ಗೋಕಾಕ: ಕೊರೊನಾದಿಂದ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಡುಗೆ ತಯಾರಿಕರು ಆರ್ಥಿಕ ಸಮಸ್ಯೆಯನ್ನು ಎದುರಿಸುವಂತಾಗಿದೆ. ಆದ ಕಾರಣ ಸರ್ಕಾರ ನಮಗೆ ನೆರವು ನೀಡಬೇಕು ಎಂದು ಒತ್ತಾಯಿಸಿ ವೃತ್ತಿಪರ ಅಡುಗೆ ತಯಾರಕರ ಮಾಲೀಕರು ಹಾಗೂ ಕಾರ್ಮಿಕ ಸಂಘದಿಂದ ಶಾಸಕ ಸತೀಶ್ ಜಾರಕಿಹೊಳಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇಲ್ಲಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಮಂಗಳವಾರ ಭೇಟಿ ಮಾಡಿ ಮನವಿ ಮಾಡಿಕೊಂಡರು. ಜನರ ಆರೋಗ್ಯ ಹಾಗೂ ಕೊರೊನಾ …
Read More »ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಗೆ ಮುಖಮಾಡಿದ್ದಾರೆ.
ಬೆಂಗಳೂರು: ಮೂರು ದಿನಗಳ ಹಿಂದೆ ಬೆಂಗಳೂರು ಖಾಲಿ ಮಾಡಿದ್ದ ಜನ ಇದೀಗ ಮತ್ತೆ ರಾಜಧಾನಿಗೆ ಮುಖಮಾಡಿದ್ದಾರೆ. ಪರಿಣಾಮ ಸಂಜೆಯಿಂದ ತುಮಕೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆ 7 ಗಂಟೆಯ ಒಳಗಡೆ ಮನೆ ಸೇರಬೇಕಾದ ಹಿನ್ನೆಲೆಯಲ್ಲಿ ನೆಲಮಂಗಲ ಟೋಲ್ ಬಳಿ ಕಿಲೋಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿತ್ತು. ಇನ್ನೊಂದು ಕಡೆ ಉತ್ತರ ಭಾರತ ಕಾರ್ಮಿಕರು ಬೆಂಗಳೂರು ಬಿಟ್ಟು ದೊಡ್ಡ ಸಂಖ್ಯೆಯಲ್ಲಿ ತಮ್ಮೂರುಗಳಿಗೆ ತೆರಳುವುದು ಮುಂದುವರಿದಿದೆ. ಇವತ್ತು ಕೂಡ ಮಿಜೋರಾಂ, ಒಡಿಶಾ …
Read More »ಲಾಕ್ಡೌನ್ ಎಫೆಕ್ಟ್- ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟ
ಚಾಮರಾಜನಗರ: ಕೊರೊನಾ ಲಾಕ್ ಡೌನ್ ಎಪೆಕ್ಟ್ ನಿಂದ ಮಲೆಮಹದೇಶ್ವರನಿಗೆ 15 ಕೋಟಿಗೂ ಹೆಚ್ಚು ನಷ್ಟವಾಗಿದೆ. ಚಾಮರಾಜನಗರ ಜಿಲ್ಲೆಯ ಹನೀರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ದೇವಾಲಯ ಕಳೆದ ಎರಡು ತಿಂಗಳಿಂದ ಮುಚ್ಚಿದೆ. ಹೀಗಾಗಿ ಭಕ್ತರಿಲ್ಲದೆ ಮಹದೇಶ್ವರನ ಆದಾಯದಲ್ಲಿ ಭಾರೀ ನಷ್ಟವಾಗಿದೆ. ಹುಂಡಿಯೊಂದರಲ್ಲೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ. …
Read More »ರಾಜ್ಯದಲ್ಲಿ ಗ್ರಾಮೀಣ ಪ್ರದೇಶಕ್ಕೂ ಲಗ್ಗೆಯಿಟ್ಟ ಹೆಮ್ಮಾರಿ ಕೊರೊನಾ..!
ತುಮಕೂರು/ಬೆಂಗಳೂರು, ಮೇ 25- ಮಹಾಮಾರಿ ಕೊರೊನಾ ಹಳ್ಳಿ ಹಳ್ಳಿಗೂ, ಗಲ್ಲಿ ಗಲ್ಲಿಗೂ ವಕ್ಕರಿಸಿದೆ. ನಗರ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈಗ ಗ್ರಾಮೀಣ ಪ್ರದೇಶಗಳಿಗೂ ಕಾಲಿಟ್ಟಿದೆ. ಲಾಕ್ಡೌನ್ ನಿಯಮಗಳನ್ನು ಚಾಚೂತಪ್ಪದೆ ಕಡ್ಡಾಯವಾಗಿ ಪಾಲಿಸುತ್ತ ಕೊರೊನಾ ಸೋಂಕಿತರನ್ನಾಗಲಿ, ಶಂಕಿತರನ್ನಾಗಲಿ ಒಳಗೆ ಬಿಟ್ಟುಕೊಳ್ಳದೆ ಗ್ರಾಮಗಳಲ್ಲಿ ಅತಿ ಎಚ್ಚರಿಕೆಯಿಂದ ನಿಗಾ ವಹಿಸಿದ್ದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಗ್ರಾಮಾಂತರ ಪ್ರದೇಶದಲ್ಲಿ ಪತ್ತೆಯಾಗಿರಲಿಲ್ಲ. ಆದರೆ, ಲಾಕ್ಡೌನ್ ಸಡಿಲಿಕೆಯಾಗಿ ಹಳ್ಳಿಗಳಿಗೆ ಬರುವವರು, ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ …
Read More »ಇನ್ನೂ 2 ತಿಂಗಳು ‘ಸಂಡೆ ಲಾಕ್ಡೌನ್’ ಮುಂದುವರಿಕೆ..!
ಬೆಂಗಳೂರು, ಮೇ 25- ಕೊರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಿನ್ನೆ ಪ್ರಾಯೋಗಿಕವಾಗಿ ಮೊದಲ ಭಾನುವಾರ ಲಾಕ್ಡೌನ್ ಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿರುವ ಹಿನ್ನಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಮುಂದುವರೆಸಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮನೆಯಿಂದ ಆಚೆ ಬಾರದೆ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡು, ಕೊರೊನಾ ನಿಯಂತ್ರಿಸಲು ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂಬ ಸಂದೇಶ ಸಾರಿದ್ದರು. …
Read More »(ರಂಜಾನ್) ಹಬ್ಬವನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಡಿನ ಮುಸಲ್ಮಾನ ಬಾಂಧವರು ಇಂದು ಸರಳವಾಗಿ ಆಚರಿಸಿದರು.
ಮೂವತ್ತು ದಿನಗಳ ಉಪವಾಸ ಮತ್ತು ಪ್ರಾರ್ಥನೆ ನಂತರ ಬಂದಿರುವ ಈದ್ ಉಲ್ ಫಿತರ್ (ರಂಜಾನ್) ಹಬ್ಬವನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಡಿನ ಮುಸಲ್ಮಾನ ಬಾಂಧವರು ಇಂದು ಸರಳವಾಗಿ ಆಚರಿಸಿದರು. ಮುಸಲ್ಮಾನ ಬಾಂಧವರು ಶ್ರದ್ಧೆ, ನಿಷ್ಠೆ, ಭಕ್ತಿಯಿಂದ ಪ್ರತಿ ವರ್ಷ ಪವಿತ್ರ ರಂಜಾನ್ ತಿಂಗಳಿನಲ್ಲಿ ಉಪವಾಸ ಆಚರಿಸಿ ಹಬ್ಬ ಮಾಡುವುದು ವಾಡಿಕೆ. ರಂಜಾನ್ ತಿಂಗಳಿನಲ್ಲಿ ಉಪವಾಸವೆಂದರೆ ಸೂರ್ಯೋದಯಕ್ಕೂ ಮುನ್ನ ಆಹಾರ ಸೇವನೆ ಮಾಡಿ ಬಳಿಕ 14 ಗಂಟೆಗೂ ಹೆಚ್ಚು ಕಾಲ ನೀರು …
Read More »ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸುವರಿಗೆ ನಿರ್ಬಂಧ – ಕಾಡುದಾರಿಗಳು ಸಂಪೂರ್ಣ ಬಂದ್
ಚಾಮರಾಜನಗರ: ಕೊರೊನಾ ಪ್ರಕರಣಗಳ ಹೈ ರಿಸ್ಕ್ ರಾಜ್ಯಗಳಲ್ಲಿ ಒಂದಾದ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಪ್ರವೇಶ ನಿಷೇಧ ಹೇರಿರುವುದರಿಂದ ತಮಿಳರು ಗಡಿಭಾಗದಲ್ಲಿ ಕಾಡಿನ ಅಡ್ಡದಾರಿಗಳ ಮೂಲಕ ನುಸುಳುತ್ತಿದ್ದರು. ಇದೀಗ ಕಾಡುದಾರಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಕಾಡುಗಳ್ಳ ವೀರಪ್ಪನ್ ಕಾರ್ಯಕ್ಷೇತ್ರವಾದ ಮಹದೇಶ್ವರಬೆಟ್ಟ ಅರಣ್ಯದಲ್ಲಿ ಪಾಲಾರ್ ಹಳ್ಳ ದಾಟಿ ಬರುತ್ತಿದ್ದರು. ಹಾಗೆಯೇ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ನಿವಾಸಿಗಳು ಸಹ ಕಾಡುದಾರಿಗಳ ಮೂಲಕ ತಮಿಳುನಾಡಿಗೆ ಹೋಗಿ ಬರುತ್ತಿದ್ದರು. ಪಾಲಾರ್ ನದಿಯ ಪಕ್ಕದಲ್ಲೇ ಚೆಕ್ಪೋಸ್ಟ್ ಇದ್ದರೂ …
Read More »ಗ್ರಾಮದ ಮಹಿಳೆಗೆ ಕೊರೊನಾ- ಹಾಲು ಖರೀದಿ ನಿಲ್ಲಿಸಿದ ಕೆಎಂಎಫ್……..
ಬೆಂಗಳೂರು: ಗರ್ಭಿಣಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಕೆಎಂಎಫ್ ಗ್ರಾಮದಿಂದ ಹಾಲು ಖರೀದಿಯನ್ನು ನಿಲ್ಲಿಸಿದೆ. ಹೊಸಕೋಟೆ ತಾಲೂಕಿನ ಚಿಕ್ಕಕೊರಟಿ ಗ್ರಾಮದ ರೈತರ ಹಾಲು ಚರಂಡಿ ಸೇರಿದೆ. ಚಿಕ್ಕಕೊರಟಿ ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆ ಗ್ರಾಮದ ರೈತರಿಂದ ಹಾಲು ಖರೀದಿಯನ್ನು ಕೆಎಂಎಫ್ ನಿಲ್ಲಿಸಿದೆ. ಶುಕ್ರವಾರದಿಂದ ಹಾಲು ಖರೀದಿ ನಿಲ್ಲಿಸಲಾಗಿದ್ದು, ಸುಮಾರು ನಾಲ್ಕು ಸಾವಿರ ಲೀಟರ್ ನಷ್ಟು ಹಾಲನ್ನು ರೈತರನ್ನು ಚರಂಡಿಗೆ ಚೆಲ್ಲಿದ್ದಾರೆ. ಗ್ರಾಮದ ಬಹುತೇಕ ಜನರು ಹೈನುಗಾರಿಕೆಯಿಂದಲೇ ಜೀವನ …
Read More »ಕ್ವಾರಂಟೈನ್ ಕೇಂದ್ರದ ಬಳಿ ಬ್ರೆಡ್, ಮೊಟ್ಟೆ ಮಾರಾಟ: ಓಡಿ ಬಂದ ಜನ
ರಾಯಚೂರು: ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದ ಜನ ಆಹಾರ ಪದಾರ್ಥಗಳಿಗಾಗಿ ಹೊರಬರುತ್ತಿದ್ದಾರೆ. ಬ್ರೆಡ್, ಮೊಟ್ಟೆ ಹಾಗೂ ತಿನಿಸು ಪದಾರ್ಥಗಳ ಖರೀದಿಸಲು ಕ್ವಾರಂಟೈನ್ ಕೇಂದ್ರದಿಂದ ಜನ ಹೊರಬರುತ್ತಿದ್ದಾರೆ. ಕ್ವಾರಂಟೈನ್ ಕೇಂದ್ರದ ಮುಂದೆಯೇ ವ್ಯಾಪಾರಿಗಳು ಬ್ರೆಡ್ ಸೇರಿ ಇತರೆ ಆಹಾರ ಪದಾರ್ಥಗಳನ್ನ ತಂದು ಮಾರಾಟ ಮಾಡುತ್ತಿದ್ದಾರೆ. ಆಂಧ್ರಪ್ರದೇಶ, ತೆಲಂಗಾಣದಿಂದ ಬಂದವರಿಗಾಗಿ ಮಾಡಿರುವ ಕ್ವಾರಂಟೈನ್ ಕೇಂದ್ರದಲ್ಲಿ ಜನರ ಓಡಾಟಕ್ಕೆ ಯಾವುದೇ ನಿರ್ಭಂದವಿಲ್ಲದಂತಾಗಿದೆ. ಕಾವಲಿಗೆ ಪೊಲೀಸರು ಇದ್ದರೂ ಕ್ವಾರಂಟೈನ್ ಕೇಂದ್ರದ ಗೇಟ್ …
Read More »ರಾಜ್ಯದಲ್ಲಿ ‘ಮಹಾ’ ಸ್ಫೋಟ- ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆ………..
ಬೆಂಗಳೂರು: ಹಾಸನ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಕೊರೊನಾ ಸ್ಫೋಟಗೊಂಡಿದೆ. ಪರಿಣಾಮ ರಾಜ್ಯದಲ್ಲಿ ಇಂದು ಒಂದೇ ದಿನ 138 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಯಲ್ಲಿ ಚಿಕ್ಕಬಳ್ಳಾಪುರ 47, ಹಾಸನ 14, ತುಮಕೂರು 8, ಬೀದರ್ 9, ರಾಯಚೂರು 10, ಶಿವಮೊಗ್ಗ 2, ಬೆಂಗಳೂರು, …
Read More »