Breaking News

Uncategorized

ಕರಾವಳಿ: ಇಂದು ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು …

Read More »

ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು. ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ …

Read More »

ಗಡಿ ನುಸುಳಲು ಯತ್ನಿಸಿದ ಚೀನಾ ಯೋಧರಿಗೆ ಗುಂಡೇಟು: ಗಡಿ ಉದ್ವಿಗ್ನ

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಗುಂಡಿನ ಕಾಳಗ ನಡೆದಿದೆ ಎಂದು ಹೇಳಲಾಗಿದೆ. ಪಾಂಗಾಂಗ್ ಸರೋವರದ ಬಳಿ ಚೀನಿ ಸೈನಿಕರು ಹಾಗೂ ಭಾರತೀಯ ಯೋಧರು ಬೀಡುಬಿಟ್ಟಿದ್ದಾರೆ. ಚೀನಿ ಯೋಧರು ಗಡಿ ನುಸುಳಲು ಯತ್ನಿಸಿದ ವೇಳೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಮತ್ತೆ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.   ಚೀನಾ ಸರ್ಕಾರದ ಒಡೆತನದ ಗ್ಲೋಬಲ್ ಟೈಮ್ಸ್ ಸೋಮವಾರ ಭಾರತೀಯ …

Read More »

ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಖಡಕ್ ವಾರ್ನಿಂಗ್ :`ಒನ್ ಟರ್ಮ್ ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚನೆ

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಖಾಸಗಿ ಶಾಲೆಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಒಂದು ಅವಧಿಯ (ಟರ್ಮ್‌) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ. ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆ‌ಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ ಮತ್ತು ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ …

Read More »

ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರ ಭರ್ಜರಿ ದಾಳಿ ; 144 ಕೆ.ಜಿ ಗಾಂಜಾ ವಶ

ಬೆಳಗಾವಿ : ಇತ್ತಿಚೀನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಡ್ರಗ್ ಮಾಫಿಯಾ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳು ಚಿತ್ರರಂಗದ ದೊಡ್ಡ ದೊಡ್ಡ ನಟ, ನಟಿಯರು ಡ್ರಗ್ ಮಾಫಿಯಾ ದಲ್ಲಿ ಸಿಲುಕಿಕೊಂಡಿದ್ದಾರೆ. ಒಂದೆಡೆ ಡ್ರಗ್ ಮಾಫಿಯಾ ಸದ್ದು ಮಾಡುತ್ತಿದ್ದರೆ ಇತ್ತ ಬೆಳಗಾವಿಯಲ್ಲಿ ಗಾಂಜಾ ನಶೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಅವ್ಯಾಹತವಾಗಿ ಗಾಂಜಾ ಬೆಳೆದು ರಾಜ್ಯದ ಜೊತೆಗೆ ಗೋವಾ ಹಾಗೂ ಮಹಾರಾಷ್ಟ್ರದಲ್ಲಿ ಮಾರಾಟ …

Read More »

ಮದುವೆಗಳಲ್ಲಿ ಬ್ಯಾಂಡ್‌ಗೆ ಅನುಮತಿ: ಅಗ್ರಹ

ಬೆಳಗಾವಿ: ಮದುವೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಮಂಗಳವಾದ್ಯ ಮತ್ತು ಬ್ರಾಸ್‌ ಬ್ಯಾಂಡ್‌ಗಳನ್ನು ನುಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಮಂಗಳವಾದ್ಯ ಹಾಗೂ ಬ್ಯಾಂಡ್ ಕಲಾವಿದರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ‍ಪ್ರತಿಭಟನೆ ನಡೆಸಿದರು. ‘ಈ ವೃತ್ತಿಯನ್ನು ಸಾವಿರಾರು ಮಂದಿ ಅವಲಂಬಿಸಿದ್ದೇವೆ. ಕೋವಿಡ್-19 ಲಾಕ್‌ಡೌನ್‌ನಿಂದಾಗಿ ಸಭೆ, ಸಮಾರಂಭ, ಮದುವೆ, ಜಯಂತಿ, ಜಾತ್ರೆ ಮೊದಲಾದ ಕಾರ್ಯಕ್ರಮಗಳಿಗೆ ಹಲವು ತಿಂಗಳವರೆಗೆ ನಿರ್ಬಂಧ ವಿಧಿಸಲಾಗಿತ್ತು. ಇದರಿಂದಾಗಿ ದುಡಿಮೆ ಇಲ್ಲದೆ, ಗಳಿಕೆಯೂ ಇಲ್ಲದೆ ನಾವು …

Read More »

ಬಸ್‌ ಕಡೆ ಜನರ ಒಲವು: ಸಾರಿಗೆ ಆದಾಯ ಚೇತರಿಕೆ

ಚಿಕ್ಕೋಡಿ: ಕಳೆದ ಆರು ತಿಂಗಳಿಂದ ಕೋವಿಡ್ ಹೊಡೆತಕ್ಕೆ ನಷ್ಟ ಅನುಭವಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗವು ಈಗ ಹಂತ ಹಂತವಾಗಿ ಆದಾಯದಲ್ಲಿ ಚೇತರಿಸಿಕೊಳ್ಳುತ್ತಿದೆ. ಲಾಕ್‌ಡೌನ್‌ ತೆರವುಗೊಂಡಿರುವ ಪರಿಣಾಮ ದಿನದಿಂದ ದಿನಕ್ಕೆ ಪ್ರಯಾಣಿಕರು ಬಸ್‌ ಕಡೆ ವಾಲುತ್ತಿದ್ದಾರೆ. ಕಳೆದ ಮಾರ್ಚ್‌ ಮೂರನೇ ವಾರದಿಂದ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಪರಿಣಾಮ ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್‌ಡೌನ್‌ ಜಾರಿ ಮಾಡಿ ಬಸ್‌ ಸಂಚಾರ ನಿಷೇಧಿಸಿತ್ತು. ಹೀಗಾಗಿ ನಾಲ್ಕು ತಿಂಗಳು ಬಸ್‌ …

Read More »

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ. ‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ …

Read More »

ನಿವೃತ್ತ ಸೈನಿಕನೊಬ್ಬ ಮಹಿಳೆಯ ಪ್ರಚೋದನೆಯಿಂದ ಯುವಕನ ಕೊಲೆ

ಹುಬ್ಬಳ್ಳಿ: ನಿವೃತ್ತ ಸೈನಿಕನೊಬ್ಬ ಮಹಿಳೆಯ ಪ್ರಚೋದನೆಯಿಂದ ಯುವಕನ ಕೊಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ತಿಪ್ಪೆ ಹಾಕುವ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಕಲಘಟಗಿ ತಾಲೂಕಿನ ಕಲಕುಂಡಿ ಗ್ರಾಮದ ಜಗದೀಶ್ ಹನಮಂತಪ್ಪ ತಾಂಬೆ ಎಂಬ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ದೇವಿಕೊಪ್ಪ ಗ್ರಾಮದ ನಿವೃತ್ತ ಸೈನಿಕ ಗಂಗಾಧರ ನಿಂಗಪ್ಪ ನೂಲ್ವಿ ಹಾಗೂ ಶಾರದಾ ಪಾಟೀಲ್ …

Read More »

5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ

ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …

Read More »