ಬೆಳಗಾವಿ: ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಹಾಡಹಗಲೇ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ.
ಕಾಕತಿ ಗ್ರಾಮದಲ್ಲಿ ತರಕಾರಿ ಖರೀದಿಸಲು ಬಂದಿದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡ ದುಷ್ಕರ್ಮಿಗಳು, ಆಕೆಯ ಚಲನವಲನವನ್ನು ಗಮನಿಸಿಕೊಂಡು ಹಿಂಬಾಲಿಸಿದ್ದಾರೆ. ಬಳಿಕ ಸೂಕ್ತ ಸಮಯಕ್ಕಾಗಿ ಹೊಂಚು ಹಾಕಿ, ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಕಿತ್ತುಕೊಂಡಿದ್ದಾರೆ. ಕೃತ್ಯ ಎಸಗಿದ ತಕ್ಷಣವೇ ಬೈಕ್‌ನಲ್ಲಿ ಸ್ಥಳದಿಂದ ವೇಗವಾಗಿ ಪರಾರಿಯಾಗಿದ್ದಾರೆ.
ಹಗಲು ಹೊತ್ತಿನಲ್ಲೇ ಜನರ ಓಡಾಟವಿರುವ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವಾಗ ಚಿನ್ನಾಭರಣಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು, ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳು ಪೊಲೀಸರ ತನಿಖೆಗೆ ಮಹತ್ವದ ಸುಳಿವು ನೀಡುವ ಸಾಧ್ಯತೆಯಿದೆ.
Laxmi News 24×7