Breaking News

ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಚನ್ನರಾಜ ಹಟ್ಟಿಹೊಳಿ

Spread the love

ಬೆಳಗಾವಿ: ಧಾರವಾಡದಿಂದ ಬೆಳಗಾವಿಗೆ ಸಂಪರ್ಕ ಕಲ್ಪಿಸುವ ನೂತನ ರೈಲ್ವೆ ಮಾರ್ಗ ಯೋಜನೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತ ಮುಖಂಡರು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ರೈತರಿಗೆ ಬೆಂಬಲ ಸೂಚಿಸಿದರು.

ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಯೋಗ್ಯ ಹಾಗೂ ನ್ಯಾಯಯುತವಾದ ಪರಿಹಾರವನ್ನು ನಿಗದಿಪಡಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದರು.

ಈ ಹೋರಾಟದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಚುನ್ನಪ್ಪ ಪೂಜೇರಿ ಹಾಗೂ ಪ್ರಮುಖ ರೈತ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ