ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್‍ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್‍ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು …
Read More »ಸುವರ್ಣ ವಿಧಾನಸೌಧದ ಎದುರು ಅನ್ನದಾತರ ಪ್ರತಿಭಟನೆ
ಬೆಳಗಾವಿ : ಕೃಷಿ ಮಸೂದೆ ತಿದ್ದುಪಡಿ ಖಂಡಿಸಿ ದೆಹಲಿ, ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ, ಗುರುವಾರ ಸುವರ್ಣ ವಿಧಾನಸೌಧದ ಎದುರು ಅನ್ನದಾತರು ಪ್ರತಿಭಟನೆ ನಡೆಸಿದರು. ಕೃಷಿ ಮಸೂದೆ ತಿದ್ದುಪಡಿ ವಾಪಸ್ ಪಡೆಯುವಂತೆ ರೈತರು ಹೋರಾಟ ನಡೆಸುತ್ತಿದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಸ್ಪಂಧಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದರು. ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಧರಣಿ ಕುಳಿತು, ಪ್ರತಿಭಟನೆ ನಡೆಸಿದರು. ‘ ಕೇಂದ್ರ ಸರ್ಕಾರ ರೈತರ ಬಾಳಲ್ಲಿ …
Read More »ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.ಹೌದು. ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ. ಈ ಮೂಲಕ ಭಕ್ತರನ್ನು ಸೆಳೆಯುತ್ತಿದೆ. ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ …
Read More »ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನವದೆಹಲಿ: ದಾಂಡೇಲಿ ಅರಣ್ಯದ ಮೂಲಕ ಹಾದು ಹೋಗುವ ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನವೆಂಬರ್ 2019ರಲ್ಲಿ ಕಾಮಗಾರಿಗೆ ತಡೆ ಪರಿಸರವಾದಿ ಹಾಗೂ ನಿರ್ದೇಶಕ ಸುರೇಶ್ ಹೆಬ್ಳಿಕರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದ …
Read More »ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ.
ಮುಂಬೈ: ಲಾಕ್‍ಡೌನ್ ವೇಳೆ ವಲಸೆ ಕಾರ್ಮಿಕರಿಗೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ನೆರವಾಗಿದ್ದರು. ಈ ಕುರಿತು ಸಾಕಷ್ಟು ಮೆಚ್ಚುಗೆ ಸಹ ವ್ಯಕ್ತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ. ಮುಂಬೈನ ವಿವಿಧ ಪ್ರದೇಶಗಳಲ್ಲಿರುವ 8 ಆಸ್ತಿಗಳನ್ನು ಸೋನು ಸೂದ್ ಅಡವಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು …
Read More »ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ
ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ …
Read More »ಬಾಳು ಕೊಡುತ್ತೇನೆಂದು ನಂಬಿಸಿ ಮೋಸ
ಚಾಮರಾಜನಗರ: ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ಸಂಸಾರದ ನೌಕೆ ಹೊತ್ತ ಯುವತಿ, ಮದುವೆಯಾದ 5 ವರ್ಷದಲ್ಲೇ ಗಂಡನಿಂದ ದೂರವಾಗಿ ತವರು ಮನೆ ಸೇರಿ ಹೆಣ್ಣು ಮಗುವಿನೊಂದಿಗೆ ಜೀವನ ನಡೆಸುತ್ತಿದ್ದಳು. ಹೀಗಿರುವಾಗಲೇ ಯುವಕನೊಬ್ಬ ಜೀವನ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದು, ಯುವತಿ ಕಣ್ಣಿರಿನಲ್ಲಿ ಕೈ ತೊಳೆಯುತ್ತಿದ್ದಾಳೆ.ಚಾಮರಾಜನಗರ ತಾಲೂಕಿನ ಹರದನಹಳ್ಳಿಯ ಅಮಚವಾಡಿ ಗ್ರಾಮದ ಪುಷ್ಪಾ, 14ನೇ ವಯಸ್ಸಿನಲ್ಲಿ ತನ್ನ ತಾಯಿ ಕಳೆದುಕೊಂಡು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದಳು. ಅಷ್ಟರಲ್ಲಾಗಲೇ ಪುಷ್ಪಾಳ ತಂದೆ ತಾಯಿ ಇಲ್ಲದವಳನ್ನು ಯಾರೂ …
Read More »ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೈತರ ಜೊತೆಗೆ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸಿಬ್ಬಂದಿಯೂ ಪ್ರತಿಭಟನೆ ನಡೆಸ್ತಿದ್ದಾರೆ. 10 ಸಾವಿರಕ್ಕೂ ಅಧಿಕ ಸಿಬ್ಬಂದಿ ರೈತರ ಜೊತೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಣೆ ಮಾಡ್ಬೇಕು, ಸಿಬ್ಬಂದಿ ಮೃತಪಟ್ಟರೆ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಸಾರಿಗೆ ಸಿಬ್ಬಂದಿಯ ಪ್ರತಿಭಟನೆಯಿಂದ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಬಸ್‍ಗಳ ಓಡಾಟದಲ್ಲಿ ವ್ಯತ್ಯಯ …
Read More »ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಹಾಸನ: ಸಾಲದ ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಭವಿತ್, ತೇಜಸ್, ಪುನೀತ, ನವೀನ್ ಮತ್ತು ವಿವೇಕ್ ಬಂಧಿತ ಆರೋಪಿಗಳು. ಡಿಸೆಂಬರ್ 5 ರಂದು ರಾತ್ರಿ ರಂಗೋಲಿಹಳ್ಳದ ಬಳಿ ರಘು ಎಂಬಾತನನ್ನು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಹತ್ಯೆ ಮಾಡಿದ್ದರು. ಆರೋಪಿಗಳೆಲ್ಲರೂ ಕೊಲೆಯಾದವನ ಸ್ನೇಹಿತರಾಗಿದ್ದರು. ಹತ್ಯೆಯಾದ ರಘು ತೇಜಸ್ ಎಂಬಾತನಿಂದ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಸಾಲದ ಹಣ ಹಿಂದಿರುಗಿಸಲು ರಘು ನಿರಾಕರಿಸಿದ್ದ. ಈ ವಿಚಾರವಾಗಿ ರಘು, …
Read More »ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಕಾರವಾರ: ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡಾ ಗ್ರಾಮದ ಒಕ್ಕಲಕೇರಿಯಲ್ಲಿ ನಡೆದಿದೆ.ನಾಗರತ್ನಾ ಗೌಡ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಉಳವರೆಯ ಬೊಳಕುಂಟೆ ಗ್ರಾಮದ ನಾಗರತ್ನಾ ಹಾರವಾಡದ ತನ್ನ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಕಲಿಕೆಯಲ್ಲೂ ಮುಂದಿದ್ದ ನಾಗರತ್ನಾ ನರ್ಸಿಂಗ್ ಮಾಡುತ್ತಿದ್ದಳು. ಸೋಮವಾರ ನರ್ಸಿಂಗ್ ಕೋರ್ಸ್ ಪರೀಕ್ಷೆ ಬರೆದು ಬಂದಿದ್ದ ಯುವತಿ ಮಂಗಳವಾರ ಪರೀಕ್ಷೆಗೆ ತೆರಳುವ ಮುನ್ನವೇ ಮನೆಯಲ್ಲಿ ಯಾರು ಇಲ್ಲದ್ದನ್ನು …
Read More »
Laxmi News 24×7