ಬೆಂಗಳೂರು: ತಬ್ಲೀಗ್ ಜಮಾತ್ ಸಮಾವೇಶದ ಅಂಗವಾಗಿ ರಾಜ್ಯದಲ್ಲಿದ್ದ ಒಂಬತ್ತು ವಿದೇಶಿಯರ(ದಕ್ಷಿಣ ಆಫ್ರಿಕಾ ಮತ್ತು ಇಂಡೋನೇಷ್ಯಾದವರು) ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಪಡಿಸಿರುವ ಹೈಕೋರ್ಟ್, ಮುಂದಿನ 10 ವರ್ಷ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂಬ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಾಧಿಕಾರ ವಿಧಿಸುವ ದಂಡದ ಮೊತ್ತ ಪಾವತಿಸಿ, ಮುಂದಿನ ಹತ್ತು ವರ್ಷಗಳವರೆಗೆ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ ಬಳಿಕ ನಿರ್ಗಮನ ಪರವಾನಗಿ ನೀಡುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ …
Read More »ಸಂಪಾದಕೀಯ | ಆರ್ಬಿಐ ಹೊಸ ತೀರ್ಮಾನ ಹಣದ ಹರಿವಿಗೆ ಉತ್ತೇಜನ
ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯರು ಒಕ್ಕೊರಲಿನಿಂದ ತೀರ್ಮಾನಿಸಿದ್ದಾರೆ. ಈ ವರ್ಷದ ಫೆಬ್ರುವರಿಯ ನಂತರ ಆರ್ಬಿಐ, ರೆಪೊ ದರವನ್ನು ಶೇಕಡ 1.15ರಷ್ಟು ತಗ್ಗಿಸಿದೆ. ಹೀಗಾಗಿ, ಕೆಲವು ಅರ್ಥಶಾಸ್ತ್ರಜ್ಞರು ಮತ್ತು ಕಾರ್ಪೊರೇಟ್ ವಲಯದ ಕೆಲವರು ದರ ಕಡಿತದ ಪರ ಮಾತನಾಡಿದ್ದರೂ ಆ ತೀರ್ಮಾನ ಕೈಗೊಳ್ಳಲು ಆರ್ಬಿಐ ಮುಂದಾಗಿಲ್ಲ. ಕೇಂದ್ರೀಯ ಬ್ಯಾಂಕ್ನ ಈ ತೀರ್ಮಾನವನ್ನು ಷೇರು ಮಾರುಕಟ್ಟೆ ತಕ್ಷಣಕ್ಕೆ ಸ್ವಾಗತಿಸಿರುವುದನ್ನು …
Read More »ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ : ಆರು ನಾಗರಿಕರಿಗೆ ಗಾಯ
ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ …
Read More »ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ
ಬೆಳಗಾವಿ- ದೇವದಾಸಿ ಅಮ್ಮ ಈ ಅಮ್ಮನಿಗೆ ಇಬ್ಬರು ಮಕ್ಕಳು,ತಗಡಿನ ಸೆಡ್ಡಿನಲ್ಲಿ ವಾಸ,ಮಗಳ ಆನ್ ಲೈನ್ ಕ್ಲಾಸಿಗೆ ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ ಬೆಳಗಾವಿಯಲ್ಲಿ ಮಾನವೀಯತೆಯ ಶಿಲನ್ಯಾಸ ಮಾಡಿದ ಅಪರೂಪದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು ಇಡೀ ದೇಶವೇ ಶ್ರೀರಾಮ ಮಂದಿರದ ಶಿಲನ್ಯಾಸ ಕಾರ್ಯಕ್ರಮ ದಲ್ಲಿ ಮುಳುಗಿರುವಾಗ ಬೆಳಗಾವಿಯ ವೀರೇಶ ಕಿವಡಸಣ್ಣವರ ಸಂಕಷ್ಟದಲ್ಲಿದ್ದ ಆ ದೇವದಾಸಿ ಮಹಾತಾಯಿಗೆ ಹೊಸ ಕಿವಿಯೊಲೆ ಕೊಡಿಸಿ,ಅಗತ್ಯ ಸಾಮಗ್ರಿಗಳನ್ನು …
Read More »ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,
ಬೆಳಗಾವಿ- ಬೆಳಗಾವಿಯ ಕೆಲವು ಖಾಸಗಿ ಆಸ್ಪತ್ರೆಗಳು ಕೋವೀಡ್ ಚಿಕಿತ್ಸೆ ನೀಡುವ ವಿಷಯದಲ್ಲಿ ಹೆಚ್ಚು ಹಣ ಪಡೆಯುತ್ತಿವೆ ಎನ್ನುವ ದೂರುಗಳು ಕೇಳಿ ಬಂದಿವೆ,ಯಾವುದೇ ಮುಲಾಜಿಲ್ಲದೇ ಹೆಚ್ಚಿನ ಬಿಲ್ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕೋವೀಡ್ ನಿಯಂತ್ರಣ,ಮತ್ತು ಪ್ರವಾಹ ನಿರ್ವಹಣೆಯ ಕುರಿತು ಪ್ರಗತಿ ಪರಶೀಲನೆ ನಡೆಸಿದ …
Read More »ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ!:
ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ! ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ, ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ಕಿಸಾನ್ ರೈಲು ಕೃಷಿ ಕ್ಷೇತ್ರದ ಪ್ರಗತಿಗೆ ಮತ್ತು ರೈತರ ಬೆಳೆಗೆ ನ್ಯಾಯಯುತ ದರ ಒದಗಿಸಲು ಹೆಚ್ಚು ಸಹಕಾರಿಯಾಗಲಿದೆ. ಹಾಗೂ ದೇಶದ ಮೂಲೆಮೂಲೆಗಳಿಗೆ ಕೃಷಿ ಉತ್ಪನ್ನಗಳ ಸುಗಮ ಸಾಗಾಣಿಕೆಗೆ ಅನುಕೂಲ ಕಲ್ಪಿಸಲು …
Read More »ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ
ಪ್ರವಾಹ ಮತ್ತು ಕೋವಿಡ್-೧೯ ನಿಯಂತ್ರಣ: ಪರಿಶೀಲನಾ ಸಭೆ ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ ಬೆಳಗಾವಿ, : ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ ಹಾಗೂ …
Read More »ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮಾಜ ಹಿರಿಯ ನಾಯಕ ಡಾ.ಮೊಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ
ಬೆಂಗಳೂರು: ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ, ಮುಸ್ಲಿಂ ಸಮಾಜ ಹಿರಿಯ ನಾಯಕ ಡಾ.ಮೊಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಯೂಸುಫ್ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಳಗ್ಗೆ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ನಿಧನಕ್ಕೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷರು, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್ ರವರು ವಿಧಿವಶರಾದ ಸುದ್ದಿ …
Read More »ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ – 22 ಗೇಟ್ಗಳ ಮೂಲಕ ನೀರು ಹೊರಕ್ಕೆ
ಶಿವಮೊಗ್ಗ: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಅನೇಕ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದೀಗ ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ ಯಾಗಿದ್ದು, ಜಲಾಶಯದಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 22 ಗೇಟ್ಗಳ ಮೂಲಕ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯಕ್ಕೆ ಯಥೇಚ್ಛ ನೀರು ಹರಿದು ಬಂದಿದೆ. ಇದರಿಂದ …
Read More »ಕಾಡಾನೆ ಓಡಿಸುವಾಗ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು
ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ (30) ಮೃತ ಫಾರೆಸ್ಟ್ ವಾಚರ್. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಶಿವನಂಜಯ್ಯ ಸಾವನ್ನಪ್ಪಿದ್ದಾರೆ. ಮೃತ ಶಿವನಂಜಯ್ಯ ಗುತ್ತಿಗೆ ಅಧಾರದ ಮೇಲೆ …
Read More »