Breaking News

Uncategorized

ಬೆಳಗಾವಿಯಲ್ಲಿ ತುಂಬಿ ಹರಿದ ಘಟಪ್ರಭಾ : ನದಿಗೆ ಟ್ರಾಕ್ಟರ್ ಬಿದ್ದು ಓರ್ವ ನೀರು ಪಾಲು, 12 ಜನ ಪಾರು

ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಟ್ರ್ಯಾಕ್ಟರ್ ಮುಗುಚಿ ಬಿದ್ದಿದೆ. ಘಟನೆಯಲ್ಲಿ ಓರ್ವ ನಾಪತ್ತೆಯಾಗಿದ್ದು, ಉಳಿದ 12 ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ. ನಾಪತ್ತೆಯಾಗಿರುವ ಓರ್ವನಿಗೆ ಇದೀಗ ಶೋಧ ಕಾರ್ಯ ಮುಂದುವರಿದಿದೆ. ಕಾರ್ಮಿಕರು ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದಿಂದ ಮೂಡಲಗಿ ತಾಲೂಕಿನ ಅವರಾದಿ ಗ್ರಾಮಕ್ಕೆ ತೆರಳುತ್ತಿದ್ದರು. ಅವರಾದಿ ಗ್ರಾಮದ ಬಳಿ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಕಟ್ಟಲಾಗಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ …

Read More »

ಬೆಳಗಾವಿಯಲ್ಲಿ ಆರ್ಭಟಿಸಿದ ವರುಣ : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಓರ್ವ ಬಲಿ

ಬೆಳಗಾವಿ : ಬೆಳಗಾವಿಯಲ್ಲಿ ಸತತ ಎರಡು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಮೃಗಾಳಿ ಸಹಿತ ಭಾರಿ ಮಳೆಗೆ ಮರ ಒಂದು ಬಿದ್ದು ಊರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಗಾಳಿ ಮಳೆಗೆ ಮರ ಬಿದ್ದು ಓರ್ವ ಸಾವನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. …

Read More »

ಬೆಟ್ಟದ ಮೇಲಿಂದ ಬಿದ್ದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ!

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಬೆಟ್ಟದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಾದೇವ ನಾಯಕ ಎಂದು ಹೇಳಲಾಗುತ್ತಿದ್ದು, ಇವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕವಲಂದೆ ಕುಂಬಾರಹಳ್ಳಿಯ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಮಹದೇವನಾಯಕ ಮೇ 5 ರಂದು ನಾಪತ್ತೆಯಾಗಿದ್ದಾರೆ ಎಂದು ಕವಲಂದೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜೂ.6 ರಂದು ಬಿಳಿಗಿರಿರಂಗನಬೆಟ್ಟದ …

Read More »

ಕೆಕೆಆರ್‌ಟಿಸಿ ಕಲಬುರಗಿ-ಬೆಳಗಾವಿ ಅಮೋಘವರ್ಷ ಬಸ್,

ಕಲಬುರಗಿ, ಜೂನ್ 09: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ‘ಅಮೋಘವರ್ಷ’ ಹೆಸರಿನ ಐಷಾರಾಮಿ ಹವಾನಿಯಂತ್ರಣ ರಹಿತ ಬಸ್‌ ಸೇವೆಗೆ ಚಾಲನೆ ನೀಡಿದೆ. ಈ ಬಸ್ ಕಲಬುರಗಿ, ಪಣಜಿ ನಡುವೆ ವಯಾ ಬೆಳಗಾವಿ ಸಂಚಾರ ನಡೆಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಕೆಆರ್‌ಟಿಸಿಯ ‘ಅಮೋಘವರ್ಷ’ ಹೆಸರಿನ ಐಷಾರಾಮಿ ಹವಾನಿಯಂತ್ರಣ ಸಹಿತ ಮತ್ತು ಹವಾನಿಯಂತ್ರಣ ರಹಿತ ಬಸ್‌ಗಳಿಗೆ 2023ರ ಸೆಪ್ಟೆಂಬರ್‌ನಲ್ಲಿ ಚಾಲನೆ ನೀಡಿದ್ದರು. ವಿವಿಧ ಮಾರ್ಗದಲ್ಲಿ ಈ ಮಾದರಿಯ ಬಸ್‌ಗಳು ಸಂಚಾರ ನಡೆಸುತ್ತಿವೆ. …

Read More »

ಅನಾರೋಗ್ಯದ ಕಾರಣ ನಾನು ಮೋದಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾಗಿಯಾಗುತ್ತಿಲ್ಲ: HDD

ಬೆಂಗಳೂರು: ಇಂದು 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಅನಾರೋಗ್ಯದ ಕಾರಣ ನಾನು ಭಾಗಿಯಾಗುತ್ತಿಲ್ಲ ಎಂಬುದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ರದಲ್ಲಿ ತಿಳಿಸಿದ್ದಾರೆ. ಈ ಕುರಿತಂತೆ ಮೋದಿಗೆ ಪತ್ರ ಬರೆದಿರುವಂತ ಅವರು, ಮೊದಲನೆಯದಾಗಿ, ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸ್ವೀಕರಿಸಿ. ಇದು ನಿಜವಾಗಿಯೂ ಐತಿಹಾಸಿಕ ಸಂದರ್ಭ. ನಾನು ಈ ಹಿಂದೆ ಅನೇಕ ಬಾರಿ ಹೇಳಿದಂತೆ, …

Read More »

‘ನಟಿ ಕಂಗನಾ ರಣಾವತ್​ ಕಪಾಳ ಮೋಕ್ಷ’ ಮಾಡಿದ CISF ಮಹಿಳಾ ಪೇದೆಗೆ ‘ಚಿನ್ನದ ಉಂಗುರ ಗಿಫ್ಟ್​’

ಚೆನ್ನೈ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರನ್ನು ವಿಮಾನ ನಿಲ್ದಾಣದಲ್ಲಿ ಥಳಿಸಿದ ಸಿಐಎಸ್‌ಎಫ್ ಕಾನ್ಸ್ಟೇಬಲ್ಗೆ ಚಿನ್ನದ ಉಂಗುರವನ್ನು ನೀಡುವುದಾಗಿ ತಮಿಳುನಾಡಿನ ಸಂಸ್ಥೆಯೊಂದು ಘೋಷಿಸಿದೆ. ಕೊಯಮತ್ತೂರಿನ ದ್ರಾವಿಡ ಸಂಘಟನೆಯಾದ ತಂಥೈ ಪೆರಿಯಾರ್ ದ್ರಾವಿಡರ್ ಕಳಗಂ (ಟಿಡಿಪಿಕೆ) ಈ ಘೋಷಣೆ ಮಾಡಿದೆ. ಪೆರಿಯಾರ್ ಅವರ ಚಿತ್ರವಿರುವ ಚಿನ್ನದ ಉಂಗುರವನ್ನು ನೀಡುವುದಾಗಿ ಸಂಸ್ಥೆ ಭರವಸೆ ನೀಡಿದೆ. “ನಾವು ಉಂಗುರವನ್ನು ಕುಲ್ವಿಂದರ್ ಕೌರ್ ಅವರ ಮನೆಯ ವಿಳಾಸಕ್ಕೆ ಕಳುಹಿಸುತ್ತೇವೆ. ಕೊರಿಯರ್ ಸೇವೆಗಳು ಚಿನ್ನದ …

Read More »

3ನೇ ಬಾರಿ ಪ್ರಧಾನಿ ಆಗ್ತಿರೋ ಮೋದಿಗೆ ಅಭಿನಂದನೆ, ನಮ್ಮ ರಾಜ್ಯಕ್ಕೆ ಅನುಕೂಲವಾಗುವ ಖಾತೆ ಸಿಗಲಿ -ಡಾ.ಜಿ.ಪರಮೇಶ್ವರ್

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು 3ನೇ ಬಾರಿ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೂ ನಮ್ಮ ರಾಜ್ಯಕ್ಕೆ ಉತ್ತಮ ಖಾತೆ ಸಿಗಲಿ, ಹೆಚ್ಚು ಸ್ಥಾನ ಸಿಗಲಿ ಎಂದು ಆಶಿಸಿದ್ದಾರೆ. ಬೆಂಗಳೂರು, ಜೂನ್.09: ನರೇಂದ್ರ ಮೋದಿ (Narendra Modi) ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿಗೆ …

Read More »

ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು- ಸಂಕಷ್ಟಕ್ಕೆ ಸಿಲುಕಿದ ಅಂಗಡಿ ಮಾಲೀಕರು!

ಅಯೋಧ್ಯೆ: ರಾಮನ ನಾಡು ಅಯೋಧ್ಯೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಗೆಲುವು ಸಾಧಿಸಿದ್ದು, ಬಿಜೆಪಿಗೆ ತೀವ್ರ ಮುಖಭಂಗವನ್ನು ಅನುಭವಿಸಿದೆ. ಆದರೆ, ಬಿಜೆಪಿಯ ಸೋಲು ಅಯೋಧ್ಯೆಯ ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ. ಅಂಗಡಿಯ ಮಾಲೀಕ ಅಹತ್ ಸಾಹು ಮಾತನಾಡಿದ್ದು, ಬಿಜೆಪಿ ಆಡಳಿತವು ಅಯೋಧ್ಯೆ ಮಂದಿರದ ಅಭಿವೃದ್ಧಿಗಾಗಿ ನಮ್ಮ ಅಂಗಡಿಗಳನ್ನು ಸ್ವಾದೀನ ಪಡಿಸಿಕೊಂಡಿತ್ತು. ಆಗ ನಮಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಿತ್ತು. ಆದರೆ, ಮುಂದಿನ …

Read More »

ಮೋದಿ ಸರ್ಕಾರ 15 ದಿನ ಇರುತ್ತೋ.. ಇಲ್ವೋ- ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮೋದಿ ಮೂರನೇ ಬಾರಿಗೆ ಪ್ರಮಾಣ ವಚನಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಕೌಂಟರ್ ಕೊಟ್ಟಿದ್ದಾರೆ. ಕೆಲವೊಮ್ಮೆ ಸರ್ಕಾರಗಳು ಒಂದು ದಿನ ಮಾತ್ರ ಇರುತ್ತವೆ. ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳ ಗೆಲುವಿನ ಬಗ್ಗೆ ಮಾತನಾಡುವವರಿಗೆ ಸ್ವಂತವಾಗಿ ಸರಳ ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಏನು ಬೇಕಾದರೂ ಆಗಬಹುದು. ಎನ್‍ಡಿಎ ಸರ್ಕಾರ 15 ದಿನವಾದರೂ ಇರುತ್ತದೋ ಇಲ್ವೋ ಯಾರಿಗೆ ಗೊತ್ತು ಎಂದು ಟಿಎಂಸಿ ನಾಯಕಿ ಮಮತಾ ವ್ಯಂಗ್ಯವಾಡಿದ್ದಾರೆ. ಮೋದಿ …

Read More »

‘ಫಿಟ್‌’ ಆಗಲು ಪೊಲೀಸರ ಕಸರತ್ತು

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಸ್ಥೂಲಕಾಯ ಹೊಂದಿದ್ದ ನೂರು ಪೊಲೀಸರನ್ನು ಸದೃಢರಾನ್ನಾಗಿರುವ ಕಾರ್ಯ ಕಳೆದ 10 ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಒಬ್ಬರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಇಬ್ಬರು ಎಎಸ್‌ಪಿ, ಮೂವರು ಡಿವೈಎಸ್‌ಪಿ, 15 ಮಂದಿ ಪಿಐ, 45 ಪಿಎಸ್‌ಐಗಳೂ ಸೇರಿದಂತೆ ಒಟ್ಟು 867 ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳಿದ್ದಾರೆ. ಇತ್ತೀಚೆಗೆ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಬಿಎಂಐ (ಬಾಡ್‌ ಮಾಸ್‌ ಇಂಡೆಕ್ಸ್‌) ಅಂಕ …

Read More »