ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …
Read More »ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ
ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …
Read More »ಡಿಸಿಎಂ ಲಕ್ಷ್ಮಣ ಸವದಿ ನೂರಾರು ಜನರನ್ನ ಸೇರಿಸಿ ಆರ್‌ಟಿಓ ಕಚೇರಿ ಉದ್ಘಾಟಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.
ಚಿಕ್ಕೋಡಿ/ಬೆಳಗಾವಿ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಚಿವರು ಹಾಗೂ ಅಧಿಕಾರಿಗಳು ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದಾರೆ. ಆದರೆ ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದ ಡಿಸಿಎಂ ಲಕ್ಷ್ಮಣ ಸವದಿ ನೂರಾರು ಜನರನ್ನ ಸೇರಿಸಿ ಆರ್‌ಟಿಓ ಕಚೇರಿ ಉದ್ಘಾಟಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಜೂರಾದ ನೂತನ ಆರ್‌ಟಿಓ ಕಚೇರಿ ಉದ್ಘಾಟನಾ ಸಮಾರಂಭ ನಡೆದಿದೆ. ಸಮಾರಂಭದಲ್ಲಿ 250ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ …
Read More »ಮಹಾರಾಷ್ಟ್ರದ ಉದ್ಯಮಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಬಂದಾಗ ಅವರಿಗೆ ನಮ್ಮ ಜನರು ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ ಅನ್ಯತ ಭಾವಿಸಬಾರದು.
ಅಥಣಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾದಿಂದ ಬೇಗ ಗುಣಮುಖರಾಗಲಿ. ದೇವರು ಆರೋಗ್ಯ ದಯಪಾಲಿಸಲಿ ಎಂದು ಬೇಡಿಕೊಳ್ಳುವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಅಥಣಿ ಆರ್ ಟಿ ಓ ಕಚೇರಿಯ ನೂತನವಾಗಿ ವಾಹನ ನೋಂದಣಿ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿಗಳು ಸ್ವತಃ ನನ್ನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಕ್ವಾರೆಂಟೈನ್ ಆಗಿ ಅಂತ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾನು ಅವರನ್ನು ಭೇಟಿ ನೀಡಿಲ್ಲ. ದೆಹಲಿಗೆ ಹೋಗಿಬಂದ ವಿಚಾರವನ್ನು ಅವರಿಗೆ ಸಾಮಾಜಿಕ …
Read More »ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿತ ಮೃತಪಟ್ಟು ಮೂರು ದಿನ ಕಳೆದರೂ ಮನೆಯವರಿಗೆ ಮಾಹಿತಿ ನೀಡಿಲ್ಲ ಅಂತ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರು ನಗರ ಕೆ.ಪಿ. ಆಗ್ರಹಾರದ 56 ವರ್ಷದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆ ಜುಲೈ 30 ರ ಸಂಜೆ ಗುರುವಾರದಂದು ದೇವನಹಳ್ಳಿಯ ಆಕಾಶ್ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಶುಕ್ರವಾರ ಬೆಳಗಿನ ಜಾವ ಸೋಂಕಿತ ಮೃತಪಟ್ಟಿದ್ದಾರೆ. …
Read More »ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾವಿನ್ಯಾಸ ಕಾರ್ಯಕ್ಕೆ ಮೂಹರ್ತ ಕೊಟ್ಟಿದ್ದ ವಿದ್ವಾಂಸ ವಿಜಯೇಂದ್ರ ಶರ್ಮಾ
ಬೆಳಗಾವಿ: ಅಯೋಧ್ಯೆಯಲ್ಲಿನ ರಾಮಮಂದಿರ ಶಿಲಾವಿನ್ಯಾಸ ಕಾರ್ಯಕ್ಕೆ ಮೂಹರ್ತ ಕೊಟ್ಟಿದ್ದ ವಿದ್ವಾಂಸ ವಿಜಯೇಂದ್ರ ಶರ್ಮಾ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ ಕರೆ ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ. ದೇಶವೇ ನಿರೀಕ್ಷೆಯಲ್ಲಿದ್ದ ರಾಮಂದಿರ ನಿರ್ಮಾಣ ಕಾರ್ಯಕ್ಕೆ ಬೆಳಗಾವಿ ಮೂಲಕದ ವಿಜಯೇಂದ್ರ ಶರ್ಮಾ ವಿದ್ವಾಂಸರು ಶಿಲಾವಿನ್ಯಾಸಕ್ಕೆ ಮುಹೂರ್ತ ನೀಡಿದ್ದರು. ದೆಹಲಿಯಲ್ಲಿ ಶಿಲಾವಿನ್ಯಾಸಕ್ಕೆ ಸಿದ್ದತೆಗಳು ನಡೆಯುತ್ತಿವೆ. ಅ.5 ರಂದು ನಡೆಯುವ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ನಡೆಯುತ್ತಿವೆ. ಆದ್ರೆ ಈತ್ತ ಶಿಲಾವಿನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಶಾಸ್ತ್ರಿ ನಗರದ …
Read More »ಗೋಕಾಕ:ನಗರಸಭೆ ಸದಸ್ಯ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.
ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಕೋವಿಡ್ ತಡೆಗೆ ಕ್ರಮ ಕೈಗೊಳ್ಳಿ: ಪ್ರಿಯಾಂಕ್
ಚಿತ್ತಾಪುರ: ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಚಿತ್ತಾಪುರ ತಾಲೂಕಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಟಾಸ್ಕ್ಫೋಸ್ಕ್ ಸಭೆಯಲ್ಲಿ ಮಾತನಾಡಿದ ಅವರು, ಚಿತ್ತಾಪುರ, ಕಾಳಗಿ ಹಾಗೂ ಶಹಾಬಾದ್ ತಹಶೀಲ್ದಾರ್ ಅವರು ಒಟ್ಟಾಗಿ ಕುಳಿತು ಚರ್ಚೆ ಮಾಡಿ ತಾಲೂಕಿನಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಕ್ರಮಕೈಗೊಳ್ಳಬೇಕು. ಶಾಸಕನಾಗಿ ಎಲ್ಲ ರೀತಿಯ …
Read More »ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ
ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …
Read More »ಬಿಎಸ್‍ವೈ ಪುತ್ರಿ, ಕಾವೇರಿ ನಿವಾಸದ ಸಿಬ್ಬಂದಿಗೂ ಕೊರೊನಾ ಶಾಕ್.!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯಾರ್ಯಾರಿಗೆ ಕೊರೊನಾ ಸೋಂಕು ಇದೆ ಎಂಬುದರ ಪತ್ತೆ ನಡೆಸಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಯಡಿಯೂರಪ್ಪ ಪುತ್ರಿ ಪದ್ಮಾವತಿ ಹಾಗೂ ಕಾವೇರಿ ನಿವಾಸದ ಮನೆಗೆಲಸದವರು, ಅಡುಗೆಯವರು ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕಾರು ಚಾಲಕ ಸೇರಿದಂತೆ 6 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಯಡಿಯೂರಪ್ಪ ಅವರು ಅಡ್ಮಿಟ್ ಆಗಿರುವ ವಾರ್ಡ್‍ನಲ್ಲೇ ಪುತ್ರಿ ಪದ್ಮಾವತಿ ಅವರೂ ಕೂಡ ದಾಖಲಾಗಿದ್ದಾರೆ.
Read More »
Laxmi News 24×7