ಸಿನಿಮಾಗಳಲ್ಲಿ ಒಂದಷ್ಟು ಪಾತ್ರಗಳನ್ನು ನಿರ್ವಹಿಸುತ್ತಲೇ ನಟಿಯಾಗಿ ರೂಪುಗೊಂಡಿದ್ದವರು ಶೀತಲ್ ಶೆಟ್ಟಿ. ಈ ಹಿಂದೆ ಎರಡು ಕಿರುಚಿತ್ರಗಳನ್ನು ನಿರ್ದೇಶನ ಮಾಡೋ ಮೂಲಕ ಅವರು ನಿರ್ದೇಶಕಿಯಾಗುತ್ತ ಗಂಭೀರವಾಗಿ ಹೆಜ್ಜೆಯಿಡುತ್ತಿರುವ ಮುನ್ಸೂಚನೆ ನೀಡಿದ್ದರು. ಇದೀಗ ಯಾವ ಸದ್ದುಗದ್ದಲವೂ ಇಲ್ಲದೆ ಅವರೊಂದು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ವಿಂಡೋ ಸೀಟ್ ಎಂಬ ಆಕರ್ಷಕವಾದ ಈ ಚಿತ್ರದ ಅತ್ಯಾಕರ್ಷಕ ಟೈಟಲ್ ಪೋಸ್ಟರ್ ಇದೀಗ ಲಾಂಚ್ ಆಗಿದೆ. ಇದು ಮಂಜುನಾಥ್ ಗೌಡ (ಜಾಕ್ ಮಂಜು) ನಿರ್ಮಾಣದ ಚಿತ್ರ. ಬಹುಕಾಲದಿಂದಲೂ ಈ …
Read More »ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಜೇವರ್ಗಿ: ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿಯನ್ನು ತಂದಿರುವುದನ್ನು ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ವತಿಯಿಂದ ಉಪ ತಹಸೀಳ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವರಾಧ್ಯ ಬಡಿಗೇರ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ವಿರೋಧವಾಗಿ ಕಾನೂನು ಜಾರಿಗೆ ತಂದಿರುವುದು ಅತ್ಯಂತ ಖಂಡನೀಯ. ಕಾರ್ಖಾನೆಗಳ ನೆಪದಲ್ಲಿ ಸರ್ಕಾರ ರೈತರ ಭೂಮಿಯನ್ನು ಕಸಿದುಕೊಳ್ಳಲು ಮುಂದಾಗಿದೆ. ಕೂಡಲೇ ಈ ತಿದ್ದುಪಡಿ ಕೈಬಿಡಬೇಕೆಂದು ಆಗ್ರಹಿಸಿದರು. …
Read More »ಸೂರ್ಯ ಗ್ರಹಣ ವೀಕ್ಷಣೆಗೆ ಕೊರೊನಾ ಅಡ್ಡಿ- ನೆಹರೂ ತಾರಾಲಯದಲ್ಲಿ ಸಾರ್ವಜನಿಕ ವೀಕ್ಷಣೆ ಇಲ್
ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ನೆಹರೂ ತಾರಾಯದಿಂದ ಬ್ಯಾಡ್ ನ್ಯೂಸ್ ಹೊರ ಬಿದ್ದಿದ್ದು, ಈ ವರ್ಷದ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ನೀಡಿಲ್ಲ. ಭಾರತದಲ್ಲಿ ಗೋಚರಿಸುವ ಈ ವರ್ಷದ ಕಡೆಯ ಕಂಕಣ ಸೂರ್ಯಗ್ರಹಣ, ಜೂನ್ 21ರಂದು ಸಂಭವಿಸಲಿದೆ. ಆದರೆ ಕೊರೊನಾ ಆಘಾತದ ಹಿನ್ನೆಲೆ ನೆಹರೂ ತಾರಾಲಯ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡುತ್ತಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕ ವೀಕ್ಷಣೆಗೆ ತಡೆ ನೀಡಿದೆ. ಸೂರ್ಯ ಗ್ರಹಣ ವೀಕ್ಷಣೆಗೆ ನೆಹರೂ ತಾರಾಲಯಕ್ಕೆ ಸಾವಿರಾರು …
Read More »ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ಕೃಷ್ಣಾಗೂ ಕೊರೊನಾ ಭೀತಿ..?
ಬೆಂಗಳೂರು,ಜೂ.19-ಮುಖ್ಯಮಂತ್ರಿಗಳ ಅಧಿಕೃತ ಗೃಹಕಚೇರಿ ಕೃಷ್ಣಾಗೂ ಕೊರೊನಾ ಭೀತಿ ಆವರಿಸಿದೆಯೇ..? ಇಂಥದೊಂದು ಪ್ರಶ್ನೆ ಉದ್ಭವಿಸಲು ಕಾರಣವೆಂದರೆ ಇಂದು ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಕೃಷ್ಣಾದಲ್ಲಿ ನಡೆಯಬೇಕಿದ್ದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿರುವುದು ಈ ಅನುಮಾನಗಳಿಗೆ ಪುಷ್ಟಿ ನೀಡುವಂತಿದೆ. ಅಲ್ಲದೆ ಗೃಹಕಚೇರಿ ಕೃಷ್ಣದಲ್ಲಿ ಇಂದು ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮೂಲಕ ಸ್ವಚ್ಛಗೊಳಿಸಿ ಸಾರ್ವಜನಿಕರು, ಅಧಿಕಾರಿಗಳು ಸೇರಿದಂತೆ ಯಾರಿಗೂ ಕೂಡ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿತ್ತು. ಬೆಳಗಿನಿಂದಲೇ ವೈದ್ಯರ ತಂಡ ಆಗಮಿಸಿ …
Read More »ಜನರ ಮಾನವೀಯ ಮೌಲ್ಯಗಳನ್ನು ಕಿತ್ತುಕೊಂಡಿತಾ ಕೊರೊನಾ…….
ಬೆಳಗಾವಿ: ಕೊರೊನಾ ತಡೆಗಟ್ಟಲು 75 ದಿನಗಳ ಲಾಕ್‍ಡೌನ್ ಬಳಿಕ ಅನ್‍ಲಾಕ್ ಜಾರಿಗೆ ಬಂದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ಲಾಕ್‍ಡೌನ್ ಎಫೆಕ್ಟ್ ಗೆ ಬಡ ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ. ಕೊರೊನಾ ಜನರ ಜೀವ ಹಿಂಡುತ್ತಿರುವುದಷ್ಟೇ ಅಲ್ಲದೇ ಜನರ ಮಾನವೀಯ ಮೌಲ್ಯಗಳನ್ನು ಕಿತ್ತುಕೊಂಡಿತಾ ಎಂಬ ಅನುಮಾನ ಕಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯಲ್ಲಿ ಒಂದು ಘಟನೆ ನಡೆದಿದೆ. ಹೌದು. ಲಾಕ್‍ಡೌನ್ ಎಫೆಕ್ಟ್ ಗೆ ಅದೆಷ್ಟೋ ಬಡ ಕೂಲಿಕಾರ್ಮಿಕರು, ದಿನಗೂಲಿ ನೌಕರರು, …
Read More »ಬರೋಬ್ಬರಿ 1,224 ಕೋಟಿ ಆಸ್ತಿ ಘೋಷಿಸಿಕೊಂಡ ಎಂಟಿಬಿ- 2.48 ಕೋಟಿ ಮೌಲ್ಯದ 5 ಐಷಾರಾಮಿ ಕಾರು
ಬೆಂಗಳೂರು: ವಿಧಾನ ಪರಿಷತ್‍ಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಬರೋಬ್ಬರಿ 1,224 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಮೇಲ್ಮನೆ ಚುನಾವಣೆಗೆ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಭ್ಯರ್ಥಿಗಳಾದ ಸುನೀಲ್ ವಲ್ಯಾಪುರೆ, ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ತಮ್ಮ ಆಸ್ತಿಯನ್ನು ಫೋಷಿಸಿಕೊಂಡಿದ್ದಾರೆ. ಎಂಟಿಬಿ ವಿರುದ್ಧ ಒಂದು ಪೊಲೀಸ್ …
Read More »ಹೆಚ್. ವಿಶ್ವನಾಥ್ ಗೆ ಬುದ್ಧಿ ಇಲ್ಲ ಎಂದ ಸಿದ್ದರಾಮಯ್ಯ…………..
ಬೆಂಗಳೂರು (ಜೂ. 18): ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದೆ. ಬಿಜೆಪಿಯಿಂದ ಎಂಎಲ್ಸಿ ಟಿಕೆಟ್ ಪಡೆಯುವಲ್ಲಿ ಹೆಚ್. ವಿಶ್ವನಾಥ್ ಸೋತಿದ್ದಾರೆ. ತಮಗೆ ವಿಧಾನ ಪರಿಷತ್ ಟಿಕೆಟ್ ತಪ್ಪಲು ಸಿದ್ದರಾಮಯ್ಯ ಕಾರಣ ಎಂದು ಅವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ‘ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈಕಮಾಂಡಾ?’ ಎಂದು ವ್ಯಂಗ್ಯವಾಡಿದ್ದಾರೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾತನಾಡಿರುವ …
Read More »ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ
ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಗುರುವಾರ ಮಳೆ ಅಲ್ಪ ಕಡಿಮೆ ಇದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ನೀರು ಬಂದು ಗುರುವಾರ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ …
Read More »ದೇಶಾದ್ಯಂತ ಶುರುವಾಯ್ತು ಚೀನಿ ಉತ್ಪನ್ನ ಬಹಿಷ್ಕಾರ ಅಭಿಮಾನ…!
ನಮ್ಮ ಉತ್ಪನ್ನ ನಮ್ಮ ಅಭಿಮಾನ ಎಂಬ ಘೋಷವಾಕ್ಯದೊಂದಿಗೆ ಇಂದಿನಿಂದ ದೇಶಾದ್ಯಂತ ಆರಂಭವಾಗಿರುವ ಚೀನಿ ಉತ್ಪನ್ನ ಬಹಿಷ್ಕಾರ ಜನಾಂದೋಲನಕ್ಕೆ ಹಾಲಿವುಡ್ ನಟ-ನಟಿಯರು, ವಿವಿಧ ಕ್ಷೇತ್ರಗಳ ಖ್ಯಾತನಾಮರು, ರಾಜಕೀಯ ಮುಖಂಡರು, ಉದ್ಯಮಿಗಳು, ಅಸಂಖ್ಯಾತ ಸಂಘ-ಸಂಸ್ಥೆಗಳು, ಕ್ರೀಡಾಪಟುಗಳು ಸಹ ಕೈ ಜೋಡಿಸಿದ್ದು, ಭಾರೀ ಬೆಂಬಲ ವ್ಯಕ್ತವಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ ಚೀನಾಗೆ ಮತ್ತೊಂದು ಶಾಕ್ ನೀಡಿದೆ. 4ಜಿ ಮೇಲ್ದರ್ಜೆಗಾಗಿ ಯಾವುದೇ ಕಾರಣಕ್ಕೂ ಚೀನಾದ ಉಪಕರಣಗಳನ್ನು ಬಳಸದಂತೆ ದೂರ ಸಂಪರ್ಕ …
Read More »ಕೇಂದ್ರ ಸರ್ಕಾರದಿಂದಲೇ ಚೀನಾ ವಸ್ತುಗಳ ಬಹಿಷ್ಕಾರ ಶುರು………..
ನವದೆಹಲಿ: 4ಜಿ ಸೇವೆಯ ನವೀಕರಣದಲ್ಲಿ ಚೀನಾದ ಉಪಕರಣಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‍ಎನ್‍ಎಲ್)ಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಟೆಲಿಕಾಮ್ ಇಲಾಖೆ “ಚೀನಾ ವಸ್ತು ಬಹಿಷ್ಕಾರ”ದ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿವೆ. ಟೆಲಿಕಾಂ ಕಂಪೆನಿಗಳಾದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ಪ್ರಸ್ತುತ ಚೀನಾ ಮೂಲದ ಹುವಾವೇ ಕಂಪನಿಯೊಂದಿಗೆ ಕೆಲಸ ಮಾಡುತ್ತಿವೆ. ಇತ್ತ ಬಿಎಸ್‍ಎನ್‍ಎಲ್‍ನೊಂದಿಗೆ ಝಡ್‍ಟಿಇ …
Read More »