Breaking News

Uncategorized

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್

ಬೆಂಗಳೂರು: ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ, ನಿವೇಶನ ರಚಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆಗೆ ಡಿಸಿಎಂ ಜಿ.ಪರಮೇಶ್ವರ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಮ್ಮ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ …

Read More »

ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಸೂಚನೆ – ಯೋಜನೆಗಳ ಅನುಷ್ಠಾನಕ್ಕೆ ಸಮಯ ನಿಗದಿ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ.ರಘುಮೂರ್ತಿ  ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ (ಆ.17) ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಮಾತನಾಡಿದ …

Read More »

ತುಮಕೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇನಹಳ್ಳಿ ಪೊಲೀಸರು  ಬಂಧಿಸಿರುವ ಘಟನೆ ಮಧುಗಿರಿ ತಾಲೂಕಿನ ಕಸಿನಾಯಕನಹಳ್ಳಿ ಗೇಟ್ ಬಳಿ ನಡೆದಿದೆ. ಜಿಲಾನ್ (30), ಕಲ್ಯಾಣಕುಮಾರ್ (27), ಚರಣ್ (26) ಬಂಧಿತ ಆರೋಪಿಗಳು. ಬಂಧಿತರು ಕಸಿನಾಯಕನಹಳ್ಳಿ ಗೇಟ್ ಬಳಿ ಮಧುಗಿರಿ-ಹಿಂದೂಪುರ ರಸ್ತೆಯಲ್ಲಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಡಿಗೇನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಗಳು ಮಧುಗಿರಿ …

Read More »

ಹಣಕಾಸು ಇಲಾಖೆ ಜೊತೆ ಚರ್ಚೆ ಮಾಡಿ ಮೊಟ್ಟೆ ದರ ಏರಿಕೆಗೆ ಕ್ರಮ: ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಮಕ್ಕಳಿಗೆ  ಕೊಡುತ್ತಿರುವ ಮೊಟ್ಟೆ ದರ  ಏರಿಕೆ ಬಗ್ಗೆ ಶೀಘ್ರವೇ ಹಣಕಾಸು ಇಲಾಖೆ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡೋದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ  ತಿಳಿಸಿದ್ದಾರೆ. ವಿಧಾನ ಪರಿಷತ್  ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್  ಸದಸ್ಯ ರಾಮೋಜಿಗೌಡ ಪ್ರಶ್ನೆ ಕೇಳಿದರು. ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ಈಗ ಸರ್ಕಾರ 6 ರೂಪಾಯಿ ಕೊಡುತ್ತಿದೆ. ಈಗ ಮಾರುಕಟ್ಟೆಯಲ್ಲಿ ಮೊಟ್ಟೆ ಬೆಲೆ ಜಾಸ್ತಿ ಆಗಿದೆ. ಒಂದು ವರ್ಷದಿಂದ …

Read More »

ಆ.28ರ ಒಳಗೆ ಉಳಿಕೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಮಧು ಬಂಗಾರಪ್ಪ

ಬೆಂಗಳೂರು: ಆಗಸ್ಟ್ 28ರ ಒಳಗೆ ಬಾಕಿ ಇರೋ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡೋದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ‌ಸದಸ್ಯೆ  ಬಲ್ಕಿಸ್ ಬಾನು ಪ್ರಶ್ನೆ ಕೇಳಿದ್ರು. ಶಾಲೆಗೆ ಮಕ್ಕಳು ಜಾಸ್ತಿ ಬರುವಂತೆ ಮಾಡಲು ಸರ್ಕಾರ ಶೂ, ಸಾಕ್ಸ್ ಕೊಡ್ತಾ ಇದ್ದೇವೆ. ಇವರೆಗೂ 100% ಶೂ, ಸಾಕ್ಸ್ ವಿತರಣೆ ಆಗಿಲ್ಲ. 16 ಲಕ್ಷ ವಿದ್ಯಾರ್ಥಿಗಳಿಗೆ ಇನ್ನು …

Read More »

ಪಿಜಿ ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿಬಿದ್ರೆ ಕ್ಷಮೆ ಇಲ್ಲ – ಅಡುಗೆ ಕೋಣೆಯಲ್ಲಿ ಸಿಸಿಟಿವಿ ಕಡ್ಡಾಯ: ಖಾದರ್‌ ಖಡಕ್‌ ವಾರ್ನಿಂಗ್‌

ಬೆಂಗಳೂರು: ಪಿಜಿ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡಿ ಸಿಕ್ಕಿ ಬಿದ್ದರೆ ಕ್ಷಮಾಪಣೆ ಇಲ್ಲ, ಖಾಸಗಿ ಹಾಸ್ಟೆಲ್ ಕೂಡ ಪರಿಶೀಲನೆ ಮಾಡ್ತೇವೆ ಎಂದು ಸಚಿವ ಯು.ಟಿ ಖಾದರ್‌ ಎಚ್ಚರಿಕೆ ನೀಡಿದರು. ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಕರ್ತವ್ಯ ಪ್ರಜ್ಞೆ ಮೆರೆದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಇಂದು ಆರೋಗ್ಯ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಧಿಕಾರಿಗಳಿಗೆ ಗೌರವ ಸಮರ್ಪಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಹಲವು ವಿಷಯಗಳನ್ನ ಪ್ರಸ್ತಾಪಿಸಿದರು. ಪಿಜಿ ಗಳಲ್ಲಿ …

Read More »

ಹಿಡಕಲ್ ಜಲಾಶಯ ಭರ್ತಿ

ಚಿಕ್ಕೋಡಿ: ಬೆಳಗಾವಿ  ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ ಹಿಡಕಲ್ ಜಲಾಶಯ  ಸಂಪೂರ್ಣ ಭರ್ತಿಯಾಗಿದ್ದು, ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ. 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯಕ್ಕೆ 8,523 ಕ್ಯೂಸೆಕ್ ನೀರು ಒಳಹರಿವು ಇದ್ದು, 4,655 ಕ್ಯೂಸೆಕ್ ನೀರು ಹೊರಹರಿವಿದೆ. ಸದ್ಯ ನೀರಾವರಿ ಯೋಜನೆಗಳ ಕಾಲುವೆಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ. ಹಿಡಕಲ್ ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ ಜಿಲ್ಲೆಯ ರೈತರಿಗೂ ನೆಮ್ಮದಿ ತಂದಿದೆ. ಜಲಾಶಯದ ನೀರು ನೀರಾವರಿ ಯೋಜನೆಗಳಿಗೆ …

Read More »

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು: ಪತ್ನಿ ವಶಕ್ಕೆ, ಕೊಲೆ ಶಂಕೆ

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ  ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ  ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಅಭಿನವ್ (38) ಹಾಗೂ ಅವರ ಮಗ ಯದುವೀರ್ (5) ಮೃತ ದುರ್ದೈವಿಗಳು. ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ನಡೆದ ವೇಳೆ ಮೃತರ ಪತ್ನಿ ಪಕ್ಕದ ರೂಮ್‌ನಲ್ಲಿದ್ದಳು ಎನ್ನಲಾಗಿದ್ದು, ಈ ವಿಚಾರ ಪೊಲೀಸರಿಗೆ ಅನುಮಾನ …

Read More »

ಚಾಮರಾಜನಗರದಲ್ಲಿ ಮೂವರ ಎನ್‌ಕೌಂಟರ್ ಕೇಸ್ – ಅರಣ್ಯಾಧಿಕಾರಿಗಳಿಂದ ವಸ್ತು ಜಪ್ತಿ, ಹಲವು ಅನುಮಾನ

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ  ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ವಸ್ತುಗಳು ಅನುಮಾನಕ್ಕೆ ಎಡೆ ಮಾಡಿಕೊಟ್ಟಿವೆ. ಘಟನಾ ಸ್ಥಳದಲ್ಲಿ ಹೊಸ ಚಪ್ಪಲಿ ಕೂಡ ಸಿಕ್ಕಿದ್ದು, ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಇದಕ್ಕೆ ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಶೂಟೌಟ್  ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ಹಾಗೂ ವಿವಾದಕ್ಕೆ ನಾಂದಿ ಹಾಡಿದೆ. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಅರಣ್ಯ ಇಲಾಖೆ ಮಾಡಿದ್ದು ತಪ್ಪು ಎಂದರೆ, ಅರಣ್ಯಾಧಿಕಾರಿಗಳು ಆತ್ಮರಕ್ಷಣೆಗಾಗಿ …

Read More »

2029ರ ಲೋಕಸಭಾ ಚುನಾವಣೆಗೆ ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್‌ ಕಾನ್‌ಸ್ಟೆಬಲ್‌ ರಾಜೀನಾಮೆ

ಗಾಂಧೀನಗರ: 2029ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಬೆಂಬಲ ನೀಡುವುದಕ್ಕಾಗಿ ಗುಜರಾತ್‌ನಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ವಿರೋಧಿ ನಿರೂಪಣೆಗಳು ಕಂಡುಬಂದವು. ಅದನ್ನು ಎದುರಿಸಲು ಬಿಜೆಪಿಗೆ ನೈತಿಕ ಬೆಂಬಲ ಘೋಷಿಸಿ ಗುಜರಾತ್ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ರಾಜೀನಾಮೆ ನೀಡಿದ್ದಾರೆ. ಗಾಂಧಿಧಾಮದ ಪೂರ್ವ ಕಚ್‌ನಲ್ಲಿರುವ ಅದೇಸರ್ ಪೊಲೀಸ್ …

Read More »