ಬೆಂಗಳೂರು, :- ಅಬಕಾರಿ ಇಲಾಖೆಯಲ್ಲಿ ನಿಯಮ ಬಾಹಿರವಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ-68ರನ್ವಯ ಜ್ಯೇಷ್ಠತೆಯಲ್ಲಿ ಹಿರಿಯರನ್ನು ಕಡೆಗಣಿಸಿ ಕಿರಿಯ ಅಬಕಾರಿ ಅಧೀಕ್ಷಕರಿಗೆ ಅಬಕಾರಿ ಉಪ ಆಯುಕ್ತರ ಹುದ್ದೆಗೆ ಹೆಚ್ಚುವರಿ ಪ್ರಭಾರಿ ಹುದ್ದೆಗಳನ್ನು ಈ ಹಿಂದೆ ನೀಡಲಾಗಿದೆ. ಶಿವಮೊಗ್ಗ ಮತ್ತು ಗದಗ ಜಿಲ್ಲೆಗಳಲ್ಲಿ ಈಗಾಗಲೇ ಉಪ ಆಯುಕ್ತರು ಹಾಗೂ ಹಿರಿಯ ಅಧೀಕ್ಷಕರು ಇದ್ದರೂ ಕೂಡ ಅತ್ಯಂತ ಕಿರಿಯ ಅಬಕಾರಿ ಅಧೀಕ್ಷಕರಾಗಿದ್ದ ಮೋತಿಲಾಲ್ ಮತ್ತು ಅಜಿತ್ರನ್ನು ಈಗಾಗಲೇ ಹೆಚ್ಚುವರಿ ಪ್ರಭಾರಿಯಾಗಿ ಉಪ …
Read More »ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಲಕ್ನೋ: ಕೊರೊನಾ ಸೋಂಕಿತ ರೋಗಿಗಳನ್ನು ಮಹಾಮಾರಿಯಿಂದ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಅಲಿಘಡದಲ್ಲಿ ಈ ನೀಚ ಕೃತ್ಯ ಜರುಗಿದೆ. 28 ವರ್ಷದ ಕೊರೊನಾ ಸೋಂಕಿತೆ ಮೇಲೆ ಆಫ್ ಡ್ಯೂಟಿ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸೋಂಕಿತೆ ಮೇಲೆ ಆಸ್ಪತ್ರೆಯಲ್ಲಿಯೇ ಎರಡು ಬಾರಿ ವೈದ್ಯ ಈ ಹೀನಾಯ ಕೃತ್ಯವೆಸೆಗಿದ್ದಾನೆ ಕೊರೊನಾ ಸೋಂಕು ತಗುಲಿ ಮಹಿಳೆ …
Read More »ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ
ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …
Read More »ಬೆಳಗಾವಿ ಯಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆ..
ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಶಾಕಿಂಗ್ ಸುದ್ಧಿ ಹೊರಬಿದ್ದಿದೆ ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಬರೊಬ್ಬರಿ 219 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಡಬಲ್ ಸಂಚ್ಯುರಿ ಬಾರಿಸಿ 1315 ಕ್ಕೆ ಏರಿಕೆಯಾಗಿದೆ ಬೆಳಗಾವಿ ಜಿಲ್ಲೆಯ 859 ಜನರಲ್ಲಿ ಸೊಂಕು ಸಕ್ರೀಯವಾಗಿದೆ.
Read More »ಬೆಳಗಾವಿ: ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದೆ.
ಬೆಳಗಾವಿ: ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದೆ. ದಕ್ಷಿಣ ಮತಕ್ಷೇತ್ರ ಶಾಸಕ ಅಭಯ ಪಾಟೀಲ್ ಅವರು ಮತ್ತೊಂದು ಉಪ ನೋಂದಣಿ ಆರಂಭಿಸುವಂತೆ ಸಿಎಂ, ಕಂದಾಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಸರ್ಕಾರ ನೂತನ ಉಪ ನೋಂದಣಿ ಕಚೇರಿ ಪ್ರಾರಂಭಿಸಲು ಅನುಮತಿ ನೀಡಿದೆ. ಶೀಘ್ರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಕಚೇರಿ ಆರಂಭಿಸಲಾಗುವುದು ಎಂದು ಶಾಸಕ ಅಭಯ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯಲ್ಲಿ ಬೆಳಗಾವಿ ತಾಲೂಕು ದೊಡ್ಡದಾಗಿದೆ. ಪ್ರಸ್ತುತ ಡಿಸಿ ಕಚೇರಿ …
Read More »ಕೋವಿಡ್ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …
Read More »ವಿದೇಶಗಳಿಂದ ದೆಹಲಿಗೆ ಬರುವವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಕಡ್ಡಾಯ ..
ನವದೆಹಲಿ,ಜು.22- ಕೊರೊನಾ ಸೋಂಕು ಹರಡುವಿಕೆ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಗಾಗಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಗಾಗಬೇಕು. ಈ ಸಾಂಸ್ಥಿಕ ಕ್ವಾರೆಂಟೈನ್ ವೆಚ್ಚವನ್ನು ಆ ವ್ಯಕ್ತಿಗಳೇ ಪಾವತಿಸಬೇಕಿದೆ. ಏಳು ದಿನಗಳ ಮಟ್ಟಿಗೆ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ …
Read More »ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ
ಶಿವಮೊಗ್ಗ: ಮಾಧ್ಯಮಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿನ ಅನೇಕ ಟಿವಿ ಚಾನಲ್ ನೋಡಿದರೆ, ಏನು ಪ್ರಪಂಚದಲ್ಲಿ ಇನ್ನೂ ಯಾರೂ ಬದುಕುವುದಿಲ್ಲವೇನೋ ಅನ್ನುವ ರೀತಿ ಹೈಲೈಟ್ ಮಾಡುತ್ತಿದ್ದಾರೆ. ಕೆಲವು ಶವ ಹೊತ್ತುಕೊಂಡು ಹೋಗುತ್ತಿರುವಂತಹ ರೂಪ ತೋರಿಸೋದನ್ನು ನೋಡಿದರೆ, ಯಾರೂ ಕೂಡ ಮೃತದೇಹಗಳಿಗೆ ಇಡೀ ರಾಜ್ಯದಲ್ಲಿ ಮಾಡುತ್ತಿರುವ ವ್ಯವಸ್ಥೆ ಅನಾಗರೀಕ ವ್ಯವಸ್ಥೆ ಎನ್ನುವ ಭಾವನೆ ತರುತ್ತಿದ್ದಾರೆ ಎಂದು ಮಾಧ್ಯಮಗಳ …
Read More »ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರುದ್ಧ ಹೋರಾಟ, ರೈತ ಸಂಘಟನೆಗಳ ಜೊತೆ ಸಮಾಲೋಚನೆ
ಬೆಂಗಳೂರು, ಜು.22- ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಸಂಘಟಿಸಲು ಮುಂದಾಗಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೊದಲ ಹಂತವಾಗಿ ಇಂದು ರೈತ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಭೂ ಸುಧಾರಣಾ ಕಾಯ್ದೆ 1971ರ ಸೆಕ್ಷನ್ 63, 79 ಎ, ಬಿ, ಸಿ ಮತ್ತು 80ನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಕೃಷಿಯೇತರ ಆದಾಯ ಇರುವವರು ಎಲ್ಲಿ, ಯಾವ ಭೂಮಿಯನ್ನಾದರೂ ಖರೀದಿಸಬಹುದು ಎಂದು ಕಾನೂನು …
Read More »ಲಾಕ್ಡೌನ್ ಮುಗಿದಿದ್ದೆ ತಡ ರೈಲ್ವೆ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತ ಜನ…
ಬೆಂಗಳೂರು: ಒಂದು ವಾರದ ಲಾಕ್ಡೌನ್ ಅಂತ್ಯವಾಗಿದ್ದೆ ತಡ ಬೆಂಗಳೂರಿನಲ್ಲಿ ವಾಸವಿದ್ದ ಬೇರೆ ಬೇರೆ ರಾಜ್ಯದವರು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಕಡೆ ಮುಖ ಮಾಡಿದ್ದಾರೆ. ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾತ್ರ ಲಾಕ್ಡೌನ್ ಮಾಡಲಾಗಿತ್ತು. ರೈಲು ಮತ್ತು ವಿಮಾನ ಓಡಾಟವನ್ನು ನಿಲ್ಲಿಸಿರಲಿಲ್ಲ. ಆದರೆ ರೈಲ್ವೆ ನಿಲ್ದಾಣಕ್ಕೆ ಹೋಗಲು ಯಾವುದೇ ಬಸ್, ಆಟೋ, ಕ್ಯಾಬ್ ವ್ಯವಸ್ಥೆ ಇರಲಿಲ್ಲ. ಹೀಗಾಗಿ ಬೇರೆ ಬೇರೆ ರಾಜ್ಯದ ಕಾರ್ಮಿಕರು ಒಂದು ವಾರ …
Read More »