ಮುಂಬೈ: ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ತಿಳಿಯುತ್ತಿದ್ದಂತೆ ಈಗಾಗಲೇ ಎನ್‌ಡಿಆರ್‌ಎಫ್ ತಂಡ ಹಾಗೂ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಬೃಹತ್ ಕಟ್ಟಡ ಕುಸಿತದಿಂದ ಸುತ್ತಮುತ್ತಲಿನ ಪ್ರದೇಶದ ಜನರೂ ಆತಂಕಗೊಂಡಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. 8-10 ಜನ ಸಿಲುಕಿರುವ ಶಂಕೆ ಪ್ರಾಥಮಿಕ ವರದಿಗಳ ಪ್ರಕಾರ, ಸುಮಾರು 8 ರಿಂದ 10 ಮಂದಿ ಅವಶೇಷಗಳ …
Read More »ಬಿಜೆಪಿಯಿಂದ ಇಂದು ಕೆಆರ್‌ಎಸ್‌ಗೆ ಮುತ್ತಿಗೆ – ಪೊಲೀಸರಿಂದ ಭಾರೀ ಬಿಗಿ ಭದ್ರತೆ
ಮಂಡ್ಯ: ಕಾವೇರಿ ಕೊಳ್ಳದಲ್ಲಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ತಮಿಳುನಾಡಿಗೆ ನೀರು ಬಿಡೋ CWMA (ಕಾವೇರಿ ನೀರು ನಿರ್ವಹಣಾ ಮಂಡಳಿ) ಆದೇಶಕ್ಕೆ ಕನ್ನಡಿಗರು ಕೆಂಡಾಮಂಡಲರಾಗಿದ್ದಾರೆ. ಈ ತಾರತಮ್ಯದ ಆದೇಶ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬಿಜೆಪಿ (BJP), ಇವತ್ತು (ಜ.31) ಬೆಳಿಗ್ಗೆ 11 ಗಂಟೆಗೆ ಕೆಆರ್‌ಎಸ್ (KRS) ಜಲಾಶಯಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಇದರಿಂದಾಗಿ ಜಲಾಶಯದ ಬಳಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , …
Read More »ಕಳೆದೆರಡು ತಿಂಗಳಿನಿಂದ ನಿಷೇಧ ಹೇರಿದ್ದ ಮೀನುಗಾರಿಕೆಗೆ ಇಂದಿನಿಂದ ಅವಕಾಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ ಎರಡು ತಿಂಗಳಿನಿಂದ ಹೇರಿದ್ದ ನಿಷೇಧವನ್ನು ಇಂದಿನಿಂದ ತೆರವುಗೊಳಿಸಲಾಗಿದೆ. ಮೀನುಗಾರಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಮೀನುಗಾರರು ತಮ್ಮ ಬೋಟುಗಳಿಗೆ ಪೂಜೆ ಸಲ್ಲಿಸಿ ಸಮುದ್ರಕ್ಕಿಳಿಯಲು ಭರದ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಮತ್ತೆ ಹವಾಮಾನ ವೈಪರೀತ್ಯ ಇದೀಗ ಮೀನುಗಾರರಿಗೆ ಸಂಕಷ್ಟ ತಂದೊಡ್ಡಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆಯಿಂದಾಗಿ ಎರಡು ತಿಂಗಳುಗಳ ಕಾಲ ಮೀನುಗಾರಿಕೆಗೆ ನಿಷೇಧ ಹೇರಲಾಗಿತ್ತು. ಇಂದಿನಿಂದ ನಿಷೇಧ ತೆರವಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮತ್ಸ್ಯ …
Read More »ಅತ್ತೆ-ಮಾವನ ಮನಸ್ಥಿತಿ ಎಂದಿಗೂ ಬದಲಾಗಲ್ಲʼ; ವಿಡಿಯೋ ರೆಕಾರ್ಡ್ ಮಾಡಿ ನೇಣಿಗೆ ಶರಣಾದ ಶಿಕ್ಷಕಿ
ನವದೆಹಲಿ: ಮದುವೆಯಾದ 8 ತಿಂಗಳ ಬಳಿಕ ಸರ್ಕಾರಿ ಶಿಕ್ಷಕಿಯೊಬ್ಬರು ವಿಡಿಯೋ ರೆಕಾರ್ಡ್ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಾಖಂಡದ (ಡೆಹ್ರಾಡೂನ್‌ನಲ್ಲಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ರೆಕಾರ್ಡ್ ಮಾಡಿದ್ದ 90 ಸೆಕೆಂಡ್‌ಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೃಷ್ಟಿ ಕಂಧಾರಿ ಮೃತ ಶಿಕ್ಷಕಿ. ಕಳೆದ ವರ್ಷ ನವೆಂಬರ್‌ನಲ್ಲಿ ಅವರು ಸರ್ಕಾರಿ ಉದ್ಯೋಗಿಯಾಗಿರುವ ಸೌರಭ್ ರಾತುರಿಯನ್ನು ಮದುವೆಯಾಗಿದ್ದರು. ಬಳಿಕ, ಡೆಹ್ರಾಡೂನ್ ಸಮೀಪದ ದೋಯಿವಾಲಾ ಪ್ರದೇಶದಲ್ಲಿ ದಂಪತಿ ವಾಸಿಸುತ್ತಿದ್ದರು. ವರದಕ್ಷಿಣೆ …
Read More »ಧಾರಾಕಾರ ಮಳೆಗೆ ಕುಸಿದು ಬಿದ್ದ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ – ಕಳಪೆ ಕಾಮಗಾರಿ ಆರೋಪ
ಚಿಕ್ಕೋಡಿ: ಧಾರಾಕಾರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಸುಮಾರು 25 ಅಡಿ ಎತ್ತರದ ಹೊಸದಾಗಿ ನಿರ್ಮಿಸಲಾಗಿದ್ದ ಹೆದ್ದಾರಿಯ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮಣ್ಣು ಹೊರಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಗೋಡೆ ನೆನೆದು ಕುಸಿದಿದೆ ಎನ್ನಲಾಗಿದೆ. …
Read More »ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಮತ್ತು ಪ್ರಾಧಿಕಾರಗಳಲ್ಲಿನರಾಜ್ಯದ ಪ್ರಾತಿನಿಧ್ಯ ತೀರಾ ದುರ್ಬಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಕುಡಿಯುವ ನೀರಿಗಷ್ಟೇ ಲಭ್ಯ ನಮ್ಮ …
Read More »ಕೂಡಲೇ ಬರ ಘೋಷಿಸದಿದ್ದರೆ ‘ಚಲೋ ಹೊಲ ಗದ್ದೆ’ ಧರಣಿ ಆರಂಭ – ಅಶೋಕ್ ಎಚ್ಚರಿಕೆ
ಬಳ್ಳಾರಿ: ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ‘ಚಲೋ ಹೊಲ ಗದ್ದೆ’ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲ ಜಿಲ್ಲೆಗಳಲ್ಲಿ ಬರ ಇದ್ದರೂ ರಾಜ್ಯ ಸರ್ಕಾರ (Congress) ಬರ ಘೋಷಣೆ ಮಾಡಿಲ್ಲ. ಕೂಡಲೇ ಬರ ಘೋಷಿಸದಿದ್ದರೆ ನಾವೆಲ್ಲರೂ ರೈತರ ಹೊಲದಲ್ಲಿ ಕುಳಿತು ಧರಣಿ ಮಾಡುತ್ತೇವೆ. …
Read More »ಕಳೆದ ವರ್ಷ ಭೂಕುಸಿತವಾದ ಜಾಗದಲ್ಲೇ ಮತ್ತೆ ಅಪಾಯದ ಭೀತಿ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಭೂಕುಸಿತದ ಆತಂಕ ಮತ್ತೆ ಹೆಚ್ಚಾಗಿದೆ. ಕಳೆದ ವರ್ಷ ಭೂಕುಸಿತ ಸಂಭವಿಸಿದ್ದ ಸ್ಥಳದಲ್ಲೇ ಇದೀಗ ಮತ್ತೆ ಭೂಮಿ ಕುಸಿದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮಡಿಕೇರಿ ಸಮೀಪದ ಮಂಗಳದೇವಿ ನಗರದ ಖಾಸಗಿ ಜಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ, ಇದೇ ಸ್ಥಳದಲ್ಲಿ ಕಳೆದ ವರ್ಷವೂ ಭೂಕುಸಿತ ಉಂಟಾಗಿತ್ತು. ಇದೀಗ ನಿರಂತರ ಮಳೆಯಿಂದ ಮತ್ತೊಮ್ಮೆ ಭೂಮಿ ಕುಸಿದಿರುವುದು ಸ್ಥಳೀಯರನ್ನು …
Read More »ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವು
ಧಾರವಾಡ: ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದ ಯೋಧ ವಸಂತರೆಡ್ಡಿ ಕೆಂಚರೆಡ್ಡಿನವರ್ (45) ಮೃತ ಯೋಧ. 18ನೇ ಇನ್ಫಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತರೆಡ್ಡಿ ಅವರು ಸದ್ಯ ರಾಜಸ್ಥಾನದ ಬಾಡಮೆರ್‌ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 24 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತರೆಡ್ಡಿ ಅವರಿಗೆ ಬುಧವಾರ ಏಕಾಏಕಿ ಹೃದಯಾಘಾತವಾಗಿದೆ. ವೀರ ಯೋಧನ ಪಾರ್ಥಿವ ಶರೀರವು ಗುರುವಾರ ಸಂಜೆ 6 …
Read More »ಮದುವೆಯಾದ 3 ತಿಂಗಳಿಗೆ ಪತ್ನಿ ಕೊಂದು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ
ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆಗೆ ಬೀಗ ಹಾಕಿ ಪರಾರಿಯಾದ ಘಟನೆ ಬೆಂಗಳೂರಿನ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಬಿಹಾರ ಮೂಲದ ರಿಯಾ ಕುಮಾರಿ ಮೃತ ಮಹಿಳೆ. ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಈ ದಂಪತಿ ಬಿಹಾರದಿಂದ ಬೆಂಗಳೂರಿಗೆ ಬಂದು ಗೇರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ರಿಯಾ …
Read More »
Laxmi News 24×7