ತುಮಕೂರು: ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನ ಗೂಗಡನಹಳ್ಳಿ ಕೆರೆಯ ವೀಕ್ಷಣೆ ವೇಳೆ ರಮೇಶ್ ಜಾರಕಿಹೊಳಿ ಮತ್ತು ಕೆ.ಎನ್.ರಾಜಣ್ಣ ಭೇಟಿಯಾಗಿದ್ದರು. ಈ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ನಮಗೆ ಬೆಂಬಲ ನೀಡಿದರು. ಸರ್ಕಾರ ಬೀಳಿಸಲು ಒಂದು ಉದ್ದೇಶವಿತ್ತು. ಹಾಗಾಗಿ …
Read More »ಜೂ.ಎನ್ಟಿಆರ್ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಕೆಜಿಎಫ್ ನಿರ್ದೇಶಕ……….
ಹೈದರಾಬಾದ್: ಕೆಜಿಎಫ್ ಸಿನಿಮಾ ಹಿಟ್ ಆದ ಬೆನ್ನಲ್ಲೇ ಚಿತ್ರ ತಂಡ ಚಾಪ್ಟರ್-2ನಲ್ಲಿ ಬ್ಯುಸಿಯಾಗಿತ್ತು. ಇದೀಗ ಚಾಪ್ಟರ್-2 ಚಿತ್ರೀಕರಣ ಅಂತಿಮ ಹಂತ ತಲುಪಿದ್ದು, ಚಿತ್ರ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲ ಮನೆ ಮಾಡಿತ್ತು. ಇದರ ಬೆನ್ನಲ್ಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾದಲ್ಲಿ ಮಹೇಶ್ ಬಾಬು ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಎಲ್ಲ ಗಾಸಿಪ್ಗಳು ಸುಳ್ಳಾಗಿದ್ದು, ಸರ್ಪ್ರೈಸ್ …
Read More »ಬಿಜೆಪಿಗೆ ಭಾರೀ ಮುಖಭಂಗ – ಗುಜರಾತ್ ಕಾನೂನು ಸಚಿವರ ಗೆಲುವು ಅಕ್ರಮ……….
ಅಹಮದಾಬಾದ್: ಗುಜರಾತ್ ನಲ್ಲಿರುವ ಬಿಜೆಪಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ಸಚಿವರಾಗಿರುವ ಭೂಪೇಂದ್ರ ಸಿಂಹ ಚೂಡಾಸಮಾ ಅವರ ಚುನಾವಣಾ ಗೆಲುವನ್ನು ಹೈಕೋರ್ಟ್ ರದ್ದುಗೊಳಿಸಿದೆ. 2017ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಭೂಪೇಂದ್ರ ಸಿಂಹ ಚೂಡಾಸಮಾ ಗೆದ್ದಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾ. ಪರೇಶ್ ಉಪಾಧ್ಯಾಯ ನೇತೃತ್ವದ ಪೀಠ ಮತ ಎಣಿಕೆಯ ವೇಳೆ ಅಕ್ರಮ ನಡೆದಿದೆ ಎಂದು ಅಭಿಪ್ರಾಯಪಟ್ಟು ಗೆಲುವನ್ನು ರದ್ದುಗೊಳಿಸಿ ತೀರ್ಪು ಪ್ರಕಟಿಸಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ …
Read More »ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿತರಿಸಿದರು. ಮಂಗಳವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಚೆಕ್ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಇಡೀ ಕ್ಷೇತ್ರ ನನಗೆ ಕುಟುಂಬ ಇದ್ದಂತೆ. ಕ್ಷೇತ್ರದ ಜನರು ನನ್ನ ಮೇಲಿಟ್ಟ ವಿಶ್ವಾಸ, ಅವರು ನೀಡಿದ ಸಹಾಯ, ಸಹಕಾರವನ್ನು ನಾನೆಂದೂ ತೀರಿಸಲು ಸಾಧ್ಯವಿಲ್ಲ. ನಮ್ಮ …
Read More »ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು.
ಬೆಂಗಳೂರು: ಮೂರನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಾ ಬಂದರೂ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನದಲ್ಲಿ 42 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಇಂದು ಬರೋಬ್ಬರಿ 15 ಜನರಲ್ಲಿ ಸೋಂಕು ದೃಢವಾಗಿದೆ. ಧಾರವಾಡದಲ್ಲಿ 9, ಹಾಸನ …
Read More »ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ:ಶಾಸಕ ಗೌರಿಶಂಕರ
ತುಮಕೂರು: ದೇಶಾದ್ಯಂತ ಕೊರೊನಾ ವಾರಿಯರ್ಸ್ಗೆ ಅನೇಕ ರೀತಿಯಲ್ಲಿ ಸನ್ಮಾನ ಮಾಡಲಾಗುತ್ತಿದೆ. ಇದೀಗ ತುಮಕೂರು ಗ್ರಾಮಾಂತರದ ಕೊರೊನಾ ವಾರಿಯರ್ಸ್ಗೆ ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಗಿದೆ. ತುಂಬು ಗರ್ಬಿಣಿಯಾದರೂ ಹಗಲಿರುಳು ದುಡಿಯುತ್ತಿದ್ದ ಆಶಾ ಕಾರ್ಯಕರ್ತೆಗೆ ಸೀಮಂತ ಮಾಡಿ ಕೃತಜ್ಞತೆ ಸಲ್ಲಿಸಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ ನೇತೃತ್ವದಲ್ಲಿ ಈ ಅಭಿನಂದನಾ ಕಾರ್ಯಕ್ರಮ ನೆರವೇರಿದೆ. ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಮನೆ ಮನೆಗೂ ತೆರಳಿ ಕೊರೊನಾ ತಡೆಗಟ್ಟುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಅಂತವರ ಸೇವೆಯನ್ನು …
Read More »ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..
ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …
Read More »ಇದ್ದಕ್ಕಿದ್ದಂತೆ ಯಾದಗಿರಿಯಲ್ಲಿ ಲಾಕ್ಡೌನ್ ಬಿಗಿ………..
ಯಾದಗಿರಿ: ಗ್ರೀನ್ ಝೋನ್ ನಲ್ಲಿರುವ ಯಾದಗಿರಿಯಲ್ಲಿ ಸಡಿಲಿಕೆಯಾಗಿದ್ದ ಲಾಕ್ ಡೌನ್ ಅನ್ನು ದಿಢೀರ್ ಆಗಿ ಮತ್ತಷ್ಟು ಬಿಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೊಂಕು ಹರಡುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೊದಲನೆಯ ಹಂತದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿವರೆಗೂ ಮತ್ತೆ ಬೀಗಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ …
Read More »ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಲೆಬೆನ್ನೂರು ಪುರಸಭೆಯ ಕಾಂಗ್ರೆಸ್ ಸದಸ್ಯ ಅಬ್ದುಲ್ ಲತೀಫ್ ಮತ್ತು ಆತನ ಸ್ನೇಹಿತರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಜಾಲದ ಖಚಿತ ಮಾಹಿತಿಯನ್ನು ಆಧರಿಸಿ ಮಲೆಬೆನ್ನೂರು ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಅಬ್ದುಲ್ ಲತೀಫ್, ಸರ್ ಅಲಿ, ರಜಾಕ್, ನಧೀರ್ ನನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರದಿಂದ ಬಡವರಿಗೆ …
Read More »ಕೊರೊನಾ ಸೋಂಕು ತಡೆಗಟ್ಟಲು ತಯಾರಿಸಲಾದ ಔಷಧಿಯ ಸ್ಯಾಂಪಲ್ ಕುಡಿದು ಸಂಶೋಧಕರೊಬ್ಬರು ಸಾವನ್ನಪ್ಪಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ
ಚೆನ್ನೈ: ಕೊರೊನಾ ಸೋಂಕು ತಡೆಗಟ್ಟಲು ತಯಾರಿಸಲಾದ ಔಷಧಿಯ ಸ್ಯಾಂಪಲ್ ಕುಡಿದು ಸಂಶೋಧಕರೊಬ್ಬರು ಸಾವನ್ನಪ್ಪಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ‘ನಿವಾರಣ್-90’ ಎಂಬ ಕೆಮ್ಮು ಮತ್ತು ಶೀತದ ಔಷಧಿ ಕಂಪನಿಯ ಅಧಿಕಾರಿ ಶಿವನೇಸನ್(47) ಮೃತ ವ್ಯಕ್ತಿ. ಕೊರೊನಾ ಮಹಾಮಾರಿಗೆ ಔಷಧಿ ಕಂಡುಹಿಡಿಯಲು ದೇಶ-ವಿದೇಶಗಳಲ್ಲಿ ಸಂಶೋಧಕರು ಪೈಪೋಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲೂ ಕೂಡ ಔಷಧಿಗಾಗಿ ಸರ್ಕಾರಿ ಪ್ರಯೋಗಾಲಯಗಳು ಮಾತ್ರವಲ್ಲದೆ ಖಾಸಗಿ ಸಂಸ್ಥೆಗಳಲ್ಲೂ ತೀವ್ರ ಗತಿಯಲ್ಲಿ ಸಂಶೋಧನೆ ನಡೆಸಲಾಗುತ್ತಿದೆ. ಕೆಮ್ಮು ಮತ್ತು ಶೀತಕ್ಕೆ ಇನ್ಸ್ಟೆಂಟ್ ಔಷಧಿ …
Read More »