Breaking News

Uncategorized

ಬೆಂಗಳೂರನ್ನು ಬೆಚ್ಚಿಬೀಳಿಸಿದ ಭಯಂಕರ ಶಬ್ದದ ರಹಸ್ಯ ಇಲ್ಲಿದೆ ನೋಡಿ..!

ಬೆಂಗಳೂರು, ಮೇ 20- ನಗರದ ಹಲವು ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ ಭಾರೀ ಶಬ್ದ ಕೇಳಿಬಂದಿದ್ದು, ಜನರು ಭಯಭೀತರಾಗಿದ್ದರು. ಈ ಶಬ್ದಕ್ಕೆ ಸುಖೋಯ್(ಎಸ್‍ಯು30) ಯುದ್ಧ ವಿಮಾನದ ಸದ್ದು ಎಂದು ತಿಳಿದುಬಂದಿದೆ. ಶಬ್ದಕ್ಕಿಂತ ಹೆಚ್ಚು ವೇಗವಾಗಿ ಚಲಿಸುವಂತಹ ಭಾರತೀಯ ವಾಯುಪಡೆಯ ರಷ್ಯಾ ನಿರ್ಮಿತ ಸೂಪರ್ ಸೋನಿಕ್ ಯುದ್ದವಿಮಾನದ ಶಬ್ದವಾಗಿದೆ ಎಂದು ಹೇಳಲಾಗಿದೆ. ಮಧ್ಯಾಹ್ನ 1.20ರಿಂದ 1.30ರ ಗಂಟೆಯಲ್ಲಿ ಹೆಚ್‍ಎಸ್‍ಆರ್ ಲೇಔಟ್, ಮಾರ್ತಹಳ್ಳಿ, ಸಿ.ವಿ.ರಾಮನಗರ, ವರ್ತೂರು, ಕುಂದಲಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹಲಸೂರು, ವೈಟ್‍ಫೀಲ್ಡ್, ಟಿನ್ …

Read More »

20ಕ್ಕೂ ಹೆಚ್ಚು ಜಾನುವಾರು ಕೊಂದಿದ್ದ ವ್ಯಾಘ್ರ ಸೆರೆ- ನಿಟ್ಟುಸಿರು ಬಿಟ್ಟ ಕಾಡಂಚಿನ ಜನ…..

ಚಾಮರಾಜನಗರ: ಕಾಡಂಚಿನ ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ, ವಡ್ಡಗೆರೆ, ಚಿರಕನಹಳ್ಳಿ ಭಾಗದಲ್ಲಿ ಹೆಚ್ಚಾಗಿದ್ದ ಹುಲಿ ಭೀತಿ ಕಾಡುತ್ತಿತ್ತು. ಹುಲಿ 20ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿತ್ತು. ಕಳೆದ ಒಂದು ವಾರದಿಂದ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಸಚಿವ ಆನಂದ್ ಸಿಂಗ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರಿಗೆ ಕಂಟಕವಾಗಿರುವ ಹುಲಿ …

Read More »

ಯಾದಗಿರಿಯಲ್ಲಿ ರಸ್ತೆಗಿಳಿಯುತ್ತಿಲ್ಲ ಸರ್ಕಾರಿ ಬಸ್…………

ಯಾದಗಿರಿ: ನಗರದಲ್ಲಿ ಲಾಕ್‍ಡೌನ್ ಮುಂದುವರಿದಿದ್ದು, 144 ಸೆಕ್ಷನ್ ಇನ್ನೂ ಜಾರಿಯಲ್ಲಿರುವ ಕಾರಣ ಇಂದು ಯಾದಗಿರಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭಿಸದಿರಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಹೀಗಾಗಿ ಯಾದಗಿರಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭವಾಗಿಲ್ಲ.   ಬಸ್ ಆರಂಭಿಸಲು ಕೆಎಸ್‍ಆರ್‍ಟಿಸಿ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ, ಜೊತೆಗೆ ಲಾಕ್‍ಡೌನ್ ಸಮಯದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಇನ್ನೂ ಜಾರಿಯಲ್ಲಿರುವ ಕಾರಣ, ಒಂದು ದಿನ ತಡವಾಗಿ ಮೇ 20ರಂದು ಬೆಳಗ್ಗೆ 7.30ರಿಂದ ಜಿಲ್ಲೆಯಿಂದ ವಿವಿಧ …

Read More »

ನಾಲ್ಕು ದಿನ ಹಸುಗೂಸಿಗೆ ವಿಷ ಕೊಟ್ಟು ಕೊಂದ ತಂದೆ, ಅಜ್ಜಿ

ಚೆನ್ನೈ: ಮತ್ತೆ ಹೆಣ್ಣು ಮಗುವಾಯಿತು ಎಂದು ನಾಲ್ಕು ದಿನದ ಹಸುಗೂಸನ್ನು ಸ್ವಂತ ತಂದೆ ಮತ್ತು ಅಜ್ಜಿ ಸೇರಿಕೊಂಡು ಕೊಲೆ ಮಾಡಿರುವ ಅಮಾನವೀಯ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಜಿಲ್ಲೆಯ ಸೊಲವಂದನ್ ಪಂಚಾಯತ್ ಪಟ್ಟಣದಲ್ಲಿ ಮಗುವಿನ ತಾಯಿ ಚಿತ್ರಾ ಮನೆಯಲ್ಲಿ ಇಲ್ಲದಿದ್ದಾಗ ಕೊಲೆ ಮಾಡಲಾಗಿದೆ. ಇದೀಗ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಗುವಿನ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳನ್ನು …

Read More »

ಇನ್‍ಸ್ಟಾಗ್ರಾಮ್ ತೊರೆದ ಕಣ್ಸನ್ನೆ ಚೆಲುವೆ………..

ತಿರುವನಂತಪುರಂ: ತನ್ನ ಕಣ್ಸನ್ನೆ ಮೂಲಕವೇ ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ಸಾಮಾಜಿಕ ಜಾಲತಾಣ ಇನ್‍ಸ್ಟಾಗ್ರಾಮ್‍ನಿಂದ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದಾರೆ. ಹೌದು ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿರುವ ಪ್ರಿಯಾ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ. ಇದನ್ನು ಕಂಡ ಅವರ …

Read More »

ಲಾಕ್‍ಡೌನ್‍ನಿಂದ ಹೆಚ್ಚಾದ ಆರ್ಥಿಕ ಸಮಸ್ಯೆ- ಬೆಂಕಿ ಹಚ್ಚಿಕೊಂಡು 26ರ ಗೃಹಿಣಿ ಆತ್ಮಹತ್ಯೆ

ಹೈದರಾಬಾದ್: ಕೊರೊನಾ ವೈರಸ್ ಎಂಬ ಮಹಾಮಾರಿ ಹರಡುವಿಕೆಯನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಹೇರಲಾಗಿತ್ತು. ಆದರೆ ಈ ಲಾಕ್ ಡೌನ್ ನಿಂದಾಗಿ ಸ್ವಲ್ಪ ಮಟ್ಟಿಗೆ ಪ್ರಯೋಜನವಾದರೆ ಇನ್ನೂ ಕೆಲವರ ಬದುಕಿನಲ್ಲಿ ಕತ್ತಲು ಕವಿದಂತಾಗಿದೆ. ಹಾಗೆಯೇ ಆರ್ಥಿಕ ಸಮಸ್ಯೆಯನ್ನು ಎದುರಿಸಲಾಗಿದೆ 26 ವರ್ಷದ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಘಟನೆ ಹೈದರಾಬಾದ್ ನ ಪರಿಗಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಆರ್ಥಿಕವಾಗಿ ಸರಳ ಕುಟುಂಬ ಹಿಂದುಳಿದಿತ್ತು. ಇದೀಗ …

Read More »

ರೈತ ಮುಖಂಡನ ಸರಳ ವಿವಾಹ – ಜೋಡಿಯಿಂದ ಮದ್ವೆ ಖರ್ಚಿನ ಹಣ ದೇಣಿಗೆ

ಚಾಮರಾಜನಗರ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅನೇಕರು ತುಂಬಾ ಸರಳವಾಗಿ ಮದುವೆಯಾಗುತ್ತಿದ್ದಾರೆ. ಇದೀಗ ರೈತ ಮುಖಂಡ ಕೊರೊನಾ ಲಾಕ್‍ಡೌನ್‍ನಿಂದಾಗಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಡಬೂರು ನಿವಾಸಿ ಮಂಜು ಅದೇ ಗ್ರಾಮದ ಮಾದಲಾಂಬಿಕೆ ವಧುವಿನ ಜೊತೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೇ ವರ ಮಂಜು ತಮ್ಮ ಮದುವೆಗೆಂದು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವರ …

Read More »

ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖ

ಬೆಳಗಾವಿ,-ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-298 ಪಿ-418 ಪಿ- 448 ಪಿ-484 ಪಿ-495 ಪಿ-496 ಪಿ-541 ಪಿ-542 ಪಿ-551

Read More »

ಧಾರವಾಡದಲ್ಲಿಂದು ಒಂದೇ ದಿನ ನಾಲ್ಕು ಕೊರೊನಾ ಪ್ರಕರಣಗಳು…..

ಧಾರವಾಡ: ಕಳೆದ ವಾರದ ಕೊನೆಯವರೆಗೂ ಯಾವುದೇ ಹೊಸ ಕೇಸ್ ಇಲ್ಲದೆ ತಣ್ಣಗಾಗಿದ್ದ ಧಾರವಾಡ ಜಿಲ್ಲೆಯಲ್ಲಿಗ ಕೊರೊನಾ ರಣಕೇಕೆ ಮತ್ತೆ ಶುರುವಾಗಿದ್ದು, ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಇಂದು ದೃಢ ಪಟ್ಟಿರುವ ನಾಲ್ಕು ಪ್ರಕರಣ ಪೈಕಿ ಒಬ್ಬರಿಗೆ ಸ್ಥಳೀಯ ಸಂಪರ್ಕದಿಂದ ಸೋಂಕು ತಗುಲಿರೋದು ಆಗಿದ್ರೆ, ಉಳಿದ ಮೂರೂ ಸಹ ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆ ಹೊಂದಿವೆ. ಮುಂಬೈನಿಂದ ಬಂದಿರುವ 39 ವರ್ಷದ ಪುರುಷ (ರೋಗಿ-1123) ಹಾಗೂ 28 ವರ್ಷದ …

Read More »

ಮೇ 31ರವರೆಗೂ ಲಾಕ್‍ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರ್ಕಾರ………..

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗುಲಿ ಆತಂಕ ಸೃಷ್ಟಿಸಿದ ಹಿನ್ನೆಲೆ ಮೇ 31ರ ಮಧ್ಯರಾತ್ರಿಯವರೆಗೂ ಲಾಕ್‍ಡೌನ್ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರವು ಆದೇಶ ಹೊರಡಿಸಿದೆ. ಇತ್ತ ತಮಿಳುನಾಡು, ಪಂಜಾಬ್ ಹಾಗೂ ಪಶ್ಚಿಮ ಬಂಗಾಳದಲ್ಲೂ ಲಾಕ್‍ಡೌನ್ ಅನ್ನು ಮೇ 31ರ ವರೆಗೆ ವಿಸ್ತರಿಸಲಾಗಿದೆ. ಮಹಾರಾಷ್ಟ್ರ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಸಾಂಕ್ರಾಮಿಕ ರೋಗ ಕಾಯ್ದೆ 1898ರ ಅಡಿ ಮೇ 17ರ …

Read More »