ವಿಜಯಪುರ(ದೇವನಹಳ್ಳಿ): ಪಟ್ಟಣದ ಕೆನರಾ ಬ್ಯಾಂಕ್‌ನ ಮುಂಭಾಗದ ರಸ್ತೆ, ಹಳೆ ಕೆನರಾ ಬ್ಯಾಂಕ್ ರಸ್ತೆ, ವೆಂಕಟರಮಣಸ್ವಾಮಿ ದೇವಾಲಯದ ರಸ್ತೆಗಳಲ್ಲಿ ಅಧಿಕವಾಗಿ ವಾಹನಗಳ ಸಂಚಾರವಿದೆ. ಇದೇ ರಸ್ತೆಗಳಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವುದರಿಂದ ಬೇರೆ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿನಿತ್ಯ ಈ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುತ್ತದೆ. ಕೆನರಾ ಬ್ಯಾಂಕ್ ಎದುರಿನಲ್ಲಿ ಮತ್ತು ಹಿಂಭಾಗದಲ್ಲಿ ರೇಷ್ಮೆಗೂಡು ಮಾರುಕಟ್ಟೆ ಗೋಡನ್‌ಗಳಿವೆ. ಪಕ್ಕದಲ್ಲಿ ಅಂಚೆ ಕಚೇರಿಯಿದೆ. ರೇಷ್ಮೆಗೂಡು ಖರೀದಿ ಮಾಡುವುದಕ್ಕೆ ಬರುವ …
Read More »ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
ಕುಂದಾಪುರ/ದಾವಣಗೆರೆ: ಕೇರಳ ಹೊರತುಪಡಿಸಿ ದೇಶದಲ್ಲೇ ಅತೀ ಹೆಚ್ಚು ತೆಂಗಿನಕಾಯಿ ಬೆಳೆಯುವ ಕರ್ನಾಟಕ ದಲ್ಲೂ ಈ ಬಾರಿ ಇಳುವರಿ ಕೊರತೆಯಿದ್ದು, ದಿನೇದಿನೆ ಬೆಲೆ ಏರಿಕೆಯಾಗುತ್ತಿದೆ. ಇದೇ ಮೊದಲ ಬಾರಿಗೆ ತೆಂಗಿನಕಾಯಿ ಬೆಲೆ 60 ರೂ. ಗಡಿ ದಾಟಿದೆ. ಇದು ತೆಂಗಿನ ಕಾಯಿ ಮಾರುಕಟ್ಟೆಯ ಸಾರ್ವ ಕಾಲಿಕ ಗರಿಷ್ಠ ಧಾರಣೆ ಯಾಗಿದೆ. ರೈತರಿಂದಲೇ ಉತ್ತಮ ಗುಣ ಮಟ್ಟದ ಕಾಯಿಗಳನ್ನು 50-52 ರೂ. ದರದಲ್ಲಿ ವ್ಯಾಪಾರಿಗಳು ಖರೀದಿಸುತ್ತಿದ್ದು, ಅಂಗಡಿಗಳಲ್ಲಿ 58-60 ರೂ.ಗೆ ಮಾರುತ್ತಿದ್ದಾರೆ. ಮಂಗಳೂರು …
Read More »ಸಚಿವ ಮುನಿಯಪ್ಪಗು ‘ಸಿಎಂ’ ಸ್ಥಾನ ಸಿಗಲಿ : ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹ
ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, ಆಗಲೇ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ, ಗೃಹ ಸಚಿವ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತು. ಇದೀಗ ಸಚಿವ ಕೆ ಹೆಚ್ ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ …
Read More »ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ ಬೆನ್ನಲ್ಲೇ ಈಗ ಎಐ ಚಾಟ್‌ಬಾಟ್ ಒಂದು ಮನುಷ್ಯನಿಗೇ “ನೀನು ಸತ್ತು ಹೋಗು’ ಎಂದಿದೆ! ಹೌದು, ಅಮೆರಿಕದ ಮಿಚಿಗನ್‌ನಲ್ಲಿನ ಭಾರತೀಯ ವಿದ್ಯಾರ್ಥಿ ವಿಧಯ್ ರೆಡ್ಡಿ ತಮ್ಮ ಪಠ್ಯದ ಒಂದು ಸಮಸ್ಯೆಗೆ ಚಾಟ್‌ಬಾಟ್ ಗೂಗಲ್ ಜೆಮಿನಿ ಬಳಿ ಪರಿಹಾರ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿದ ಜೆಮಿನಿ, “ಮನುಷ್ಯ, ನೀನು ಮುಖ್ಯವೂ ಅಲ್ಲ, ವಿಶೇಷವೂ ಅಲ್ಲ. ನಿನ್ನಿಂದ ಸಮಯ, …
Read More »ಸರ್ಕಾರಕ್ಕೆ ಗ್ಯಾರಂಟಿಗಳು ಹೊರೆಯಾಗಿಲ್ಲ
ಬೆಂಗಳೂರು, ನವೆಂವರ್ 18: ರಾಜ್ಯದ ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮೇಲೆ ಹೊರೆಯಾಗಿಲ್ಲ ಎಂಬ ಅಚ್ಚರಿಯ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ, ಬದಲಿಗೆ ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಬರಿದಾಗಿ ರಾಜ್ಯವು ಸಾಲದ ದವಡೆಗೆ ಸಿಲುಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು …
Read More »ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ (Daali Dhananjay) ವಿವಾಹ ಸಂಭ್ರಮದ ಶಾಸ್ತ್ರಗಳು ಆರಂಭಗೊಂಡಿದೆ. ವೈದ್ಯೆ ಧನ್ಯತಾ (Dhanyata) ಜತೆ ನಿಶ್ಚಿತಾರ್ಥ ಕಾರ್ಯಕ್ರಮ ಭಾನುವಾರ (ನ.17ರಂದು) ನೆರವೇರಿದೆ. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ. ಧನ್ಯತಾ ಅವರಿಗೆ ಉಂಗುರ ತೊಡಿಸಿದ್ದಾರೆ. ಈ ವೇಳೆ ಎರಡೂ ಕುಟುಂಬದ ಆಪ್ತರು ಉಪಸ್ಥಿತಿಯಲ್ಲಿದ್ದರು. ಲಗ್ನ ಪತ್ರಿಕೆ ಬರೆಸುವ ಶಾಸ್ತ್ರ ಹಿರಿಯರು, ಸ್ನೇಹಿತರ ಸಮ್ಮುಖದಲ್ಲಿ ನೆರವೇರಿದೆ. ಇದೇ ವೇಳೆ ಮದುವೆಯ ದಿನಾಂಕವನ್ನು …
Read More »ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
ದಾವಣಗೆರೆ: ಯತ್ನಾಳ್ ನನ್ನನ್ನು ಥರ್ಡ್ ರೇಟ್ ರಾಜಕಾರಣಿ ಎಂದು ಹೇಳಿದ್ದಾರೆ. ಅವರು ರಾಜಕಾರಣದಲ್ಲಿ ದೊಡ್ಡವರು. ನಾನು ಥರ್ಡ್ ಆದರೆ ಅವರು ಫೋರ್ತ್ ಗ್ರೇಡ್ ರಾಜಕಾರಣಿ. ಎಲ್ಲವೂ ಅವರೇ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರು ಟಿಆರ್ ಪಿಗಾಗಿ ಮಾತನಾಡುತ್ತಿದ್ದಾರೆ. ನಾನು ಅಟಲ್ ವಾಜಪೇಯಿ ಸಂಪುಟದ ಸಚಿವ ಎಂದು ಹೇಳಿಕೊಳ್ಳುವ ಮೂಲಕ ಅಟಲ್ ವಾಜಪೇಯಿ ಅವರಿಗೆ ಅವಮಾನ ಮಾಡುತ್ತಿದ್ದಾರೆ. ವಾಜಪೇಯಿ …
Read More »ಎರಡು ಪ್ರತ್ಯೇಕ ಬೈಕ್ ಅಪಘಾತ ಪ್ರಕರಣ; ಇಬ್ಬರ ಸಾವು
ಲಕ್ಷ್ಮೇಶ್ವರ: ಎರಡು ಪ್ರತ್ಯೇಕ ಬೈಕ್ ಅಪಘಾತ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಪಟ್ಟಣದ ಹೊರವಲಯದಲ್ಲಿ ಬೈಕ್ ಸವಾರನೊಬ್ಬ ನೀರು ತರುವ ದೂಡುವ ಗಾಡಿಗೆ ಡಿಕ್ಕಿ ಹೊಡೆದು, ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಬೈಕ್ ಸವಾರ ಲಕ್ಷ್ಮೇಶ್ವರ ಪಟ್ಟಣದ ಕಲ್ಮೇಶ ಶೇಖಪ್ಪ ಬೆಂಗೇರಿ (24) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದು ಬೈಕ್ ಅಪಘಾತ ಪ್ರಕರಣದಲ್ಲಿ ಸಮೀಪದ ಗೊಜನೂರ ಹತ್ತಿರ …
Read More »ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರುವ ಕಾರ್ಯವಾಗಬೇಕು : ಪಿ.ಎಂ.ನರೇಂದ್ರಸ್ವಾಮಿ
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರುವ ಕಾರ್ಯವಾಗಬೇಕು : ಪಿ.ಎಂ.ನರೇಂದ್ರಸ್ವಾಮಿ ಬೆಳಗಾವಿ: ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು, ದುರ್ಬಲ ವರ್ಗಕ್ಕೆ ಉತ್ತಮವಾದಂತಹ ಯೋಜನೆ ನಿರ್ಮಿಸುವುದರ ಮೂಲಕ ಪರಿಶಿಷ್ಟರನ್ನು ಸಮಾಜದ ಮುನ್ನೆಲೆಗೆ ತರಬಹುದಾಗಿದೆ. ಅಧಿಕಾರಿಗಳು ಇದನ್ನು ಅರಿತುಕೊಂಡು ಶ್ರಮಿಸಬೇಕು ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು …
Read More »ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
ಬೆಂಗಳೂರು: ರಾಜ್ಯದಲ್ಲಿರುವ ಕೆಲವು ಬಿಪಿಎಲ್ ಕಾರ್ಡ್‌ದಾರರಿಗೆ ಈಗ ಸದ್ದಿಲ್ಲದೆ ಸರಕಾರ “ಎಪಿಎಲ್ ಆಘಾತ’ ನೀಡುತ್ತಿದೆ! ಆದಾಯ ತೆರಿಗೆ ಪಾವತಿ ಸಹಿತ ಹಲವು ಮಾನದಂಡಗಳಡಿ ಕಾರ್ಯಾಚರಣೆ ನಡೆಸಿದ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಈ ಹಿಂದೆಯೇ ಸುಮಾರು 12 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಿದೆ. ಆ ಪೈಕಿ ಕೆಲವರನ್ನು ಎಪಿಎಲ್ ಕಾರ್ಡ್‌ದಾರರಾಗಿ ಪರಿವರ್ತಿಸುವ ಕೆಲಸ ನಡೆದಿದೆ. ಅವರೆಲ್ಲ ಎಂದಿನಂತೆ ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ಮೇಲೆ ಬೆರಳಿಟ್ಟಾಗ …
Read More »
Laxmi News 24×7