ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಂಬರ್ ಒನ್ ಆಗಿರುವ ಫೇಸ್‍ಬುಕ್ ಭಾರತೀಯ ಬಳಕೆದಾರರಿಗೆ ಮಾತ್ರ ವಿಶೇಷ ಪ್ರೈವೆಸಿಯನ್ನು ಫೀಚರ್ ನೀಡಲು ಮುಂದಾಗುತ್ತಿದೆ. ಇಲ್ಲಿಯವರೆಗೆ ಫೇಸ್‍ಬುಕ್‍ನಲ್ಲಿ ಫ್ರೆಂಡ್ಸ್ ಆಗದೇ ಇದ್ದರೂ ಅವರ ವಾಲ್ ನಲ್ಲಿ ಬರೆದ ಪೋಸ್ಟ್, ಫೋಟೋಗಳನ್ನು ವೀಕ್ಷಿಸಬಹುದಾಗಿತ್ತು. ಆದರೆ ಈಗ ಸಂಪೂರ್ಣವಾಗಿ ಪ್ರೊಫೈಲ್ ಲಾಕ್ ಮಾಡುವ ಫೀಚರ್ ನೀಡಲಿದೆ. ಯಾರೆಲ್ಲ ಈ ಲಾಕ್ ಫೀಚರ್ ಆಯ್ಕೆ ಮಾಡುತ್ತಾರೋ ಅವರ ಪ್ರೊಫೈಲಿನಲ್ಲಿರುವ ಫೋಟೋಗಳು ಸ್ನೇಹಿತರಿಗೆ ಮಾತ್ರ ಕಾಣುತ್ತದೆ. ಬೇರೆ ಯಾರಿಗೂ ಫೋಟೋಗಳು, …
Read More »ಇಲ್ಲಿದೆ ರಾಜ್ಯದಲ್ಲಿ ಸಂಚಾರ ಆರಂಭಿಸಲಿರುವ ರೈಲುಗಳ ಕಂಪ್ಲೀಟ್ ಡೀಟೇಲ್ಸ್ ……….
ಹುಬ್ಬಳ್ಳಿ,ಮೇ21-ಕಳೆದ ಮಾರ್ಚ್ 22ರಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ರಾಜ್ಯದಲ್ಲಿ ನಾಳೆಯಿಂದ ಆರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.ಕೊರೊನಾ ವೈರಸ್ ತಡೆಯಲು ಜಾರಿಗೊಳಿಸಲಾದ ಲಾಕ್‍ಡೌನ್ ಹಿನ್ನೆಲೆಯಲ್ಲಿ , ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಳೆದ ಮಾರ್ಚ್ 22ರಿಂದ ಪ್ರಯಾಣಿಕರ ರೈಲುಗಳನ್ನು ರದ್ದುಗೊಳಿಸಲಾಗಿತ್ತು. ಲಾಕ್‍ಡೌನ್ 4.0 ಮೊದಲ ದಿನವಾದ ಮೇ 18ರಂದು ಮುಖ್ಯಮಂತ್ರಿಗಳು, ಕರ್ನಾಟಕದೊಳಗೆ ಅಂತರ ಜಿಲ್ಲಾ ರೈಲುಗಳನ್ನು ಪ್ರಾರಂಭಿಸಬಹುದು ಎಂದು ಹೇಳಿದರು. ರೈಲ್ವೆ ಸಚಿವಾಲಯವು ಈ ಶಿಫಾರಸನ್ನು ಪರಿಗಣಿಸಿ …
Read More »ಮುಂಬೈ ವಲಸಿಗರಿಗೆ ಸ್ವಂತ ಗೆಸ್ಟ್‌ಹೌಸ್‌ನಲ್ಲಿ ಆಶ್ರಯ ಕಲ್ಪಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ/ಚಿಕ್ಕೋಡಿ: ಮುಂಬೈನಿಂದ ಬಂದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಗೆಸ್ಟ್ ಹೌಸ್‍ನಲ್ಲೇ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಮಹಾಮಾರಿ ಕೊರೊನಾದಿಂದ ವಲಸೆ ಕಾರ್ಮಿಕರ ಬದುಕು ಬೀದಿಗೆ ಬಂದಂತಾಗಿದೆ. ಕೊರೊನಾ ಭೀತಿಯಿಂದ ದುಡಿಮೆ ಇಲ್ಲದೇ ತಮ್ಮ ಗ್ರಾಮಗಳಿಗೆ ವಾಪಸ್ ಆಗುತ್ತಿರುವ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ತಮ್ಮ ಗ್ರಾಮಗಳಿಗೆ ಬರುವ ಕಾರ್ಮಿಕರನ್ನು ಯಾವುದೋ ಸರ್ಕಾರಿ ಕಟ್ಟಡದಲ್ಲಿ ಇಟ್ಟು ಕ್ವಾರಂಟೈನ್ ಮಾಡುವ ಬದಲು ಸತೀಶ್ …
Read More »ಬಾಲಿವುಡ್ ಪರಿ ಅನುಷ್ಕಾ ಶರ್ಮಾಗೆ ಲೀಗಲ್ ನೋಟಿಸ್ ನೀಡಲಾಗಿದೆ…….
ಮುಂಬೈ: ಬಾಲಿವುಡ್ ಪರಿ ಅನುಷ್ಕಾ ಶರ್ಮಾಗೆ ಲೀಗಲ್ ನೋಟಿಸ್ ನೀಡಲಾಗಿದೆ. ಅನುಷ್ಕಾ ಶರ್ಮಾ ನಿರ್ಮಾಣದ ವೆಬ್ ಸೀರಿಸ್ ವಿವಾದದ ಸುಳಿಯಲ್ಲಿ ಸಿಲುಕಿದ್ದು, ಅದರಲ್ಲಿ ಬಳಸಲಾಗಿರುವ ಜಾತಿ ನಿಂದನಾತ್ಮಕ ಪದವುಳ್ಳ ಡೈಲಾಗ್ ತೆಗೆಯುವಂತೆ ಸೂಚಿಸಲಾಗಿದೆ. ಗಿಲ್ಡ್ ಸದಸ್ಯ ಮತ್ತು ಪ್ರಣಾಯ್ ರಾಯ್ ಅಸೋಸಿಯೇಟ್ಸ್ ಚೇಂಬರ ವಕೀಲ ವೀರೆನ್ ಶ್ರೀ ಗುರೂಂಗಾ ನೋಟಿಸ್ ಕಳುಹಿಸಿದ್ದಾರೆ. ವಕೀಲ ಗುರೂಂಗಾ, ವೆಬ್ ಸೀರೀಸ್ ಎರಡನೇ ಸಂಚಿಕೆಯಲ್ಲಿ ನೇಪಾಳಿ ಸಮುದಾಯವನ್ನು ಅವಮಾನಿಸುವ ಡೈಲಾಗ್ ಇದೆ ಎಂದು ಹೇಳಿದ್ದಾರೆ. …
Read More »ಏಳು ತಿಂಗಳ ಗರ್ಭಿಣಿಯ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನಸ್ಸು ಕರಗಿದೆ.
ಉಡುಪಿ: ಏಳು ತಿಂಗಳ ಗರ್ಭಿಣಿಯ ಸಂಕಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನಸ್ಸು ಕರಗಿದೆ. ಸೇವಾಸಿಂಧು ಆ್ಯಪ್ ಮೂಲಕ ನೋಂದಾಯಿಸದೆ ಮಹಾರಾಷ್ಟ್ರದಿಂದ ಹೊರಟು ಕಳೆದ ಮೂರು ದಿನಗಳಿಂದ ಕರ್ನಾಟಕದ ಗಡಿ ಭಾಗದಲ್ಲಿ ಸಿಕ್ಕಿಹಾಕಿಕೊಂಡಿದ್ದವವರ ಪೈಕಿ ಮಕ್ಕಳು, ಮಹಿಳೆಯರು ವೃದ್ಧರನ್ನ ರಾಜ್ಯದೊಳಗೆ ಬಿಡಲಾಗಿದೆ. ಅಧಿಕೃತ ಪಾಸ್ ಇಲ್ಲದೆ ಮಹಾರಾಷ್ಟ್ರ ಸರ್ಕಾರದ ಪಾಸ್ ಪಡೆದು ಮೂವತ್ತು ಮಂದಿ ಕರಾವಳಿ ಕರ್ನಾಟಕಕ್ಕೆ ಹೊರಟಿದ್ದರು. ನಿಪ್ಪಾಣಿಯಲ್ಲಿ 54 ಮಂದಿಯನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ವಾಪಸ್ ಮಹಾರಾಷ್ಟ್ರಕ್ಕೂ ಹೋಗದ ಸ್ಥಿತಿ …
Read More »ಕ್ವಾರಂಟೈನ್‍ಗೆ ಅಡ್ಡಿಪಡಿಸಿ ಪೊಲೀಸರು ಮತ್ತು ಸ್ಥಳೀಯರ ನಡುವೇ ವಾಗ್ವಾದ……..
ಶಿವಮೊಗ್ಗ: ಮಹಾನಗರ ಪಾಲಿಕೆ ಉಪಮೇಯರ್ ಅವರೇ ಹೊರ ರಾಜ್ಯದಿಂದ ಬಂದವರ ಕ್ವಾರಂಟೈನ್‍ಗೆ ಅಡ್ಡಿಪಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಪಾಲಿಕೆ ಉಪಮೇಯರ್ ಸುರೇಖಾ ಮುರಳೀಧರ್ ಅವರೇ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲು ಸ್ಥಳೀಯರ ಜೊತೆ ಸೇರಿ ಅಡ್ಡಿಪಡಿಸಿದ್ದಾರೆ. ಬಾಪೂಜಿನಗರದಲ್ಲಿ ಈಗಾಗಲೇ ಎರಡು ಹಾಸ್ಟೆಲ್‍ಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದ್ದು, ಈಗ ಮತ್ತೊಂದು ಹಾಸ್ಟೆಲ್‍ನಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲು ಹೊರಟಿದ್ದಾರೆ. ಇಂದು ಸಹ ಅಧಿಕಾರಿಗಳು ಇಲ್ಲಿನ ಕೃಷ್ಣಪ್ಪ ಹಾಸ್ಟೆಲ್‍ಗೆ ಮಹಾರಾಷ್ಟ್ರದಿಂದ ಬಂದ 12 ಮಂದಿಯನ್ನು ಬಸ್ಸಿನಲ್ಲಿ …
Read More »ಬೆಂಗಳೂರನ್ನು ಬೆಚ್ಚಿಬೀಳಿಸಿದ ಭಯಂಕರ ಶಬ್ದದ ರಹಸ್ಯ ಇಲ್ಲಿದೆ ನೋಡಿ..!
ಬೆಂಗಳೂರು, ಮೇ 20- ನಗರದ ಹಲವು ಪ್ರದೇಶಗಳಲ್ಲಿ ಇಂದು ಮಧ್ಯಾಹ್ನ ಭಾರೀ ಶಬ್ದ ಕೇಳಿಬಂದಿದ್ದು, ಜನರು ಭಯಭೀತರಾಗಿದ್ದರು. ಈ ಶಬ್ದಕ್ಕೆ ಸುಖೋಯ್(ಎಸ್‍ಯು30) ಯುದ್ಧ ವಿಮಾನದ ಸದ್ದು ಎಂದು ತಿಳಿದುಬಂದಿದೆ. ಶಬ್ದಕ್ಕಿಂತ ಹೆಚ್ಚು ವೇಗವಾಗಿ ಚಲಿಸುವಂತಹ ಭಾರತೀಯ ವಾಯುಪಡೆಯ ರಷ್ಯಾ ನಿರ್ಮಿತ ಸೂಪರ್ ಸೋನಿಕ್ ಯುದ್ದವಿಮಾನದ ಶಬ್ದವಾಗಿದೆ ಎಂದು ಹೇಳಲಾಗಿದೆ. ಮಧ್ಯಾಹ್ನ 1.20ರಿಂದ 1.30ರ ಗಂಟೆಯಲ್ಲಿ ಹೆಚ್‍ಎಸ್‍ಆರ್ ಲೇಔಟ್, ಮಾರ್ತಹಳ್ಳಿ, ಸಿ.ವಿ.ರಾಮನಗರ, ವರ್ತೂರು, ಕುಂದಲಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹಲಸೂರು, ವೈಟ್‍ಫೀಲ್ಡ್, ಟಿನ್ …
Read More »20ಕ್ಕೂ ಹೆಚ್ಚು ಜಾನುವಾರು ಕೊಂದಿದ್ದ ವ್ಯಾಘ್ರ ಸೆರೆ- ನಿಟ್ಟುಸಿರು ಬಿಟ್ಟ ಕಾಡಂಚಿನ ಜನ…..
ಚಾಮರಾಜನಗರ: ಕಾಡಂಚಿನ ಜನರ ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ, ವಡ್ಡಗೆರೆ, ಚಿರಕನಹಳ್ಳಿ ಭಾಗದಲ್ಲಿ ಹೆಚ್ಚಾಗಿದ್ದ ಹುಲಿ ಭೀತಿ ಕಾಡುತ್ತಿತ್ತು. ಹುಲಿ 20ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿತ್ತು. ಕಳೆದ ಒಂದು ವಾರದಿಂದ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಅರಣ್ಯ ಸಚಿವ ಆನಂದ್ ಸಿಂಗ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜನರಿಗೆ ಕಂಟಕವಾಗಿರುವ ಹುಲಿ …
Read More »ಯಾದಗಿರಿಯಲ್ಲಿ ರಸ್ತೆಗಿಳಿಯುತ್ತಿಲ್ಲ ಸರ್ಕಾರಿ ಬಸ್…………
ಯಾದಗಿರಿ: ನಗರದಲ್ಲಿ ಲಾಕ್‍ಡೌನ್ ಮುಂದುವರಿದಿದ್ದು, 144 ಸೆಕ್ಷನ್ ಇನ್ನೂ ಜಾರಿಯಲ್ಲಿರುವ ಕಾರಣ ಇಂದು ಯಾದಗಿರಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭಿಸದಿರಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಹೀಗಾಗಿ ಯಾದಗಿರಿಯಲ್ಲಿ ಸರ್ಕಾರಿ ಬಸ್ ಸೇವೆ ಆರಂಭವಾಗಿಲ್ಲ. ಬಸ್ ಆರಂಭಿಸಲು ಕೆಎಸ್‍ಆರ್‍ಟಿಸಿ ಯಾವುದೇ ರೀತಿಯ ಸಿದ್ಧತೆ ಮಾಡಿಕೊಂಡಿಲ್ಲ, ಜೊತೆಗೆ ಲಾಕ್‍ಡೌನ್ ಸಮಯದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಇನ್ನೂ ಜಾರಿಯಲ್ಲಿರುವ ಕಾರಣ, ಒಂದು ದಿನ ತಡವಾಗಿ ಮೇ 20ರಂದು ಬೆಳಗ್ಗೆ 7.30ರಿಂದ ಜಿಲ್ಲೆಯಿಂದ ವಿವಿಧ …
Read More »ನಾಲ್ಕು ದಿನ ಹಸುಗೂಸಿಗೆ ವಿಷ ಕೊಟ್ಟು ಕೊಂದ ತಂದೆ, ಅಜ್ಜಿ
ಚೆನ್ನೈ: ಮತ್ತೆ ಹೆಣ್ಣು ಮಗುವಾಯಿತು ಎಂದು ನಾಲ್ಕು ದಿನದ ಹಸುಗೂಸನ್ನು ಸ್ವಂತ ತಂದೆ ಮತ್ತು ಅಜ್ಜಿ ಸೇರಿಕೊಂಡು ಕೊಲೆ ಮಾಡಿರುವ ಅಮಾನವೀಯ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಜಿಲ್ಲೆಯ ಸೊಲವಂದನ್ ಪಂಚಾಯತ್ ಪಟ್ಟಣದಲ್ಲಿ ಮಗುವಿನ ತಾಯಿ ಚಿತ್ರಾ ಮನೆಯಲ್ಲಿ ಇಲ್ಲದಿದ್ದಾಗ ಕೊಲೆ ಮಾಡಲಾಗಿದೆ. ಇದೀಗ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಗುವಿನ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳನ್ನು …
Read More »