ಅಂಕೋಲಾ: ಶಿರೂರು ಬಳಿ ಗುಡ್ಡ ಕುಸಿದ ಪರಿಣಾಮ ಕೆಲ ದಿನಗಳಿಂದ ವಾಹನ ಸಂಚಾರ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಜುಲೈ 16ರಂದು ಶಿರೂರು ಬಳಿ ಹೆದ್ದಾರಿಯಲ್ಲಿ ಭೀಕರವಾಗಿ ಗುಡ್ಡಕುಸಿತ ಉಂಟಾಗಿ ಮಂಗಳೂರು – ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಹೆದ್ದಾರಿಯ ಮಧ್ಯೆ ಮಣ್ಣಿನ ರಾಶಿ ಬಿದ್ದು ಮತ್ತು ,11 ಜನ ಕಣ್ಮರೆಯಾಗಿದ್ದರು. ಅದರಲ್ಲಿ 8 ಜನರ ಮೃತದೇಹ ದೊರೆತಿತ್ತು. ಇನ್ನುಳಿದವರಿಗಾಗಿ …
Read More »ವಿವಾದದ ಸುಳಿಯಲ್ಲಿ ನಟ ದರ್ಶನ್ ಬಂಧಿಸಿದ್ದACP ಚಂದನ್ ಕುಮಾರ್.
ಬೆಂಗಳೂರು: ನಟ ದರ್ಶನ್ ಬಂಧಿಸಿ ಸುದ್ದಿಯಾಗಿದ್ದ ಎಸಿಪಿ ಚಂದನ್ ಕುಮಾರ್ ವಿರುದ್ದ ಕೆಲ ಆರೋಪಗಳು ಕೇಳಿ ಬರುತ್ತಿವೆ. ನಟ ದರ್ಶನ್ ಬಂಧನವಾದ ಬೆನ್ನಲೇ ಸುದ್ದಿಯಾಗಿರುವ ಎಸಿಪಿ ಚಂದನ್ ಕುಮಾರ್ ಈಗ ದಲಿತ ವಿರೋಧಿ ಎನ್ನುವ ಆರೋಪ ಕೇಳಿ ಬಂದಿದ್ದು, ಚಂದನ್ ಅವರ ಬಗ್ಗೆ ಕೇಳಿ ಬರುತ್ತಿರುವ ಆರೋಪ ಇನ್ನೂ ಸಾಬೀತಾಗಿಲ್ಲ. ಎಸಿಪಿ ಚಂದನ್ ಕುಮಾರ್ ಅವರ ಬಗ್ಗೆ ಹರಿರಾಮ್ ಎ ಎನ್ನುವವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಈತನು …
Read More »ಶಸ್ತ್ರಚಿಕಿತ್ಸೆಗಾಗಿ ರೋಗಿಗಳಿಂದ ಲಂಚಕ್ಕೆ ಬೇಡಿಕೆ
ಚಿತ್ರದುರ್ಗ: ಶಸ್ತ್ರ ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಂತ ರೋಗಿಯೊಬ್ಬರಿಗೆ ಜನರಲ್ ಸರ್ಜನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ ರವರು ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ …
Read More »ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ ಶಿಪ್
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು. * ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ …
Read More »ಮಹಿಳೆ ಮೇಲೆ ಪಿಎಸ್ಐ ಅನಿತಾ ರಾಠೋಡರಿಂದ ಹಲ್ಲೆ- ಆರೋಪ
ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ‘ವಿಚಾರಣೆ ನೆಪದಲ್ಲಿ ಪಿಎಸ್ಐ ಅನಿತಾ ರಾಠೋಡ ಅವರು ನನ್ನ ಹೊಟ್ಟೆಗೆ ಒದ್ದು ಗಾಯಗೊಳಿಸಿದ್ದಾರೆ’ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಎಸ್ಪಿ ಡಾ.ಭೀಮಾಶಂಕರ ಗುಳೇದ, ‘ಮಹಿಳೆಯ ಕೆನ್ನೆಗೆ ಹೊಡೆದಿದ್ದು ದೃಢಪಟ್ಟಿದೆ. ಹೊಟ್ಟೆಗೆ ಒದ್ದಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿಲ್ಲ’ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ, ತಾಲ್ಲೂಕಿನ ಖಡಕಲಾಟ ಗ್ರಾಮದ ಪೂನಂ ಮಾಯಣ್ಣವರ, ‘ನನ್ನನ್ನು ಜುಲೈ 27ರಂದು ಠಾಣೆಗೆ ಕರೆಯಿಸಿ, ಹಲ್ಲೆ ಮಾಡಿದ್ದಾರೆ. ನಿಪ್ಪಾಣಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ …
Read More »ಮಹಿಳೆಯರಿಗೆ ಸಿಗಲಿದೆ 20ಲಕ್ಷ ರೂ. ಸಾಲ ಸೌಲಭ್ಯ!
ನವದೆಹಲಿ : ಜುಲೈ 23, 2024ರಂದು ಕೇಂದ್ರ ಬಜೆಟ್ 2024 ಮಂಡಿಸಲಾಗಿದೆ. ಇದರಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರಿ ಯೋಜನೆಗಳಲ್ಲಿ ಬದಲಾವಣೆಗಳಿಗೆ ಸಂಬಂಧಿಸಿದ ದೊಡ್ಡ ಘೋಷಣೆಗಳನ್ನು ಮಾಡಿದರು. ಈ ಪ್ರಕಟಣೆಗಳಲ್ಲಿ ಒಂದು ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ ಸಂಬಂಧಿಸಿದೆ. ಈ ಯೋಜನೆಯಡಿ ಉದ್ಯಮಿಗಳಿಗೆ ನೀಡಲಾಗುವ ಸಾಲವನ್ನ ಈಗ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು. ಆದಾಗ್ಯೂ, …
Read More »1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ
ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ರೈತರ ಜೀವಕ್ಕೆ ಬೆಲೆ ಇಲ್ಲ. ಇದೊಂದು ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ರೈತರಿಗೆ ರಾಜ್ಯದಲ್ಲಿ ಉಜ್ವಲ ಭವಿಷ್ಯ ಇಲ್ಲದಂತಾಗಿದೆ. ಸರ್ಕಾರ ರೈತರ ಆತ್ಮಹತ್ಯೆ …
Read More »ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ರಾಯಬಾಗ: ಸಾಲದ ಬಾಧೆ ತಾಳಲಾರದೆ ತಾಲ್ಲೂಕಿನ ಹೊಸ ದಿಗ್ಗೇವಾಡಿ ಗ್ರಾಮದ ರೈತ ಬಸವರಾಜ ಭೀಮಪ್ಪ ಸಗರೆ (45) ರೈತ ಮರಕ್ಕೆ ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ 1 ಎಕರೆ 10ಗುಂಟೆ ಜಮೀನಿದ್ದು, ಸಾಗುವಳಿ ಹಾಗೂ ಅಭಿವೃದ್ಧಿಯ ಸಲುವಾಗಿ ಗ್ರಾಮದ ಮಹಾಲಿಂಗೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ₹1.80 ಲಕ್ಷ, ವಿವಿಧ ಉದ್ದೇಶ ಗ್ರಾಮೀಣ ಕೃಷಿ …
Read More »ಮನೆಗಳಿಗೆ ನುಗ್ಗಿದ ನೀರು; ಆಕ್ರೋಶ
ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದಾಗಿ ನಗರದ ಹೊರವಲಯದ ಬಸವನ ಕುಡಚಿಯ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ, ಜನರು ಪರದಾಡುವಂತಾಯಿತು. ಕೆಎಲ್ಇ ಸಂಕಲ್ಪ ವೆಲ್ನೆಸ್ ಸೆಂಟರ್ಗೆ ಸಹ ನೀರು ನುಗ್ಗಿದ ಪರಿಣಾಮ ಔಷಧಗಳು ಮತ್ತು ವೈದ್ಯಕೀಯ ಪರಿಕರಗಳಿಗೆ ಹಾನಿಯಾಯಿತು. ಈ ನೀರು ಹೊರಹಾಕಲು ಮಹಾನಗರ ಪಾಲಿಕೆಯವರು ಬುಧವಾರ ಬೆಳಿಗ್ಗೆಯಿಂದ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದು ಕಂಡುಬಂತು. ‘ವಾರದಿಂದ ನಮ್ಮಲ್ಲಿ ಸತತ ಮಳೆಯಾಗುತ್ತಿದೆ. …
Read More »ಅಂಗನವಾಡಿಗೆ ನೇಮಕ: ಅರ್ಜಿ ಆಹ್ವಾನ
ಖಾನಾಪುರ: ತಾಲ್ಲೂಕಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ನಾಲ್ವರು ಅಂಗನವಾಡಿ ಕಾರ್ಯಕರ್ತೆಯರು ಮತ್ತು 21 ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್-ಲೈನ್ ಮೂಲಕವೇ ಸಲ್ಲಿಸಬೇಕು. ಆ.11 ಕೊನೆಯ ದಿನ. ಖಾಲಿ ಇರುವ ಹುದ್ದೆಗಳ ವಿವರ, ಮೀಸಲಾತಿ ಮತ್ತು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗೆ ಪಟ್ಟಣದ ಜಾಂಬೋಟಿ ರಸ್ತೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.
Read More »