ಬೆಂಗಳೂರು, ಜೂ.6- ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದ್ದು, ಜಾರಕಿಹೊಳಿ ಕುಟುಂಬ ಮತ್ತೆ ಚರ್ಚೆಯಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಅಭ್ಯರ್ಥಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಗೆಲುವು ಕಂಡಿದ್ದಾರೆ. ಬೆಳಗಾವಿಯಿಂದ ಅಭ್ಯರ್ಥಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಸೋಲು ಕಂಡಿದ್ದಾರೆ. ಈ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಮತ್ತೆ ಜಾರಕಿಹೊಳಿ ಕುಟುಂಬದ ಅಧಿಪತ್ಯ ಹೆಚ್ಚಾಗಿದೆ ಎಂಬ ಅಭಿಪ್ರಾಯಗಳಿವೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ …
Read More »ಉಪ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಸ್ಪರ್ಧೆ ಖಚಿತ?
ಬೆಂಗಳೂರು: ಲೋಕಸಭೆಗೆ ಮೂವರು ಶಾಸಕರು ಹಾಗೂ ವಿಧಾನ ಪರಿಷತ್ತಿನಿಂದ ಒಬ್ಬರು ಆಯ್ಕೆಯಾಗಿರುವುದರಿಂದ ಅವರ ಸ್ಥಾನಗಳಿಗೆ 6 ತಿಂಗಳ ಒಳಗೆ ಉಪ ಚುನಾವಣೆ ಘೋಷಣೆಯಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟದ ಮಧ್ಯೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿ ಹೋರಾಟ ನಡೆಯುವುದು ಗ್ಯಾರಂಟಿಯಾಗಿದೆ. ಚನ್ನಪಟ್ಟಣ ಶಾಸಕರಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ, ಶಿಗ್ಗಾವಿ ಶಾಸಕರಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ, ಸಂಡೂರು ಶಾಸಕ ತುಕಾರಾಂ ಅವರು ಬಳ್ಳಾರಿ …
Read More »ಇಂದು ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯ
ಬೆಂಗಳೂರು: ಹಾಸನದಲ್ಲಿ ನಡೆದಿದೆ ಎನ್ನಲಾದ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಶೇಷ ತನಿಖಾ ದಳದಿಂದ (ಎಸ್‌ಐಟಿ) ಡ್ರಿಲ್ ಮುದುವರಿದಿದೆ. ಹೆಚ್ಚಿನ ವಿಚಾರಣೆಗಾಗಿ ಇಂದು (ಜೂ.6) ಪ್ರಜ್ವಲ್‌ರನ್ನು ಎಸ್‌ಐಟಿಯು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವ ಎಸ್‌ಐಟಿಯು ಮಾಹಿತಿ ಕಲೆ ಹಾಕಿ ಸಾಕ್ಷ್ಯಾಧಾರ …
Read More »ಗ್ಯಾರಂಟಿಗಳು ಇನ್ನೂ ಇರುತ್ತಾ? ಇರಲ್ವಾ! ಪರಾಮರ್ಶೆಗೆ ಮುಂದಾಗುವುದೇ ಸರ್ಕಾರ ?
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಆಘಾತಕ್ಕೆ ಒಳಗಾಗಿರುವ ಆಡಳಿತಾರೂಢ ಕಾಂಗ್ರೆಸ್, ಸೋಲು-ಗೆಲುವಿನ ಲೆಕ್ಕಾಚಾರಗಳ ಜತೆಗೇ ತನ್ನ ಜನಪ್ರಿಯ “ಗ್ಯಾರಂಟಿ’ ಯೋಜನೆಗಳನ್ನೂ ಪರಾಮರ್ಶೆಗೊಳಪಡಿಸಲು ಮುಂದಾಗಿದೆ. ವಿಧಾನಸಭಾ ಚುನಾವಣೆ ಪೂರ್ವ ಘೋಷಿಸಿದ ಗ್ಯಾರಂಟಿಗಳು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ನಿಜ. ನಂತರದಲ್ಲಿ ಜಾರಿಗೊಳಿಸುವ ಮೂಲಕ ನಾವು ನುಡಿದಂತೆ ನಡೆದಿದ್ದೂ ಅಷ್ಟೇ ಸತ್ಯ. ಆದರೆ, ಅದೇ ಯೋಜನೆಗಳು ಲೋಕಸಭಾ ಚುನಾವಣೆಯಲ್ಲಿ “ಕೈ’ ಹಿಡಿಯಲಿಲ್ಲ ಎಂಬುದು ವಾಸ್ತವ. ಹೀಗಿರುವಾಗ, ಗ್ಯಾರಂಟಿಗಳನ್ನು ಮುಂದುವರಿಸುವುದು ಸೂಕ್ತವೇ ಎಂಬ …
Read More »ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ: ಅಂಗಡಿ
ಬೆಳಗಾವಿ: ಚುನಾವಣೆ ಸಮಯದಲ್ಲಿ ಕೇವಲ ಅಪಪ್ರಚಾರ ಮಾಡಿ ಸುಳ್ಳು ಹೇಳುತ್ತಲೇ ಬಂದ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಂಸದೆ ಮಂಗಲಾ ಸುರೇಶ ಅಂಗಡಿ ತಿರುಗೇಟು ನೀಡಿದ್ದಾರೆ. ಕ್ಷೇತ್ರಕ್ಕೆ ಹಿಂದಿನ ಸಂಸದರಾಗಿದ್ದ ಸುರೇಶ ಅಂಗಡಿ ಏನು ಮಾಡಿಲ್ಲ. ಯಾವ ಯೋಜನೆಯನ್ನು ತಂದಿಲ್ಲ ಎಂದು ತಾಯಿ ಮತ್ತು ಮಗ ಸುಳ್ಳು ಅಪಪ್ರಚಾರ ಮಾಡಿದರು. ಈ ರೀತಿಯ ಅಪಪ್ರಚಾರಕ್ಕೆ ಮತದಾರರೇ ಸರಿಯಾದ …
Read More »ಚಿಕ್ಕ ವಯಸ್ಸಿನಲ್ಲಿ ಸಂಸತ್‌ಗೆ ಆಯ್ಕೆ ಆಗಿದ್ದಕ್ಕೆ ಖುಷಿ ಆಗುತ್ತಿದೆ ;ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿಗೆ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗುತ್ತಿದ್ದು ಈ ಆಯ್ಕೆಗೆ ಕಾರಣರಾದ ಮತದಾರರಿಗೆ, ಸಹಕರಿಸಿದ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಚಿರಋಣಿಯಾಗಿದ್ದೇನೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ಕಡಿಮೆ ಸಮಯದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವುದು ಸವಾಲಿನ ಕಾರ್ಯವಾಗಿತ್ತು. ಆದರೆ ತಂದೆಯ ಮಾರ್ಗದರ್ಶನ, ಸಹೋದರನ ಸಹಕಾರ, …
Read More »ಸರ್ಕಾರ ರಚನೆ ಪ್ರಯತ್ನ ಕೈಬಿಟ್ಟ ಇಂಡಿಯಾ ಮೈತ್ರಿಕೂಟ
ನವದೆಹಲಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಪ್ರಯತ್ನ ಮಾಡುವುದಿಲ್ಲ. ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ. ಬಿಜೆಪಿಯ ದ್ವೇಷದ ರಾಜಕಾರಣ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರದ ವಿರುದ್ಧ ಹೋರಾಟ ಮುಂದುವರೆಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯ ನಂತರ ಅವರು ಮಾತನಾಡಿ, ಮುಂದಿನ ರಾಜಕೀಯ ತಂತ್ರಗಳ ಕುರಿತಾಗಿ ಸಭೆಯಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ವಾಧಿಕಾರದ ವಿರುದ್ಧ ನಮ್ಮ ಮೈತ್ರಿಕೂಟ ಸಂಘಟಿತ ಹೋರಾಟ …
Read More »ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ಇಂದು ಬಿಜೆಪಿಯಿಂದ ‘ರಾಜಭವನ ಚಲೋ’ ಪ್ರತಿಭಟನೆ
ಬೆಂಗಳೂರು: ಸಚಿವ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಗುರುವಾರ ರಾಜಭವನ ಚಲೋ ನಡೆಸಲಾಗುವುದು. ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದಿಂದ ಹಲವಾರು ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ಹಣವನ್ನು ವರ್ಗಾಯಿಸಿದ ಆರೋಪವನ್ನು ನಾಗೇಂದ್ರ ಎದುರಿಸುತ್ತಿದ್ದಾರೆ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಳೆದ ವಾರ ಗಡುವು ನೀಡಿತ್ತು. ಬಿಜೆಪಿ ಪ್ರಧಾನ ಕಾರ್ಯದರ್ಶಿ …
Read More »ರಾಜ್ಯದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ
ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜೂ.7ರ ವರೆಗೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂ.7ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬುಧವಾರ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. …
Read More »ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ ಸಲ್ಲ:
ಸವದತ್ತಿ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಸುಮಲತಾ ಬೆಣ್ಣಿಕಲ್ಲ ಅವರು ಸಸಿಗೆ ನೀರುಣಿಸಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ‘ಮನುಷ್ಯನ ದುರಾಸೆಯಿಂದ ಪ್ರಾಣಿ-ಪಕ್ಷಿಗಳು ಅವಸಾನದತ್ತ ಸಾಗಿವೆ. ಪರಿಸರ ಸಮತೋಲನದಿಂದ ಉತ್ತಮ ಮಳೆ, ನಿಯಮಿತ ತಾಪಮಾನ ಸಾಧ್ಯವಿದೆ. ಅಭಿವೃದ್ಧಿ ಹೆಸರಲ್ಲಿ ಪರಿಸರ ಹಾಳು ಮಾಡಬಾರದು’ …
Read More »