Breaking News

Uncategorized

ಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ನೇಮಕ

ಬೆಳಗಾವಿ ನಗರದಲ್ಲಿ ವಾಸಿಸುವ ಶ್ರೀ ಪ್ರವೀಣ ಪಾಟೀಲ ಅವರನ್ನು 33 ವರ್ಷ್ ಕನ್ನಡ ನಾಡು ನುಡಿಗಾಗಿ ಹೋರಾಟದಲ್ಲಿ ಇತಿಹಾಸವಿರುವ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ ಮಂಜುನಾಥ್ ದೇವ ಅವರು ಕನ್ನಡ ಜಾಗೃತಿ ವೇದಿಕೆಯ ನೂತನ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ಅವರನ್ನು ಆಯ್ಕೆ ಮಾಡಿ ಅಭಿನಂದನೆಗಳು ಸಲ್ಲಿಸಿದ್ದಾರೆ. ಶ್ರೀ ಪ್ರವೀಣ ಪಾಟೀಲ ಅವರು ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಸುಮಾರು ವರ್ಷಗಳಿಂದ ಕನ್ನಡ ನಾಡು, ನುಡಿ, ಭಾಷೆಗಾಗಿ ಹೋರಾಟ …

Read More »

ಬೆಳಗಾವಿ: ಕಂಗ್ರಾಳಿ ಬುದ್ರುಕ್‌ನಲ್ಲಿ ನಿಗೂಢ ಸಾವು; ಲಾರಿಯಲ್ಲೇ ಶವವಾಗಿ ಪತ್ತೆಯಾದ ಚಾಲಕ!

ಬೆಳಗಾವಿ ತಾಲೂಕಿನ ಕಂಗ್ರಾಳಿ ಬುದ್ರುಕ್‌ನಲ್ಲಿ ಸೋಮವಾರ ಮುಂಜಾನೆ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮುಖ್ಯ ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಯೊಳಗೆ ಚಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಸದ್ಯ ಆತಂಕ ಹಾಗೂ ತೀವ್ರ ರಂಗಿನ ಕುತೂಹಲ ಮೂಡಿಸಿದೆ. ಮೃತರನ್ನು ಕಲಮೇಶ್ವರ ಗಲ್ಲಿಯ ನಿವಾಸಿ ಗಜಾನನ ವಾಮನ ಹುರುಡೆ (45 ವರ್ಷ) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗಜಾನನ ಅವರು ಭಾನುವಾರ ರಾತ್ರಿ ತಮ್ಮ ಲಾರಿಯನ್ನು ಕಲಮೇಶ್ವರ ಸಹಕಾರಿ ಸಂಘದ ಮುಂಭಾಗದ …

Read More »

ಬಿಚ್ಚಾಲಿ ಏಕಶಿಲಾ ವೃಂದಾವನ ಬಳಿಯ 6 ಕೋಣೆ, ಗೋಶಾಲೆಗೆ ಬೀಗ ಜಡಿದ ಅಧಿಕಾರಿಗಳು

ರಾಯಚೂರು: ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನ ಬಳಿಯ ಜಾಗದ ವಿವಾದ ಹಿನ್ನೆಲೆ ರಾಯರ ಜಪದ ಕಟ್ಟೆ ಬಳಿಯ 6 ಕೋಣೆಗಳು ಹಾಗೂ ಗೋಶಾಲೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪೊಲೀಸ್ ಅಧಿಕಾರಿಗಳ ರಕ್ಷಣೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಅರ್ಚಕರ ವಶದಲ್ಲಿದ್ದ ಕೋಣೆಗಳಿಗೆ ಬೀಗ ಹಾಕಿ ವಶಕ್ಕೆ ಪಡೆದಿದ್ದಾರೆ. ಸರ್ವೆ ನಂ.35, 37 ರ 2 ಎಕರೆ 33 ಗುಂಟೆ ಜಾಗಕ್ಕಾಗಿ ಮಂತ್ರಾಲಯ ರಾಯರ ಮಠ ಹಾಗೂ ಅರ್ಚಕರು, …

Read More »

ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣ: ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ಠಾಣೆಯಲ್ಲಿ ಮೊದಲ ದೂರು ದಾಖಲು!

ಳಗಾವಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಮೊದಲ ಅಧಿಕೃತ ಖಾಸಗಿ ದೂರು ದಾಖಲಾಗಿದೆ. ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ಕಾಗವಾಡ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ದೂರು ನೀಡಿದ್ದಾರೆ. ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ಕಾಗವಾಡ ತಾಲೂಕಿನ ಹೂಡಿಕೆದಾರ ಕೃಷ್ಣಾ ಅಪ್ಪಣ್ಣ ಅಪ್ರಾಜ್ ಎಂಬುವವರು ಮೊದಲ ವಂಚನೆ ಪ್ರಕರಣ ದಾಖಲಿಸಿದ್ದಾರೆ. …

Read More »

ದಾವಣಗೆರೆ | ಗುಡುಗು ಸಿಡಿಲು ಸಹಿತ ಭಾರೀ ಮಳೆ – ನೆಲಕಚ್ಚಿದ ಪರಂಗಿ, ಅಡಿಕೆ ಬೆಳೆ

ದಾವಣಗೆರೆ: ಜಿಲ್ಲೆಯಾದ್ಯಂತ  ಸುರಿದ ಭಾರೀ ಮಳೆಗೆ ಪರಂಗಿ ಹಾಗೂ ಅಡಿಕೆ ಗಿಡಗಳು ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮಂಗಳವಾರ (ಮೇ 19) ಸುರಿದ ಧಾರಾಕಾರ ಮಳೆಗೆ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿ, ದೊಣ್ಣೆಹಳ್ಳಿಯಲ್ಲಿ ತಿಪ್ಪೇಸ್ವಾಮಿ ಹಾಗೂ ಬಸಪ್ಪ ಎನ್ನುವ ರೈತರಿಗೆ ಸೇರಿದ ಎರಡು ಎಕರೆ ಪಪ್ಪಾಯ ಬೆಳೆ ನೆಲಕಚ್ಚಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಉದ್ದಘಟ್ಟ ಗ್ರಾಮದಲ್ಲಿ ಮಳೆ ಗಾಳಿಗೆ ಸರ್ಕಾರಿ ಶಾಲೆಯ ಕೊಠಡಿ ಮೇಲೆ ಬೃಹತ್ …

Read More »

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR

ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ವಿರುದ್ಧ ಎಫ್ಐಆರ್ ದಾಖಲಾಗಿದೆ. 55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್‌ ಮೇಲಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ವಿಧಾನ ಪರಿಷತ್ ಸದಸ್ಯ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇರುವಾಗ ಹಣ ಕೇಳಲು …

Read More »

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ – ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ರಾಜ್ಯ ಸರ್ಕಾರವು ಚುನಾವಣೆ ವಿಳಂಬಗೊಳಿಸಲು ಯತ್ನಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ ಸುಪ್ರೀಂ ಕೋರ್ಟ್‌, ಆಗಸ್ಟ್‌ 31ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ ಬರುವ ಐದೂ ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ ಬರುವ ಐದು ಪಾಲಿಕೆಗಳಿಗೆ ಚುನಾವಣೆ ಮುಂದೂಡಿಕೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿಪುಲ್‌ …

Read More »

ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

ಬೆಂಗಳೂರು: ಹೆಬ್ಬಾಳ ಪೊಲೀಸರು  ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ  ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ …

Read More »

6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂ.ಬಿ ಪಾಟೀಲ್‌

ಬೆಂಗಳೂರು: ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌, ರಾಜ್ಯದಲ್ಲಿ 6,000 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌  ತಿಳಿಸಿದ್ದಾರೆ. ಬುಧವಾರ (ಮೇ 20) ಖನಿಜ ಭವನದಲ್ಲಿ ಕಂಪನಿಯ ಉನ್ನತಾಧಿಕಾರಿಗಳ ಜೊತೆಗೆ ನಡೆದ ವಿಸ್ತೃತ ಸಮಾಲೋಚನೆಯ ನಂತರ ಸಚಿವರು ಈ ಮಾಹಿತಿ ನೀಡಿದ್ದಾರೆ. 200 ಎಕರೆ ಪ್ರದೇಶದಲ್ಲಿ ವೈಮಾಂತರಿಕ್ಷ, ರಕ್ಷಣೆ, ಸೆಮಿಕಂಡಕ್ಟರ್‌ ಹಾಗೂ …

Read More »

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶ ಇಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ  ಸೂಚನೆ ನೀಡಿದ್ದಾರೆ. ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. …

Read More »