ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಭಾನುವಾರ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.17ರಿಂದ 23ವರೆಗೆ ಭಾರಿ ಮಳೆ ಬೀಳಲಿದೆ. ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ …
Read More »ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭಾನುವಾರ (ಆ.16) ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ …
Read More »ಮಳೆಯ ಪ್ರಮಾಣ ಆಧರಿಸಿ ನೀರು ಬಿಡುಗಡೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಪ್ರಸ್ತುತ ಜಲಾಶಯದಲ್ಲಿರುವ ನೀರಿನ ಸಂಗ್ರಹ, ಮಳೆಯ ಪ್ರಮಾಣ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ನೀರಿನ ಅಗತ್ಯವನ್ನು ಪರಿಗಣಿಸಿ ನೀರು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಮದುರ್ಗ ತಾಲೂಕಿನ ಚಂದರಗಿ ಕ್ರೀಡಾ ಶಾಲೆಯ ಸಭಾಂಗಣದಲ್ಲಿ ರವಿವಾರ (ಆ.16) ನಡೆದ ಮಲಪ್ರಭಾ ಯೋಜನೆ 2026-27 ನೇ ಸಾಲಿನ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …
Read More »ಬಾಕಿ ಇರುವ ಒಂದು ಸಚಿವ ಸ್ಥಾನ: ಮೂವರಲ್ಲಿ ಯಾರ ತಕ್ಕಡಿ ಮೇಲಾಗುತ್ತೆ ನೋಡೋಣ ಎಂದ ಸಚಿವ ಸತೀಶ್ ಜಾರಕಿಹೊಳಿ
ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಒಂದು ಸಚಿವ ಸ್ಥಾನ ಮಾತ್ರ ಖಾಲಿ ಇದ್ದು, ಖಾಲಿ ಇರುವ ಒಂದು ಮಹಿಳಾ ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಉಮಾಶ್ರೀ, ಗಾಯತ್ರಿ ಶಾಂತೇಗೌಡ ಈ ಸ್ಥಾನದಲ್ಲಿ ರೇಸ್ನಲ್ಲಿದ್ದಾರೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂದು ದೇ ಸದ್ಯಕ್ಕಿರುವ ಕುತೂಹಲ. ಇದೇ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದಾರೆ. ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿ …
Read More »ಸರ್ದಾರ್ ಪ್ರೌಢಶಾಲೆ ಆವರಣದಲ್ಲಿ ನೂತನ ‘ಚೆಸ್ ಪಾರ್ಕ್’ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಸರ್ದಾರ್ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾದ ನೂತನ ‘ಚೆಸ್ ಪಾರ್ಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಲ್ಲಿ ಚೆಸ್ ಆಟದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಗೆ, ತಾರ್ಕಿಕ ಚಿಂತನೆ, ಏಕಾಗ್ರತೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಇಂತಹ ಚೆಸ್ ಪಾರ್ಕ್‌ಗಳು ಸಹಕಾರಿಯಾಗಲಿವೆ. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಬೌದ್ಧಿಕ ಚಟುವಟಿಕೆಗಳಿಗೆ ಪೂರಕ ವಾತಾವರಣ ಕಲ್ಪಿಸಿರುವುದು ಶ್ಲಾಘನೀಯವಾಗಿದೆ. ಈ …
Read More »ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಎಂ.ಕೆ.ಹುಬ್ಬಳ್ಳಿ: ಎಂ.ಕೆ.ಹುಬ್ಬಳ್ಳಿಯ ಪ್ರತಿಷ್ಠಿತ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಖಾನೆಯ ಅಧ್ಯಕ್ಷ ಚನ್ನರಾಜ ಹಟ್ಟಿಹೊಳಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು ಕಂಡಿದ್ದ ಸಮೃದ್ಧ, ಶಾಂತಿಯುತ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ …
Read More »ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್
ಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೆಂಗಳೂರಿನ ಆರ್.ಆರ್. ನಗರದಲ್ಲಿ ಕೆ.ಡಿ.ಸಿ. ಡೆಂಟಲ್ ಕೇರ್ ಹಾಗೂ ಪಿ-ಕ್ಯಾನ್ಸರ್ ಸೆಂಟರ್ ವತಿಯಿಂದ ಆಯೋಜಿಸಲಾಗಿರುವ ‘ಉಚಿತ ಬಾಯಿ ಆರೋಗ್ಯ ತಪಾಸಣಾ ಶಿಬಿರ’ಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ನಡೆಯಲಿರುವ ಈ ಅಭಿಯಾನವು ಸಾರ್ವಜನಿಕರಲ್ಲಿ ಬಾಯಿ …
Read More »ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ
ಬೆಳಗಾವಿ: 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಪೊಲೀಸರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಸತೀಶ ಜಾರಕಿಹೊಳಿ ಅವರಿಗೆ ಗೌರವ ವಂದನೆ ಸ್ವೀಕರಿಸಿದರು. ಅಂಧ ಮಕ್ಕಳು, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ತಂಡವು ಪಥಸಂಚಲನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಬೆಳಗಾವಿ ಜಿಲ್ಲೆಯ ಪಾತ್ರವು ಕಡಿಮೆ ಇಲ್ಲ. ಅಪ್ರತಿಮ ಹೋರಾಟಗಾರರು, …
Read More »ವಂದೇ ಮಾತರಂ ಹಾಡುವುದನ್ನು ತಡೆಯಲು ಸೋನಿಯಾ ಗಾಂಧಿ ಯತ್ನ: ಬಿಜೆಪಿ ಆರೋಪ
ನವದೆಹಲಿ: ಇಲ್ಲಿನ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಸೋನಿಯಾ ಗಾಂಧಿ ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಹಾಡಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಸಂಸದ ಸುಧಾಂಶು ತ್ರಿವೇದಿ, ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಲಾಗುತ್ತಿರುವ ಮೊದಲ ಸ್ವಾತಂತ್ರ್ಯ ದಿನ ಇದು. ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಹಾಡುತ್ತಿದ್ದಾಗ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ‘ಸೂಪರ್-ಪ್ರೆಸಿಡೆಂಟ್’ ರಾಹುಲ್ ಗಾಂಧಿ …
Read More »ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ – ದ್ವಿಚಕ್ರ ವಾಹನಗಳಿಗೆ 80 ರೂ. ದರ
ಬೆಂಗಳೂರು: ರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆ ದರ ಏರಿಕೆ ಆದೇಶವನ್ನು ಪ್ರಕಟಿಸಿದೆ. ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ? ದ್ವಿಚಕ್ರ ವಾಹನ: 65 ರೂ.ನಿಂದ 80 ರೂ.ಗೆ ಏರಿಕೆ ಆಟೋರಿಕ್ಷಾ: 75 ರೂ. – 80 ರೂ. ಪೆಟ್ರೋಲ್, ಎಲ್‌ಪಿಜಿ ಮತ್ತು …
Read More »
Laxmi News 24×7