ತುಮಕೂರು, ಆ.5-ನಿನ್ನೆ ನಿಧನರಾದ ಜೆಡಿಎಸ್ ಶಾಸಕ ಬಿ.ಸತ್ಯನಾರಾಯಣ್ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಭುವನಹಳ್ಳಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು. ಪತ್ನಿ ಅಮ್ಮಾಜಮ್ಮ, ಪುತ್ರ ಎಸ್.ಪ್ರಕಾಶ್ ಹಾಗೂ ಐವರು ಹೆಣ್ಣುಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗದವರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಅಗಲಿದ ತಂದೆಗೆ ಅಂತಿಮ ವಿದಾಯ ಹೇಳಿದರು. ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್‍ಕುಮಾರ್, ಶಾಸಕರಾದ ಡಿ.ಸಿ.ಗೌರಿಶಂಕರ್, ವೀರಭದ್ರಯ್ಯ, ಜಿಲ್ಲಾ ಜೆಡಿಎಸ್ …
Read More »ಬೆಳಗಾವಿ ಜಿಲ್ಲೆಯ ಶಬರಿ ಕೊಳ್ಳದಲ್ಲಿ ವಿಶೇಷ ಪೂಜೆ
ಬೆಳಗಾವಿ ಜಿಲ್ಲೆಯ ಶಬರಿ ಕೊಳ್ಳದಲ್ಲಿ ವಿಶೇಷ ಪೂಜೆ ಪ್ರಭು ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ಭವ್ಯ ದಿವ್ಯ ಶ್ರೀ ರಾಮ ಮಂದಿರದ ಭೂಮಿಪೂಜೆ ಕಾರ್ಯಕಮ. ಅಂಗವಾಗಿ ಭಾರತ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ರಾಮದುರ್ಗ ಮಂಡಲವತಿಯಿಂದ ಇಂದು ಪ್ರಭು ಶ್ರೀರಾಮ ಮಾತೆ ಸೀತಾದೇವಿ ಲಕ್ಷ್ಮಣ ದೇವರು ಗಳು ಪಾದಸ್ಷರ್ಷಿಸಿದ ಪುಣ್ಯಭೂಮಿ ಶಬರಿ ಕೊಳ್ಳ . ಮಾತೆ ಶಬರಿ ದೇವಿಗೆ ದರ್ಶನ ನೀಡಿದ ಒಂದು ಪವಿತ್ರ ಸ್ಥಳ. ಶಾಂತಿಃ ಸಮೃದ್ಧ ಕ್ಕಾಗಿ …
Read More »ನಿಜಾಮುದ್ದೀನ್ EXPRESS ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲು ಸಂಚಾರ ಬಂದ
ಬೆಳಗಾವಿ: ಜಿಲ್ಲೆಯ ಕ್ಯಾಸರ್ಲೋಕ್ ದಿಂದ ಕರಂಜೋಲ್ ರೈಲ್ವೆ ಸ್ಟೇಷನ್ ಮಧ್ಯದಲ್ಲಿ ನಿಜಾಮುದ್ದೀನ್ ಎಸ್ಪ್ರೇಸ್ ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲು ಸಂಚಾರ ಬಂದ ಆಗಿದೆ. ಬುಧವಾರ ನಿಜಾಮುದ್ದೀನ್ ದಿಂದ ವಾಸ್ಕೋಡಗಾಮ ಎಸ್ಪ್ರೇಸ್ ಎಂಜಿನ್ ಮೇಲೆ ಗುಡ್ಡ ಕುಸಿತವಾಗಿದ್ದು, ರೈಲ್ವೆ ಸ್ಥಳದಲ್ಲಿಯೇ ನಿಂತುಕೊಂಡಿದೆ. ಕ್ಯಾಸರ್ಲೊಕ್ ದಿಂದ ಕರಂಜೋಲ್ ರೈಲ್ವೆ ಸ್ಟೇಷನ್ ನಡುವೆ ಸಂಭವಿಸಿರುವ ಘಟನೆ ಸಂಭವಿಸಿದೆ. ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲೆಯಾದ್ಯಂತ ಕಳೆದ 3 ದಿನಗಳಿಂದ ನಿರಂತರ …
Read More »ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ನಿಧನ…..
ಪುಣೆ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೆಕರ್ ಅವರು ಪುಣೆಯಲ್ಲಿ ಬುಧವಾರ ನಿಧನರಾದರು. ಪುಣೆಯ ರೂಬಿ ಹಾಲ್ ಕ್ಲಿನಿಕ್ ನಲ್ಲಿ ಅವರು ಕೊನೆಯುಸಿರೆಳೆದರು. COVID-19 ನಿಂದ ಚೇತರಿಸಿಕೊಂಡ ನಂತರ ಅವರನ್ನು ಇತ್ತೀಚೆಗೆ ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಯಿತು. ಆದರೆ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಮೂತ್ರಪಿಂಡ ವೈಫಲ್ಯದಿಂದ ಅವರು ಮೃತಪಟ್ಟಿದ್ದಾರೆ ಎಂದು ಅವರ ಮೊಮ್ಮಗ ಬಿಜೆಪಿ ಶಾಸಕ ಸಂಭಜಿರಾವ್ ಪಾಟೀಲ್ ನೀಲಂಗೆಕರ್ ಖಚಿತಪಡಿಸಿದ್ದಾರೆ. …
Read More »ರಾಮ ಬಿಟ್ಟ ಬಾಣಕ್ಕೆ ನಿರ್ಮಾಣವಾದ ಹೊಂಡವಿದೆ ಬೆಳಗಾವಿಯಲ್ಲಿ!
ಚಿಕ್ಕೋಡಿ(ಬೆಳಗಾವಿ): ಜಿಲ್ಲೆಗೂ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ. ಇದಕ್ಕೆ ಸಾಕ್ಷಿ ಪ್ರಾಚೀನ ಕಾಲದಲ್ಲಿ ನಿರ್ಮಿಸಿರುವ ರಾಮಲಿಂಗೇಶ್ವರ ದೇವಸ್ಥಾನ.ಶ್ರೀ ರಾಮ ವನವಾಸದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯ ಶಿಪ್ಪೂರ ಗ್ರಾಮಕ್ಕೆ ವಿಶ್ರಾಂತಿ ಪಡೆದು ಹೋಗಿದ್ದರು ಎನ್ನುವದಕ್ಕೆ ಇಲ್ಲಿನ ಶ್ರೀ ರಾಮಲಿಂಗೇಶ್ವರ ದೇವಸ್ಥಾನವೇ ಸಾಕ್ಷಿ. ಇಲ್ಲಿ ಸ್ವತಃ ಶ್ರೀ ರಾಮನು ಶಿವಲಿಂಗ ಸ್ಥಾಪಿಸಿ ಪೂಜೆ ಸಲ್ಲಿಸಿದ ಕಾರಣ ಈ ಕ್ಷೇತ್ರಕ್ಕೆ ಪೌರಾಣಿಕ ಕಥೆಯಿದೆ. ಗುಡ್ಡಗಾಡಿನಲ್ಲಿ ಇದ್ದ ಈ ಪ್ರದೇಶದಲ್ಲಿ ಶ್ರೀ ರಾಮನಿಗೆ ಕುಡಿಯಲು …
Read More »ರಾಮಮಂದಿರಕ್ಕಾಗಿ 28 ವರ್ಷಗಳಿಂದ ಉಪವಾಸ ಮಾಡ್ತೀರೋ 82ರ ವೃದ್ಧೆ
ಭೋಪಾಲ್: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವವರೆಗೂ ಆಹಾರ ಸೇವಿಸುವುದಿಲ್ಲ ಎಂದು ದೀಕ್ಷೆ ಸ್ವೀಕಾರ ಮಾಡಿ, ಕಳೆದ 28 ವರ್ಷಗಳಿಂದ ಮಧ್ಯ ಪ್ರದೇಶದ ಜಬಲ್‍ಪುರಕ್ಕೆ ನಿವಾಸಿ ಊರ್ಮಿಳಾ ಚರ್ತುವೇದಿ (82) ಉಪವಾಸ ಮಾಡುತ್ತಿದ್ದಾರೆ.1992ರ ಡಿ.6 ರಂದು ವಿವಾದತ್ಮಾಕ ಕಟ್ಟದ ನೆಲಸಮ ಮಾಡಿದ ಸಮಯದಿಂದ ಊರ್ಮಿಳಾ ಅವರು ಉಪವಾಸ ಮಾಡುತ್ತಿದ್ದಾರೆ. ರಾಮನಿಗೆ ಮತ್ತೆ ಮಂದಿರ ನಿರ್ಮಾಣ ಮಾಡುವವರೆಗೂ ಆಹಾರ ಸೇವಿಸುವುದಿಲ್ಲ ಎಂದು ನಿರ್ಧಾರ ಮಾಡಿದ್ದರು. ಕಳೆದ ವರ್ಷ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯ ಅನುಮತಿ …
Read More »366 ಸ್ತಂಭಗಳ ಆಧಾರ, 24 ಅಮೃತಶಿಲೆಯ ಬಾಗಿಲುಗಳು – ವಿಶ್ವದ ಮೂರನೇ ಅತೀದೊಡ್ಡ ಹಿಂದೂ ದೇಗುಲ
ಲಕ್ನೋ: ಇಂದು ದೇಶದ ರಾಜಕೀಯ, ಸಾಮಾಜಿಕ ಚರಿತ್ರೆಯಲ್ಲಿ ಒಂದು ಅಪೂರ್ವ ದಿನ. ಶತಮಾನಗಳ ಕನಸು ನನಸಾಗುವ ಸಂದರ್ಭ ಬಂದಿದೆ. ಸರಿಯಾಗಿ ವರ್ಷದ ಹಿಂದೆ ಜಮ್ಮು ಕಾಶ್ಮೀರದಲ್ಲಿ 370ನೇ ಆರ್ಟಿಕಲ್ ರದ್ದು ಮಾಡಿದಾಗ ಅದನ್ನು ಐತಿಹಾಸಿಕ ಘಟ್ಟ ಎಂದು ಬಣ್ಣಿಸಲಾಗಿತ್ತು. ಇದು ದಶಕಗಳ ವಿವಾದವಷ್ಟೇ ಆಗಿತ್ತು. ಆದರೆ ಭರತ ಖಂಡದ ಅಸ್ತಿತ್ವದ ಚಿನ್ಹೆಯಾದ ರಾಮಜನ್ಮ ಭೂಮಿಯಲ್ಲಿ ಒಂದು ಮಸೀದಿ ನಿರ್ಮಾಣ ಆಗಿ ಶತಮಾನಗಳು ಕಳೆದು ಹೋಗಿದ್ವು. ಪುರಾತತ್ವ ಇಲಾಖೆಯಲ್ಲಿ ಮಾತ್ರವಲ್ಲ, ಮೊಗಲ್ …
Read More »ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್
ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …
Read More »ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ
ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ 200 ಎಂಜಿ ಮಾತ್ರೆಗಳನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್ ತಿಳಿಸಿದೆ. ಕಡಿಮೆ ಮತ್ತು ಮಧ್ಯಮ ಪ್ರಮಾಣದ ಕೊರೋನಾ ಲಕ್ಷಣವಿರುವ ರೋಗಿಗಳಿಗೆ ಇದನ್ನು ಬಿಡುಗಡೆ ಮಾಡಲಾಗಿದೆ. ವೈರಾಣು ನಿರೋಧಕವಾಗಿರುವ ಒಂದು ಮಾತ್ರೆಗೆ 35 ರೂ. ದರ ನಿಗದಿ ಮಾಡಲಾಗಿದೆ. …
Read More »