ಕೊಪ್ಪಳ: ಜಿಲ್ಲೆಯಲ್ಲಿ ಕೊರೋನಾ ಹೆಮ್ಮಾರಿಯ ಅಟ್ಟಹಾಸ ನಿಲ್ಲುತ್ತಿಲ್ಲವಾದರೂ ಈಗಾಗಲೇ 248 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರದವರೆಗೂ 431 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಕೇವಲ 9 ಜನರು ಸಾವನ್ನಪ್ಪಿದ್ದು, ಉಳಿದವರ ಪೈಕಿ 248 ಜನರು ಗುಣಮುಖವಾಗಿದ್ದಾರೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದಿಲ್ಲೊಂದು ಕಾಯಿಲೆ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದಲೇ ಯಾರು ಸತ್ತಿಲ್ಲ. ಬೇರೆ ನಾನಾ ಕಾಯಿಲೆ ಇರುವವರಿಗೂ ಸೋಂಕು ಬಂದಿದೆ. ಅಂಥವರು ಮೃತಪಟ್ಟಿದ್ದಾರೆಯೇ ವಿನಃ ಇದುವರೆಗೂ …
Read More »ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ವೇಗ ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು,
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ವೇಗ ಅಪಾಯಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಗುರುವಾರದವರೆಗೆ ವರದಿಯಾಗಿರುವ 51,422 ಪ್ರಕರಣಗಳ ಪೈಕಿ ಶೇ.67.82 ಮಂದಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ಇದು ರಾಜ್ಯದಲ್ಲಿ ಕೊರೋನಾ ಸಮುದಾಯದ ಮಟ್ಟಕ್ಕೆ ಮುಟ್ಟಿದೆಯೇ ಎಂಬ ಅಪಾಯಕಾರಿ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ, ‘ರಾಜ್ಯದಲ್ಲಿ ಸೋಂಕು ಹಬ್ಬುತ್ತಿರುವ ಪ್ರಮಾಣದಿಂದಾಗಿ ಸೋಂಕಿನ ಮೂಲ ಹಾಗೂ ಸಂಪರ್ಕಗಳ ಪತ್ತೆಯೇ ಸಾಧ್ಯವಾಗುತ್ತಿಲ್ಲ’ ಎಂದು ಸ್ವತಃ ಆರೋಗ್ಯ ಇಲಾಖೆ ಅಧಿಕಾರಿಗಳೇ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಹೀಗಿದ್ದರೂ ರಾಜ್ಯ ಸರ್ಕಾರ …
Read More »ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಂಕು ತಗುಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅಭಿಷೇಕ್ ಪತ್ನಿ ಐಶ್ವರ್ಯಾ ರೈ ಮತ್ತು ಆರಾಧ್ಯ ಅವರಿಗೆ ಜ್ವರ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಕೂಡ ಶುಕ್ರವಾರ ರಾತ್ರಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಚ್ಚನ್ ಕುಟುಂಬದ ನಾಲ್ವರು ಸದಸ್ಯರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ …
Read More »ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು …
Read More »ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.
ನವದೆಹಲಿ, ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್ಡೌನ್ ಘೋಷಿಸಲಾಗಿತ್ತು. …
Read More »ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ ಮಗ
ಮಂಗಳೂರು: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿಗೆ ಅವರ ಮಗ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಕಂಠಪೂರ್ತಿ ಕುಡಿದು ಮಲಗಿದಲ್ಲೇ ಮಲಗಿರುವ ಅಪ್ಪಿ ಶೆಟ್ಟಿಯವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಎತ್ತಿ ಬಿಸಾಡಿದ್ದಾರೆ.ಈ ದೃಶ್ಯವನ್ನು ಅಲ್ಲೇ ಇದ್ದ ಇನ್ನೋರ್ವ ಮೊಮ್ಮಗ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. …
Read More »ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗು ಸಂಪೂರ್ಣ ಲಾಕ್ಡೌನ್
ಮಡಿಕೇರಿ: ಇಂದು ಸಂಜೆಯಿಂದ ಸೋಮವಾರದ ಬೆಳಗ್ಗೆವರೆಗೆ ಕೊಡಗಿನಲ್ಲಿ ಸಂಪೂರ್ಣವಾಗಿ ಲಾಕ್ಡೌನ್ ಮಾಡುವುದಾಗಿ ಕೊಡಗಿನ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ. ಜಿಲ್ಲೆಗೆ ವಾರಾಂತ್ಯದಲ್ಲಿ ಹೊರಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಸೇರಿದಂತೆ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಸಂಜೆಯಿಂದ ಸೋಮವಾರದವರೆಗೆ ಜಿಲ್ಲಾ ಮಟ್ಟದಲ್ಲಿ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ. ತರಕಾರಿ, ಮೆಡಿಕಲ್ ಶಾಪ್ಗಳು, ಪೆಟ್ರೋಲ್ ಬಂಕ್ಗಳು ಸೇರಿದಂತೆ ಕಾರ್ಮಿಕರ ಅನುಕೂಲ …
Read More »