ಸಮಾನತೆಯ ಹಾದಿಯಲ್ಲಿ ದೇಶವು ಸಾಗಬೇಕಾದ ದಾರಿ ಇನ್ನೂ ಇದೆಯಾದರೂ ಈ ನಿಟ್ಟಿನಲ್ಲಿ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವು ಕೆಲವು ವರ್ಷಗಳಿಂದ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶವೊ ಒಂದೆನ್ನಬಹುದು. ಹಿಂದೂ ಅವಿಭಜಿತ ಕುಟುಂಬದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಗಳಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಸಮಾನ ಹಕ್ಕಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದಷ್ಟೇ ಅಲ್ಲದೇ …
Read More »ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್‌ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …
Read More »ರಾಜ್ಯದ ನಾಲ್ವರು ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ
ಬೆಂಗಳೂರು, ಆ.13- ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೊಲೀಸರಿಗೆ ನೀಡುವ ಗಣ್ಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಅಕಾರಿಗಳು ಪಾತ್ರರಾಗಿದ್ದಾರೆ. ಉತ್ತಮ ತನಿಖೆಗಾಗಿ ಕೇಂದ್ರ ಗೃಹ ಸಚಿವರ ಗೌರವಾನ್ವಿತ ಪ್ರಶಸ್ತಿಗೆ ಡಿವೈಎಸ್‍ಪಿ ದರ್ಜೆಯ ಇಬ್ಬರು ಅಕಾರಿಗಳು ಸೇರಿದಂತೆ ನಾಲ್ವರಿಗೆ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಮೈಕೋ ಲೇಔಟ್ ಎಸಿಪಿ ಸುದೀರ್ ಎಂ ಹೆಗಡೆ, ರೈಲ್ವೆ ಉಪವಿಭಾಗದ ಡಿವೈಎಸ್‍ಪಿ ಡಿ.ಅಶೋಕ್, ಬೆಂಗಳೂರು ಸಿಸಿಬಿಯ ಪೊಲೀಸ್ ಇನ್ಸ್‍ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು, ಅಶೋಕ್‍ನಗರ ಪೊಲೀಸ್ ಠಾಣೆಯ ಸಿಎಚ್‍ಸಿ …
Read More »ವೈದ್ಯ, ವಾರಿಯರ್ ಬಳಿಕ ಕೊರೊನಾ ಕಿಲ್ಲರ್ ಆದ ಗಣೇಶ!
ಗಾಂಧಿನಗರ: ವೈದ್ಯ, ಕೊರೊನಾ ವಾರಿಯರ್ಸ್ ಬಳಿಕ ಇದೀಗ ಸೂರತ್ ಮೂಲದ ವ್ಯಕ್ತಿಯೊಬ್ಬರು ಕೊರೊನಾ ಕಿಲ್ಲರ್ ಗಣೇಶನ ಮೂರ್ತಿ ತಯಾರಿಸಿದ್ದಾರೆ.ಹೌದು. ಕೊರೊನಾ ಮಹಾಮಾರಿಯಿಂದ ಈ ಬಾರಿ ಎಲ್ಲಾ ಹಬ್ಬಗಳು ತುಂಬಾನೆ ಆಚರಿಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಪ್ರತಿ ಬಾರಿಯೂ ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಚೀನಿ ವೈರಸ್ ಕಾಟದಿಂದ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸುವ ಸಾಧ್ಯತೆ ಇದೆ. ಇತ್ತ ಗಣೇಶನ …
Read More »ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ:ಪ್ರಹ್ಲಾದ್ ಜೋಶಿ
ನವದೆಹಲಿ: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ ಮತ್ತು ಇದೊಂದು ಪೂರ್ವ ನಿಯೋಜಿತ ದಾಳಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮಂಗಳವಾರ ರಾತ್ರಿ ಕಾವಲಬೈರಸಂದ್ರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡುತ್ತಾ ಘಟನೆಯನ್ನು ವಿರೋಧಿಸಿದರು. ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕಾನೂನು ಅಡಿ ದೂರು ದಾಖಲಿಸಬೇಕಿತ್ತು ಆದರೆ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದರು.ಪೊಲೀಸ್ ಠಾಣೆಯಿಂದ …
Read More »ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ
ಆಳಂದ: ಪಟ್ಟಣದ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತಿದ್ದ 88 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಪ್ರಿಯಾಂಕಾ ವಾಮನರಾವ 97.12% ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ …
Read More »‘ಬೆಳೆ ಸಮೀಕ್ಷೆಗೆ ಮೊಬೈಲ್ ಆಯಪ್ ಬಳಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ‘ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲ್ಲೂಕು ಆಡಳಿತದಿಂದ ಪರಿಶೀಲಿಸಲಾಗುವುದು’. ‘ರೈತರು ಸ್ಮಾರ್ಟ್ ಮೊಬೈಲ್ ಫೋನ್‌ನಲ್ಲಿ ಬೆಳೆ ಸಮೀಕ್ಷೆ ಆಯಪ್ ಅನ್ನು …
Read More »ಡಿ.ಜೆ. ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಡಿ.ಜೆ. ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಬುಧವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಬೆಂಗಳೂರಿನ ಡಿ.ಜೆ. ಹಳ್ಳಿ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು. …
Read More »ಡಿಜೆ ಹಳ್ಳಿ ಘಟನೆ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ
ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …
Read More »ಮತ್ತೆ 46 ಜನರಿಗೆ ಸೋಂಕು
ಗದಗ: ಜಿಲ್ಲೆಯಲ್ಲಿ ಹೊಸದಾಗಿ 46 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,399ಕ್ಕೆ ಏರಿದೆ. ಈ ವರೆಗೆ 1321 ಜನರು ಗುಣಮುಖರಾಗಿದ್ದು, 1027 ಪ್ರಕರಣಗಳು ಸಕ್ರಿಯವಾಗಿವೆ. ಗದಗ-28, ಮುಂಡರಗಿ-4, ನರಗುಂದ-6, ರೋಣ-6, ಶಿರಹಟ್ಟಿ-1, ಹೊರಜಿಲ್ಲೆಯ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಜೆ.ಟಿ. ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೊ ಕಾಲೋನಿ, ಮದೀನಾ ಮಸೀದಿ ಹತ್ತಿರ, ಎಸ್.ಎಂ. ಕೃಷ್ಣಾ ನಗರ, …
Read More »