Breaking News

Uncategorized

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಕಚೇರಿಗಳಲ್ಲಿ SIR

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ಖಾಸಗಿ ಕಚೇರಿಗಳಲ್ಲಿ ಟೇಬಲ್ ಹಾಕಿಕೊಂಡು ಸಾಮೂಹಿಕವಾಗಿ ಪ್ರಕ್ರಿಯೆ ನಡೆಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ, ಪ್ರತಿಯೊಬ್ಬ ಬಿಎಲ್‌ಒ ಕಡ್ಡಾಯವಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪರಿಶೀಲಿಸಬೇಕು ಮತ್ತು ನಿಗದಿತ ಅರ್ಜಿಗಳನ್ನು ವಿತರಿಸಬೇಕು. ಆದರೆ ಬಿಟಿಎಂ ಲೇಔಟ್‌ನ ಕೆಲ ಅಧಿಕಾರಿಗಳು ತಮ್ಮ …

Read More »

ಸಿಎಂ ಆಗಿ ತಿಂಗಳು ಪೂರ್ಣ – ಸಿದ್ದರಾಮಯ್ಯ ಜೊತೆ ಡಿಕೆಶಿ ಫ್ಯಾಮಿಲಿ ಬ್ರೇಕ್‌ಫಾಸ್ಟ್‌

ಬೆಂಗಳೂರು: ಸಿಎಂ ಆಗಿ ತಿಂಗಳು ಪೂರ್ಣಗೊಂಡ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್  ಅವರು ಕುಟಂಬ ಸಮೇತರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಉಪಹಾರದ ಜೊತೆ ಮಾತುಕತೆ ನಡೆಸಿದರು. ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಪತ್ನಿ ಉಷಾ ಹಾಗೂ ಸಹೋದರ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆಸು ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಒಟ್ಟಿಗೆ ಉಪಹಾರ …

Read More »

ರೇಣುಕಾಸ್ವಾಮಿ ಕೇಸ್‌ನ ಸಾಕ್ಷಿಗೆ ಬೆದರಿಕೆ – ತನಿಖೆ ವೇಳೆ ಕೆಲ ವಿಚಾರಗಳು ಬೆಳಕಿಗೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಕೇಸ್‌ನಲ್ಲಿ ವಿಚಾರಣೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಆರೋಪಿ ಪುನೀತ್‌ ಸೇರಿದಂತೆ ಮೂವರು ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ವಿಚಾರಣೆ ವೇಳೆ ಪುನೀತ್‌ ಹೈಡ್ರಾಮಾ ಮಾಡಿದ್ದು, ಕೆಲವು ವಿಚಾರಗಳು ಬಯಲಾಗಿವೆ. ಸಾಕ್ಷಿಧಾರ ಸಂದೀಪ್, ತುಮಕೂರಿನ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಜೂ.25ರಂದು ಆಕರ್ಷ್ ಎಂಬಾತ …

Read More »

ಆಮಿಷವೊಡ್ಡಿ ಮತಾಂತರಕ್ಕೆ ಯತ್ನ ಆರೋಪ- ಪ್ರಾರ್ಥನೆ ವೇಳೆ ಬಜರಂಗದಳ ಕಾರ್ಯಕರ್ತರ ಎಂಟ್ರಿ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಬಡ ಕುಟುಂಬಗಳಿಗೆ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಕ್ಕೇರಿ ಗ್ರಾಮದ ಬಡ ಕುಟುಂಬಗಳನ್ನು ಗುರಿಯಾಗಿಸಿಕೊಂಡು, ವಿವಿಧ ಆಮಿಷಗಳನ್ನು ಒಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿಂದೂ ಪರ ಸಂಘಟನೆಗಳಿಗೆ ಲಭ್ಯವಾಗಿತ್ತು. ಮತಾಂತರ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾದ ಕುಟುಂಬ ಸದಸ್ಯರ ಮನೆಗೆ ಬಜರಂಗದಳದ ಕಾರ್ಯಕರ್ತರು ದಿಢೀರ್ ಭೇಟಿ ನೀಡಿದ್ದಾರೆ. ಈ ವೇಳೆ …

Read More »

ಕಲ್ಯಾಣ ಮಂಟಪದಲ್ಲಿ ಎಸ್‌ಐಆರ್ – ಮುಖ್ಯ ಚುನಾವಣಾಧಿಕಾರಿಯಿಂದ ಬಿಎಲ್‌ಒಗಳಿಗೆ ನೋಟಿಸ್ ಜಾರಿ

ರಾಮನಗರ: ಕಲ್ಯಾಣ ಮಂಟಪವೊಂದರಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಪ್ರಕ್ರಿಯೆ ನಡೆಸಿದ ಬೂತ್ ಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತನಿಖೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ಅ ವರು ರಾಮನಗರ  ಜಿಲ್ಲಾಧಿಕಾರಿ ಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು, ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ರಾಮನಗರ ಡಿಸಿಗೆ ನಿರ್ದೇಶನ …

Read More »

ಹನಿಮೂನ್ ಹಂತಕಿ ಸೋನಮ್‌ಗೆ ಬಿಗ್ ರಿಲೀಫ್ – ಬೇಲ್ ರದ್ದಿಗೆ ಸುಪ್ರೀಂ ನಕಾರ

ನವದೆಹಲಿ: ಹನಿಮೂನ್‌ಗೆ ಹೋದಾಗ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಹಂತಕಿ ಸೋನಮ್ ರಘುವಂಶಿಗೆ ನೀಡಿದ್ದ ಜಾಮೀನು ರದ್ದಿಗೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಶೀಲ್ ನಾಗು ಅವರಿದ್ದ ಪೀಠವು, ಸೋನಂಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡುವ ಬಗ್ಗೆ ಒಲವು ತೋರಿಸಿತ್ತು. ಆದರೆ ಆರೋಪಿ ಈಗಾಗಲೇ …

Read More »

ಅಮರನಾಥ ಯಾತ್ರಿಕರಿಗೆ ಪ್ರಧಾನಿ ಮೋದಿ ಪತ್ರ; ಐದು ಸಂಕಲ್ಪ ಪಾಲಿಸುವಂತೆ ಕರೆ

ನವದೆಹಲಿ: ಅಮರನಾಥ ಯಾತ್ರೆ  ಆರಂಭವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ  ದೇಶದಾದ್ಯಂತ ಶಿವಭಕ್ತರಿಗೆ ವಿಶೇಷ ಪತ್ರ ಬರೆದು ಶುಭಾಶಯ ಕೋರಿದ್ದಾರೆ. ಭಗವಾನ್ ಅಮರನಾಥರ ಕೃಪೆಯಿಂದ ಪ್ರತಿಯೊಬ್ಬ ಯಾತ್ರಿಕರ ಪಯಣ ಸುರಕ್ಷಿತ, ಸುಖಕರ ಹಾಗೂ ಮಂಗಳಕರವಾಗಿರಲಿ ಎಂದು ಹಾರೈಸಿದ್ದಾರೆ. ಅಮರನಾಥ ಯಾತ್ರೆ ಕೇವಲ ಧಾರ್ಮಿಕ ಪ್ರವಾಸವಲ್ಲ, ಅದು ಭಕ್ತಿ. ಆತ್ಮಸಾಕ್ಷಾತ್ಕಾರ ಹಾಗೂ ರಾಷ್ಟ್ರೀಯ ಏಕತೆಯ ಸಂಕೇತವಾಗಿದೆ ಎಂದು ಪ್ರಧಾನಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಶ್ರಮಿಸುತ್ತಿರುವ ಭದ್ರತಾ ಪಡೆಗಳು, …

Read More »

ಮಸೀದಿಗಳಲ್ಲಿ SIR ಮಾಡಿ ಅಕ್ರಮ ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು: ಕರಂದ್ಲಾಜೆ

ಬೆಂಗಳೂರು: ಮಸೀದಿ ಹಾಗೂ ಸಮುದಾಯ ಭವನಗಳಲ್ಲಿ ನಿಯಮ ಬಾಹಿರವಾಗಿ ಎಸ್‌ಐಆರ್ Aಪ್ರಕ್ರಿಯೆ ನಡೆಯುತ್ತಿದೆ 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರಸಕ್ರಮಕ್ಕೆ ಕಾಂಗ್ರೆಸ್‌ ಸರ್ಕಾರ ಸಂಚು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳೇ ನಿಮ್ಮ ಮೂಗಿನ ನೇರದಲ್ಲೇ ಅಧಿಕಾರಿಗಳು ಅಕ್ರಮ ಮತದಾರರನ್ನು ಪಟ್ಟಿಗೆ ಸೇರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಬಾಂಗ್ಲಾದೇಶಿಯರನ್ನು ಓಡಿಸಿದ ಮೇಲೆ …

Read More »

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ಐತಿಹಾಸಿಕ ಭೇಟಿ – ಮುಂದಿನ ವಾರ ನ್ಯೂಜಿಲೆಂಡ್‌ಗೆ ಮೋದಿ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ನ್ಯೂಜಿಲೆಂಡ್‌ಗೆ  ತಮ್ಮ ಮೊದಲ ಅಧಿಕೃತ ದ್ವಿಪಕ್ಷೀಯ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ ಆಗಿರುವುದರಿಂದ ಈ ಪ್ರವಾಸಕ್ಕೆ ವಿಶೇಷ ಮಹತ್ವ ಲಭಿಸಿದೆ. ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್  ಈ ಭೇಟಿ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಭಾರತ-ನ್ಯೂಜಿಲೆಂಡ್ ಸಂಬಂಧದಲ್ಲಿ ಇದು ಐತಿಹಾಸಿಕ ಘಟ್ಟವಾಗಲಿದೆ. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, …

Read More »

ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – ʻದಾಸʼನಿಗೆ 1 ವರ್ಷ ಜೈಲೇ ಗತಿ

ನವದೆಹಲಿ: ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಪ್ರಮುಖ ಆರೋಪಿ ನಟ ದರ್ಶನ್ ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಇದರಿಂದ ʻದಾಸʼ ಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಹೌದು. 1 ವರ್ಷದ ವರೆಗೆ ಜಾಮೀನು  ಕೋರಿ ಅರ್ಜಿ ಸಲ್ಲಿಸದಂತೆ ಸೂಚಿಸಿದ್ದ ಸುಪ್ರೀಂ ಆದೇಶ ತಿದ್ದುಪಡಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಖುದ್ದು ಸುಪ್ರೀಂ ಕೋರ್ಟ್‌ನ ರಿಜಿಸ್ಟರ್‌ ಅವರೇ ಅರ್ಜಿಯನ್ನ ತಿರಸ್ಕರಿಸಿದ್ದಾರೆ. ತುರ್ತು ಪರಿಸ್ಥಿತಿಗಳಲ್ಲಿ …

Read More »