ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ …
Read More »ಶಿಷ್ಟಾಚಾರ ಉಲ್ಲಂಘನೆ: ಮುಖ್ಯಶಿಕ್ಷಕ ಅಮಾನತು
ಖಾನಾಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾಲ್ಲೂಕಿನ ಲಿಂಗನಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮುಖ್ಯಶಿಕ್ಷಕ ಎಂ.ಎಂ ಕೋಟೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಇಒ ರಾಜೇಶ್ವರಿ ಕುಡಚಿ ಶನಿವಾರ ಆದೇಶಿಸಿದ್ದಾರೆ. ಜೂನ್ 19ರಂದು ಲಿಂಗನಮಠ ಸರ್ಕಾರಿ ಶಾಲೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಸೀಂ ಹಟ್ಟಿಹೊಳಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಆನಂದ ಮಾಟೊಳ್ಳಿ ಅವರ ಉಪಸ್ಥಿತಿಯಲ್ಲಿ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಷ್ಟಾಚಾರ ಉಲ್ಲಂಘನೆ ಸಂಬಂಧ …
Read More »ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. …
Read More »ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!
ಅಂಕೋಲಾ : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು 112ಕ್ಕೆ ಕರೆ ಮಾಡಿ ಗೋಗೆರೆದಿದ್ದ ವ್ಯಕ್ತಿಯೊಬ್ಬನ ಕರೆ ಆಧರಿಸಿ ಸ್ಥಳಕ್ಕೆ ಹೋದ ಪೊಲೀಸರೇ ಶಾಕ್ ಆದ ಘಟನೆ ಹಿಲ್ಲೂರಿನ ಬಿಲ್ಲನಬೈಲನಲ್ಲಿ ನಡೆದಿದೆ. ಹಿಲ್ಲೂರಿನ ಬಿಲ್ಲನಬೈಲನ ಮಂಜುನಾಥ ಬೊಮ್ಮಯ್ಯ ನಾಯಕ ಎಂಬಾತ 112ಕ್ಕೆ ಕರೆ ಮಾಡಿ, ನನ್ನ ಪತ್ನಿ ಹಾಗೂ ಮಗಳನ್ನು ಯಾರೋ ಭೀಕರವಾಗಿ ಕೊಲೆ ಮಾಡಿ ತೆರಳಿದ್ದಾರೆ. ನನಗೇಕೋ ಹೆದರಿಕೆ ಆಗುತ್ತಿದೆ. ಕೂಡಲೆ ಸ್ಥಳಕ್ಕೆ ಬರುವಂತೆ ವಿನಂತಿಸಿದ್ದ. …
Read More »ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್ ಜೋಶಿ
ಬೆಂಗಳೂರು,ಜೂ.22- ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬನೇ ಜಗತ್ತಿನಲ್ಲಿ ಮಹಾ ಸಾಚಾ ಎಂದು ಸಿದ್ದರಾಮಯ್ಯನವರು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಹಣಕಾಸು ಇಲಾಖೆ ಯಾರ ಕೈಯಲ್ಲಿದೆ. ನಿಮ ಅನುಮತಿ ಇಲ್ಲದೆ …
Read More »ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 21: ಹಿರಿಯ ಲೇಖಕಿ ಕಮಲಾ ಹಂಪನಾ (89) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ …
Read More »13 ವರ್ಷಗಳ ಬಳಿಕ ಮತ್ತೆ 13 ದಿನ ಜೈಲುಸೇರಿದ್ದಾರೆ.ದರ್ಶನ್
ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಹತ್ಯೆ (Renukaswamy Murder Case) ಆರೋಪ ಎದುರಿಸುತ್ತಿರೋ ನಟ ದರ್ಶನ್ (Actor Darshan) ಇದೀಗ ಜೈಲು ಸೇರಿದ್ದಾರೆ. ಎ2 ಆರೋಪಿ ದರ್ಶನ್, ವಿನಯ್, ಪ್ರದೋಶ್ ಹಾಗೂ ಧನರಾಜ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ (ACMM Court) ಆದೇಶ ನೀಡಿದೆ. ದರ್ಶನ್ ಆಯಂಡ್ ಗ್ಯಾಂಗ್‌ಗೆ 13 ದಿನ ಅಂದರೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿ …
Read More »ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ
ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
Read More »ಉಳಾಯಿಬೆಟ್ಟು: PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ
ಮಂಗಳೂರು: ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಉಳಾಯಿಬೆಟ್ಟಿ ನಲ್ಲಿರುವ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ಸುಮಾರು ಏಳು ಎಂಟು ಮಂದಿ ದರೋಡೆಕೋರರ ತಂಡ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿ ಮನೆ …
Read More »ಕಾಗವಾಡ: ಮದ್ಯಪಾನ ಮಾಡುತ್ತ ವಾಹನ ಚಲಾಯಿಸಿದ ಆರ್‌ಟಿಓ ಚಾಲಕ
ಕಾಗವಾಡ: ತಾಲ್ಲೂಕಿನ ಶೇಡಬಾಳ ಪಟ್ಟಣದಲ್ಲಿ ಇತ್ತೀಚಿಗೆ ಅಥಣಿ ಆರ್‌ಟಿಒ ಇಲಾಖೆಯ ಅಧಿಕಾರಿಗಳ ವಾಹನದ ಚಾಲಕ ಸಾರಿಗೆ ಇಲಾಖೆ ಇನ್‌ಸ್ಪೆಕ್ಟರ್ ಅವರ ಉಪಸ್ಥಿತಿಯಲ್ಲಿ ಮದ್ಯಸೇವನೆ ಮಾಡುತ್ತ ವಾಹನ ಚಾಲನೆ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರ್‌ಟಿಓ ಇನ್‌ಸ್ಪೆಕ್ಟರ್ ಅವರ ಮುಂದೆಯೇ ಇಂತಹ ಘಟನೆ ನಡೆದಿರುವುದಕ್ಕೆ ಸಾರ್ವಜನಿಕರಿದ ಆಕ್ರೋಶ ವ್ಯಕ್ತವಾಗಿದೆ. ಸಾರಿಗೆ ನಿಯಮ ಪಾಲನೆ ಮಾಡುವ ಇಲಾಖೆಯ ಅಧಿಕಾರಿಗಳೇ ಈ ರೀತಿ ನಿಯಮ ಉಲ್ಲಂಘನೆ ಮಾಡಿರುವುದು ಎಷ್ಟು ಸರಿ? ಎಂದು ಜನರು …
Read More »