ಹಾಸನ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚುವರಿಯಾಗಿ ಜಿಲ್ಲಾದಾದ್ಯಂತ ವಸತಿ ನಿಲಯಗಳ 1939 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯನ್ನೇ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಿರುವುದರಿಂದ 400 ಹಾಸಿಗೆಗಳ ಸೌಲಭ್ಯವಿದೆ. ಅದರಲ್ಲಿ 50 ಹಾಸಿಗೆಗಳನ್ನು ಐಸಿಯುಗೆ ಬಳಸಿಕೊಳ್ಳಲಾಗುತ್ತಿದೆ. ಜತೆಗೆ ಏಳು ಖಾಸಗಿ ಆಸ್ಪತ್ರೆಗಳಿಂದ 280 ಹಾಸಿಗೆ ಲಭ್ಯ ಇದೆ. ಈಗಾಗಲೇ ಹಲವು ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಆರಂಭಿಸಿವೆ. ಕಳೆದ ಇಪ್ಪತ್ತು ದಿನಗಳಿಂದ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಕಾರಣ ಪರಿಸ್ಥಿತಿ ನಿಭಾಯಿಸಲು …
Read More »IPL ಆಡಳಿತ ಮಂಡಳಿ ಸಭೆ: ವೇಳಾಪಟ್ಟಿ, ಸರಕಾರದ ಒಪ್ಪಿಗೆ ಸಾಧ್ಯತೆ
ಮುಂಬಯಿ: ಐಪಿಎಲ್ ಆಡಳಿತ ಮಂಡಳಿಯ ಸಭೆ ರವಿವಾರ ನಡೆಯಲಿದೆ. ಸೆ. 19ರಿಂದ ನ. 8ರವರೆಗೆ ಯುಎಇಯಲ್ಲಿ ನಡೆಸಲು ಉದ್ದೇಶಿಸಲಾಗಿರುವ 13ನೇ ಆವೃತ್ತಿ ಐಪಿಎಲ್ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವದ ಪೂರ್ವಭಾವಿ ಸಭೆ. ಇಲ್ಲಿ 8 ಫ್ರಾಂಚೈಸಿಗಳು ಕಾತರದಿಂದ ಕಾಯುತ್ತಿರುವ ಹಲವಾರು ಪ್ರಶ್ನೆಗಳಿಗೆ ಉತ್ತರ ಸಿಗುವ ನಿರೀಕ್ಷೆ ಇದೆ. ಮುಖ್ಯವಾಗಿ ಚೀನದ ಸ್ಪಾನ್ಸರ್‌ಶಿಪ್ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕಿದೆ. ಹಾಗೆಯೇ ಸರಕಾರದ ಒಪ್ಪಿಗೆ ಪಡೆಯಲು ಮುಂದಡಿ ಇಡಬೇಕಿದೆ. ವೇಳಾಪಟ್ಟಿ ಕೂಟದ ದಿನಾಂಕ ಈಗಾಗಲೇ …
Read More »ಸಚಿವೆ ಕಮಲ ರಾಣಿ ವರುಣ್ ನಿಧನ: ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು
ಲಖನೌ: ಸಚಿವೆ ಕಮಲ ರಾಣಿ ವರುಣ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಲುವಾಗಿ ಇಂದು ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ನೀಡಿಲಿದ್ದರು. ಆದರೆ, ಕೊರೋನಾದಿಂದಾಗಿ ಕಮಲ ರಾಣಿ ವರಣ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ಭೇಟಿ ರದ್ದುಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ಕಮಲ ರಾಣಿಯವರು ನಿಧನ …
Read More »ಖಿನ್ನತೆಗೆ ಒಳಗಾಗಿದ್ದ ಸುಶಾಂತ್ ಅರೆಹುಚ್ಚರಂತಾಗಿದ್ದರು, ತಾಯಿಯಂತೆ ರಿಯಾ ಆರೈಕೆ ಮಾಡುತ್ತಿದ್ದರು
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ದ್ವಿವ್ಯಕ್ತಿತ್ವ ಸಮಸ್ಯೆಯಿಂದ ಬಳಲುತ್ತಿದ್ದರು. ತೀವ್ರ ತರದ ಖಿನ್ನತೆಯಿಂದಾಗಿ ಅರೆಹುಚ್ಚನಂತಾಗಿದ್ದರು. ಅವರಿಗೆ ಇಂಥ ಅಟ್ಯಾಕ್ ಆದಾಗಲೆಲ್ಲ ತಾಯಿಯಂತೆ ಅಕ್ಕರೆ ತೋರಿ, ಅವರನ್ನು ಆರೈಕೆ ಮಾಡಿದ್ದು ನಟಿ ರಿಯಾ ಚಕ್ರವರ್ತಿ ಎಂದು ಸುಶಾಂತ್ಗೆ ಮಾನಸಿಕ ಚಿಕಿತ್ಸೆ ಕೊಡುತ್ತಿದ್ದ ಡಾ. ಸುಸಾನ್ ವಾಕರ್ ಹೇಳಿದ್ದಾರೆ. ರಿಯಾ ಚಕ್ರವರ್ತಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದ್ದ. ಅವರನ್ನು ಮೂಲೆಗುಂಪು ಮಾಡಲು ಸಂಚು ರೂಪಿಸಿದಂತೆ ಕಾಣುತ್ತಿದ್ದೆ. ಆದರೆ, ರಿಯಾ ಅವರಿಗೆ ಸುಶಾಂತ್ …
Read More »ಹೊಸ ರಾಷ್ಟ್ರೀಯ ಶಿಕ್ಷಣ ನೀತಿ : ಮಕ್ಕಳಿಗೆ ಬಿಸಿಯೂಟದ ಜೊತೆಗೆ ಉಚಿತ ಬೆಳಗಿನ ಉಪಾಹಾರ
ನವದೆಹಲಿ, -ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೆಳಗಿನ ಉಪಾಹಾರವನ್ನೂ ಉಚಿತವಾಗಿ ನೀಡಲು ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯಲ್ಲಿ ಪ್ರಸ್ತಾಪಿಸಲಾಗಿದೆ. ಶಾಲಾ ಮಕ್ಕಳಿಗೆ ಬೆಳಗ್ಗೆ ಪೌಷ್ಟಿಕಾಂಶವುಳ್ಳ ಉಪಾಹಾರ ನೀಡಬೇಕು. ಇದರಿಂದ ಮಕ್ಕಳ ಭೌತಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗಿ ಇದು ಕಲಿಕೆಗೆ ಸಹಕಾರಿಯಾಗುತ್ತದೆ ಎಂದು ಹೊಸ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ದೇಶದ ವಿವಿಧ ರಾಜ್ಯಗಳ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ …
Read More »ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್
ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ 22 ದೇಶಿ ಮತ್ತು ವಿದೇಶಿ ಕಂಪನಿಗಳು ಭಾರತದಲ್ಲಿ 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳನ್ನು ಉತ್ಪಾದಿಸುವ ಪ್ರಸ್ತಾಪ ಮಾಡಿರುವುದಾಗಿ ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಸ್ಯಾಮ್ಸಂಗ್, ರೈಸಿಂಗ್ ಸ್ಟಾರ್, ಫಾಕ್ಸ್ ಕಾರ್ನ್ ಮೊದಲಾದ ಅಂತಾರಾಷ್ಟ್ರೀಯ …
Read More »ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್
ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್‌ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್‌ಡೌನ್ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ …
Read More »ಕರಾವಳಿಯಲ್ಲಿ ಉತ್ತಮ ಮಳೆ
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …
Read More »ಮಂತ್ರಿಗಿರಿ ಉಳಿಸಿಕೊಳ್ಳಲು ಸಚಿವೆ ಜೊಲ್ಲೆ ಯತ್ನ.? : ರಮೇಶ್ ಜಾರಕಿಹೊಳಿ ಭೇಟಿಯಾದ ಶಶಿಕಲಾ..!
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ನಡುವೆಯೇ ಹಲವು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ರಾಜ್ಯದ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ಕೊಡಲಾಗುತ್ತದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಬಂದಿರುವ ಜೊಲ್ಲೆ ಇಂದು ಜಲಸಂಪನ್ಮೂಲ …
Read More »ಸದ್ಯ 3456 ಸೋಂಕಿತರು…..
ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, …
Read More »