ಮುಂಬೈ: ನಿವೃತ್ತಿ ಘೋಷಣೆ ಮಾಡಿದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ವಿದಾಯ ಪಂದ್ಯವನ್ನು ಆಡಿಸಬೇಕು ಎಂಬ ಮಾತು ಎಲ್ಲೆಡೆ ಕೇಳಿಬರುತ್ತದೆ.ಅಗಸ್ಟ್ 15ರಂದು ಸಂಜೆ ಎಂಎಸ್ ಧೋನಿಯವರು ಕೇವಲ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿದ್ದರು. ಈ ಮೂಲಕ ಮತ್ತೆ ಧೋನಿಯವರನ್ನು ನೀಲಿ ಜೆರ್ಸಿಯಲ್ಲಿ ನೋಡಾ ಬಯಸಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಜೊತೆಗೆ ವಿದಾಯ ಪಂದ್ಯವಾಡದೇ ಧೋನಿ ನಿವೃತ್ತಿ ಹೊಂದಿದ್ದು, ಅವರ ಅಭಿಮಾನಿಗಳಿಗೆ ಬೇಸರ ತರಿಸಿತ್ತು. …
Read More »ಜಾರಕಿಹೊಳಿ ತಂಡದಿಂದ ಲಾಬಿ; ಬಿಜೆಪಿ ರಾಷ್ಟ್ರ ನಾಯಕರ ಮೇಲೆ ಒತ್ತಡ; ಲಕ್ಷ್ಮಣ ಸವದಿ ಡಿಸಿಎಂ ಸ್ಥಾನಕ್ಕೆ ಕುತ್ತು?
ಬೆಳಗಾವಿ: ಎರಡು ವರ್ಷಗಳ ರಾಜಕೀಯ ವನವಾಸದ ಬಳಿಕ ಕಷ್ಟಪಟ್ಟು ಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್, ಈಗ ಸಚಿವ ಪಟ್ಟಕ್ಕಾಗಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಜೊತೆಗೆ ರಮೇಶ್ ಜಾರಕಿಹೊಳಿ ಕೂಡ ಡಿಸಿಎಂ ಸ್ಥಾನಕ್ಕಾಗಿ ಹಪಹಪಿಸುತ್ತಿದ್ದು ಇದಕ್ಕಾಗಿ ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ …
Read More »ಗಾನಗಾರುಡಿಗ ಎಸ್.ಪಿ. ಬಾಲಸುಬ್ರಮಣ್ಯಂರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ
ಚೆನ್ನೈ,- ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಗಾನಗಾರುಡಿಗ ಎಸ್.ಪಿ. ಬಾಲಸುಬ್ರಮಣ್ಯಂರ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿರುವ ಎಸ್‍ಪಿಬಿ ಅವರಿಗೆ ಶ್ವಾಸಕೋಶದ ಸಮಸ್ಯೆಯೂ ಇರುವುದರಿಂದ ಅವರಿಗೆ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಆದರೂ ದಿನೇ ದಿನೇ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ, ವೆಂಟಿಲೇಟರ್ ಇಲ್ಲದೆ ಅವರಿಗೆ ಚಿಕಿತ್ಸೆ ಕೊಡಲು ಪ್ರಯತ್ನಪಟ್ಟೆವಾದರೂ ಅವರ ದೇಹ ಅದಕ್ಕೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ವೆಂಟಿಲೇಟರ್ ಇಲ್ಲದೆ ಎಸ್‍ಪಿಬಿ ಅವರು …
Read More »ಘಟಪ್ರಭಾ ಅಟ್ಟಹಾಸದಿಂದ ಸಂಕಷ್ಟಕ್ಕೆ ಒಳಗಾದ ಬಾಣಂತಿ, ಗರ್ಭಿಣಿ!
ಬೆಳಗಾವಿ: ಘಟಪ್ರಭಾ ಅಟ್ಟಹಾಸಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲಿ ನೀರು ನಿಂತಿದೆ. ಜನ ತಮ್ಮ ಮನೆಗಳನ್ನು ಬಿಟ್ಟು ಪರಿಹಾರ ಕೇಂದ್ರಗಳಲ್ಲಿ ಜೀವನ ನಡೆಸುವಂತ ಪರಿಸ್ಥಿತಿ ಎದುರಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಳವಂಕಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ತಮ್ಮ ಪರಿಸ್ಥಿತಿ ನೆನೆದು ಬಾಣಂತಿ ಮತ್ತು ಗರ್ಭಿಣಿ ಕಣ್ಣೀರು ಹಾಕಿದ್ದಾರೆ. ಮೇಳವಂಕಿ ಗ್ರಾಮಕ್ಕೆ ಘಟಪ್ರಭಾ ನದಿ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಎರಡು ತಿಂಗಳ ಮಗುವನ್ನ ಕರೆದುಕೊಂಡು ಬಾಣಂತಿ …
Read More »ನೆರೆ ಹಾಗೂ ಅತಿವೃಷ್ಟಿಯ ಪರಿಣಾಮ, 43,300 ಹೆಕ್ಟೇರ್ ಬೆಳೆ ‘ಆಹುತಿ’
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಮಂಗಳವಾರದವರೆಗೆ 43,300 ಹೆಕ್ಟೇರ್ ಬೆಳೆಗಳು ಮುಳುಗಿವೆ. 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ಮಲಪ್ರಭಾ ನದಿಗಳಲ್ಲಿ ಮಹಾಪೂರ ಉಂಟಾಗಿದೆ. ತೀರಕ್ಕೆ ಹೊಂದಿಕೊಂಡಿರುವ ಜಮೀನುಗಳಿಗೆ ನೀರು ವ್ಯಾಪಿಸಿದೆ. ಇದರೊಂದಿಗೆ ಬೆಳಗಾವಿ ತಾಲ್ಲೂಕಿನಲ್ಲಿ ಬಳ್ಳಾರಿ ನಾಲಾ ಪ್ರವಾಹವೂ ಉಂಟಾಗಿದೆ. ಇದರಿಂದಲೂ ಸಾವಿರಾರು ಎಕರೆ ವಿವಿಧ ಬೆಳೆಗಳು ಜಲಾವೃತವಾಗಿವೆ. ಅಲ್ಲಲ್ಲಿ ಮಳೆ ಹಾಗೂ ಪ್ರವಾಹದ ಪರಿಸ್ಥಿತಿ ಮುಂದುವರಿದಿದ್ದು, ಬೆಳೆಗಳ ಹಾನಿ …
Read More »ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ. 267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
Read More »ಸಂಗೊಳ್ಳಿರಾಯಣ್ಣ ಸೊಸೈಟಿ ವಂಚನೆ ಪ್ರಕರಣ: ದೋಷಾರೋಪಣಾ ಪಟ್ಟಿ ಸಲ್ಲಿಕೆ
ಬೆಳಗಾವಿ: ಚಲನಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ನೇತೃತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು 2,063 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಇಲ್ಲಿನ ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ ನೇತೃತ್ವದ ತಂಡ ಪ್ರಕರಣ ಕುರಿತು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದೆ. ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸರ್ಕಾರಿ ಅಭಿಯೋಜಕ ಮುರಳೀಧರ ಕುಲಕರ್ಣಿ, ‘ಈ …
Read More »ಕೇವಲ 5 ದಿನದಲ್ಲಿ 228 ಮಂದಿ ಬಲಿ ಪಡೆದ ಮಹಾಮಾರಿ ಕೊರೋನಾ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಬುಧವಾರ 56 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು ಆಗಸ್ಟ್ ತಿಂಗಳಿನಲ್ಲಿ ಒಂದೇ ದಿನ ದಾಖಲಾದ ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿದೆ. ಕಳೆದ ಐದು ದಿನಗಳಿಂದ ನಗರದಲ್ಲಿ ಕೊರೋನಾ ಸೋಂಕಿಗೆ 228 ಮಂದಿ ಸಾವನ್ನಪ್ಪಿದ್ದಾರೆ. ಆ.16 ಮತ್ತು 18 ರಂದು ತಲಾ 49 ಮಂದಿ ಸೋಂಕಿನಿಂದ ಮೃತಪಟ್ಟಿದ್ದು ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿತ್ತು. ಆದರೆ, ಬುಧವಾರ 56 …
Read More »ಗೌರಿ-ಗಣೇಶ ಹಬ್ಬಕ್ಕೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಗಿಫ್ಟ್: ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆ ಹೆಚ್ಚಳ
ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್‌ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ …
Read More »ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ : ಹೀಗಿದೆ ಬದಲಾದ ಪರೀಕ್ಷಾ ದಿನಾಂಕಗಳು
ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ ಪರೀಕ್ಷೆಯ ವಿಷಯವಾರು ವೇಳಾ ಪಟ್ಟಿಯನ್ನು ಕೂಡ ಪ್ರಕಟಿಸಿತ್ತು. ಇಂತಹ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಮಾಡಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಮಾಹಿತಿ ನೀಡಿದ್ದು, ಸೆಪ್ಟೆಂದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ …
Read More »
Laxmi News 24×7