ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ ರಾಯಚೂರಿನ ಸಿಂಧನೂರು ನಗರದ ಕೋವಿಡ್ ಕೇರ್ ಸೆಂಟರ್ ಇದಕ್ಕೆ ಅಪವಾದ ಎಂಬಂತೆ ಉತ್ತಮ ಸೇವೆ ನೀಡುತ್ತಿದೆ. ಕೇಂದ್ರದಲ್ಲಿರುವ ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ತರಬೇತಿಗಳನ್ನ ನೀಡಿರುವ ಸಿಂಧನೂರು ಮೂಲದ ಯೋಗಗುರು ಮಲ್ಲಣ್ಣ ಸೋಂಕಿತರಿಗೆ ಯೋಗ ಕಲಿಸುತ್ತಿದ್ದಾರೆ. ಕೋವಿಡ್ ಕೇರ್ …
Read More »ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ.
ಚಾಮರಾಜನಗರ: ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಸ್ಮಶಾನ ಇಲ್ಲ. ಅಂತ್ಯ ಸಂಸ್ಕಾರ ಮಾಡಬೇಕೆಂದರೆ ಶವ ಹೊತ್ತು ನದಿ ದಾಟಿ, ಅಲ್ಲಿರುವ ಜಮೀನುಗಳಲ್ಲೇ ಹೆಣ ಹೂಳಬೇಕು. ಇದು ಇಂದು ನಿನ್ನೆಯ ಸಮಸ್ಯೆಯಲ್ಲ ವರ್ಷಗಟ್ಟಲೆ ಗ್ರಾಮಸ್ಥರು ಪಡುತ್ತಿರುವ ಕಷ್ಟ. ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಇಂತಹ ಗಂಭೀರ ಸಮಸ್ಯೆ ಇದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ನದಿ ದಾಟಲು ಇತ್ತೀಚೆಗೆ ಗ್ರಾಮಸ್ಥರೇ ಮರದ ಹಲಗೆಗಳ ಸೇತುವೆ ನಿರ್ಮಿಸಿಕೊಂಡಿದ್ದಾರೆ. ಹೆಣ …
Read More »ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ: ಸಿ.ಟಿ ರವಿ
ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ಗಲಭೆಗೆ ಸಂಬಂಧ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಸಿ, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. …
Read More »ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!
ಬೆಂಗಳೂರು, ಆ.24- ಈರುಳ್ಳಿ ಬೆಲೆ ಮತ್ತೆ ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಸದ್ಯ ಕೆಜಿಗೆ 10ರಿಂದ 15 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇದೀಗ 30ರಿಂದ 50ರೂ.ಗೆ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಜತೆಗೆ ಈರುಳ್ಳಿ ಬೆಳೆದ ಕೃಷಿಕನ ಬಾಳಲ್ಲೂ ಕಣ್ಣೀರಿಗೆ ಕಾರಣವಾಗುತ್ತಿದೆ. ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಪ್ರವಾಹ ಬಂದು ಈರುಳ್ಳಿ ಬೆಳೆ ನಾಶವಾಗಿದೆ. ಮಳೆ ಹಾಗೂ ರೋಗ ಬಾಧೆಯಿಂದ …
Read More »ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸ
ನವದೆಹಲಿ, ಆ.24- ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾರಥ್ಯದ ವಿಷಯ ಪಕ್ಷದಲ್ಲೀಗ ಭಾರೀ ವಿವಾದ ಮತ್ತು ಚರ್ಚೆಗೆ ಗ್ರಾಸವಾಗಿದ್ದು, ಇಂದು ಕಾಂಗ್ರೆಸ್ ಕಾರ್ಯಕಾರಿಣಿ (ಸಿಡಬ್ಲ್ಯುಸಿ) ಸಭೆಯಲ್ಲಿ ಕೈಗೊಳ್ಳುವ ಅಂತಿಮ ನಿರ್ಧಾರ ಭಾರೀ ಕುತೂಹಲ ಕೆರಳಿಸಿದೆ. ಕಾಂಗ್ರೆಸ್‍ನ ಕ್ರಿಯಾಶೀಲ ನಾಯಕ ರಾಹುಲ್ ಗಾಂಧಿ ಅವರೇ ಮತ್ತೆ ಪಕ್ಷದ ಸಾರಥ್ಯ ವಹಿಸಬೇಕೆಂದು ಒಂದು ಬಣ ಬಿಗಿ ಪಟ್ಟು ನೀಡಿರುವ ಬೆನ್ನಲ್ಲೇ ಅವರು ಈ ಅತ್ಯುನ್ನತ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಪಕ್ಷದ ತಾರಾ …
Read More »ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!
ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …
Read More »ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ
ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್‌ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …
Read More »ಬಾಲೆಯರು ಬಾಲ್ಯದಿಂದ ಬೆಂಕಿಗೆ ನಾಲ್ಕು ತಿಂಗಳಲ್ಲಿ 107 ಬಾಲ್ಯವಿವಾಹ
ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್‌ಡೌನ್‌ನ ನಿರ್ಬಂಧಗಳಿಂದ ಉಂಟಾದ ಸ್ತಬ್ಧತೆಯ ಲಾಭ ಪಡೆದು ಹಲವು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗಿದೆ. ಲಾಕ್‌ಡೌನ್‌ಗಿಂತ ಹಿಂದಿನ ಅವಧಿಗೆ ಹೋಲಿಸಿದರೆ ಲಾಕ್‌ಡೌನ್ ದಿನಗಳಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚು ಎಂದು ಅಂಕಿ ಅಂಶಗಳು ಹೇಳುತ್ತವೆ. ಬಾಲ್ಯ ವಿವಾಹ ಮಾಡಿಯೇ ತೀರಬೇಕು ಎಂದು ಹಟಕ್ಕೆ ಬಿದ್ದವರು ವಿವಿಧ ರೀತಿಯ ತಂತ್ರ, ಕುತಂತ್ರಗಳನ್ನು ಹೆಣೆದ ವರದಿಗಳು ರಾಜ್ಯದ ವಿವಿಧೆಡೆಯಿಂದ ಬಂದಿವೆ. ಮದುವೆ …
Read More »ರಾಜ್ಯದಲ್ಲಿ ಕಡಿಮೆಯಾಯ್ತಾ ಸೋಂಕಿತರು, ಸಾವಿನ ಸಂಖ್ಯೆ..?
ಬೆಂಗಳೂರು : ರಾಜ್ಯದಲ್ಲಿ ಭಾನುವಾರ 5,938 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 68 ಮಂದಿ ಸಾವನ್ನಪ್ಪಿದ್ದಾರೆ. 4,996 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 2.77 ಲಕ್ಷಕ್ಕೆ ಏರಿಕೆಯಾದರೆ, ಸಾವನ್ನಪ್ಪಿದವರ ಸಂಖ್ಯೆ 4,683 ತಲುಪಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1.89 ಲಕ್ಷಕ್ಕೇರಿದೆ. ಉಳಿದ 83,551 ಮಂದಿ ಸಕ್ರಿಯ ಸೋಂಕಿತರಿಗೆ ನಾನಾ ಆಸ್ಪತ್ರೆಗಳು, ಕೋವಿಡ್ ನಿಗಾ ಕೇಂದ್ರ ಮತ್ತು ಗೃಹ ಆರೈಕೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ …
Read More »ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್
ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »