ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. 267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Read More »ಸಂಗೊಳ್ಳಿರಾಯಣ್ಣ ಸೊಸೈಟಿ ವಂಚನೆ ಪ್ರಕರಣ: ದೋಷಾರೋಪಣಾ ಪಟ್ಟಿ ಸಲ್ಲಿಕೆ
ಬೆಳಗಾವಿ: ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ನೇತೃತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 2,063 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಇಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದೆ. ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸರ್ಕಾರಿ ಅಭಿಯೋಜಕ ಮುರಳೀಧರ ಕುಲಕರ್ಣಿ, ‘ಈ …
Read More »ಕೇವಲ 5 ದಿನದಲ್ಲಿ 228 ಮಂದಿ ಬಲಿ ಪಡೆದ ಮಹಾಮಾರಿ ಕೊರೋನಾ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಬುಧವಾರ 56 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು ಆಗಸ್ಟ್ ತಿಂಗಳಿನಲ್ಲಿ ಒಂದೇ ದಿನ ದಾಖಲಾದ ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿದೆ. ಕಳೆದ ಐದು ದಿನಗಳಿಂದ ನಗರದಲ್ಲಿ ಕೊರೋನಾ ಸೋಂಕಿಗೆ 228 ಮಂದಿ ಸಾವನ್ನಪ್ಪಿದ್ದಾರೆ. ಆ.16 ಮತ್ತು 18 ರಂದು ತಲಾ 49 ಮಂದಿ ಸೋಂಕಿನಿಂದ ಮೃತಪಟ್ಟಿದ್ದು ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿತ್ತು. ಆದರೆ, ಬುಧವಾರ 56 …
Read More »ಗೌರಿ-ಗಣೇಶ ಹಬ್ಬಕ್ಕೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಗಿಫ್ಟ್: ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆ ಹೆಚ್ಚಳ
ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್‌ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ …
Read More »ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ : ಹೀಗಿದೆ ಬದಲಾದ ಪರೀಕ್ಷಾ ದಿನಾಂಕಗಳು
ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ ಪರೀಕ್ಷೆಯ ವಿಷಯವಾರು ವೇಳಾ ಪಟ್ಟಿಯನ್ನು ಕೂಡ ಪ್ರಕಟಿಸಿತ್ತು. ಇಂತಹ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಮಾಡಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಮಾಹಿತಿ ನೀಡಿದ್ದು, ಸೆಪ್ಟೆಂದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ …
Read More »ಮೂರ್ತಿ ಪ್ರತಿಷ್ಠಾಪನೆಗೆ ಹೋರಾಟ ನಡೆಸಿದ್ದೆವೆ. ಅಲ್ಲಿಯೇ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಿ:ರಾಯಣ್ಣ ಅಭಿಮಾನಿಗಳು,
ಬೆಳಗಾವಿ : ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರ ರಾಜ್ಯದ ಗಮನ ಸೆಳೆದಿದ್ದು, ಬುಧವಾರ ಪೊಲೀಸ ಅಧಿಕಾರಿಗಳು ರಾಯಣ್ಣ ಅಭಿಮಾನಿಗಳೊಂದಿಗೆ ನಡೆಸಿದ ಸಭೆ ಸಂಧಾನ ವಿಫಲವಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸಭೆ ನಡೆಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗುಂಟೆ ಜಾಗ ಕೊಡಿಸಲಾಗುತ್ತದೆ. ಆ ಸ್ಥಳದಲ್ಲಿ ಮೂರ್ತಿ ಸ್ಥಾಪನೆ ಮಾಡಿಕೊಳ್ಳಿ ಎಂದು ತಿಳಿಸಿದರು. ಆದರೆ …
Read More »ಉತ್ತರ ಕನಾ೯ಟಕದಲ್ಲಿ ಪ್ರವಾಹದಿಂದ ಎಷ್ಟೆಲ್ಲ ಹಾನಿಯಾಗಿದೆ ಗೊತ್ತಾ?
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಾಗುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಕರ್ನಾಟಕಕ್ಕೆ ಹರಿದುಬರುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಕೃಷ್ಣೆ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರ ಏರಿದೆ. ಕೊಯ್ನಾ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಹಾಪುರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಆಗಸ್ಟ್ 22ರವರೆಗೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ …
Read More »8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’
ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …
Read More »ಆಗಲ್ಲ ಅಂದ್ರೆ ಇಬ್ರೂ ರಾಜೀನಾಮೆ ಕೊಡಿ : ಶಾಸಕ, ಸಂಸದರಿಗೆ ಎಚ್ಚರಿಕೆ
ಬೇಲೂರು : ತಾಲೂಕಿನ ಅಗಸರಹಳ್ಳು ಸೇತುವೆ ವಿಚಾರದಲ್ಲಿ ರಾಜಕೀಯ ಮುಖಂಡರು ಒಬ್ಬರಿಗೊಬ್ಬರು ದೂರು ಹೇಳುವುದನ್ನು ಬಿಟ್ಟು ಯಾವುದೇ ರಾಜಕೀಯ ಮಾಡದೆ ತಕ್ಷಣವೇ ನಮಗೆ ಸೇತುವೆ ಮಾಡಿಸಿಕೊಡಿ. ಇಲ್ಲದಿದ್ದರೆ ಶಾಸಕರು ಹಾಗೂ ಸಂಸದರು ಮತ್ತು ಸಂಬಂಧಪಟ್ಟಅಧಿಕಾರಿಗಳ ವಿರುದ್ಧ 10 ಗ್ರಾಮಸ್ಥರು ಒಟ್ಟುಗೂಡಿ ಉಗ್ರರೀತಿಯ ಪ್ರತಿಭಟನೆ ನಡೆಸುವುದಾಗಿ ಅಗಸರಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಅಟ್ಟಾಡಿಸಿ ಹೊಡೆಸುತ್ತೇನೆ : ಅಧಿಕಾರಿಗಳಿಗೆ ಅವಾಜ್ ಹಾಕಿದ ಎಚ್.ಡಿ.ರೇವಣ್ಣ… ಗ್ರಾಮಸ್ಥರಾದ ಶ್ರೀನಿವಾಸ್ ಹಾಗೂ ನಾಗರಾಜ್ ಪಟ್ಟಣದಲ್ಲಿ ಸುದ್ದಿಗೊೂೕಷ್ಠಿಯಲ್ಲಿ ಮಾತನಾಡಿ, …
Read More »ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 10.3ರಿಂದ ಶೇಕಡಾ 7.72ಕ್ಕೆ ಇಳಿಕೆ
ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ಕುರಿತಂತೆ ಮಾತನಾಡಿದ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರತಿದಿನ 7ರಿಂದ 8 ಲಕ್ಷ ಕೊರೋನಾ ವೈರಸ್ ಪರೀಕ್ಷೆ ಮಾಡುತ್ತಿದ್ದರೂ ಕೂಡ ಪಾಸಿಟಿವ್ ರೋಗಿಗಳ ಸಂಖ್ಯೆ ಕಳೆದ ನಾಲ್ಕೈದು ದಿನಗಳಲ್ಲಿ ಶೇಕಡಾ 10.3ರಿಂದ ಶೇಕಡಾ …
Read More »