Breaking News

Uncategorized

ಹನಿಟ್ರ್ಯಾಪ್‌ ಮೂಲಕ ಸಹೋದ್ಯೋಗಿಯ ಕಿಡ್ನ್ಯಾಪ್‌ – 12 ಲಕ್ಷಕ್ಕೆ ಬೇಡಿಕೆ, 8 ಮಂದಿ ಅರೆಸ್ಟ್

ವಿಜಯಪುರ: ಜಮೀನು ಮಾರಾಟ ಮಾಡಿದ ಹಣದ ಆಸೆಗಾಗಿ ಹನಿಟ್ರ‍್ಯಾಪ್ ಮೂಲ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬರೋಬ್ಬರಿ 12 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದ ಅಂತರ-ಜಿಲ್ಲಾ ಅಪಹರಣಕಾರರನ್ನು ಪೊಲೀಸರು ಗ್ಯಾಂಗ್ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ನಗರದ ಕಸ್ತೂರಿ ಕಾಲೋನಿಯ ನಿವಾಸಿ 22 ವರ್ಷದ ಸಾಹಿಲ್‌ನನ್ನು ಜೂನ್ 18ರಂದು ಕಾಣೆಯಾಗಿದ್ದ. ಯಾರೋ ದುಷ್ಕರ್ಮಿಗಳು ತನ್ನ ಮಗನನ್ನು ಅಪಹರಿಸಿದ್ದಾರೆಎಂದು ಮಮ್ತಾಜ್ ಜೂ.19ರಂದು ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ …

Read More »

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

ನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ ಅವರನ್ನು ಸ್ವಯಂಚಾಲಿತವಾಗಿ ಅಧಿಕಾರದಿಂದ ತೆಗೆದುಹಾಕುವ ಪರಿಷ್ಕೃತ ಮಸೂದೆಯನ್ನು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇದೆ. ವಿವಾದಾತ್ಮಕ 130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಜುಲೈ 17 ರಂದು ತನ್ನ ವರದಿಯನ್ನು ಅಂಗೀಕರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಈ ಪ್ರಸ್ತಾವನೆಯು ಇನ್ನೂ …

Read More »

ಉಗಾಂಡದಲ್ಲಿ ಕೊಟ್ಟೂರು ಮಹಿಳೆ ಆತ್ಮಹತ್ಯೆ – ಕಾರಣ ಸಸ್ಪೆನ್ಸ್‌

ಬಳ್ಳಾರಿ: ಪತಿಯ ಜೊತೆ ಉಗಾಂಡ ದೇಶದಲ್ಲಿ ನೆಲೆಸಿದ್ದ ಕರ್ನಾಟಕ ವಿಜಯನಗರ  ಜಿಲ್ಲೆಯ ಕೊಟ್ಟೂರು ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕನ್ನನಾಯಕನ ಹಟ್ಟಿಯ ಬಿಂದು (24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪತಿ ಚಂದ್ರಶೇಖರ್ ಜೊತೆ ಮೃತ ಬಿಂದು ಉಗಾಂಡ ದೇಶದಲ್ಲಿ ನೆಲೆಸಿದ್ರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಪಾರ್ಥಿವ ಶರೀರ ತರಲು ತರಳಬಾಳು ಮಠದ ಶ್ರೀಗಳು …

Read More »

ದರ ಕುಸಿತ – ರೂಟರ್ ಹರಿಸಿ ಹೊಲದಲ್ಲೇ ಕೊತ್ತಂಬರಿ ಸೊಪ್ಪು ನಾಶಪಡಿಸಿದ ರೈತರು

ಬೆಳಗಾವಿ: ಮಾರುಕಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆ ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ರೈತರು  ತಾವು ಬೆಳೆದಿದ್ದ ಕೊತ್ತಂಬರಿ ಬೆಳೆಯನ್ನು ಹೊಲದಲ್ಲೇ ನಾಶಪಡಿಸಿದ್ದಾರೆ. ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಸಿಗದ ಕಾರಣ ರೈತರು ತಮ್ಮ ಕೈಯಾರೆ ಕೊತ್ತಂಬರಿ ಕಿತ್ತು, ಮಿನಿ ರೂಟರ್ ಹರಿಸಿ ಸಂಪೂರ್ಣ ಬೆಳೆ ನಾಶಪಡಿಸಿದ್ದಾರೆ. ಈ ವರ್ಷ ಉತ್ತಮ ಆದಾಯದ ನಿರೀಕ್ಷೆಯೊಂದಿಗೆ ಕೇದನೂರಿನ ಹಲವು ರೈತರು ಕೊತ್ತಂಬರಿ ಬೆಳೆ …

Read More »

ಗಾಂಜಾ ಮಾರಾಟಕ್ಕೆ ವಿರೋಧ – ತಲೆ ಮೇಲೆ ಕಲ್ಲು ಎತ್ತಿಹಾಕಿ ಅಜ್ಜಿಯನ್ನೇ ಕೊಂದ ಮೊಮ್ಮಗ

ಶಿವಮೊಗ್ಗ: ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ ಅಜ್ಜಿಯ ಮೇಲೆ ಮೊಮ್ಮಗ ಹಲ್ಲೆ ಮಾಡಿ, ತಲೆ ಮೇಲೆ ಸೈಜುಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಎದುರಿನ ರಸ್ತೆಯಲ್ಲಿಯೇ ಈ ಭೀಕರ ಘಟನೆ ನಡೆದಿದ್ದು, ಕಿಶೋರ್ (26) ಎಂಬ ಯುವಕ ಈ ಕೃತ್ಯವನ್ನು ಎಸೆಗಿದ್ದಾನೆ. ಸುಶೀಲಮ್ಮ (55) ಕೊಲೆಯಾದ ವೃದ್ಧೆ. ಕೊಲೆ ಆರೋಪಿ ಕಿಶೋರ್ ಮನೆಯಲ್ಲಿ ಗಾಂಜಾ …

Read More »

ಹಾಸನ, ತುಮಕೂರಿನಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ತುಮಕೂರು: ರಾಜ್ಯದ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಬೀಜ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ್ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ-1966 ಉಲ್ಲಂಘಿಸಿ ಯಾವುದೇ ಅನುಮತಿಯಿಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅದೇ ರೀತಿ, ತುಮಕೂರು …

Read More »

ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರದಿಂದ ನೆರವು – ಸಿಎಂ ಡಿಕೆಶಿ ಭರವಸೆ

ಕನ್ನಡ ಚಿತ್ರರಂಗದ ಉಳಿವಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಭರವಸೆ ನೀಡಿದ್ದಾರೆ. ಹಾಗೆಯೇ, ಚಿತ್ರನಗರಿ ಘೋಷಣೆ ಮಾಡಿರುವ ಅನುದಾನದ ಬಿಡುಗಡೆಗೆ ಕ್ರಮಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ. ಕನ್ನಡ ಚಿತ್ರರಂಗ ಉಳಿವಿಗಾಗಿ ʻಸಮಗ್ರ ಹೊಸ ಚಲನಚಿತ್ರ ನೀತಿʼ ಸೇರಿದಂತೆ ʻಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳʼ, ʻಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿʼ, ʻಏಕಪರದೆ ಚಿತ್ರಮಂದಿರಗಳ ನವೀಕರಣʼ, …

Read More »

ವಾಟ್ಸಪ್‌ ಹೊಸ ಅಪ್‌ಡೇಟ್‌ ಬಗ್ಗೆ ಕಳವಳ – ಮೆಟಾಗೆ ಕೇಂದ್ರ ಸರ್ಕಾರ ನೋಟಿಸ್

ನವದೆಹಲಿ: ಮೊಬೈಲ್ ಸಂಖ್ಯೆ ಹಂಚಿಕೊಳ್ಳದೇ ಯೂಸರ್‌ನೇಮ್ ಮೂಲಕ ಸಂಪರ್ಕ ಸಾಧಿಸಲು ಅವಕಾಶ ಕಲ್ಪಿಸುವ ವಾಟ್ಸಪ್‌ನ ಹೊಸ ವೈಶಿಷ್ಟ್ಯದ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ವೈಶಿಷ್ಟ್ಯವನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮೆಟಾಗೆ ನೋಟಿಸ್‌ ಜಾರಿಗೊಳಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ವಾಟ್ಸಪ್‌ನ ಹೊಸ ವೈಶಿಷ್ಟ್ಯವು ಹೇಗೆ ಕಾರ್ಯನಿರ್ವಹಿಸುತ್ತದೆ? ಯಾವ ಸುರಕ್ಷತಾ ಕ್ರಮಗಳನ್ನ ಒಳಗೊಂಡಿದೆ? ಎಂಬುದರ ಕುರಿತು 3 ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. …

Read More »

ಡಿ-ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ – ಪ್ರಮುಖ ಸಾಕ್ಷಿಗೆ ಬೆದರಿಕೆ; ಮೂವರು ಅರೆಸ್ಟ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್‌ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ. ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ …

Read More »

ಚಾಮುಂಡಿ ಬೆಟ್ಟದಲ್ಲಿ ಜು.17 ರಿಂದ ಆಷಾಢ ಮಾಸದ ಪೂಜೆ – 2,000 ರೂ. ಟಿಕೆಟ್ ಖರೀದಿಸಿದ್ರೆ ನೇರ ದರ್ಶನ!

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸ ವಿಶೇಷ ಪೂಜೆ  ಆರಂಭವಾಗಲಿದೆ. ಭಕ್ತ ಸಾಗರವೇ ಹರಿದುಬರುವ ಹಿನ್ನೆಲೆ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಿದ್ದು, ವಿಶೇಷ ದರ್ಶನಕ್ಕೆ ಬರೋಬ್ಬರಿ 2000 ರೂ. ಟಿಕೆಟ್‌ ದರ ನಿಗದಿ ಮಾಡಲಾಗಿದೆ ಎಂದು ಸಚಿವರಾದ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮಕ್ಕೆ ಸಿದ್ಧತಾ ಕಾರ್ಯ ಪರಿಶೀಲಿಸಿದ ಸಚಿವ …

Read More »