ಇಂದು ಸವದತ್ತಿಯ ತಹಸೀಲ್ದಾರ್ ಕಚೇರಿಯಲ್ಲಿ (ಮಿನಿ ವಿಧಾನಸೌಧ) ತಾಲೂಕಾ ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಭಗವಾನ್ ಮಹಾವೀರ ಜಯಂತಿ” ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
”ಅಹಿಂಸೆ ಪರಮೋ ಧರ್ಮಃ” ಎಂಬ ಸಂದೇಶದ ಮೂಲಕ ಜಗತ್ತಿಗೆ ಶಾಂತಿ ಮತ್ತು ಮೌಲ್ಯಗಳನ್ನು ಬೋಧಿಸಿದ ಮಹಾವೀರರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ. ಅವರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿ.
ಈ ಸಂದರ್ಭದಲ್ಲಿ ತಹಸೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Laxmi News 24×7