ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದರೂ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಕುರಿತು ಸುದ್ದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ಹೆಲ್ಪ್ ಲೈನ್ ಆರಂಭಿಸಿ ಸರ್ಕಾರ ಆದೇಶ ಹೊರಡಿಸಿದೆ. 2020-21ನೇ ಸಾಲಿನ ಮಂಡಲ-ಮಕರವಿಳಕ್ಕು ಕಾರ್ಯಕ್ರಮಕ್ಕೆ ತೆರಳುವ ಭಕ್ತರ ಸಮಸ್ಯೆ ಆಲಿಸಲು ಹಾಗೂ ಆರೋಗ್ಯ ಸಲಹೆಗಳಿಗಾಗಿ ಈ ಸಹಾಯವಾಣಿಯನ್ನು ಆರಂಭಿಸಿದೆ. ಕೊರೊನಾ ಹಿನ್ನಲೆ ಶಬರಿಮಲೆ …
Read More »ಕೊಬ್ಬರಿ ಹೋರಿ ಹಿಡಿಯಲು ಹೋಗಿ ಗೋರಿ ಸೇರಿದ ಯುವಕ….
ಹಾವೇರಿ: ಕೊಬ್ಬರಿ ಹೋರಿ ಓಡಿಸೋ ಹಬ್ಬದಲ್ಲಿ ಹಿಡಿಯಲು ಹೋಗಿದ್ದ ಯುವಕನಿಗೆ ಹೋರಿ ಗುದ್ದಿ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 24 ವರ್ಷದ ಚಂದ್ರು ಈರಕ್ಕನವರ ಎಂದು ಗುರುತಿಸಲಾಗಿದೆ. ಮೃತ ಚಂದ್ರು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ನಿವಾಸಿಯವನಾಗಿದ್ದು, ಕೊಬ್ಬರಿ ಹೋರಿ ಹಬ್ಬಕ್ಕಾಗಿಯೇ ಕೆರಿಮತ್ತಿಹಳ್ಳಿಗೆ ಬಂದಿದ್ದ. ಪೊಲೀಸ್ ಇಲಾಖೆಯ ಅನುಮತಿ ನಿರಾಕರಣೆ ನಡುವೆಯೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಇಂದು ಕೊಬ್ಬರಿ ಹೋರಿ ಓಡಿಸೋ …
Read More »ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು
ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
Read More »ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ಸ್ಥಳಾಂತರಿಸಿ ಆಕ್ಸಿಜನ್ ಬೆಡ್ ನೀಡಲಾಗಿದೆ. ಬಿಪಿ, ಶುಗರ್, ಹೃದಯಸಂಬಂಧಿ ಖಾಯಿಲೆಗಳಿಂದ ರೋಷನ್ ಬೇಗ್ ಬಳಲುತ್ತಿದ್ದರು. 3 ದಿನಗಳ ಹಿಂದೆ ಅವರನ್ನು ಸಿಬಿಐ ಬಂಧಿಸಿ ವಿಚಾರಣೆಗೊಳಪಡಿಸಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಂಗ ವಶಕ್ಕೆ ಒಪ್ಪಿಸಿದೆ. ಈ ಮಧ್ಯೆ ರೋಷನ್ ಬೇಗ್ ಅವರನ್ನು ಇನ್ನಷ್ಟು ವಿಚಾರಣೆಗೊಳಪಡಿಸಬೇಕಿರುವುದರಿಂದ …
Read More »ಐಎಂಎ ಹಗರಣ: ಇಬ್ಬರು ಐಪಿಎಸ್ ಅಧಿಕಾರಿಗಳ ವಿಚಾರಣೆ..!
ಸಂಸ್ಥೆಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವು ಮಂದಿ ಪೊಲೀಸರನ್ನು ವಿಚಾರಣೆಗೊಳ ಪಡಿಸುವ ಸಾಧ್ಯತೆ ಇದೆ. ಕಾನ್‍ಸ್ಟೆಬಲ್, ಸಬ್‍ಇನ್‍ಸ್ಪೆಕ್ಟರ್‍ಗಳಿಂದ ಹಿಡಿದು ಆಗಿನ ಜಂಟಿ ಆಯುಕ್ತರವರೆಗೂ ಹಲವಾರು ಮಂದಿಯ ಹೆಸರುಗಳು ಪ್ರಕರಣದಲ್ಲಿ ಕೇಳಿಬಂದಿದೆ. ಆಗಿನ ಡಿಸಿಪಿ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ಹೆಸರನ್ನು ಪಟ್ಟಿ ಮಾಡಿಕೊಳ್ಳಲಾಗಿದ್ದು, ಅವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಸದ್ಯಕ್ಕೆ ಬಂಧಿತರಾಗಿರುವ ರೋಷನ್ ಬೇಗ್ ಅವರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, …
Read More »ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ
ಬೆಳಗಾವಿ: ಕೋವಿಡ್-19 ಸಂದರ್ಭದಲ್ಲಿಯೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ.100ಕ್ಕೆ ನೂರರಷ್ಟು ಪ್ರವೇಶ ಮತ್ತು ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಗಳಿಸುತ್ತಿರುವ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ ಭೇಟಿ ನೀಡಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜತೆ ಚರ್ಚೆ ನಡೆಸಿದರು. ಪ್ರತಿವರ್ಷ ಅತ್ಯುತ್ತಮ ಫಲಿತಾಂಶಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ …
Read More »ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಐಎಂಎ ಹಗರಣದಲ್ಲಿ ವಂಚಿತರ ಸಂಕಷ್ಟ ಆಲಿಸದೇ ಆರೋಪಿ ಮನ್ಸೂರ್ ಖಾನ್ ಗೆ ಸಹಕರಿಸಿದ್ದಾರೆ. ಅಲ್ಲದೇ ಕಿಕ್ ಬ್ಯಾಕ್ ಪಡೆದುಕೊಂದಿದ್ದಾರೆ ಎಂಬ ಆರೋಪ ಅಜಯ್ ಹಿಲೋರಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿವಂತೆ ಸಿಬಿಐ ಹಿಲೋರಿಗೆ ನೋಟೀಸ್ ನೀಡಿದೆ. ಈ ಹಿಂದೆ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳಾದ ಹೇಮಂತ್ …
Read More »ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ:ವಾಟಾಳ್ ನಾಗರಾಜ್
ಕೊಪ್ಪಳ: ಯತ್ನಾಳ್‍ಗೆ ತಲೆ ಸರಿಯಿಲ್ಲ ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದರು. ರೋಲ್‍ಕಾಲ್ ಕನ್ನಡಪರ ಸಂಘಟನೆಗಳ ಬಂದ್‍ಗೆ ಕಿವಿಗೊಡಬೇಕಿಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್‍ಗೆ ತಲೆ ಸರಿಯಿಲ್ಲ, ನಾವೇ ನಿಮಾನ್ಸ್ ಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ. ಈ ಹಿಂದೆ ಯಡಿಯೂರಪ್ಪ ಅವರನ್ನೇ ಬೈದಂತವರು, ಅವರ ತಂದೆ ತಾಯಿಗೂ ಬೈಯೋದಿಲ್ಲ ಎಂದು …
Read More »ಅರಭಾವಿ ಕ್ಷೇತ್ರದ ಯುವ ಜನಾಂಗಕ್ಕೆ ಹೊಸ ಚೈತನ್ಯ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಜಿ.ಟಿ.ಟಿ. ಸಂಸ್ಥೆ ಸಹಕಾರಿ
ಅರಬಾವಿ – ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್. ಅವರು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಅರಭಾವಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿ.ಟಿ.ಟಿ.ಸಿ) …
Read More »ಉಮೇಶ ಕತ್ತಿ ಅವರು ಸಚಿವರಾಗಬೇಕು:ಮಹಾಂತೇಶ ಕವಟಗಿಮಠ
ಬೆಳಗಾವಿ : ಬೆಳಗಾವಿ ಬಿಜೆಪಿ ಹಿರಿಯ ನಾಯಕ, 8 ಬಾರಿ ಶಾಸಕರಾದ ಉಮೇಶ ಕತ್ತಿ ಅವರು ಸಚಿವರಾಗಬೇಕು ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅಭಿಪ್ರಾಯ ವ್ಯಕ್ತಪಡಿಸಿದರು. ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಪಾಂಗೀರೆ ಗ್ರಾಮದಲ್ಲಿ ಸೋಮವಾರ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರರಚನೆ ಇದು ಸಂಪೂರ್ಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವೇಚನೆಗೆ ಬಿಟ್ಟ ವಿಚಾರ. ಆದರೆ ಹಿರಿಯ ಶಾಸಕ ಉಮೇಶ …
Read More »
Laxmi News 24×7