ಕೋಲಾರ : ಕೋಲಾರ ಜಿಲ್ಲೆಯ ಕೆಜಿಎಫ್ನ ಬಿಜಿಎಂಎಲ್ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …
Read More »ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.
Read More »ಬೆಂಗಳೂರು ಉಗ್ರ ಡಾ| ಶಬೀಲ್ ದಿಲ್ಲಿಯಲ್ಲಿ ಬಂಧನ!
ನವದೆಹಲಿ : 2007ರಲ್ಲಿ ನಡೆದಿದ್ದ ಬ್ರಿಟನ್‌ನ ಗ್ಲಾಸ್ಗೋ ಏರ್‌ಪೋರ್ಟ್ ದಾಳಿಯಲ್ಲಿ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. 2010-11ರಲ್ಲಿ ಬೆಂಗಳೂರಿನಿಂದ ಸೌದಿ ಅರೇಬಿಯಾಗೆ ಪರಾರಿಯಾಗಿದ್ದ ಈತನನ್ನು ಸ್ವದೇಶಕ್ಕೆ ವಾಪಸ್ ಕರೆಸಿಕೊಂಡು ಬಂಧಿಸಲಾಗಿದೆ. ಶಬೀಲ್ ಅಹ್ಮದ್ ಎಂಬಾತನೇ ಬಂಧಿತ. ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ ನಂತರ ಈತನನ್ನು ಎನ್‌ಐಎ ತನ್ನ ವಶಕ್ಕೆ ತೆಗೆದುಕೊಂಡಿದೆ. ವೈದ್ಯಕೀಯ ಪದವೀಧರನಾಗಿರುವ ಶಬೀಲ್ ಅಹ್ಮದ್, ಗ್ಲಾಸ್ಗೋ …
Read More »ಆಫ್‌ಲೈನ್ ಪರೀಕ್ಷೆ ಕುರಿತು ಸ್ಪಷ್ಟನೆ ನೀಡಿ: ಕೃಷಿ ವಿವಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು : ತನ್ನ ವ್ಯಾಪ್ತಿಯ ಕೃಷಿ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳಿಗೆ ‘ಆನ್‌ಲೈನ್ ಪರೀಕ್ಷೆ’ಗಳ ಬದಲಿಗೆ ‘ಆಫ್‌ಲೈನ್ ಪರೀಕ್ಷೆ’ ನಡೆಸುವ ಕುರಿತು ವಿವರವಾಗಿ ಸ್ಪಷ್ಟಪಡಿಸುವಂತೆ ಬೆಂಗಳೂರು ಕೃಷಿ ವಿವಿಗೆ ಹೈಕೋರ್ಟ್ ಸೂಚಿಸಿದೆ. ಕೃಷಿ ವಿಶ್ವವಿದ್ಯಾಲಯದ ಬಿಎಸ್‌ಸಿ (ಕೃಷಿ) ಕೋರ್ಸ್‌ನ ಸದಾನಂದ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ, ಕೃಷಿ …
Read More »536 ಮಂದಿ ಗುಣಮುಖ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 276 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 536 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
Read More »ಕೊರೋನಾ ಆತಂಕ: ಹಳ್ಳಿಗಳು, ಸಣ್ಣ ಪಟ್ಟಣಗಳಲ್ಲಿ ಮಿಂಚಿನ ವೇಗದಲ್ಲಿ ಹರಡುತ್ತಿದೆ ಸೋಂಕು!
ಬೆಂಗಳೂರು: ಕೋವಿಡ್ -19 ರ ಪಟ್ಟಿಯಲ್ಲಿ ಕರ್ನಾಟಕವು ಮೂರು ಲಕ್ಷ ಗಡಿ ದಾಟುತ್ತಿದ್ದಂತೆ – ತಿಂಗಳಾರಂಭದಲ್ಲಿ 1.29 ಲಕ್ಷ ಸಕಾರಾತ್ಮಕ ಪ್ರಕರಣಗಳಿಂದ ಭಾರಿ ಜಿಗಿತ ಕಂಡಿದೆ. ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಈ ವೈರಸ್ ವೇಗವಾಗಿ ಹರಡುತ್ತಿದೆ. ಶನಿವಾರ, ರಾಜ್ಯವು 8,324 ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗೆ ರಾಜ್ಯದಲ್ಲಿ 32,7076 ಪ್ರಕರಣಗಳು ವರದಿಯಾಗಿದೆ. ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನ ಮುಕ್ತ ಸಂಚಾರ, ನಗರಗಳಿಗೆ ಮರಳುವಿಕೆಮತ್ತು ಪರೀಕ್ಷೆಗಳ ಸಂಖ್ಯೆಯಲ್ಲಿನ …
Read More »ಪಠ್ಯದಲ್ಲಿ ಕೃಷಿ ಸೇರ್ಪಡೆ? : ಪ್ರಧಾನಿ ಮೋದಿಯಿಂದ ಸುಳಿವು
ಲಕ್ನೋ: ಕೃಷಿಯು ಮಾಧ್ಯಮಿಕ ಶಿಕ್ಷಣ ಮಟ್ಟದಿಂದ ಪಠ್ಯದ ಭಾಗವಾಗಲಿದೆಯೇ? ಪ್ರಧಾನಿ ಮೋದಿಯವರು ಇಂಥದ್ದೊಂದು ಸುಳಿವನ್ನು ನೀಡಿದ್ದಾರೆ. ಮಾಧ್ಯಮಿಕ ಮಟ್ಟದಲ್ಲಿ ಕೃಷಿಯನ್ನು ಪಠ್ಯ ರೂಪದಲ್ಲಿ ಪರಿಚಯಿಸಲು ಸರಕಾರವು ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಉತ್ತರಪ್ರದೇಶದ ಝಾನ್ಸಿಯಲ್ಲಿ ರಾಣಿ ಲಕ್ಷ್ಮೀಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತಾತ್ಮಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭ ಅವರು ಈ ವಿಚಾರ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಗಳೊಂದಿಗೆ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.
ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆನ್ನಾಳಿ ಗ್ರಾಮದ ಮೌನೇಶ್ವರ ನಗರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಬಿಜೆಪಿ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡು, ಹೂವಿನ ಹಾರ ಹಾಕಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶಾಸಕ ಸತೀಶ, 10 ವರ್ಷಗಳಿಂದ ಯಮಕನಮರಡಿ ಕ್ಷೇತ್ರದಲ್ಲಿ ಶಿಕ್ಷಣ ಸೇರಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ …
Read More »ಬೆಂಗಳೂರಿನ ಗಾಳಿಯಲ್ಲಿ ಹೆಚ್ಚುತ್ತಿರುವ ವಿಷಕಾರಿ ಭಾರಲೋಹ : ತಜ್ಞರಿಂದ ಎಚ್ಚರಿಕೆ
ಬೆಂಗಳೂರು : ಯೋಜಿತವಲ್ಲದ ನಗರೀಕರಣ, ಹೆಚ್ಚುತ್ತಿರುವ ಇಂಧನಗಳ ಬಳಕೆ, ಕೈಗಾರಿಕೆಗಳಿಂದ ಹೊರಸೂಸುವ ವಿಷಾನಿಲಗಳು ನಗರದಲ್ಲಿ ವಾಯು ಮಾಲಿನ್ಯಕಾರಕಗಳ ಪ್ರಮಾಣವನ್ನು ಹೆಚ್ಚಿಸಿದೆ. ಇದರ ಜೊತೆಗೆ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಭಾರಲೋಹಗಳ ಪ್ರಮಾಣವೂ ನಗರದ ಗಾಳಿಯಲ್ಲಿ ಹೆಚ್ಚುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಇಂಟರ್‍ನ್ಯಾಷನಲ್ ಜರ್ನಲ್ ಆಫ್ ಪ್ಯೂರ್ ಆಂಡ್ ಅಪ್ಲೈಡ್ ರೀಸರ್ಚ್ (ಐಜೆಪಿಎಆರ್) ತನ್ನ ಅಧ್ಯಯನದಲ್ಲಿ ವರದಿಯಲ್ಲಿ ನಗರದ ಪಕ್ಷಿಗಳ ಗರಿಗಳಲ್ಲಿ ಭಾರಲೋಹಗಳನ್ನು ಪತ್ತೆಯಾಗಿರುವುದಾಗಿ ತಿಳಿಸಿದೆ. ಪ್ರಾಣಿಗಳು ಹಾಗೂ ಮನುಷ್ಯರ ಕೂದಲಿನಲ್ಲೂ ಈ ಭಾರ …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಇಬ್ಬರೂ ದೇಶದ …
Read More »