ಬೆಂಗಳೂರು,ಜು.13- ನಾಳೆ ರಾತ್ರಿಯಿಂದ ಜಾರಿಯಾಗುತ್ತಿರುವ ಎರಡನೆ ಹಂತದ ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಹೋಗುತ್ತಿರುವವರು ಮತ್ತು ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಟೋಲ್‍ಗಳ ಬಳಿ ಇಂದು ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಸರ್ಕಾರ ಉಚಿತವಾಗಿ ವಾಹನಗಳನ್ನು ಬಿಡಲು ಸೂಚಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ನಾಳೆ ರಾತ್ರಿ 8 ಗಂಟೆಯಿಂದ 8 ದಿನ ಲಾಕ್‍ಡೌನ್ ಘೋಷಣೆ ಮಾಡಿದ್ದು, ಊರುಗಳಿಗೆ ತೆರಳುವವರು ಮತ್ತು ಬೆಂಗಳೂರಿಗೆ ಬರುವವರಿಗೆ ಅವಕಾಶವನ್ನು ನೀಡಿದ …
Read More »ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್
ಮಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್‍ಡೌನ್ ಆರಂಭವಾಗಲಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 11 …
Read More »ಹಾಸನ ಜಿಲ್ಲೆಯನ್ನೂ ಲಾಕ್‍ಡೌನ್ ಮಾಡಿ: ಎಂಎಲ್‍ಸಿ ಗೋಪಾಲಸ್ವಾಮಿ
ಹಾಸನ: ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯನ್ನು ಲಾಕ್‍ಡೌನ್ ಮಾಡಿ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲೆಯನ್ನು ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಭಾಗಶಃ ಲಾಕ್‍ಡೌನ್ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕನ್ನು 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಸಂಪೂರ್ಣ ಲಾಕ್‍ಡೌನ್ ಮಾಡಿ ಈಗಾಗಲೇ ಒಂದು ವಾರ ಕಳೆದಿದೆ. ಅಂದಿನಿಂದ ತಾಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ …
Read More »ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ.
ಉಡುಪಿ: ಕೊರೊನಾದಿಂದ ಸಾವನ್ನಪ್ಪಿದ ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ. ದಾವಣಗೆರೆ ಮೂಲದ ವ್ಯಕ್ತಿ ಉಡುಪಿಯಲ್ಲಿ ಮೃತಪಟ್ಟಿದ್ದು ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ 72 ವರ್ಷದ ವೃದ್ಧ ಮಣಿಪಾಲ ಕೆಎಂಸಿಗೆ ಭೇಟಿ ಕೊಟ್ಟಿದ್ದರು. ಚಿಕಿತ್ಸಾ ಸಂದರ್ಭ ಅವರಲ್ಲಿ ಕೊರೊನಾದ ಲಕ್ಷಣಗಳು ಕಂಡು ಬಂದಿತ್ತು. ರೋಗಿಯನ್ನು ಕೂಡಲೇ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗಿತ್ತು. ಉಸಿರಾಟದ …
Read More »ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ
ಹೈದರಾಬಾದ್: ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಥೋಟಾ ಮಧುಕರ್ (24) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ. ಮಧುಕರ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಾಲ್ಕು ದಿನಗಳ ಹಿಂದೆ ನಿಷೇಧಿತ ಆಟದಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಮಧುಕರ್ ವಿಷ ಕುಡಿದಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧುಕರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ …
Read More »ಸೂರ್ಯ ಚಂದ್ರ ಇರುವವರಿಗೆ ಪಿಎಸ್‌ಎಸ್‌ಕೆ ಇರಬೇಕು : ಮುರುಗೇಶ್ ನಿರಾಣಿ
ಪಾಂಡವಪುರ,ಜು.12ವಿದ್ಯುತ್ ಉತ್ಪಾದನೆ ,ಡಿಸ್ಟಿಲರಿ ಆರಂಭ ಸೇರಿದಂತೆ ಎಲ್ಲಾ ಉಪ ಉತ್ಪನ್ನಗಳ ತಯಾರಿಸಿ ಕಬ್ಬು ಬೆಳೆಗಾರರಿಗೆ ಹಾಗೂ ಕಾರ್ಮಿಕರಿಗೆ ಹೆಚ್ಚಿನ ಹಣಪಾವತಿಸುವುದು ತಮ್ಮ ಸಂಕಲ್ಪ ಮಾಜಿ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದರು. ಪಿಎಸ್ ಎಸ್ ಕೆ ಯಲ್ಲಿ ಕಾರ್ಮಿಕರು ಹಾಗೂ ರೈತ ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಕಾರ್ಖಾನೆಯಲ್ಲಿ ಕಸ ಗುಡಿಸುವವರಿಂದ ಹಿಡಿದು ಮುಖ್ಯ ತಂತ್ರಜ್ಞರು ಸೇರಿದಂತೆ ಎಲ್ಲರೂ ಒಂದೇ ಕುಟುಂಬದವರಂತೆ ,ನಾಟಕದಲ್ಲಿ ಬರುವಂತೆ ಎಲ್ಲರದೂ ಒಂದೊಂದು ಪಾತ್ರ …
Read More »ಲಾಕ್‍ಡೌನ್ ಸಮಯದಲ್ಲಿ ಎಣ್ಣೆ ಕಳ್ಳತನ ಮಾಡಿದ್ದ ಇಬ್ಬರು ಖತರ್ನಾಕ್ ಮದ್ಯ ಕಳ್ಳರ….
ಹಾಸನ: ಲಾಕ್‍ಡೌನ್ ಸಮಯದಲ್ಲಿ ಎಣ್ಣೆ ಕಳ್ಳತನ ಮಾಡಿ ಮತ್ತೆ ಲಾಕ್‍ಡೌನ್ ಆದರೆ ಹೆಚ್ಚು ಬೆಲೆಗೆ ಮಾರಬಹುದು ಎಂದು ಪ್ಲಾನ್ ಮಾಡಿದ್ದ ಇಬ್ಬರು ಖತರ್ನಾಕ್ ಮದ್ಯ ಕಳ್ಳರನ್ನು ಜಿಲ್ಲೆಯ ಸಕಲೇಶಪುರ ತಾಲೂಕಿನ ಪೊಲೀಸರು ಬಂಧಿಸಿದ್ದಾರೆ. ಮೋಹನ್ (31) ಮತ್ತು ಚಂದ್ರು (42) ಬಂಧಿತ ಆರೋಪಿಗಳು. ಇತ್ತೀಚಿನ ದಿನಗಳಲ್ಲಿ ಸಕಲೇಶಪುರ ತಾಲೂಕು ಸೇರಿದಂತೆ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಪಕವಾಗಿ ಮದ್ಯದ ಕಳ್ಳತನ ನಡೆಯುತ್ತಿತ್ತು. ಹೀಗಾಗಿ ಸಕಲೇಶಪುರ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ತನಿಖಾ …
Read More »ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅಮಿತಾಬ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ. ನಮ್ಮ ಕುಟುಂಬದವರು ಹಾಗೂ ಸಿಬ್ಬಂದಿಯನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಕಳೆದ 10 ದಿನಗಳಿಂದ ನನ್ನ ಜೊತೆ ಯಾರ್ಯಾರು ಸಂಪರ್ಕದಲ್ಲಿದಿರೋ ಅವರೆಲ್ಲರೂ ದಯವಿಟ್ಟು ಸ್ವಯಂ ಪ್ರೇರಿತವಾಗಿ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ ಎಂದು ಬರೆದಿದ್ದಾರೆ. …
Read More »ವೃದ್ಧಾಪ್ಯದಲ್ಲೂ ಕೊರೊನಾ ಗೆದ್ದ ರಾಯಚೂರಿನ 12 ಜನ ಗಟ್ಟಿಗರು
ರಾಯಚೂರು: ಅರವತ್ತು ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕು ತಗುಲಿದರೆ ಪ್ರಾಣಾಪಾಯ ಹೆಚ್ಚು ಅನ್ನೋದನ್ನ ರಾಯಚೂರಿನ 12 ಜನ ವೃದ್ಧರು ಮೆಟ್ಟಿನಿಂತು ಮಹಾಮಾರಿ ವಿರುದ್ಧ ಗೆದ್ದು ಹೊರಬಂದಿದ್ದಾರೆ. 60 ರಿಂದ 73 ವರ್ಷದ ಮಧ್ಯದ 12 ಜನರು ಕೊರೊನಾ ಸೋಂಕಿನಿಂದ ಗೆದ್ದು ಬಂದು ಸಂಪೂರ್ಣ ಗುಣಮುಖರಾಗುವ ಮೂಲಕ ಸೋಂಕಿತರಲ್ಲಿನ ಭಯ ಹೋಗಲಾಡಿಸಲು ಮಾದರಿಯಾಗಿದ್ದಾರೆ ಜಿಲ್ಲೆಯಲ್ಲಿ ಇದುವರೆಗೆ 631 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 442 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ …
Read More »ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ- ನಳಿನ್ ಕುಮಾರ್ ತಿರುಗೇಟು
ಮಡಿಕೇರಿ: ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಒಮ್ಮೆ ಅವರ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್ ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್, ಅವರ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನೋದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ …
Read More »