Breaking News

Uncategorized

ಕೋವಿಡ್: 404 ಮಂದಿ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 358 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ನಾಲ್ವರು ಬೆಳಗಾವಿ ಹಾಗೂ ಒಬ್ಬರು ಗೋಕಾಕ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಜಿಲ್ಲೆಯಲ್ಲಿ ಮಾದರಿ ಸಂಗ್ರಹ ಸಂಖ್ಯೆ 61,752ರ ಗಡಿ ದಾಟಿದೆ. ಈ ಪೈಕಿ 52,779 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 818 …

Read More »

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »

ಬ್ರೇಕ್​​ ಜಾಮ್​ ಆಗಿ ಉರುಳಿಬಿದ್ದ KSRTC ಬಸ್, ಮುಂದೇನಾಯ್ತು?

ಬಾಗಲಕೋಟೆ:ಬ್ರೇಕ್ ಲೈನರ್ ಜಾಮ್ ಆಗಿ, ಚಲಿಸುತ್ತಿದ್ದ KSRTC ಬಸ್ ಉರುಳಿ ಬಿದ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಅಂಗಡಿ ಲೇಔಟ್ ಬಳಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ಸಿನಲ್ಲಿ ಒಟ್ಟು 20 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಕಂಡಕ್ಟರ್ ಹಾಗೂ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ …

Read More »

‘ಲಾಕ್‌ಡೌನ್‌ನಿಂದ ಜನರ ಪ್ರಾಣ ರಕ್ಷಣೆ’

ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್‌ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಲಾಕ್‌ಡೌನ್‌ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು …

Read More »

4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ.

ಬೆಂಗಳೂರು, ಆ.15- 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ. ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.ವಿನೂತನ ಮಾದರಿಯಲ್ಲಿ ಸ್ವಾತಂತ್ರ್ಯದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ 250 ಕೆಜಿ ಬಿಳಿ, ಕೇಸರಿಹಾಗೂ …

Read More »

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ- ಐಸಿಯುನಲ್ಲಿ ಚಿಕಿತ್ಸೆ

ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.ಎಸ್‍ಪಿಬಿ ಆರೋಗ್ಯ ಸ್ಥಿತಿಗತಿ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಎಂಜಿಎಂ ಹೆಲ್ತ್ ಕೇರ್, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಜ್ಞ ವೈದ್ಯರ ತಂಡದ ಅವರ ಆರೈಕೆ …

Read More »

ಸುತ್ತಿಗೆಯಿಂದ ಮಗನ ತಲೆ ಜಜ್ಜಿ ಕೊಲೆಗೈದ ಪಾಪಿ ತಂದೆ

ಹೈದರಾಬಾದ್: ತಂದೆಯೇ ತನ್ನ 40 ವರ್ಷದ ಮಗನನ್ನು ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ವಿಶಾಖಪಟ್ಟಣಂನಲ್ಲಿ ಘಟನೆ ನಡೆದಿದ್ದು, ರೊಚ್ಚಿಗೆದ್ದ ತಂದೆ ಸುತ್ತಿಗೆಯನ್ನು ತೆಗೆದುಕೊಂಡು ತನ್ನ ಮಗನ ತಲೆಗೆ ಹಲವು ಬಾರಿ ಸಿಟ್ಟಿನಿಂದ ಬಾರಿಸುವ ಮೂಲಕ ಹತ್ಯೆ ಮಾಡಿದ್ದಾರೆ. ಆರೋಪಿಯನ್ನು ವೀರ ರಾಜು ಎಂದು ಗುರುತಿಸಲಾಗಿದ್ದು, ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮನೆಯ ಕಾರ್ ಪಾರ್ಕಿಂಗ್ …

Read More »

ರಾಜಸ್ಥಾನ ರಾಜಕೀಯ ದೊಂಬರಾಟಕ್ಕೆ  ಫುಲ್ ಸ್ಟಾಪ್:ಬಿಜೆಪಿಗೆ ಮುಖಭಂಗ

ಜೈಪುರ:  ರಾಜಸ್ಥಾನ ರಾಜಕೀಯ ದೊಂಬರಾಟಕ್ಕೆ  ಫುಲ್ ಸ್ಟಾಪ್ ಬಿದ್ದಿದ್ದು,  ಸಿಎಂ ಅಶೋಕ್ ಗೆಹ್ಲೋಟ್ ಅವರು ಇಂದು ರಾಜಸ್ಥಾನ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಗೆಲುವುಕಂಡಿದ್ದಾರೆ. ಡಿಸಿಎಂ ಸಚಿನ್ ಪೈಲಟ್ ಸೇರಿ ಅವರ ಬೆಂಬಲಿಗ ಶಾಸಕರು ಸರ್ಕಾರದ ವಿರುದ್ದ ಬಂಡಾಯ ಎದ್ದಿದ್ದರು. ಪರಿಸ್ಥಿತಿ ಲಾಭ ಪಡೆಯಲು ಬಿಜೆಪಿ ಮುಂದಾಗಿತ್ತು.  ಚುನಾಯಿತ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ಹೊರಿಸಿತು. ಬಿಜೆಪಿ ಈ ಆರೋಪಗಳನ್ನು ನಿರಾಕರಿಸಿದರೂ ಅವಿಶ್ವಾಸ ನಿರ್ಣಯಕ್ಕೆ …

Read More »

ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಗುಲಾಮಗಿರಿಯಿಂದ ಭಾರತೀಯರಿಗೆ ಸ್ವಾತಂತ್ರ್ಯ ಸಿಕ್ಕಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು, ದೇಶದ ಜನರನ್ನು ಒಂದು ಮಾಡಲು ಧ್ವಜದ ಅಗತ್ಯವುಂಟಾಗಿತ್ತು. ಈ ಧ್ವಜ ಈಗ ರಾಷ್ಟ್ರೀಯತೆಯ ಸಂಕೇತವಾಗಿದೆ. ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರದ ಗುರುತು ಧ್ವಜವಾಗಿದೆ. ಇಡೀ …

Read More »