ಬೆಳಗಾವಿ: ಕಳೆದ ಎರಡು ತಿಂಗಳಿಂದ ಮನೆ ಮಠ ಬಿಟ್ಟು ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸ್ತಾ ಇದ್ದಾರೆ. ಆದರೆ ಇಲ್ಲೊಂದು ಆಸ್ಪತ್ರೆಯಲ್ಲಿ ಕೊರೊನಾ ಡ್ಯೂಟಿ ಬೇಡ ಅಂದ್ರೆ ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ಸೋಂಕಿತರನ್ನು ಮಹಾಮಾರಿ ವೈರಸ್‍ನಿಂದ ಕಾಪಾಡಲು ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸ್ತಿದ್ದಾರೆ. ಆದರೆ ರಕ್ಷಕರಿಗೆ ರಕ್ಷಣೆ ಇಲ್ಲ …
Read More »ಇಂದು 28 ಮಂದಿಗೆ ಕೊರೊನಾ – 987ಕ್ಕೇರಿದ ಸೋಂಕಿತರ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಕಬಂಧಬಾಹುಗಳು ಹರಡಿಕೊಳ್ಳುತ್ತಿದೆ. ಇಂದು ಒಂದೇ ದಿನ 28 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದ್ದು, ಈ ಪೈಕಿ 460 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಇನ್ನೂ 491 ಜನರು ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ 35 ಮಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ …
Read More »ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ
ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ, ರೈತರಿಗೆ ಸಾಲದ ಬಡ್ಡಿಯಿಂದ ವಿನಾಯಿತಿ – ಇದು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದ ಪ್ಯಾಕೇಜ್ ಗಳ ಮುಖ್ಯಾಂಶಗಳು. ಕೈಗಾರಿಕೆ, ಉದ್ಯಮ, ರಿಯಲ್ ಎಸ್ಟೇಟ್, ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದರೆ ಇಂದು ಬಡವರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಪ್ರಕಟ ಮಾಡಿದೆ. …
Read More »3 ವರ್ಷ ಪ್ರೀತಿಸಿ ಒಂದು ತಿಂಗ್ಳ ಹಿಂದೆ ಮದುವೆ – ದಂಪತಿ ಆತ್ಮಹತ್ಯೆ
ಚೆನ್ನೈ: ಪ್ರೀತಿಸಿ ಒಂದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ. ಜಯಕುಮಾರ್ ಮತ್ತು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ತಿರುವಣ್ಣಾಮಲೈ ಜಿಲ್ಲೆಯ ಜಯಕುಮಾರ್ ಮತ್ತು ಕೃಷ್ಣಗಿರಿ ಜಿಲ್ಲೆಯ ಕಲ್ಲೂರು ಗ್ರಾಮದ ವಿಜಯಲಕ್ಷ್ಮಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಕುಟುಂಬ ಸದಸ್ಯರು ಇವರ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ. ಜಯಕುಮಾರ್ ಮತ್ತು …
Read More »ಸಿಎಸ್‍ಕೆ ಪರ ಧೋನಿಗಿಂತಲೂ ಹೆಚ್ಚು ಪಂದ್ಯ ಆಡಿದ್ದಾರೆ ರೈನಾ………
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಅತ್ಯಂತ ಸ್ಥಿರವಾದ ಫ್ರ್ಯಾಂಚೈಸ್‍ಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ) ಇದುವರೆಗೂ ಒಬ್ಬ ನಾಯಕನನ್ನು ಮಾತ್ರ ಹೊಂದಿದೆ. ಎಂ.ಎಸ್ ಧೋನಿ ಅವರು ಮೊದಲು 9.5 ಕೋಟಿ ರೂ.ಗೆ ತಂಡವನ್ನು ಸೇರಿಕೊಂಡಿದ್ದರು. ಅವರು ಪ್ರತಿ ಬಾರಿಯ ಐಪಿಎಲ್‍ನಲ್ಲಿ ಸಿಎಸ್‍ಕೆ ತಂಡವನ್ನು ಮುನ್ನಡೆಸಿದ್ದಾರೆ. ಅವರ ನೇತೃತ್ವದಲ್ಲಿ ಸಿಎಸ್‍ಕೆ ತಂಡವು ಪ್ರತಿ ಬಾರಿಯೂ ಪ್ಲೇಆಫ್‍ನಲ್ಲಿ ಸ್ಥಾನ ಪಡೆಯುತ್ತಾ ಬಂದಿದೆ. ಅಷ್ಟೇ ಅಲ್ಲದೆ ಮತ್ತು ಇದುವರೆಗೂ ಮೂರು ಬಾರಿ …
Read More »20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ಷೇರು ಪೇಟೆಯಲ್ಲಿ ಸಂಚಲನ
ಮುಂಬೈ, ಮೇ 13-ಕೊರೊನಾ ವೈರಸ್ ದಾಳಿಯಿಂದ ಅಲ್ಲೋಲ-ಕಲ್ಲೋಲವಾಗಿರುವ ದೇಶದ ಆರ್ಥಿಕತೆಗೆ ಪುಷ್ಟಿ ನೀಡಲು ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಂತರ ಷೇರುಪೇಟೆಯಲ್ಲಿ ಭಾರೀ ಸಂಚಲನ ಕಂಡುಬಂದಿದೆ. ಮುಂಬೈ ಷೇರು ವಿನಿಮಯ ಕೇಂದ್ರದ ಸಂವೇದಿ ಸೂಚ್ಯಂಕ (ಸೆನ್‍ಸೆಕ್ಸ್)ದಲ್ಲಿ ಇಂದು ಬೆಳಗ್ಗೆ 1,400 ಪಾಯಿಂಟ್‍ಗಳ ಜಿಗಿತವಾಗಿದೆ. ಷೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲೇ ಭಾರೀ ಏರಿಕೆ ಗೋಚರಿಸಿದೆ. 30 ಷೇರು ಸೂಚ್ಯಂಕದಲ್ಲಿ 818.68 ಪಾಯಿಂಟ್‍ಗಳು ಅಥವಾ …
Read More »ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ತುಮಕೂರು: ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನ ಗೂಗಡನಹಳ್ಳಿ ಕೆರೆಯ ವೀಕ್ಷಣೆ ವೇಳೆ ರಮೇಶ್ ಜಾರಕಿಹೊಳಿ ಮತ್ತು ಕೆ.ಎನ್.ರಾಜಣ್ಣ ಭೇಟಿಯಾಗಿದ್ದರು. ಈ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ನಮಗೆ ಬೆಂಬಲ ನೀಡಿದರು. ಸರ್ಕಾರ ಬೀಳಿಸಲು ಒಂದು ಉದ್ದೇಶವಿತ್ತು. ಹಾಗಾಗಿ …
Read More »ಜೂ.ಎನ್‌ಟಿಆರ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಕೆಜಿಎಫ್ ನಿರ್ದೇಶಕ……….
ಹೈದರಾಬಾದ್: ಕೆಜಿಎಫ್ ಸಿನಿಮಾ ಹಿಟ್ ಆದ ಬೆನ್ನಲ್ಲೇ ಚಿತ್ರ ತಂಡ ಚಾಪ್ಟರ್-2ನಲ್ಲಿ ಬ್ಯುಸಿಯಾಗಿತ್ತು. ಇದೀಗ ಚಾಪ್ಟರ್-2 ಚಿತ್ರೀಕರಣ ಅಂತಿಮ ಹಂತ ತಲುಪಿದ್ದು, ಚಿತ್ರ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಯಾವ ಸಿನಿಮಾ ಮಾಡಲಿದ್ದಾರೆ ಎಂಬ ಕುತೂಹಲ ಮನೆ ಮಾಡಿತ್ತು. ಇದರ ಬೆನ್ನಲ್ಲೇ ಪ್ರಶಾಂತ್ ನೀಲ್ ಮುಂದಿನ ಸಿನಿಮಾದಲ್ಲಿ ಮಹೇಶ್ ಬಾಬು ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಎಲ್ಲ ಗಾಸಿಪ್‍ಗಳು ಸುಳ್ಳಾಗಿದ್ದು, ಸರ್ಪ್ರೈಸ್ …
Read More »ಬಿಜೆಪಿಗೆ ಭಾರೀ ಮುಖಭಂಗ – ಗುಜರಾತ್ ಕಾನೂನು ಸಚಿವರ ಗೆಲುವು ಅಕ್ರಮ……….
ಅಹಮದಾಬಾದ್: ಗುಜರಾತ್ ನಲ್ಲಿರುವ ಬಿಜೆಪಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ಸಚಿವರಾಗಿರುವ ಭೂಪೇಂದ್ರ ಸಿಂಹ ಚೂಡಾಸಮಾ ಅವರ ಚುನಾವಣಾ ಗೆಲುವನ್ನು ಹೈಕೋರ್ಟ್ ರದ್ದುಗೊಳಿಸಿದೆ. 2017ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಭೂಪೇಂದ್ರ ಸಿಂಹ ಚೂಡಾಸಮಾ ಗೆದ್ದಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾ. ಪರೇಶ್ ಉಪಾಧ್ಯಾಯ ನೇತೃತ್ವದ ಪೀಠ ಮತ ಎಣಿಕೆಯ ವೇಳೆ ಅಕ್ರಮ ನಡೆದಿದೆ ಎಂದು ಅಭಿಪ್ರಾಯಪಟ್ಟು ಗೆಲುವನ್ನು ರದ್ದುಗೊಳಿಸಿ ತೀರ್ಪು ಪ್ರಕಟಿಸಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ …
Read More »ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 8 ಜನರಿಗೆ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ ಗಳನ್ನು ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿತರಿಸಿದರು. ಮಂಗಳವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಚೆಕ್ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಇಡೀ ಕ್ಷೇತ್ರ ನನಗೆ ಕುಟುಂಬ ಇದ್ದಂತೆ. ಕ್ಷೇತ್ರದ ಜನರು ನನ್ನ ಮೇಲಿಟ್ಟ ವಿಶ್ವಾಸ, ಅವರು ನೀಡಿದ ಸಹಾಯ, ಸಹಕಾರವನ್ನು ನಾನೆಂದೂ ತೀರಿಸಲು ಸಾಧ್ಯವಿಲ್ಲ. ನಮ್ಮ …
Read More »