ಬೆಂಗಳೂರು: ಕೊರೊನಾ ಒಕ್ಕರಿಸಿದಾಗಿನಿಂದ ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸಾರಿ ಸಾರಿ ಹೇಳಲಾಗುತ್ತಿದೆ. ಆದರೆ ಜನ ಮಾತ್ರ ಡೋಂಟ್ ಕೇರ್ ಎನ್ನುವಂತೆ ವರ್ತಿಸಿದ್ದು, ಇದಕ್ಕೆ ಪ್ರತಿಯಾಗಿ ಬಿಬಿಎಂಪಿ ಸಹ ದಂಡ ಹಾಕುತ್ತಿದೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದೆ ಇರುವವರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಜೂನ್ 25 ರಂದು 2.64 ಲಕ್ಷ ರೂ. ದಂಡ ಸಂಗ್ರಹವಾಗಿದೆ. ಮಾಸ್ಕ್ ಧರಿಸದಿರುವ ಒಟ್ಟು 1,268 ಜನರಿಂದ 2.53 ಲಕ್ಷ ರೂ. ದಂಡ …
Read More »60 ವರ್ಷದ ವೃದ್ಧೆ ಕೊರೊನಾ ಪಾಸಿಟಿವ್ ದೃಢಪಟ್ಟುನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು: ಮಹಾಮಾರಿ ಕೊರೊನಾ ರಾಜ್ಯವನ್ನು ಒಕ್ಕರಿಸಿದ ಬಳಿಕ ಜನ ಜೀವನ ಅಸ್ತವ್ಯಸ್ತವಾಗಿದ್ದಲ್ಲದೇ, ಕೆಲವರು ಸೋಂಕಿಗೆ ಹೆದರಿ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಅಂತೆಯೇ ನಗರದ ಕೆ.ಸಿ ಜನರಲ್ ಆಸ್ಪತೆಯಲ್ಲಿಯೂ ಕೂಡ ಅಂತದ್ದೇ ಘಟನೆಯೊಂದು ನಡೆದಿದೆ. ಹೌದು. ಕುಣಿಗಲ್ ಮೂಲದ 60 ವರ್ಷದ ವೃದ್ಧೆ ಕೊರೊನಾ ಪಾಸಿಟಿವ್ ದೃಢಪಟ್ಟು ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ನಿನ್ನೆ ತಡರಾತ್ರಿ 2 ಗಂಟೆ ಸುಮಾರಿಗೆ ಬಾತ್ ರೂಮ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. …
Read More »2ನೇ ವರ್ಷವೂ ಸ್ವಿಸ್ ಬ್ಯಾಂಕಿನಲ್ಲಿ ಜಮಾ ಆಗ್ತಿದ್ದ ಭಾರತೀಯ ಹಣ ಇಳಿಕೆ……..
ನವದೆಹಲಿ: ಸ್ವಿಸ್ ಬ್ಯಾಂಕಿನಲ್ಲಿ ಜಮೆ ಭಾರತದ ಹಣದ ಮೊತ್ತವು ಎರಡನೇ ವರ್ಷವೂ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಸ್ವಿಟ್ಜರ್ ಲ್ಯಾಂಡ್ ಸೆಂಟ್ರಲ್ ಬ್ಯಾಂಕ್ ತನ್ನ ವಾರ್ಷಿಕ ವರದಿಯಲ್ಲಿ ಭಾರತೀಯರು ಜಮೆ ಮಾಡುತ್ತಿದ್ದ ಮೊತ್ತ 2019ರಲ್ಲಿ ಕಡಿಮೆಯಾಗಿದೆ ಎಂದು ಹೇಳಿದೆ. 2019ರಲ್ಲಿ ಭಾರತೀಯರು 6625 ಕೋಟಿ ರೂ (899 ಮಿಲಿಯನ್ ಸ್ವಿಸ್ ಫ್ರ್ಯಾಂಕ್) ಜಮಾ ಮಾಡಿದ್ದಾರೆ. ಇದು 2018ರಲ್ಲಿ ಜಮೆಯಾದ ಶೇ.8ರಷ್ಟು ಕಡಿಮೆ. ಸತತ ಎರಡು ವರ್ಷಗಳಿಂದ ಭಾರತೀಯರು ಜಮೆ ಮಾಡುತ್ತಿದ್ದ ಮೊತ್ತದಲ್ಲಿ …
Read More »ಹೋಟೆಲ್, ಹಜ್ ಭವನದಲ್ಲಿ ಚಿಕಿತ್ಸೆ – ಸಿಎಂ ಸಭೆಯ ಮುಖ್ಯಾಂಶಗಳು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ಇಂದು ಬೆಂಗಳೂರು ನಗರದಲ್ಲಿ ಕೊರೊನಾ ಪರಿಸ್ಥಿತಿ ಪರಿಶೀಲನೆ ಕುರಿತು ಸಭೆ ಮಾಡಲಾಯ್ತು. ಬೆಂಗಳೂರಿನಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಸೋಂಕು ಹೆಚ್ಚುತ್ತಿದೆ. ಮಹಾಮಾರಿ ಕೊರೊನಾ ಬೆಂಗಳೂರಿನಲ್ಲಿ ಸಮುದಾಯದ ಮಟ್ಟದಲ್ಲಿ ಸ್ಫೋಟಗೊಂಡಿದ್ಯಾ ಎಂಬ ಪ್ರಶ್ನೆ ಎದ್ದಿದೆ. ಹೊಸ ಹೊಸ ಏರಿಯಾಗಳಿಗೆ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಇಂದು ನಡೆದ ಸಭೆಯಲ್ಲಿ ಕೋವಿಡ್ 19 …
Read More »ಸುಲಲಿತ ವ್ಯವಹಾರಕ್ಕೆ ನೆರವಾಗಲಿದೆ ಈ ತಿದ್ದುಪಡಿ ಕಾಯ್ದೆ
ಬೆಂಗಳೂರು: ಉದ್ಯಮ ಸ್ಥಾಪನೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ, “ಮೊದಲು ಉದ್ದಿಮೆ ಆರಂಭಿಸಿ, 3 ವರ್ಷದ ಬಳಿಕ ಪರವಾನಗಿ ಪಡೆಯುವ ವಿಧಾನ” ಜಾರಿಗೊಳಿಸಲು ನಿರ್ಧರಿಸಿದೆ. ಅದಕ್ಕಾಗಿ ‘ಕರ್ನಾಟಕ ಕೈಗಾರಿಕಾ ಸೌಲಭ್ಯ ಕಾಯ್ದೆ- 2002’ಕ್ಕೆ ತಿದ್ದುಪಡಿ ತರಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉದ್ಯಮಗಳಿಗೆ ಅನುಕೂಲ ಒದಗಿಸುವ ಜತೆಗೆ ಹೊಸ ಹೂಡಿಕೆಗಳಿಗೆ ಅನುಕೂಲವಾಗುವಂತೆ ನಿಯಂತ್ರಕ ಚೌಕಟ್ಟನ್ನು ಸರಳಗೊಳಿಸಲು ರಾಜ್ಯ ಸರ್ಕಾರ, ಕರ್ನಾಟ ಕೈಗಾರಿಕ …
Read More »ತಬ್ಬಲಿಗಳಿಗಾಗಿ ಹಿಕೆ ಹಳ್ಳಿ ಹಿರಿಯರು ಹಿರಿತನ,ಕೂಡ್ಲಿಗಿ ಪೊಲೀಸರು ರಕ್ಷಣೆ ತೋರಬೇಕು
-ಬಳ್ಳಾರಿ :ಜಿಲ್ಲೆ ಸಂಡೂರು ತಾಲೂಕು ಕೂಡ್ಲಿಗಿ ಪೊಲೀಸ್ ಠಾಣೆವ್ಯಾಪ್ತಿಯ ಹಿರೀಕೆರಿಯಾಗಿನಹಳ್ಳಿಯಲ್ಲಿ, ಕೆಲ ತಂಗಳ ಹಿಂದೆ ಜರುಗಿದೆ ಎನ್ನಲಾದ ಕೊಲೆಗೆ ಮೂರುಮಕ್ಕಳ ತಾಯಿ ಬಲಿಯಾಗಿದ್ದಾಳೆ.ಅವಳನ್ನು ಕೊಲೆಗೈದ ಪ್ರಮುಖ ಆರೋಪಿಯಂದು ಹೇಳಲಾಗುವ,ಅವಳ ಗಂಡ ಜೈಲುಪಾಲಾಗಿದ್ದಾನೆ ಹೀಗಾಹಿ ಅವಳ ಮೂವರು ಮಕ್ಕಳು ಅಕ್ಷರಸಃ ತಬ್ಬಲಿಯಾಗಿವೆ.ಸಧ್ಯ ಅವರನ್ನು ಮೃತಳ ತವರು ಮನೆಯವರೇ ಮೂವರು ಕಂರಮ್ಮಗಳನ್ನು ಲಾಲನೆ ಪಾಲನೆ ಮಾಡುತ್ತಿದ್ದಾರೆ.ಮೃತಳ ತಾಯಿಯೇ ಮಕ್ಕಳಿಗೆ ತಾಯಿಯಂತೆ ಪೋಷಣೆ ನೀಡುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ತಂದೆ ರಂಗಪ್ಪ,ತಾಯಿರತ್ನಮ್ಮ,ಸಹೋದರ ನಾಗರಾಜ …
Read More »ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ..?
ಬೆಂಗಳೂರು(ಜೂ.25): ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ. ಈ ಮೂಲಕ ಭಾರತದಲ್ಲಿ ದೊಡ್ಡ ಮಟ್ಟದ ಸಮುದಾಯಕ್ಕೆ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಮಾಸ್ಕ್ ತಯಾರಿಕೆಯಿಂದ ಮಾರುಕಟ್ಟೆಯಲ್ಲಿ ಮಾಸ್ಕ್ …
Read More »ಜುಲೈ 5ರ ತನಕ ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡದಿರಲು ಯಡಿಯೂರಪ್ಪ ತಿರ್ಮಾನಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಈ ಮಧ್ಯೆ ಇಂದಿನಿಂದ ಎಸ್‍ಎಸ್‍ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಹೀಗಾಗಿ ಪರೀಕ್ಷೆ ಮಗಿದ ಬಳಿಕವಷ್ಟೇ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಹಲವು ಸಚಿವರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿರುವ ಸಿಎಂ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯುವ ತನಕ ಲಾಕ್ ಡೌನ್ ಎಲ್ಲಿಯೂ …
Read More »ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ
ಬೆಳಗಾವಿ: ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಸ್ವಂತ ಪೋಷಕರೇ ಕಳೆದ 10 ವರ್ಷಗಳಿಂದ ಕಾಲಿಗೆ ಬೇಡಿ ಹಾಕಿ ಕಟ್ಟಿ ಹಾಕಿರುವ ಅಮಾನವೀಯ ಘಟನೆ ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ್ ಬಳಗಣ್ಣವರ್ ಎಂಬ ವ್ಯಕ್ತಿಗೆ ಪೋಷಕರೇ ಬೇಡಿ ತೊಡಿಸಿ, ಪಾಳುಬಿದ್ದ ಮನೆಯಲ್ಲಿ ಕೂಡಿ ಹಾಕಿದ್ದಾರೆ. ವಿಠ್ಠಲ್ 10 ವರ್ಷಗಳ ಹಿಂದೆ ಬೆಳಗಾವಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದನು. ಬಳಿಕ ಊರಿಗೆ ಬಂದ ಮೇಲೆ ಮಾನಸಿಕ ಅಸ್ವಸ್ಥನಾಗಿದ್ದನು. ಆಸ್ಪತ್ರೆಗೆ ತೋರಿಸಿದರೂ ಗುಣಮುಖನಾಗಿರಲಿಲ್ಲ. …
Read More »ಮಲೆನಾಡು ಭಾಗದಲ್ಲಿಇಂತಹ ಮಳೆ ಸುರಿದಿದ್ದು ಇದೇ ಮೊದಲು,ಜನ ಭಯಗೊಂಡಿದ್ದಾರೆ.
ಚಿಕ್ಕಮಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕೊರೊನಾ ಪ್ರಕರಣಗಳು ಜನರನ್ನು ಕಂಗೆಡಿಸಿದೆ. ಆದರೆ ಈ ಮಧ್ಯೆ ಬೆಂಗಳೂರು, ಚಿಕ್ಕೋಡಿ, ಯಾದಗಿರಿ, ಮಲೆನಾಡು ಭಾಗ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಾದ್ಯಂತ ತಡರಾತ್ರಿ ಅಧಿಕವಾಗಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ಮುಂಗಾರು ಆರಂಭದಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತಾಪಿ ವರ್ಗದಲ್ಲಿ ಬಿತ್ತನೆಯ ಕಾರ್ಯ ಜೋರಾಗಿ ನಡೆಯುತ್ತಿದೆ. ಜಿಲ್ಲೆಯ ಶಹಪುರ, ಸುರಪುರ, ಗುರುಮಿಠಕಲ್ ತಾಲೂಕಿನಲ್ಲಿ …
Read More »