Breaking News
Home / Uncategorized (page 771)

Uncategorized

ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ

ಶಿರಸಿ : ನಮ್ಮ ಎದುರಾಳಿಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು ಪದಗ್ರಹಣ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು. ಹೆಚ್ಚು ಜನರು ಸೇರಿಸಿಬಾರದು ಎಂಬ ಆದೇಶದ ಹಿನ್ನೆಲೆ ಕಾರ್ಯಕರ್ತರಿಗೆ ಟಿವಿ ಮೂಲಕ ಪದಗ್ರಹಣ ಸಮಾರಂಭ …

Read More »

ಸಿಎಂ ವಿರುದ್ಧ ಸಿಡಿದ ಮತ್ತೊಬ್ಬ ಶಾಸಕ- ಬಿಜೆಪಿಯಲ್ಲಿ ಭಿನ್ನಮತ ಇರೋದು ನಿಜ ಅಂದ್ರು ತಿಪ್ಪಾರೆಡ್ಡಿ

ಚಿತ್ರದುರ್ಗ: ಬಿಜೆಪಿ ಶಾಸಕರಲ್ಲಿ ಬೇಸರ, ಭಿನ್ನಮತ ಇರುವುದು ನಿಜ. ಶಾಸಕರಿಗೆ ಸರ್ಕಾರದ ಸ್ಪಂದನೆ ಇಲ್ಲ ಎಂಬ ಭಾವನೆ ಇದೆ. ಅಲ್ಲದೆ ಮುಖ್ಯಮಂತ್ರಿಗಳಿಂದ ಹಿರಿಯ ಶಾಸಕರ ಕಡೆಗಣನೆಯಾಗುತ್ತಿದೆ ಎಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಸ್ಫೋಟಕ ಮಾಹಿತಿ ನೀಡಿದ್ದಾರೆ.     ಮಾತನಾಡಿದ ಅವರು, ಮೂರು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಮನಸ್ಸು ಬಂದಂತೆ ಆಡಳಿತ ನಡೆಸಲಾಗುತ್ತಿದೆ. ಅವರಿಗೆ ಬೇಕಾದವರಿಗೆ ಮಂತ್ರಿ ಮಂಡಲ ಸ್ಥಾನಮಾನ ನೀಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದ …

Read More »

ಬೆಳ್ಳಂಬೆಳಗ್ಗೆ ಮುರುಗೇಶ್ ನಿರಾಣಿಗೆ ಸಿಎಂ ಯಡಿಯೂರಪ್ಪ ಕರೆ………

ಬೆಂಗಳೂರು: ಮಹಾಮಾರಿ ಕೊರೊನಾದ ಅಬ್ಬರದ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ನಿರ್ಮಾಣವಾಗಿದ್ದು, ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ ಮೂವರು ನಾಯಕರು ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಉತ್ತರ ಕರ್ನಾಟಕ ಪ್ರಭಾವಿ ನಾಯಕರಾದ ಉಮೇಶ್ ಕತ್ತಿ, ಮುರಗೇಶ್ ನಿರಾಣಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ವ್ಯೂಹ ರಚಿಸಿದ್ದಾರೆ. ಈ ಮೂವರ ನಾಯಕತ್ವದಲ್ಲಿ ಕಳೆದ 15 ದಿನದಲ್ಲಿ ಸುಮಾರು ಆರು ಬಾರಿ ಸಭೆ ನಡೆಸಿ, ಸಿಎಂ …

Read More »

ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಮಂಗಳೂರು: ನೋಡ ನೋಡುತ್ತಿದ್ದಂತೆಯೇ ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾದ ಘಟನೆ ಮಂಗಳೂರಿನ ಜೆಪ್ಪು ಮಾರುಕಟ್ಟೆ ಬಳಿ ನಡೆದಿದೆ. ಮಾರ್ಕೆಟ್ ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಗ್ಯಾಸ್ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸಿಲಿಂಡರ್ 50 ಮೀಟರ್ ಎತ್ತರಕ್ಕೆ ಚಿಮ್ಮಿದೆ. ಅದೃಷ್ಟವಶಾತ್ ಯಾರಿಗೂ ಗಾಯ ಸಂಭವಿಸಿಲ್ಲ. ಸಿಲಿಂಡರ್ ನಲ್ಲಿ ಬೆಂಕಿಯಿದ್ದರೂ …

Read More »

ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ.

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿದ್ದ ‘ಮಂಡ್ಯದ ಗಂಡು’, ‘ಕಲಿಯುವಗದ ಕರ್ಣ’ ಅಂಬರೀಶ್ ಅವರು ಜನ್ಮದಿನೋತ್ಸವ. ಈ ಹಿನ್ನೆಲೆಯಲ್ಲಿ ಪತ್ನಿ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ …

Read More »

ಮಹಿಳೆಯ ಕಣ್ಣೀರು ನೋಡಿ ಮರುಗಿದ ಜನ -ಯೋಗ, ಆಧ್ಯಾತ್ಮ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮನ

ಧಾರವಾಡ: ತನ್ನ ತವರಿಗೆ ಹೋಗಲಾಗದೇ ಭಾರತದಲ್ಲಿ ಸಿಲುಕಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆ ಕಣ್ಣೀರು ಹಾಕುತ್ತ ಜಿಲ್ಲಾಧಿಕಾರಿ ಕಚೇರಿ ಎದುರು ನಿಂತ ಘಟನೆ ಧಾರವಾಡದಲ್ಲಿ ನಡೆದಿದೆ. ಆಸ್ಟ್ರೇಲಿಯಾ ಮೂಲದ ನೈಶಾ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕುತ್ತಿದ್ದ ಮಹಿಳೆ. ಲಾಕ್‍ಡೌನ್ ಮುಂದೆ ಭಾರತೀಯ ಯೋಗ ಮತ್ತು ಆಧ್ಯಾತ್ಮದ ಬಗ್ಗೆ ಅಧ್ಯಯನ ಮಾಡಲು ಆಸ್ಟ್ರೇಲಿಯಾದಿಂದ ಬಂದಿದ್ದರು. ಪ್ರವಾಸ ಮಾಡುತ್ತ ಹುಬ್ಬಳ್ಳಿಗೆ ಬಂದಾಗ ಲಾಕ್‍ಡೌನ್ ಘೋಷಣೆಯಾಗಿತ್ತು. ಹೀಗಾಗಿ ಹುಬ್ಬಳ್ಳಿ ನಗರದಲ್ಲಿಯೇ ಸಿಲುಕಿದ್ದರು. ಸದ್ಯ …

Read More »

ಬೀದರಿಗೆ ಮಿಡತೆ ಸೈನ್ಯ ದಾಳಿ ಸಾಧ್ಯತೆ – ಸಕಲ ಸಿದ್ಧತೆ ಮಾಡ್ಕೊಂಡ ಕೃಷಿ ಇಲಾಖೆ……

ಬೀದರ್: ಪಾಕಿಸ್ತಾನದ ಮೂಲಕ ದೇಶದ ನಾನಾ ರಾಜ್ಯಗಳಿಗೆ ದಾಳಿ ಮಾಡಿರುವ ಮಿಡತೆ ಸೇನೆಗೆ ದೇಶದ ರೈತರು ಆತಂಕಗೊಂಡಿದ್ದಾರೆ. ಈ ಮಿಡತೆ ದಂಡು ಕರ್ನಾಟಕದ ಗಡಿ ಜಿಲ್ಲೆ ಬೀದರಿಗೂ ದಾಳಿ ಮಾಡುವ ಸಾಧ್ಯತೆ ಇದೆ. ಮಿಡತೆ ಸೈನ್ಯ 500 ಕಿಲೋಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ ನಾಗಪುರದಲ್ಲಿ ದಾಳಿ ಮಾಡಿವೆ. ಈ ಹಿನ್ನೆಲೆಯಲ್ಲಿ ಈ ಮಿಡತೆ ಸೈನ್ಯ ಗಡಿ ಜಿಲ್ಲೆ ಬೀದರಿಗೆ ದಾಳಿ ಮಾಡುವ ಸಾಧ್ಯತೆಯಿಂದಾಗಿ ಮಿಡತೆ ದಾಳಿ ಎದುರಿಸಲು ಬೀದರ್ ಕೃಷಿ ಇಲಾಖೆಯಿಂದ …

Read More »

ಬಾಲಿವುಡ್ ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಭೋಪಾಲ್: ಬಾಲಿವುಡ್ ಕಿರುತೆರೆ ನಟಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ನಟಿ ಪ್ರೇಕ್ಷಾ ಮೆಹ್ತಾ ಆತ್ಮಹತ್ಯೆ ಮಾಡಿಕೊಂಡ ನಟಿ. ಮೆಹ್ತಾ ಸೋಮವಾರ ರಾತ್ರಿ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಹ್ತಾ ತಮ್ಮ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬವರು ಮಂಗಳವಾರ ಬೆಳಗ್ಗೆ ಆಕೆ ರೂಮಿಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮೆಹ್ತಾರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ …

Read More »

ಕೊಲ್ಲೂರು, ಕೋಟ, ಮಂದಾರ್ತಿಯಲ್ಲಿ ಆನ್‍ಲೈನ್ ಪೂಜೆಗೆ ಆಡಳಿತ ಮಂಡಳಿ ರೆಡಿ…….

ಉಡುಪಿ: ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಮೂರು ಕಡೆ ಆನ್‍ಲೈನ್ ಪೂಜೆಗೆ ಅವಕಾಶ ನೀಡಲಾಗಿದೆ. ಕೊಲ್ಲೂರಿನಲ್ಲಿ ಈಗಾಗಲೇ ಭಕ್ತರಿಗೆ ಅವಕಾಶವಿದ್ದು, ಕೋಟ ಅಮೃತೇಶ್ವರಿ ಮತ್ತು ಮಂದಾರ್ತಿ ಕ್ಷೇತ್ರ ಹೊಸ ಸೇರ್ಪಡೆಯಾಗಿದೆ. ರಾಜ್ಯಾದ್ಯಂತ ಮುಜರಾಯಿ ದೇವಸ್ಥಾನಗಳಲ್ಲಿ ಆನ್‍ಲೈನ್ ಪೂಜೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಮುಜರಾಯಿ ಇಲಾಖೆಯಿಂದ ಉಡುಪಿ ಜಿಲ್ಲೆಯೊಳಗೆ ಮೂರು ದೇವಸ್ಥಾನಗಳಿಗೆ ಅವಕಾಶವಾಗಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈಗಾಗಲೇ ಭಕ್ತರಿಗೆ ಬುಕ್ ಮಾಡಿ ಪೂಜೆ ಮಾಡಿಸಿ, ಪೋಸ್ಟ್ …

Read More »

ಹಾಸನದಲ್ಲಿ 14 ದಿನಗಳ ಚಿಕಿತ್ಸೆ ಬಳಿಕವೂ ಗುಣಮುಖರಾಗ್ತಿಲ್ವಂತೆ ಸೋಂಕಿತರು!

ಹಾಸನ: ಜಿಲ್ಲೆಗೆ ಕಾಲಿಟ್ಟ ಕೊರೊನಾ ಕೆಲವೇ ದಿನಗಳಲ್ಲಿ ಶತಕ ದಾಟಿದೆ. ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಆರೋಗ್ಯದಲ್ಲೂ ಹೆಚ್ಚಿನ ಚೇತರಿಕೆ ಕಾಣಿಸದಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಇದೆಲ್ಲದರ ಮಧ್ಯೆ ಜನಪ್ರತಿನಿಧಿಗಳು ಕೊರೊನಾ ವಿಷಯದಲ್ಲೂ ರಾಜಕೀಯ ಮಾಡ್ತಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ. ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಗುಣಮುಖವಾಗಲು ಹೆಚ್ಚು ಸಮಯ ಹಿಡಿಯುತ್ತಿರುವುದು ಹೊಸ ಆತಂಕಕ್ಕೆ ಕಾರಣವಾಗುತ್ತಿದೆ. ಸಾಮಾನ್ಯವಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಿದ 14 ದಿನಗಳೊಳಗೆ ಚಿಕಿತ್ಸೆಗೆ ಸ್ಪಂದಿಸಿ ಗುಣಮುಖವಾಗುವ ಹಂತ ತಲುಪುತ್ತಿದ್ರು. ಆದರೆ …

Read More »