲ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ. ‘ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವವರ ಪೈಕಿ ಹೆಚ್ಚಿನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. ಆನ್ಲೈನ್ ತರಗತಿಗಳ ಅಲಭ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆಗೆ ಅವರಿಗೆ ತೊಂದರೆಯಾಗಿದೆ. ಪರೀಕ್ಷೆ ಬರೆಯುವುದಕ್ಕಾಗಿ …
Read More »