Breaking News
Home / Uncategorized (page 79)

Uncategorized

ಆಯೋಗಕ್ಕೆ ಪತ್ರ, ನೌಕರರಿಗೆ ಸಿಹಿಸುದ್ದಿ?

ಬೆಂಗಳೂರು, ಮೇ 11: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ರಾಜ್ಯದಲ್ಲಿ ಏಪ್ರಿಲ್ 26, ಮೇ 7 ಒಟ್ಟು ಎರಡು ಹಂತದಲ್ಲಿ ಮತದಾನ ಮುಗಿದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗುವುದು ಜೂನ್ 4ರಂದು. ರಾಜ್ಯದಲ್ಲಿ ಮತದಾನ ಮುಗಿದರೂ ಸಹ ಲೋಕಸಭೆ ಮಾದರಿ ಚುನಾವಣಾ ನೀತಿ ಸಂಹಿತೆ ಜೂನ್ 6ರ ತನಕ ಜಾರಿಯಲ್ಲಿರುತ್ತದೆ. ಅಲ್ಲಿಯ ತನಕ ಸರ್ಕಾರ ಯಾವುದೇ ಹೊಸ ಘೋಷಣೆ …

Read More »

ಲೋಕಸಭೆ ಎಲೆಕ್ಷನ್‌ ವೇಳೆ ಮೈತ್ರಿಗೆ ಮುಳುವಾಯ್ತು ಪೆನ್‌ ಡ್ರೈವ್‌ ಕಂಟಕ; ಪರಿಷತ್‌ಗೂ ದೋಸ್ತಿ ನಾ?

ಬೆಂಗಳೂರು, ಮೇ 10: ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಮೈತ್ರಿ ನಾಯಕರು ಮುಜುಗರವನ್ನುಂಟು ಮಾಡಿದೆ. ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ಕುರಿತು ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಜೆಡಿಎಸ್​ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದೀಗ ಮೈತ್ರಿ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ. ಹೌದು, ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣದಿಂದ ಕಮಲ-ದಳ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, …

Read More »

ಪ್ರಜ್ವಲ್ ರೇವಣ್ಣ ನಾಪತ್ತೆ: ಹುಡುಕಿ ಕೊಟ್ಟವರಿಗೆ ನಗದು ಬಹುಮಾನ ಘೋಷಣೆ

ಬೆಂಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಸದ್ದು ಮಾಡುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಹೌದು, ಜನತಾ ಪಕ್ಷವು ಪ್ರಜ್ವಲ್ ರೇವಣ್ಣ ನಾಪತ್ತೆ ಕುರಿತು ಕಿಡಿ ಕಾರಿದೆಪಕ್ಷದಿಂದ ನಗದು ಬಹುಮಾನ ಘೋಷಣೆ ಮಾಡಿದೆ. ಮಹಿಳೆಯರ ಮೇಲಿನ ಲೈಂಗಿಕ-ಮಾನಸಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ …

Read More »

ಅನ್ಯ ಜಾತಿ ಎಂದು ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಕಲಬುರಗಿ, ಮೇ.11: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ನಿನ್ನೆ ಸಂಜೆ (ಮೇ.10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. UPSC ಪರೀಕ್ಷೆಗೆ ಸಿದ್ದತೆ ನಡೆಸಿದ್ದ ಪುಷ್ಪಾ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು. ಕಳೆದ ಕೆಲ ದಿನಗಳಿಂದ ಪುಷ್ಪಾ ತನ್ನ ಪ್ರಿಯಕರ ಕಿರಣ್​ಗೆ ಮದುವೆ ಮಾಡಿಕೋ ಎಂದು ಒತ್ತಾಯ ಮಾಡ್ತಿದ್ದರು. …

Read More »

ಎನ್‌ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ

ಮಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್‌ಇಪಿ) ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, 3 ವರ್ಷಗಳ ಪದವಿ ಕೋರ್ಸ್‌ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ವಿಶ್ವವಿದ್ಯಾಲಯಗಳಿಗೂ ಆಪತ್ತು ತರಲಿದೆ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪುರ ಎಚ್ಚರಿಸಿದರು. ಪೀಪಲ್ಸ್‌ ಫೋರಂ ಫಾರ್‌ ಕರ್ನಾಟಕ ಎಜುಕೇಷನ್‌ ವತಿಯಿಂದ ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸದಿದ್ದರೆ ಸಂಶೋಧನೆಗಾಗಿ ಕೇಂದ್ರದಿಂದ …

Read More »

ದ್ವಿಶತಕ ತಲುಪಿದ ಬೀನ್ಸ್ ದರ

ಕಾರವಾರ: ಅತಿಯಾದ ಬಿಸಿಲು, ಹೆಚ್ಚಿದ ಆರ್ದ್ರತೆಯಿಂದ ಕಂಗೆಟ್ಟಿರುವ ಕರಾವಳಿ ಭಾಗದ ಜನತೆಗೆ ತರಕಾರಿ, ಹಣ್ಣಿನ ದರದ ಬಿಸಿಯೂ ತಟ್ಟಿದೆ. ಶತಕದ ಆಸುಪಾಸಿನಲ್ಲಿದ್ದ ಬೀನ್ಸ್ ದರವು ಏಕಾಏಕಿ ದ್ವಿಶತಕ ದಾಟಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ. ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಮಾರುಕಟ್ಟೆಗೆ ಬೆಳಗಾವಿ, ಹುಬ್ಬಳ್ಳಿ ಭಾಗದಿಂದ ತರಕಾರಿ, ಹಣ್ಣು ಪೂರೈಕೆ ಆಗುತ್ತಿದೆ. ಬಿಸಿಲ ಝಳ ಹೆಚ್ಚಿದ ಬಳಿಕ ಬೇಡಿಕೆಯಲ್ಲಿರುವ ತರಕಾರಿ, ಹಣ್ಣುಗಳ ದರ ವಿಪರೀತ ಏರಿಕೆ ಕಂಡಿದೆ. ಕಳೆದ ಎರಡು ವಾರಗಳಿಂದ …

Read More »

ಅಶುದ್ಧ ಕುಡಿಯುವ ನೀರು ಪೂರೈಕೆ

ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಜನರಿಗೆ ಕುಡಿಯಲು ಯೋಗ್ಯವಲ್ಲದ ನೀರನ್ನು ಪೂರೈಸಲಾಗುತ್ತಿದ್ದು, ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಸ್ಥಳೀಯರು ತುತ್ತಾಗಿದ್ದಾರೆ. ಗ್ರಾಮಸ್ಥರಿಗೆ ಪ್ರತಿ ದಿನ ನಲ್ಲಿ ಮೂಲಕ ಪೂರೈಸುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ಗ್ರಾಮಸ್ಥರು ಪಕ್ಕದ ನಾಗನೂರ ಅಥವಾ ನವಲಗುಂದ ಪಟ್ಟಣಕ್ಕೆ ಬಂದು ಕುಡಿಯುವ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಇಲ್ಲಿನ ಕೆರೆಯ ನೀರು ಶುದ್ಧವಾಗಿಲ್ಲ. ಇದೇ ನೀರನ್ನು ಗ್ರಾಮ ಪಂಚಾಯಿತಿಯಿಂದ ಗ್ರಾಮದ ಜನರಿಗೆ ನಿತ್ಯ ಸರಬರಾಜು ಮಾಡಲಾಗುತ್ತಿದೆ. ಗಲೀಜು ಆಗಿರುವ …

Read More »

ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್

ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬೀಳಿಸಬೇಕೆಂದರೆ ಅರವತ್ತು ಶಾಸಕರು ಬೇಕು.ಆದರೆ ಬಿಜೆಪಿ ಶಾಸಕರುಗಳೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಒಂದು ಲಕ್ಷ ಮತಗಳ …

Read More »

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ಕಲಬುರಗಿ, : ಕಲಬುರಗಿಯಲ್ಲಿ (Kalaburagi) ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ (Congress) ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ (Murder) ಮಾಡಿದ ಬಗ್ಗೆ ವರದಿಯಾಗಿದೆ. ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ. ದುಷ್ಕರ್ಮಿಗಳು ಜಾವೀದ್​​ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ …

Read More »

ಣಬಿಸಿಲಿಗೆ ತತ್ತರಿಸಿದ ಕೋಳಿ ಸಾಕಾಣಿಕೆ ಉದ್ಯಮ,

ಹಾವೇರಿ, : ಈ ಭಾರಿಯ ರಣಬಿಸಿಲಿಗೆ (Sunlight) ಜನ ಜಾನುವಾರು ತತ್ತರಿಸಿ ಹೋಗಿವೆ. ಅದರಲ್ಲೂ ಇತ್ತೀಚಿಗೆ ಪ್ರತಿನಿತ್ಯ 39 ರಿಂದ 40 ರಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಜನರು ಹೈರಾಣಾಗಿದ್ದು ಒಂದು ಕಡೆಯಾದರೆ, ಈ ಭಾರಿಯ ರಣಬಿಸಿಲಿಗೆ ಕೋಳಿ ಉದ್ಯಮಿದಾರರು(Poultry farming)ತತ್ತರಿಸಿ ಹೋಗಿದ್ದಾರೆ. ರಣಬಿಸಿಲಿಗೆ ಕೋಳಿಗಳು ಸಾವನ್ನಪ್ಪದ್ದು, ಮೊಟ್ಟೆಯ ಉತ್ಪಾದನೆ ಕಡಿಮೆಯಾಗುತ್ತಿದೆ. ಇದರಿಂದ ಕೋಳಿ ಉದ್ಯಮೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಭಾರಿಯ ಬಿಸಿಲಿಗೆ ಜನ, ಜಾನುವಾರುಗಳು, ಪ್ರಾಣಿ, ಪಕ್ಷಿಗಳು ಕಂಗೆಟ್ಟು ಹೋಗಿವೆ. ಇದಕ್ಕೆ ಕೋಳಿ …

Read More »