Breaking News
Home / Uncategorized (page 81)

Uncategorized

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ ಬೆಂಗಳೂರು ಮೇ 9: ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ಶಾಲೆಗಳ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ವೆಬ್‌ಸೈಟ್‌ಗಳಲ್ಲೂ ಫಲಿತಾಂಶ ಲಭ್ಯವಿರಲಿದೆ. 2023-2024 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಈ ಬಾರಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು …

Read More »

SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ಕಾಗವಾಡ ತಾಲೂಕಿನ ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’

ಬೆಳಗಾವಿ: ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸುವ ಮೂಲಕ ರೈತನ ಮಗನೊಬ್ಬ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು 625 ಅಂಕಗಳಿಗೆ 624 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಅಂದಹಾಗೇ ಬೆಳಗಾವಿ ಜಿಲ್ಲೆಯ ಕಾಗವಾಡ …

Read More »

ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು‌ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ

ಗೋಕಾಕ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು‌ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು ಈ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೊಹಿತೆ, ರಾಜೇಂದ್ರ ಸಣ್ಣಕ್ಕಿ, ಯುವ ನಾಯಕ ರಾಹುಲ‌ ಜಾರಕಿಹೊಳಿ ಸೇರಿ ಪ್ರಮುಖರು ಉಪಸ್ಥಿತರಿದ್ದರು. #SatishJarkiholi

Read More »

ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯಾಗಿದ್ದು, ಮೇ 11ರ ವರೆಗೂ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಚಿಕ್ಕಮಗಳೂರು ಸಹಿತ ವಿವಿಧ ಜಿಲ್ಲೆಗಳಲ್ಲಿ ಹಲವು ತಿಂಗಳುಗಳ ಬಳಿಕ ಮಳೆ ಸುರಿದಿದೆ. ಮೇ 8ರಿಂದ 11ರ ವರೆಗೆ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆ ಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ …

Read More »

ಬೆಳಗ್ಗೆ 10.30ಕ್ಕೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಬೆಂಗಳೂರು: ಎಸ್ ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶ  ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ karresults.nic.in ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.‌ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ …

Read More »

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ ಹುಬ್ಬಳ್ಳಿ: ‘2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್ ಮಾಡುತ್ತೇವೆ. ಯುಪಿಎ ಆಡಳಿದಲ್ಲಿ ದೇಶದಲ್ಲಿ ಕಲ್ಲಿದ್ದಲು ಕೊರತೆ ಇತ್ತು.ಇದೀಗ ಕಲ್ಲಿದ್ದಲು ಹೆಚ್ಚುವರಿ ಉತ್ಪಾದನೆಯಾಗಿದೆ.ರಾಜ್ಯಕ್ಕೆ ಬೇಡಿಕೆಗಿಂತ ಹೆಚ್ಚಿನ ಕಲ್ಲಿದ್ದಲು ನೀಡಿದ್ದೇವೆ. ರಾಜ್ಯದಿಂದ 900 ಕೋಟಿ ರೂ. ಬಾಕಿ ಬರಬೇಕಾಗಿದ್ದು, ರಾಜ್ಯ ಸರ್ಕಾರ ಪಾಪರ್ ಆಗಿದ್ದರಿಂದ ಇದುವರೆಗೂ ಬಾಕಿ ನೀಡಿಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬುಧವಾರ ಹೇಳಿದ್ದಾರೆ. ಬುಧವಾರ …

Read More »

ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

ಶಿರಸಿ: ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ. ತಾಲೂಕಿನ ಕೆಂಗ್ರೆಹೊಳೆ ಬಳಿ ನೀರಿನ ಮಟ್ಟ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ. ಜೇನು ದಾಳಿಯಿಂದ ಮೂವರೂ ಗಾಯಗೊಂಡಿದ್ದು, ತತ್ ಕ್ಷಣ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

Read More »

ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್: ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಾಚುಪಲ್ಲಿ ಪ್ರದೇಶದಲ್ಲಿ ನಡೆದಿದೆ. ಮೃತರು ಒಡಿಶಾ ಮತ್ತು ಛತ್ತೀಸ್‌ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದು, ಮಂಗಳವಾರ(ಮೇ.7 ರಂದು) ಸಂಜೆ ಈ ಘಟನೆ ನಡೆದಿದೆ ಎಂದು ಬಾಚುಪಲ್ಲಿ ಪೊಲೀಸರು ತಿಳಿಸಿದ್ದಾರೆ. ಮೃತ ದೇಹಗಳನ್ನು ಅವಶೇಷಗಳಡಿಯಿಂದ ಬುಧವಾರ ಮುಂಜಾನೆ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ತೆಲಂಗಾಣದ ಹಲವೆಡೆ ಭಾರೀ ಮಳೆ ಸುರಿದಿದ್ದು, …

Read More »

ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ,

ಶಿವಮೊಗ್ಗ: ಹಾಡಹಗಲೇ ಇಬ್ಬರು ರೌಡಿಶೀಟರ್ ಗಳನ್ನು ನಡುರಸ್ತೆಯಲ್ಲಿ ಹತ್ಯೆಗೈದ ಭಯಾನಕ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಬುಧವಾರ ನಡೆದಿದೆ. ಹತ್ಯೆಯಾದವರನ್ನು ತುಂಗಾನಗರದ ಸೊಹೈಲ್ (35) ಮತ್ತು ದೊಡ್ಡಪೇಟೆ ಮೊಹಮ್ಮದ್ ಗೌಸ್(30) ಎಂದು ಹೇಳಲಾಗಿದೆ. ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ದಾಳಿ ಮಾಡಲು ಬಂದ ತಂಡ ಯಾಸೀನ್ ಗೆ ಚಾಕುವಿನಿಂದ ಇರಿದಿದೆ ಇದಕ್ಕೆ ಪ್ರತಿದಾಳಿ ಮಾಡಿರುವ ಯಾಸೀನ್ ಕುರೇಶಿ ಗ್ಯಾಂಗ್ ದಾಳಿಗೆ ಬಂದಿದ್ದ ಇಬ್ಬರು ರೌಡಿಶೀಟರ್ ಗಾಲ ಮೇಲೆ …

Read More »

ಪ್ರಜ್ವಲ್‌ ಪರವಾಗಿ ಮಾತನಾಡುವುದಿಲ್ಲ,ರೇವಣ್ಣ ಪರ ಮಾತ್ರ ಹೋರಾಟ: H.D.K.

ಬೆಂಗಳೂರು: ನಾನು ಪ್ರಜ್ವಲ್‌ ಪರವಾಗಿ ಮಾತನಾಡುವುದಿಲ್ಲ. ಸತ್ಯಾ ಸತ್ಯತೆ ಹೊರಬರಲಿ. ಆದರೆ ರೇವಣ್ಣ ವಿಷಯದಲ್ಲಿ ಸರಕಾರ ಹೇಗೆ ನಡೆದುಕೊಳ್ಳುತ್ತಿದೆ. ಅಧಿಕಾರ ದುರ್ಬಳಕೆ ಆಗುತ್ತಿದೆ ಎಂಬುದು ಗೊತ್ತಿದೆ. ಹೀಗಾಗಿ ರೇವಣ್ಣ ಪರವಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಕ್ತ ಸಂಬಂಧಿ, ಸಹೋದರ ಎನ್ನುವ ಕಾರಣಕ್ಕೆ ರೇವಣ್ಣ ಪರವಾಗಿ ಹೋರಾಟ ಮಾಡುವುದಿಲ್ಲ. ಒಕ್ಕಲಿಗ ನಾಯಕನಾಗಿಯೂ ಹೋರಾಡುವುದಿಲ್ಲ. ಯಾವ ಒಕ್ಕಲಿಗ …

Read More »