ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್ ಪರೀಕ್ಷೆ ನಡೆಸಿದ ಪರಿಣಾಮ …
Read More »ಬೆಳಗಾವಿ: 170 ಮಂದಿ ಗುಣಮುಖ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …
Read More »ಅಂತ್ಯಕ್ರಿಯೆ ಬೆನ್ನಲ್ಲೇ ಹಣಕಟ್ಟಿ ಹೆಣ ತೆಗೆದುಕೊಂಡು ಹೋಗಿ ಅಂತ ಕುಟುಂಬಸ್ಥರಿಗೆ ಸಿಬ್ಬಂದಿ ಕರೆ
ಮಂಗಳೂರು: ಅಂತ್ಯಸಂಸ್ಕಾರವೂ ಆಯ್ತು, ಶವ ಬೂದಿಯೂ ಆಗೋಯ್ತು. ಆದರೆ ಅಂತ್ಯಕ್ರಿಯೆ ಬೆನ್ನಲ್ಲೇ ಹಣಕಟ್ಟಿ ಹೆಣ ತೆಗೆದುಕೊಂಡು ಹೋಗಿ ಅಂತ ಕುಟುಂಬಸ್ಥರಿಗೆ ಸಿಬ್ಬಂದಿ ಕರೆ ಮಾಡಿದ ಘಟನೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ. ಹೌದು. ಮೃತನ ಅಂತ್ಯಸಂಸ್ಕಾರದ ಬಳಿಕ ಆಸ್ಪತ್ರೆಯಲ್ಲಿ ಅದೇ ಹೆಸರಿನ ಮತ್ತೊಂದು ಮೃತದೇಹ ಪ್ರತ್ಯಕ್ಷವಾಗಿದೆ. ಈ ಮೂಲಕ ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ ಲಾಕ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ. ಮೃತದೇಹ ಸುಟ್ಟು ಬೂದಿಯಾದ ಬೆನ್ನಲ್ಲೇ ಆಸ್ಪತ್ರೆ …
Read More »ಬಡ ರೋಗಿಗಳಿಗಾಗಿ ನೂತನ ಕೋವಿಡ್ ಆಸ್ಪತ್ರೆ ನಿರ್ಮಿಸಿದ ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ: ಗಡಿ ಜಿಲ್ಲೆಯ ಬೆಳಗಾವಿಯ ನಿಪ್ಪಾಣಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ ಅವರ ಪರಿಶ್ರಮ ನೂತನ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಆಯುಷ್ಮಾನ್ ಭಾರತ್, ಸುವರ್ಣ ಕರ್ನಾಟಕ, ಜೊಲ್ಲೆ ಉದ್ಯೋಹ ಸಮೂಹ ಸಹಯೋಗದಲ್ಲಿ ನೂತನ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಸಚಿವೆ ಶಶಿಕಲಾ ಜೊಲ್ಲೆ ಅವರ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ ಮಾಡಲಾಗಿದೆ. …
Read More »ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ
ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …
Read More »ನೆರೆಪೀಡಿತ ಪ್ರದೇಶಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಳಗಾವಿ: ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ಮನವಿಮಾಡಲು ಮುಂದಿನ ವಾರ ನಾನು ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ. ಪರಿಹಾರದ ಕುರಿತು ಶಾಸಕರೊಂದಿಗೆ ಶೀಘ್ರಸಭೆಕರೆದು ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈ ಬಗ್ಗೆ ಸಂಪೂರ್ಣ …
Read More »ಡಿಕೆಶಿಗೆ ಕೊರೊನಾ ಸೋಂಕು
ಹೌದು ಇಡೀ ದೇಶಕ್ಕೆ ಬಂದಿರುವ ಈ ಕೊರೊನ ಎಂಬ ಸಾಂಕ್ರಾಮಿಕ ಕಾಯಿಲೆ ನಮ್ಮ ರಾಜ್ಯಕ್ಕೂ ಬಂದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಮತ್ತು ಸುಮಾರು ಐದು ತಿಂಗಳಿನಿಂದ ಆರಂಭವಾದ ಕೊರೊನ ಈಗಾಗಲೇ ಸಾಕಷ್ಟು ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ, ಮತ್ತು ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೂ ಕೊರೊನ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ. ಅಧ್ಯಕ್ಷ ಡಿ …
Read More »ಸಾಂಬ್ರಾ ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ರೈತರ ಪ್ರತಿಭಟನೆ
ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಇದೇ ವೇಳೆ ರೈತರು ಹೊರಗಡೆ ಧರಣಿ ನಡೆಸುತ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಹೋದ ವರ್ಷ ನೆರೆ …
Read More »ಜಲಾಶಯಕ್ಕೆ ಸಿಎಂ ಭೇಟಿ : ಬಿಗಿ ಭದ್ರತೆ, ಶೃಂಗಾರಗೊಂಡ ಆಲಮಟ್ಟಿ ಜಲಾಶಯ
ವಿಜಯಪುರ: ಇಂದು ಸಿ ಎಮ್ ಯಡಿಯೂರಪ್ಪನವರು ಆಲಮಟ್ಟಿ ಜಲಾಶಯಕ್ಕೆ ಇಂದು ಮದ್ಯಾಹ್ನ ಆಗಮಿಸುವ ಹಿನ್ನಲೆಯಲ್ಲಿ ಆಲಮಟ್ಟಿ ತಳಿರು ತೋರಣಗಳು, ಪುಷ್ಪಗಳಿಂದ ಶೃಂಗಾರಗೊಂಡಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಕೆ.ಬಿ.ಜಿ ಎನ್.ಎಲ್ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪತ್ರಕರ್ತರಿಗೂ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ. ಸಿಎಂ ಸ್ವಾಗತ ಕೋರಿ ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ವೃತ್ತ ಸೇರಿದಂತೆ ಪಟ್ಟಣದಲ್ಲಿ ಹೂವಿನ ಅಲಂಕಾರ …
Read More »ಹೆಲಿಕಾಪ್ಟರ್ನಲ್ಲಿ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್ನಲ್ಲಿ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸಿಎಂ ಬಿಎಸ್ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
Read More »