ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಲೂನ್ ಒಂದರಲ್ಲಿ ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಈವರೆಗೆ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದುವರೆಗೂ ಐವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕೋಲಾರ ಜಿಲ್ಲೆಗೆ ಹೊರ ರಾಜ್ಯ, ವಿದೇಶದಿಂದ ಬಂದವರಿಂದಲೇ ಕಂಟಕ ಎದುರಾಗುತ್ತಿದೆ. ಸದ್ಯಕ್ಕೆ ಮಲೇಷಿಯಾದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡುಬಂದಿರುವುದು ಅಧಿಕಾರಿಗಳನ್ನು …
Read More »ರಾಜ್ಯ ಸಭೆ-ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮಹತ್ವದ ಸಭೆ
ಬೆಂಗಳೂರು, ಜೂ.1-ಮುಂಬರುವ ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರ ಹಾಗೂ ಪಕ್ಷದ ಪ್ರಮುಖರ ಮಹತ್ವದ ಸಭೆ ಸದ್ಯದಲ್ಲೆ ನಡೆಸಲು ಉದ್ದೇಶಿಸಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ತಾಂಡವವಾಡುತ್ತಿರುವ ಕೊರೋನಾ ವೈರಾಣು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ, ಪಕ್ಷ ಸಂಘಟನೆ ಮೊದಲಾದ ವಿಚಾರಗಳ ಬಗ್ಗೆ …
Read More »ಕುಂದಾನಗರಿಯಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ
ಬೆಳಗಾವಿ: ಕೆಲವು ದಿನಗಳಿಂದ ಅನೇಕ ಕಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಇದೀಗ ಕುಂದಾನಗರಿಯಲ್ಲಿ ಧಾರಾಕಾರ ಮಳೆಯಾಗಿದ್ದು, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಇದರಿಂದ ಬೆಳಗಾವಿಯ ಶಾಹುನಗರ ಸೇರಿದಂತೆ ತಗ್ಗುಪ್ರದೇಶದಲ್ಲಿ ಕೆಲ ಮನೆಗಳಲ್ಲಿ ನೀರು ನುಗ್ಗಿದೆ. ಮಳೆ ನೀರು ಮನೆಗೆ ನುಗ್ಗಿದ್ದರಿಂದ ಜನರು ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಇರುತ್ತೆ. ಈ ನಗರದಲ್ಲಿ ಒಳಚರಂಡಿ ವ್ಯವಸ್ಥೆಯೂ …
Read More »ರಾಜ್ಯ ಬಿಜೆಪಿ ಸರ್ಕಾರದಲ್ಲಿ ಬಂಡಾಯ,ಅಸಮಾಧಾನಿತ ಶಾಸಕರ ಮತ್ತೆ ಸಭೆ………
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಬಂಡಾಯ ಭುಗಿಲೆದ್ದಿದ್ದು, ಅಸಮಾಧಾನಿತ ಶಾಸಕರು ಮತ್ತೆ ಸಭೆ ಸೇರಲು ನಿರ್ಧರಿಸಿದ್ದು, ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಒಂದೆಡೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹರಸಾಹಸ ಪಡುತ್ತಿದ್ದರೆ ಇನ್ನೊಂದೆಡೆ ಬಂಡಾಯ ಶಾಸಕರ ಅಸಮಾಧಾನ ಶಮನಗೊಳಿಸುವ ನಿಟ್ಟಿನಲ್ಲಿ ಯತ್ನ ನಡೆಸಿದೆ. ಈ ನಡುವೆ ಬುಧವಾರ ಮತ್ತೊಮ್ಮೆ ಸಭೆ ಸೇರಲು ಬಂಡಾಯ ಶಾಸಕರು ತೀರ್ಮಾನಿಸಿದ್ದಾರೆ. 2 ದಿನಗಳ ಹಿಂದಷ್ಟೇ ಬಿಜೆಪಿ ಬಂಡಾಯ ಶಾಸಕ ಉಮೇಶ್ ಕತ್ತಿ ಮನೆಯಲ್ಲಿ ಬಿಜೆಪಿಯ …
Read More »ಇಂದು ರಾಜ್ಯಕ್ಕೆ ಮುಂಬೈ ಕಂಟಕ………ಒಂದೇ ದಿನ 299 ಜನರಲ್ಲಿ ಕೊರೊನಾ……
ಬೆಂಗಳೂರು: ಇಂದು ರಾಜ್ಯಕ್ಕೆ ಮುಂಬೈ ಕಂಟಕ ತಾಗಿದ್ದು, ಇವತ್ತು ಒಂದೇ ದಿನ 299 ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 3221 ಕ್ಕೇರಿಕೆಯಾಗಿದೆ. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು 21, ಯಾದಗಿರಿ 44, ಕಲಬುರಗಿ 28, ಮಂಡ್ಯ 13, ರಾಯಚೂರು 83, ಉಡುಪಿ 10, ಬೀದರ್ 33, ಬೆಳಗಾವಿ 13, ದಾವಣಗೆರೆ 6, ದಕ್ಷಿಣ ಕನ್ನಡ 14, ವಿಜಯಪುರ 26, ಬಳ್ಳಾರಿ 1, ಶಿವಮೊಗ್ಗ …
Read More »ಕುಂಕುಮ, ಗಂಧ ಕೊಡ್ತೇವೆ ಆದ್ರೆ ತೀರ್ಥ ಕೊಡುವುದಿಲ್ಲ:ಕೋಟ ಶ್ರೀನಿವಾಸ ಪೂಜಾರಿ..
ಉಡುಪಿ: ಜೂನ್ ಎಂಟರಿಂದ ಮುಜರಾಯಿ ದೇವಸ್ಥಾನಗಳು ತೆರೆದುಕೊಳ್ಳುತ್ತವೆ. ದೇವಸ್ಥಾನದಲ್ಲಿ ಕುಂಕುಮ, ಗಂಧ ಕೊಡ್ತೇವೆ ಆದ್ರೆ ತೀರ್ಥ ಕೊಡುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ಅಧೀನ ದೇವಸ್ಥಾನಗಳು ನಾಳೆಯಿಂದ ತೆರೆಯುವುದಿಲ್ಲ. ಈ ಹಿಂದೆ ಜೂನ್ 1ರಿಂದ ಎಲ್ಲ ದೇವಸ್ಥಾನಗಳನ್ನು ತೆರೆಯಲಿವೆ ಎಂದು ಹೇಳಲಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರದಿಂದ ಸಹಮತ ನಿರೀಕ್ಷೆ …
Read More »ಭದ್ರತಾ ಸಿಬ್ಬಂದಿಗೆ ಸೂಕ್ತ ಸೌಲಭ್ಯಗಳಿಲ್ಲದೆ ಭಯದಿಂದಲೇ ಕೆಲಸ……..
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಮತ್ತೊಂದು ಎಡವಟ್ಟು ಬೆಳಕಿಗೆ ಬಂದಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಭದ್ರತಾ ಸಿಬ್ಬಂದಿಗೆ ಸೂಕ್ತ ಸೌಲಭ್ಯಗಳಿಲ್ಲದೆ ಭಯದಿಂದಲೇ ಕೆಲಸ ಮಾಡುವಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಸೂಕ್ತ ಸೌಲಭ್ಯಗಳ ಕೊರತೆಯ ನಡುವೆ, ಜೀವನದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಬರುವ ಸಾರ್ವಜನಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡದೆ, ಒಳಗೆ ಬಿಡಲಾಗುತ್ತಿದೆ. ಇದರಿಂದಾಗಿ ಸೋಂಕಿತರು ಆಸ್ಪತ್ರೆ ಪ್ರವೇಶ ಮಾಡುವ ಆತಂಕ ಎದುರಾಗಿದೆ. ಇದು ಹಳೆಯ ಕಿಮ್ಸ್ ಕಟ್ಟಡವಾಗಿದ್ದು, …
Read More »ಲಾಕ್‍ಡೌನ್-5ರ ಮಾರ್ಗಸೂಚಿ ಪ್ರಕಟ…
ಬೆಂಗಳೂರು: ಲಾಕ್‍ಡೌನ್-5ರ ಮಾರ್ಗಸೂಚಿ ರಾಜ್ಯ ಸರ್ಕಾರ ಪ್ರಕಟಿಸಿದ್ದು, ಜೂನ್ 8 ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿವೆ. ಜೂನ್ 8ರಿಂದಲೇ ಮಾಲ್ ಗಳು ಓಪನ್ ಆಗಲಿದ್ದು, ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಜೂನ್ ಅಂತ್ಯದವರೆಗೂ ಶಾಲಾ-ಕಾಲೇಜುಗಳನ್ನು ಆರಂಭಗೊಳಿಸುವಂತಿಲ್ಲ. ಮದುವೆಗಳ ಮೇಲಿನ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಕೇಂದ್ರ ಮಾರ್ಗಸೂಚಿಯಂತೆ ರಾಜ್ಯದಲ್ಲಿಯೂ ನೈಟ್ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ಜೂನ್ 30ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ರವರಗೆ ಕರ್ಫ್ಯೂ ಇರಲಿದೆ. ಇನ್ನು ದೇವಸ್ಥಾನಗಳ …
Read More »ಕೊರೊನಾ ಮಧ್ಯೆ ಆಪರೇಷನ್ ಕಮಲ – ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ
ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ರಾಜಕೀಯದಲ್ಲಿ ಆಪರೇಷನ್ ಕಮಲ ಕೂಡ ಚುರುಕುಕೊಂಡಿದ್ದು, ಕಾಂಗ್ರೆಸ್ ಮುಖಂಡರೊಬ್ಬರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಟಿ.ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಿಬಿಎಂಪಿ ಸದಸ್ಯೆಯ ಪತಿ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ತಿಮ್ಮನಂಜಯ್ಯ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ಕೊರೊನಾ …
Read More »ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ನೇಮಕ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ಅವರನ್ನು ನೇಮಕ ಮಾಡಲಿದೆ. ಈ ಸಂಬಂಧ ರಾಜ್ಯ ಸರ್ಕಾರದದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಎನ್.ಆರ್.ಸಂತೋಷ್ ಸಿಎಂ ಯಡಿಯೂರಪ್ಪ ಅವರ ಆಪ್ತರಾಗಿದ್ದಾರೆ. ಅದರಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬಿಳಿಸುವಲ್ಲಿ ಸಂತೋಷ್ ಪ್ರಮುಖ ಪಾತ್ರವಹಿಸಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿನ ಅತೃಪ್ತ ಶಾಸಕರನ್ನು ಸಂಪರ್ಕಿಸಿದ್ದ ಬಿಜೆಪಿಯ ನಾಯಕರು, 16 ಅತೃಪ್ತ ಶಾಸಕರನ್ನು ಸೆಳೆದು ಶಾಸಕ …
Read More »