Breaking News

Uncategorized

ನೆರೆಪೀಡಿತ ಪ್ರದೇಶಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಬೆಳಗಾವಿ: ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ಮನವಿಮಾಡಲು ಮುಂದಿನ ವಾರ ನಾನು ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ. ಪರಿಹಾರದ ಕುರಿತು ಶಾಸಕರೊಂದಿಗೆ ಶೀಘ್ರಸಭೆಕರೆದು ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈ ಬಗ್ಗೆ ಸಂಪೂರ್ಣ …

Read More »

ಡಿಕೆಶಿಗೆ ಕೊರೊನಾ ಸೋಂಕು

ಹೌದು ಇಡೀ ದೇಶಕ್ಕೆ ಬಂದಿರುವ ಈ ಕೊರೊನ ಎಂಬ ಸಾಂಕ್ರಾಮಿಕ ಕಾಯಿಲೆ ನಮ್ಮ ರಾಜ್ಯಕ್ಕೂ ಬಂದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಮತ್ತು ಸುಮಾರು ಐದು ತಿಂಗಳಿನಿಂದ ಆರಂಭವಾದ ಕೊರೊನ ಈಗಾಗಲೇ ಸಾಕಷ್ಟು ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ, ಮತ್ತು ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೂ ಕೊರೊನ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ. ಅಧ್ಯಕ್ಷ ಡಿ …

Read More »

ಸಾಂಬ್ರಾ ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ರೈತರ ಪ್ರತಿಭಟನೆ

ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಇದೇ ವೇಳೆ ರೈತರು ಹೊರಗಡೆ ಧರಣಿ ನಡೆಸುತ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಹೋದ ವರ್ಷ ನೆರೆ …

Read More »

ಜಲಾಶಯಕ್ಕೆ ಸಿಎಂ ಭೇಟಿ : ಬಿಗಿ ಭದ್ರತೆ, ಶೃಂಗಾರಗೊಂಡ ಆಲಮಟ್ಟಿ ಜಲಾಶಯ

ವಿಜಯಪುರ: ಇಂದು ಸಿ ಎಮ್ ಯಡಿಯೂರಪ್ಪನವರು ಆಲಮಟ್ಟಿ ಜಲಾಶಯಕ್ಕೆ ಇಂದು ಮದ್ಯಾಹ್ನ ಆಗಮಿಸುವ ಹಿನ್ನಲೆಯಲ್ಲಿ ಆಲಮಟ್ಟಿ ತಳಿರು ತೋರಣಗಳು, ಪುಷ್ಪಗಳಿಂದ ಶೃಂಗಾರಗೊಂಡಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಕೆ.ಬಿ.ಜಿ ಎನ್.ಎಲ್ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪತ್ರಕರ್ತರಿಗೂ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ. ಸಿಎಂ ಸ್ವಾಗತ ಕೋರಿ ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ವೃತ್ತ ಸೇರಿದಂತೆ ಪಟ್ಟಣದಲ್ಲಿ ಹೂವಿನ ಅಲಂಕಾರ …

Read More »

ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸಿಎಂ ಬಿಎಸ್‍ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Read More »

ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ.

ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ ರಾಯಚೂರಿನ ಸಿಂಧನೂರು ನಗರದ ಕೋವಿಡ್ ಕೇರ್ ಸೆಂಟರ್ ಇದಕ್ಕೆ ಅಪವಾದ ಎಂಬಂತೆ ಉತ್ತಮ ಸೇವೆ ನೀಡುತ್ತಿದೆ. ಕೇಂದ್ರದಲ್ಲಿರುವ ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ತರಬೇತಿಗಳನ್ನ ನೀಡಿರುವ ಸಿಂಧನೂರು ಮೂಲದ ಯೋಗಗುರು ಮಲ್ಲಣ್ಣ ಸೋಂಕಿತರಿಗೆ ಯೋಗ ಕಲಿಸುತ್ತಿದ್ದಾರೆ. ಕೋವಿಡ್ ಕೇರ್ …

Read More »

ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ.

ಚಾಮರಾಜನಗರ: ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ. ಅಂತ್ಯ ಸಂಸ್ಕಾರ ಮಾಡಬೇಕೆಂದರೆ ಶವ ಹೊತ್ತು ನದಿ ದಾಟಿ, ಅಲ್ಲಿರುವ ಜಮೀನುಗಳಲ್ಲೇ ಹೆಣ ಹೂಳಬೇಕು. ಇದು ಇಂದು ನಿನ್ನೆಯ ಸಮಸ್ಯೆಯಲ್ಲ ವರ್ಷಗಟ್ಟಲೆ ಗ್ರಾಮಸ್ಥರು ಪಡುತ್ತಿರುವ ಕಷ್ಟ. ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಇಂತಹ ಗಂಭೀರ ಸಮಸ್ಯೆ ಇದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನದಿ ದಾಟಲು ಇತ್ತೀಚೆಗೆ ಗ್ರಾಮಸ್ಥರೇ ಮರದ ಹಲಗೆಗಳ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಹೆಣ …

Read More »

ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ: ಸಿ.ಟಿ ರವಿ

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ಗಲಭೆಗೆ ಸಂಬಂಧ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿ, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. …

Read More »

ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!

ಬೆಂಗಳೂರು, ಆ.24- ಈರುಳ್ಳಿ ಬೆಲೆ ಮತ್ತೆ ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಸದ್ಯ ಕೆಜಿಗೆ 10ರಿಂದ 15 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇದೀಗ 30ರಿಂದ 50ರೂ.ಗೆ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಜತೆಗೆ ಈರುಳ್ಳಿ ಬೆಳೆದ ಕೃಷಿಕನ ಬಾಳಲ್ಲೂ ಕಣ್ಣೀರಿಗೆ ಕಾರಣವಾಗುತ್ತಿದೆ. ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಪ್ರವಾಹ ಬಂದು ಈರುಳ್ಳಿ ಬೆಳೆ ನಾಶವಾಗಿದೆ. ಮಳೆ ಹಾಗೂ ರೋಗ ಬಾಧೆಯಿಂದ …

Read More »

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸ

ನವದೆಹಲಿ, ಆ.24- ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸವಾಗಿದ್ದು, ಇಂದು ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ಭಾರೀ ಕುತೂಹಲ ಕೆರಳಿಸಿದೆ. ಕಾಂಗ್ರೆಸ್‍ನ ಕ್ರಿಯಾಶೀಲ ನಾಯಕ ರಾಹುಲ್‍ ಗಾಂಧಿ ಅವರೇ ಮತ್ತೆ ಪಕ್ಷದ ಸಾರಥ್ಯ ವಹಿಸಬೇಕೆಂದು ಒಂದು ಬಣ ಬಿಗಿ ಪಟ್ಟು ನೀಡಿರುವ ಬೆನ್ನಲ್ಲೇ ಅವರು ಈ ಅತ್ಯುನ್ನತ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಪಕ್ಷದ ತಾರಾ …

Read More »