ರಾಯಚೂರು: ರವಿವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವ್ಯವಸ್ಥೆ ಉಂಟಾಗಿದ್ದು, ಮಾವಿನ ಕೆರೆ ಹತ್ತಿರದ ತರಕಾರಿ ಮಾರಾಟ ಕೇಂದ್ರ ಕೆಸರು ಗದ್ದೆಯಂತಾಗಿದೆ. ಚರಂಡಿ ತುಂಬಿ ಕೊಚ್ಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ತರಕಾರಿ ಮಾರಾಟ ಪ್ರದೇಶವೆಲ್ಲ ಕೆಸರು ಗದ್ದೆಯಂತಾಗಿದೆ. ತರಕಾರಿ ಮಾರಾಟಗಾರರಿಂದ ಶುಲ್ಕ ವಸೂಲಿ ಮಾಡುವ ನಗರಸಭೆ ಅವರಿಗೆ ಕನಿಷ್ಠ ತರಕಾರಿ ಕಟ್ಟೆ ನಿರ್ಮಿಸದಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ತರಕಾರಿಯೆಲ್ಲ ಕೆಸರು ಮಯವಾಗಿರುವುದಕ್ಕೆ ಜನ ಖರೀದಿ ಮಾಡಲು …
Read More »ನಾಳೆ ಲೋಕಸಭಾ ಚುನಾವಣೆ ಫಲಿತಾಂಶ: ಚು.ಆಯೋಗದ ಸುದ್ದಿಗೋಷ್ಠಿಯ ಪ್ರಮುಖಾಂಶಗಳು ಹೀಗಿದೆ.!
ನವದೆಹಲಿ: ಈ ಬಾರಿ ಲೋಕಸಭೆಗೆ 642 ಮಿಲಿಯನ್ ಮತದಾರರಿಂದ ವಿಶ್ವದಾಖಲೆಯ ಹಕ್ಕು ಚಲಾವಣೆಯಾಗಿದೆ ಅಂತ ಸಿಇಸಿ ರಾಜೀವ್ ಕುಮಾರ್ ಹೇಳಿದ್ದಾರೆ. ಅವರು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಲೋಕಸಭಾ ಚುನಾವಣೆ 2024 ರಲ್ಲಿ ಭಾಗವಹಿಸಿದ ಎಲ್ಲಾ ಮತದಾರರಿಗೆ ಭಾರತದ ಚುನಾವಣಾ ಆಯೋಗವು ಎದ್ದು ನಿಂತು ಚಪ್ಪಾಳೆ ತಟ್ಟಿದೆ. ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಸಿಇಸಿ ರಾಜೀವ್ ಕುಮಾರ್, “ನಾವು 642 ಮಿಲಿಯನ್ ಮತದಾರರ ವಿಶ್ವ ದಾಖಲೆಯನ್ನು ರಚಿಸಿದ್ದೇವೆ ಅಂಥ …
Read More »ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ
ಬೆಂಗಳೂರು,ಜೂ.3- ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಯಾರಿಗೆ ಎಂಬುದು ತೀರ್ಮಾನವಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ನಡೆದು, ಮತದಾರ ಗ್ಯಾರಂಟಿಗೋ ಇಲ್ಲವೋ ಮೋದಿ ಗ್ಯಾರಂಟಿಗೋ ಅಚ್ಚು ಒತ್ತಿದ್ದಾನೋ ಎಂಬುದು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆದ ಬಳಿಕ ಇವಿಎಂಗಳ …
Read More »ಭವಾನಿ ರೇವಣ್ಣ ಹುಡುಕಾಟಕ್ಕೆ ಎಸ್‌ಐಟಿಯಿಂದ 4 ವಿಶೇಷ ತಂಡ ರಚನೆ
ಬೆಂಗಳೂರು, ಜೂನ್ 03: ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಅವರು ಬಂಧನ ಭೀತಿಯಲ್ಲಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಶುಕ್ರವಾರ ಭವಾನಿ ರೇವಣ್ಣ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ಬಳಿಕ ಎಸ್‌ಐಟಿ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸುತ್ತಿದೆ. ಶನಿವಾರ ಹೊಳೆನರಸೀಪುರ ನಿವಾಸದಲ್ಲಿ ಸಂಜೆಯ ತನಕ ಕಾದರೂ ಸಹ ಭವಾನಿ …
Read More »ಲೋಕಸಭಾ ಚುನಾವಣೆ 2024 ಫಲಿತಾಂಶ: ಕೈ ಪಾಳಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಗುಸು ಗುಸು…
ಬೆಂಗಳೂರು ಜೂನ್ 3: ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಇನ್ನೇನು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಮಂಗಳವಾರ (ಜೂನ್ 4) ರಂದು ಫಲಿತಾಂಶ ಹೊರಬೀಳಲಿದ್ದು ಪ್ರಬಲ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ವಿಧಾನಸಭೆ ಚುನಾವಣೆ ಪೂರ್ವ ಕಾಂಗ್ರೆಸ್ ನೀಡಿದ ಭರವಸೆಗಳು ಜಾರಿಗೆ ಬಂದ ಬೆನ್ನಲ್ಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಗಾಗಿ …
Read More »ಹಿಂದೂ ತಾಯಿ-ಮಗುವನ್ನು ಉಪಚರಿಸಿದ ಮುಸ್ಲಿಂ ದಂಪತಿಗಳು
ಹಿಂದೂ ತಾಯಿ-ಮಗುವನ್ನು ಉಪಚರಿಸಿದ ಮುಸ್ಲಿಂ ದಂಪತಿಗಳು ಬೆಳಗಾವಿ ಪೊಲೀಸರಿಂದ ಅಭಿನಂದನೆಗಳು ದಿನಾಂಕ 14.0 4.2024 ರಂದು ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಕುರಿತು ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಶ್ರೀಮತಿ ಶಾಂತವ್ವ ಕುಮಾರ ನಿಡಸೋಸಿ ಸಾ. ದಂಡಾಪುರ ಇವಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಗ, ಉಪಚಾರಕ್ಕಾಗಿ ಪಕ್ಕದ ಬೆಡಲ್ಲಿದ್ದ ಶ್ರೀಮತಿ ಶಮಾ ರಿಜ್ವಾನ್ ದೇಸಾಯಿ ಸಾ. ನವಿ ಗಲ್ಲಿ ಕೊಣ್ಣೂರ ತಾ. ಗೋಕಾಕ ಇವಳು ತಾಯಿ ಶಾಂತವ್ವ ಹಾಗೂ ಮಗುವನ್ನು …
Read More »ಭ್ರೂಣಹತ್ಯೆ ಪ್ರಕರಣ. ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನ
ಮಹಾಲಿಂಗಪುರ: ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಜಯಲಕ್ಷ್ಮಿ ನಗರದ ನಕಲಿ ವೈದ್ಯೆ ಕವಿತಾ ಬಾಡನವರ ಅವರಿಂದ ಗರ್ಭಪಾತ ಮಾಡಿಸಿಕೊಂಡು ಮೃತಳಾದ ಮಹಾರಾಷ್ಟ್ರದ ಮೂಲದ ಸೋನಾಲಿ ಕದಂ ಕೇಸ್‌ಗೆ ಸಂಬಂಧಿಸಿದಂತೆ ಪ್ರಕರಣದ ಪ್ರಥಮ, ದ್ವಿತೀಯ ಆರೋಪಿಗಳಾದ ಸಾಂಗಲಿ ಜಿಲ್ಲೆಯ ದುದಗಾಂವ ಗ್ರಾಮದ ನಿವಾಸಿಗಳಾದ ಮೃತ ಸೋನಾಲಿ ತಂದೆ ಸಂಜಯ ಗೌಳಿ, ತಾಯಿ ಸಂಗೀತಾ ಗೌಳಿ ಅವರನ್ನು ಮಹಾಲಿಂಗಪುರ ಪೊಲೀಸರು ಗುರುವಾರ ರಾತ್ರಿ ಬಂಧಿಸಿ, ಶುಕ್ರವಾರ …
Read More »ವಾಲ್ಮೀಕಿ ನಿಗಮದ ಅಕ್ರಮ: ಇಬ್ಬರು ಅಧಿಕಾರಿಗಳ ಸೆರೆ
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ಬೇರೆಡೆ ವರ್ಗಾವಣೆಯಾದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿದೆ. ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಮತ್ತು ಮಾಜಿ ಲೆಕ್ಕಾಧಿಕಾರಿ ಪರಶುರಾಮ್ ಜಿ.ದುರ್ಗಣ್ಣನವರ್ ಬಂಧಿತರು. ನಿಗಮದ ವ್ಯವಸ್ಥಾಪಕ ಎ.ರಾಜಶೇಖರ್ ಮೇ 28ರಂದು ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿತ್ತು. …
Read More »ತಿಹಾರ್ ಜೈಲಿಗೆ ಶರಣಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹವಾಲಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮನಿಲಾಂಡರಿಂಗ್ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಈ ಹಿಂದೆ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ನಡೆಸಲು ಅವರಿಗೆ ಜಾಮೀನು ನೀಡಲಾಗಿತ್ತು. …
Read More »ನೆಲ-ಜಲ ರಕ್ಷಣೆ ಎಲ್ಲರ ಹೊಣೆ: ಶಿವಾಚಾರ್ಯ ಸ್ವಾಮೀಜಿ
ಹಾವೇರಿ: ‘ನೆಲ, ಜಲ, ಭಾಷೆ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಈ ದಿಸೆಯಲ್ಲಿ ಗಂಗಯ್ಯ ಕುಲಕರ್ಣಿ ಅವರು ರೈತ ಸಮುದಾಯಕ್ಕೆ ಸಾವಯವ ಕೃಷಿಯ ಬಗ್ಗೆ ಸಲಹೆ ಕೊಡುವುದರ ಮೂಲಕ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಕೆಲಸ ಮಾಡಿದ್ದಾರೆ. ಭೂತಾಯಿಯನ್ನು ವಿಷಮುಕ್ತ ಮಾಡಿ ಮನುಷ್ಯನ ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಅವರ ನಿರಂತರ ಪ್ರಾಮಾಣಿಕ ಪರಿಶ್ರಮದ ಪಲವಾಗಿ ಅವರಿಗೆ ರಾಷ್ಟ್ರಿಯ ಪ್ರಶಸ್ತಿ ಸಿಕ್ಕಿದ್ದು ನಮಗೆ ತುಂಬಾ ಸಂತಸವಾಗಿದೆ’ ಎಂದು ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ …
Read More »