ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಮೂರ್ತಿ ಪ್ರತಿ ಸ್ಥಾಪನೆ ಪ್ರಕರಣ ಕೊನೆಗೆ ಅಂತ್ಯ ಕಂಡಿದೆ. ಶಿವಾಜಿ ಮೂರ್ತಿ ವಿಚಾರವನ್ನೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದ ಎಂ.ಇ.ಎಸ್. ಹಾಗೂ ಶಿವಸೇನೆಗೆ ತೀವ್ರ ಮುಖ ಭಂಗವಾಗಿದೆ. ಹೌದು, ಕಳೆದ ಒಂದು ವಾರದಿಂದಲೂ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿ ಸ್ಥಾಪನೆ ಮಾಡುವ ವಿಚಾರವಾಗಿ ಹಲವಾರು ಗಲಾಟೆಗಳು ನಡೆದಿದ್ದವು. ಶಿವಸೇನೆಯ ಕುಮ್ಮಕ್ಕಿನಿಂದ ಸುಳ್ಳು ಪ್ರಚಾರ ಪಡೆದಿದ್ದ …
Read More »ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ 407 ವಾಹನ ಪಲ್ಟಿ
ಗೋಕಾಕ: ಚಾಲಕನ ನಿಯಂತ್ರಣ ತಪ್ಪಿ 407 ವಾಹನ ಪಲ್ಟಿಯಾಗಿ ಸುಮಾರು ಹತ್ತು ಕಿಂತ ಹೆಚ್ಚು ಜನ ಗಾಯಗೊಂಡ ಘಟನೆ ನಗರ ಹೊರ ವಲಯದಲ್ಲಿ ಮಂಗಳವಾರ ಸಂಜೆ ನಡೆದಿದೆ. ಕೂಲಿ ಕಾರ್ಮಿಕರನ್ನು ತುಂಬಿಕೊಂಡು ನಗರದಿಂದ ನಲ್ಲಾನಟ್ಟಿ ಕಡೆ ಹೊರಟಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ಅವಘಡ ಸಂಭವಿಸಿದ್ದು ಪ್ರಾಣಹಾನಿಯಾಗಿಲ್ಲ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ ಶಹರ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/9IZb29JPrXQ
Read More »ಸ್ವಾತಂತ್ರ್ಯೋತ್ಸವಕ್ಕೆ ಪರೇಡ್, ಸೆಲ್ಯೂಟ್ ಇರುವುದಿಲ್ಲ: ಬಸವರಾಜ ಬೊಮ್ಮಾಯಿ
ಉಡುಪಿ: ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಕೇಂದ್ರದಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಕೊರೊನಾ ನಡುವೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದಂದು ಕಮಾಂಡರ್ಸ್ ಇರುತ್ತಾರೆ. ಆದರೆ ಪರೇಡ್ ಇರುವುದಿಲ್ಲ. ತಂಡ ತಂಡಗಳು ಬಂದು ಸೆಲ್ಯೂಟ್ ಮಾಡ ಇರುವುದಿಲ್ಲ. ಕೇಂದ್ರದ ನಿಯಮಾವಳಿ ಪ್ರಕಾರ ಹಬ್ಬ ಆಚರಣೆ ನಡೆಸಬೇಕು. ಎಲ್ಲರೆದುರಲ್ಲೇ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ ಮೈದಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದರು. …
Read More »ಘಟಪ್ರಭಾ-ಮಣಗುತ್ತಿ ವಿವಾದ ಸೌಹಾರ್ದತೆ ಕಾಪಾಡುವಂತೆ ಪೋಲಿಸ್ ಕಮೀಶನರ್ ಗೆ ಕನ್ನಡ ಸೇನೆ ವತಿಯಿಂದ ಮನವಿ
ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮತ್ತು ಸ್ಥಳಾಂತರ ಪ್ರಕರಣವನ್ನು ಶಿವಸೇನೆ ಮತ್ತು ಹೊರಗಿನಿಂದ ಬಂದ ಇತರೆ ಸಂಘಟನೆಗಳು ವಿವಾದ ಸೃಷ್ಟಿ ಮಾಡಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುತ್ತಿರುವ ಕಿಡಗೇಡಿಗಳನ್ನು ಕೂಡಲೇ ಅವರನ್ನು ಬಂದಿಸಬೇಕು. ಅದರಂತೆ ಅಲ್ಲಿಯ ಜನರಿಗೆ ಸೌಹಾರ್ದತೆಯಿಂದ ಬಾಳಲು ಅನುಮಾಡಿ ಕೊಡಬೇಕು ಎಂದು ಕನ್ನಡ ಸೇನೆ ಮತ್ತು ಕರವೇ ಸಂಘಟನೆ ವತಿಯಿಂದ ಪೋಲಿಸ್ ಕಮೀಶನರ್ ಮನವಿ ಸಲ್ಲಿಸಲಾಯಿತು. ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ …
Read More »SSLC ಫಲಿತಾಂಶದಲ್ಲಿ ಯಾದಗಿರಿಯ ರಮ್ಯಾ ರಾಜ್ಯಕ್ಕೆ 14ನೇ ರ್‍ಯಾಂಕ್
ಯಾದಗಿರಿ: ಜೂನ್ ಹಾಗೂ ಜುಲೈನಲ್ಲಿ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಸೇರಿದಂತೆ ಒಟ್ಟು 225 ಶಾಲೆಗಳ ಫಲಿತಾಂಶ ಹೊರ ಬಿದ್ದಿದೆ. ಜಿಲ್ಲೆಯ 33 ಶಾಲೆಗಳು ಎ ಗ್ರೇಡ್, 56 ಶಾಲೆಗಳು ಬಿ ಗ್ರೇಡ್ ಹಾಗೂ 136 ಶಾಲೆಗಳು ಸಿ ಗ್ರೇಡ್ ಫಲಿತಾಂಶ ಪಡೆದಿವೆ. ಅವುಗಳಲ್ಲಿ ಸರ್ಕಾರಿ ಶಾಲೆಗಳು 122, ಅನುದಾನಿತ 17, ಅನುದಾನ ರಹಿತ …
Read More »ಶಾಸಕ ಕಂಪ್ಲಿ ಗಣೇಶ್ ಸಮಯ ಪ್ರಜ್ಞೆಯಿಂದ ಬದುಕಿತು ಬಡಜೀವ
ಬಳ್ಳಾರಿ: ಹೃದಯಾಘಾತದಿಂದ ರಸ್ತೆ ಪಕ್ಕದಲ್ಲಿ ಬಿದ್ದು ಹೊರಳಾಡುತ್ತಿದ್ದ ವ್ಯಕ್ತಿಯನ್ನು ಸೂಕ್ತ ಸಮಯಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದ ಶಾಸಕ ಸಮಯ ಪ್ರಜ್ಞೆ ಮೆರೆದಿದ್ದಾರೆ.ಕೆಲಸದ ನಿಮಿತ್ತವಾಗಿ ಕಂಪ್ಲಿಯಿಂದ ಕರುಗೋಡ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ, ಕುರುಗೋಡಿನ ಅಗ್ನಿಶಾಮಕ ದಳ ಕಛೇರಿ ಬಳಿ ಪಕ್ಕಿರಪ್ಪ ಎಂಬ ವ್ಯಕ್ತಿ, ಹೃದಯಾಘಾತವಾಗಿ ರಸ್ತೆ ಪಕ್ಕದಲ್ಲಿ ಬಿದ್ದಿದ್ದರು. ಅದನ್ನು ಗಮನಿಸಿದ ಶಾಸಕ ಗಣೇಶ್ ಕೂಡಲೇ ಅಂಬುಲೆನ್ಸ್ ಕರೆಸಿ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ …
Read More »ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ.
ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿ ಕೃಷ್ಣನು ಹುಟ್ಟಿದ ದಿನ. ಅಷ್ಟಮಿಯ ಮಧ್ಯರಾತ್ರಿ, ಕಾರಾಗೃಹದಲ್ಲಿ ಕೃಷ್ಣನ ಜನನವಾಯಿತೆಂದು ಪುರಾಣಗಳಲ್ಲಿ ಉಲ್ಲೇಖಿಸಲ್ಪಟ್ಟಿದೆ.[೧] ಮಥುರಾ ಕೃಷ್ಣನ ಜನ್ಮಸ್ಥಳ. …
Read More »ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್
ಬೆಂಗಳೂರು: ಹವಾ ಮಾಡ್ತೀವಿ, ರೌಡಿಸಂ ಮಾಡ್ತೀವಿ, ಹೆಸರು ಮಾಡ್ತೀವಿ, ನಂದೆ ಹವಾ ಇರ್ಬೇಕು ಎಂದು ಓಡಾಡುತ್ತಿದ್ದವರಿಗೆ ಆನೇಕಲ್ ಉಪ ವಿಭಾಗದ ಪೊಲೀಸರು ಚಳಿ ಬಿಡಿಸಿದ್ದು, ಖಡಕ್ ವಾರ್ನಿಂಗ್ ನೀಡಿದ್ದಾರೆ. ಆನೇಕಲ್ ಉಪವಿಭಾಗದ ಏಳು ಠಾಣೆಯ ಪೋಲಿಸರು ಭಾನುವಾರ ಸ್ಪೆಷಲ್ ಡ್ರೈವ್ ಮಾಡಿ ರೌಡಿ ಶೀಟರ್ಸ್ ಗಳ ಮನೆಗಳಿಗೆ ತೆರಳಿ ರೈಡ್ ಮಾಡಿ ಸುಮಾರು ನೂರಕ್ಕು ಹೆಚ್ಚು ರೌಡಿ ಶೀಟರ್ ಗಳನ್ನು ಠಾಣೆಗೆ ಕರೆಸಿದ್ದಾರೆ. ಇಂದು ಎಸ್‍ಪಿ ರವಿ.ಡಿ.ಚೆನ್ನಣ್ಣನವರ್ ನೇತೃತ್ವದಲ್ಲಿ ಎಲ್ಲ …
Read More »ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ
ಚೆನ್ನೈ: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಈ ಬಾರಿ ಕೊರೊನಾ ವೈರಸ್ ಕಾಟದಿಂದ ಜನ ಹಬ್ಬಗಳನ್ನು ಸರಳವಾಗಿ ಆಚರಿಸುತ್ತಿದ್ದಾರೆ. ಅಂತೆಯೇ ಈ ಬಾರಿ ಮೂರ್ತಿ ತಯಾರಕರು ಕೂಡ ಗಣೇಶನನ್ನು ಸ್ವಲ್ಪ ವಿಭಿನ್ನವಾಗಿ ರೂಪಿಸುತ್ತಿದ್ದಾರೆ. ಹೌದು. ಕೊಯಂಬತ್ತೂರು ಮೂಲದ ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ. ಗಣೇಶ ಬಂದು ಕೊರೊನಾವನ್ನು ಹೊಡೆದು ಸಾಯಿಸುವಂತೆ ಮೂರ್ತಿಯನ್ನು ತಯಾರಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ರಾಜಾ, ಮಹಾಮಾರಿ ಕೋವಿಡ್ 19 …
Read More »ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ಮಹಾ ಮಳೆಗೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಸಂಭವಿಸಿದ್ದು, ಇದೀಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂಬ ಆಘಾತಕಾರಿ ಮಾಹಿತಿ ನೀಡಿದೆಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆಗಸ್ಟ್ 9 ರಿಂದ 13ರವರೆಗೆ ವರುಣ ಅಬ್ಬರಿಸಲಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, …
Read More »