ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …
Read More »ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ
ಬೆಂಗಳೂರು: ಆಗಸ್ಟ್ 25ರಂದು (ಮಂಗಳವಾರ) ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಈ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್ಎಎಲ್ನಿಂದ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಬೆಳಿಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಿ ಸಮಾಲೋಚನೆ ನಡೆಸಲಿದ್ದಾರೆ. ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಕೊಡಬೇಕಿದೆ: ಎಸ್..ಟಿ. ಸೋಮಶೇಖರ್ 11.15 …
Read More »ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.
ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …
Read More »ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ – 7 ದಿನಗಳೊಳಗೆ ತನಿಖಾ ವರದಿಗೆ ಸಿಎಂ ಸೂಚನೆ
ಮೈಸೂರು: ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.ಪರಿಹಾರ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಅಲ್ಲದೆ ಪ್ರಕರಣ ಸಂಬಂಧ 7 ದಿನಗಳ ಒಳಗೆ ತನಿಖೆ ನಡೆಸಿ ವರದಿ ನೀಡಲು ಮೈಸೂರು ಜಿಲ್ಲಾ ಪ್ರಾದೇಶಿಕ ಆಯ್ತಕರಿಗೆ ಸಿಎಂ ಆದೇಶಿಸಿದ್ದಾರೆ. ಅನುಕಂಪದ ಆಧಾರದ ಮೇಲೆ ಕುಟುಂಬ ಅವಲಂಬಿತರಿಗೆ ಹುದ್ದೆ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ …
Read More »ಲವರ್ ಅನ್ನು ಮದುವೆ ಆಗೋಕೆ ಅದೇನೆಲ್ಲಾ ಡ್ರಾಮಾ ಮಾಡಿದ್ಳು ಕಿರಾತಕಿ!
ನವದೆಹಲಿ: ಆಕೆಗೆ ಮೂವತ್ತು ವರ್ಷ ವಯಸ್ಸು. ಆಕೆಯ ಗಂಡನ ವಯಸ್ಸು 50. ಅಬೋಧಾವಸ್ಥೆಯಲ್ಲಿದ್ದ ಪತಿಯನ್ನು ಮನೆಗೆಲಸದವನ ನೆರವಿನೊಂದಿಗೆ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಳು. ಪತಿ ಆತ್ಮಹತ್ಯೆಗೆ ಪ್ರಯತ್ನಿಸಿದ ಡಾಕ್ಟರ್ ಎಂದು ಹೇಳಿದ್ದಳು. ತುರ್ತು ಚಿಕಿತ್ಸೆಗಾಗಿ ಆತನನ್ನು ಪರಿಶೀಲಿಸಿದಾಗ ಪ್ರಾಣ ಹೋಗಿವುದು ಖಚಿತವಾಗಿದೆ. ಅದನ್ನು ಡಾಕ್ಟರ್ ಆ ಮಹಿಳೆಗೆ ತಿಳಿಸಿದ್ರು. ಇದೇ ವೇಳೆ, ಮಹಿಳೆಯ ನಡವಳಿಕೆಯಿಂದ ಸಂದೇಹಗೊಂಡ ಡಾಕ್ಟರ್ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು. ಪೊಲೀಸರು ಕೂಡಲೇ ಆಸ್ಪತ್ರೆಗೆ ಆಗಮಿಸಿದ್ರು. ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ರು. ಆಕೆ …
Read More »ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ . ಪಲ್ಸರ್ ಬೈಕ್ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್ನನ್ನು ಅಂಬ್ಯಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ …
Read More »ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 30 ಲಕ್ಷ ಪರಿಹಾರ, ಉದ್ಯೋಗ ಘೋಷಿಸಿದ CM
ಬೆಂಗಳೂರು: ಮೈಸೂರಿನ ನಂಜನಗೂಡು THO ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. THO ಡಾ. SR ನಾಗೇಂದ್ರ, ತಾಲ್ಲೂಕು ಆರೋಗ್ಯ ಅಧಿಕಾರಿರವರು ಇಂದು ನಿಧನರಾದ ವಿಷಯನ್ನು ಕೇಳಿ ಅತೀವ ದುಃಖವಾಗಿದ್ದು ಈ ಘಟನೆಯ ಬಗ್ಗೆ ವಿಷಾದಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಜೊತೆಗೆ, ಇದೇ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ …
Read More »ಬಾಲಕಿ ಬಾಣಲೆಯಿಂದ ಬೆಂಕಿಗೆ. ಕಣ್ಣೀರುಕ್ಕಿಸುವ ಕತೆ ಇದು
ಗುಂಟೂರು: ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ, ಆಘಾತಗೊಂಡು ತಾಯಿಯ ಮನೆಗೆ ಹೋಗದೆ ಗೆಳತಿಯ ಮನೆಗೆ ಹೊರಟಾಗ ಮಾರ್ಗ ಮಧ್ಯೆ ದುರುಳನ ಕೈಗೆ ಸಿಕ್ಕು ಮತ್ತೆ ಮತ್ತೆ ಅತ್ಯಾಚಾರಕ್ಕೀಡಾದ ಘಟನೆ ಗುಂಟೂರು ಜಿಲ್ಲೆಯಿಂದ ವರದಿಯಾಗಿದೆ. ಆಕೆ 14 ವರ್ಷದ ಬಾಲಕಿ. ಆಕೆಗೆ ಅಪ್ರಾಪ್ತ ವಯಸ್ಸಿನಲ್ಲೇ ಮದುವೆ ಮಾಡಲಾಗಿದೆ. ಪತಿ ಬೇರೆ ಕಡೆ ವಾಸಿಸುತ್ತಿದ್ದಾನೆ. ಈಕೆ ತಾಯಿಯ ಮನೆಯಲ್ಲಿದ್ದಾಳೆ. ಪತಿಗೆ ಪರಿಚಿತನಾದ ತನ್ನ ನೆರೆಮನೆಯಾತನಿಂದಾಗಿ ಅತ್ಯಾಚಾರಕ್ಕೊಳಗಾದ ಆಕೆ ತನಗೇನಾಯಿತು ಎಂದು ಆಘಾತಕ್ಕೊಳಗಾಗಿ ತಾಯಿಯ ಮನೆಗೆ ಹೋಗುವ …
Read More »ಗಲಭೆ: ಮತ್ತೆ ಮಂದಿ ಅರೆಸ್ಟ್ – ತನಿಖೆಯಲ್ಲಿ ಬಯಲಾಯ್ತು ಫೇಸ್ ಬುಕ್ ಪೋಸ್ಟ್ ರಹಸ್ಯ
ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯ ಜಾಡನ್ನ ಹಿಡಿದು ಹೊರಟಿರೋ ಸಿಸಿಬಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿಗಳ ಬೆಂಡೆತ್ತುತ್ತಿದ್ದಾರೆ. ಹೀಗಿದ್ದೂ ಕೆಲವು ಆರೋಪಿಗಳಿಗೆ ಇರುವ ಕೊಬ್ಬು, ಧಿಮಾಕು ಕಡಿಮೆ ಆಗಿಲ್ಲ. ಅಖಂಡ ಶ್ರೀನಿವಾಸಮೂರ್ತಿ ಅಳಿಯ ಹಾಗೂ ಗಲಭೆಯ ಪ್ರಮುಖ ಆರೋಪಿ ನವೀನ್ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನ ಸಿಸಿಬಿ ಇಂದು ಬಂಧಿಸಿದೆ. ಯೂಸುಫ್ ಬಂಧಿತ ಆರೋಪಿ. ಈತ ಗಲಾಟೆ ನಡೆದ ದಿನ ನವೀನ್ ಮನೆಗೆ ನುಗ್ಗಿ ದಾಂಧಲೆ …
Read More »ತಾಳ್ಮೆ ಪರೀಕ್ಷಿಸದೇ ಮೊದಲು ಆಸ್ಪತ್ರೆ ನಿರ್ಮಿಸಿ ಕೊಡಿ: ಇದು ಬ್ಯಾನರ್ ಚಳವಳಿ! ಎಲ್ಲಿ?
ಚಿಕ್ಕಮಗಳೂರು: ‘ಶೃಂಗೇರಿಯ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್ ಶೃಂಗೇರಿಯ ಎಲ್ಲೆಡೆ ಕಂಡುಬರುತ್ತದೆ. ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ವ್ಯವಸ್ಥೆ ಅಲ್ಲಲ್ಲ. ಅವ್ಯವಸ್ಥೆಯ ಅಣಕವನ್ನ ಇದೀಗ ಜನರೇ ತೆರೆದಿಡುತ್ತಿದ್ದಾರೆ. ಈ ರೀತಿಯ ಬ್ಯಾನರ್ಗಳು ಶೃಂಗೇರಿಯ ಹಲವೆಡೆ ಕಂಡು ಬರುತ್ತಿವೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! …
Read More »